ಲಾಯರ್ ಜಗದೀಶ್ ಖರೀದಿಸಿದ್ರು ಐಷಾರಾಮಿ ಬಿಎಂಡಬ್ಲ್ಯೂ ಕಾರು.. ಬೆಲೆ ಕೇಳಿದರೆ ಬೆಚ್ಚಿಬೀಳ್ತಿರಾ?
ಕನ್ನಡದ ಬಿಗ್ ಬಾಸ್ (Bigg Boss) ಸೀಸನ್ 11 ಜನಪ್ರಿಯ ರಿಯಾಲಿಟಿ ಶೋ ಆಗಿದ್ದು, ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. 'ವಕೀಲ್ ಸಾಬ್' ಎಂದೇ ಖ್ಯಾತಿ ಗಳಿಸಿರುವ ಲಾಯರ್ ಜಗದೀಶ್ (Lawyer Jagadeesh), 7ನೇ ಸ್ಪರ್ಧಿಯಾಗಿ ದೊಡ್ಡ ಮನೆಯನ್ನು ಪ್ರವೇಶಿಸಿದ್ದರು. ಆದರೆ, 3ನೇ ವಾರ ಶೋನಿಂದ ಹೊರಬಂದಿದ್ದರು. ಆ ಬಳಿಕ, ಒಂದಷ್ಟು ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕೊಂಡಿದ್ದರು. ಜೊತೆಗೆ ಟಿವಿಗಳಿಗೂ ಇಂಟರ್ ವ್ಯೂ ನೀಡುವುದರೊಂದಿಗೂ ಸಖತ್ ಫೇಮಸ್ ಆಗಿದ್ದಾರೆ.
ಸದ್ಯ ಲಾಯರ್ ಜಗದೀಶ್ ದುಬಾರಿ ಬೆಲೆಯ ಹೊಚ್ಚ ಹೊಸ ಐಷಾರಾಮಿ ಬಿಎಂಡಬ್ಲ್ಯೂ ಕಾರನ್ನು ಖರೀದಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಅದಕ್ಕೆ ಸಂಬಂಧಿಸಿದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಪತ್ನಿ ಹಾಗೂ ಪುತ್ರನೊಂದಿಗೆ ಅವರು ನೂತನ ಕಾರನ್ನು ವಿತರಣೆ ಪಡೆಯುತ್ತಿರುವುದನ್ನು ಕೂಡ ಕಾಣಬಹುದು.

ಲಾಯರ್ ಜಗದೀಶ್, ಬಿಎಂಡಬ್ಲ್ಯೂ 5 ಸೀರೀಸ್ (BMW 5 Series) ಕಾರನ್ನು ಖರೀದಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಆ ಬಗ್ಗೆ ಸ್ಪಷ್ಟವಾದ ವಿವರಗಳು ಲಭ್ಯವಾಗಿಲ್ಲ. ದೇಶೀಯ ಗ್ರಾಹಕರ ಖರೀದಿಗೆ ದೊರೆಯುವ ನೂತನ ಬಿಎಂಡಬ್ಲ್ಯೂ 5 ಸೀರೀಸ್ ಕಾರು ರೂ.72.90 ಲಕ್ಷ ಎಕ್ಸ್ ಶೋ ಬೆಲೆಯನ್ನು ಹೊಂದಿದೆ.
ಈ ಕಾರು ಮೈಲ್ಡ್ ಹೈಬ್ರಿಡ್ ಟೆಕ್ನಾಲಜಿ ಹೊಂದಿರುವ 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಹೊಂದಿದೆ. 255 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 400 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ.

ನೂತನ ಬಿಎಂಡಬ್ಲ್ಯೂ 5 ಸೀರೀಸ್ ಕಾರು, 10.9 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣ ಮಾಡಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 500 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ಹೊಸ ಕಾರು ಸ್ಪಾರ್ಕ್ಲಿಂಗ್ ಕೂಪರ್ ಗ್ರೇ, ಮಿನರಲ್ ವೈಟ್ ಮೆಟಾಲಿಕ್ ಮತ್ತು ಫೈಟೋನಿಕ್ ಬ್ಲೂ ಮೆಟಾಲಿಕ್ ಸೇರಿದಂತೆ ಹಲವು ಆಕರ್ಷಕ ಬಣ್ಣಗಳೊಂದಿಗೂ ಸಿಗುತ್ತದೆ. 14.9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 12.3-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 18-ಸ್ಪೀಕರ್ ಬೋವರ್ಸ್ & ವಿಲ್ಕಿನ್ಸ್ ಸರೌಂಡ್ ಸೌಂಡ್ ಸಿಸ್ಟಮ್, ಹೆಡ್ಸ್ ಅಪ್ ಡಿಸ್‌ಪ್ಲೇ, ಆಂಬಿಯೆಂಟ್ ಲೈಟಿಂಗ್, ಪನೋರಮಿಕ್ ಗ್ಲಾಸ್ ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಈ ಬಿಎಂಡಬ್ಲ್ಯೂ 5 ಸೀರೀಸ್ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಮಲ್ಟಿಪಲ್ ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ. ನೂತನ ಕಾರಿಗೆ ಆಡಿ ಎ6 ಮತ್ತು ವೋಲ್ವೋ ಎಸ್90 ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications