ಸ್ವಂತ ಗಳಿಕೆಯಲ್ಲಿ ಮೊದಲ ಕಾರು ಖರೀದಿಸಿದ ಸಂಭ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ಧನುಶ್ರೀ

ಕನ್ನಡದ ರೀಯಾಲಿಟಿ ಶೋ ಬಿಗ್ ಬಾಸ್ ಸೀಸನ್ 8ರಲ್ಲಿ ಭಾಗವಹಿಸಿದ ಟಿಕ್ ಟಾಕ್ ಸ್ಟಾರ್ ಧನುಶ್ರೀ ಮೊದಲನೇ ವಾರವೇ ಎಲಿಮಿನೇಟ್ ಆಗಿದ್ದರು ಹೆಚ್ಚು ಖ್ಯಾತಿ ಪಡೆದುಕೊಂಡಿದ್ದರು. ಇದೀಗ ಧನುಶ್ರೀ ಹೊಸ ಕಾರನ್ನು ಖರೀದಿಸಿ ಮತ್ತೆ ಸುದ್ದಿಯಲ್ಲಿದ್ದಾರೆ.

ಸ್ವಂತ ಗಳಿಕೆಯಲ್ಲಿ ಮೊದಲ ಕಾರು ಖರೀದಿಸಿದ ಸಂಭ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ಧನುಶ್ರೀ

ತಮ್ಮ ಸ್ವಂತ ದುಡಿಮೆಯಲ್ಲಿ ಖರೀದಿಸಿರುವ ಕಾರೆಂದು ಫೋಟೋಗಳನ್ನೂ ಸೋಷಿಯಲ್ ಮೀಡಿಯಾದಲ್ಲಿ ಧನುಶ್ರೀ ಹಂಚಿಕೊಂಡಿದ್ದಾರೆ. ಜೊತೆಗೆ ಹಾರ್ಡ್‌ವರ್ಕ್ ಪೇಸ್ ಅಪ್. ನನ್ನ ಮೊದಲ ಹೆಜ್ಜೆ. ಯಾರು ಇದೆಲ್ಲಾ ಸುಲಭದ ಕೆಲಸ ಅಂತೆಲ್ಲಾ ಜನ ಮಾತನಾಡಿಕೊಳ್ಳಬಹುದು. ಆದರೆ ಯಾವುದೇ ಕೆಲಸವಾಗಲಿ, ಅದಕ್ಕೆ ಅದರದ್ದೇ ಆದ ಸವಾಲುಗಳು ಇರುತ್ತವೆ. ಅದು ಎಲ್ಲರಿಗೂ ಗೊತ್ತಾಗುವುದಿಲ್ಲ. ನಾನು ಅನುಭವಿಸಿರುವ ಕಷ್ಟಗಳು ಹಾಗೂ ಶ್ರಮಕ್ಕೆ ನನಗೆ ನಾನು ಥ್ಯಾಂಕ್ಸ್ ಹೇಳಬೇಕು ನನ್ನ ಜರ್ನಿಯಲ್ಲಿ ಜೊತೆಗಿದ್ದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಸ್ವಂತ ಗಳಿಕೆಯಲ್ಲಿ ಮೊದಲ ಕಾರು ಖರೀದಿಸಿದ ಸಂಭ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ಧನುಶ್ರೀ

ಬಿಗ್ ಬಾಸ್ ಖ್ಯಾತಿಯ ಧನುಶ್ರೀ ಹೊಸ ಮಾರುತಿ ಸ್ವಿಫ್ಟ್ ಕಾರನ್ನು ಖರೀದಿಸಿದ್ದಾರೆ. ಈ ಹೊಸ ಕಾರನ್ನು ವಿತರಣೆ ಪಡೆಯುವ ಫೋಟೋಗಳನ್ನೂ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ಚಿತ್ರಗಳ ಕೆಳಗೆ ಸೆಲೆಬ್ರಿಟಿಗಳು, ಅಭಿಮಾನಿಗಳು ಕಾಮೆಂಟ್ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ

ಸ್ವಂತ ಗಳಿಕೆಯಲ್ಲಿ ಮೊದಲ ಕಾರು ಖರೀದಿಸಿದ ಸಂಭ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ಧನುಶ್ರೀ

ಬಿಗ್ ಬಾಸ್‌ನಲ್ಲೂ ಕಾಣಿಸಿಕೊಳ್ಳವ ಮುನ್ನ ಧನುಶ್ರೀ ತಮ್ಮ ಟಿಕ್​ಟಾಕ್​ ವೀಡಿಯೊಗಳ ಮೂಲಕ ಲಕ್ಷಾಂತರ ಮಂದಿ ಫಾಲೋವರ್ಸ್ ಹೊಂದುವ ಮೂಲಕ ಆಗಲೇ ಸ್ಟಾರ್​ ಆಗಿದ್ದರು. ನಂತರ ಬಿಗ್ ಬಾಸ್​ ಮನೆಗೆ ಕಾಲಿಡುವ ಮೂಲಕ ಮತ್ತಷ್ಟು ಫೇಮಸ್​ ಆದರು.

ಸ್ವಂತ ಗಳಿಕೆಯಲ್ಲಿ ಮೊದಲ ಕಾರು ಖರೀದಿಸಿದ ಸಂಭ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ಧನುಶ್ರೀ

ಧನುಶ್ರೀ ಜನಪ್ರಿಯ ಬ್ರ್ಯಾಂಡ್‌ಗಳ ಡಿಜಿಟಲ್ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇವರ ಇನ್‌ಸ್ಟಾಗ್ರಾಂ ಖಾತೆಯಲ್ಲಿ 3 ಲಕ್ಷ 60 ಸಾವಿರ ಫಾಲೋವರ್ಸ್ ಹೊಂದಿದ್ದಾರೆ. ಬಿಗ್ ಬಾಸ್‌ ಮನೆಯಿಂದ ಬರುತ್ತಿದ್ದಂತೆ ಸಾಕಷ್ಟು ಸಿನಿಮಾ ಮತ್ತು ಫೋಟೋ ಶೂಟ್ ನಲ್ಲಿ ಬ್ಯುಸಿಯಾಗಿದ್ದರು.

ಸ್ವಂತ ಗಳಿಕೆಯಲ್ಲಿ ಮೊದಲ ಕಾರು ಖರೀದಿಸಿದ ಸಂಭ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ಧನುಶ್ರೀ

ಇನ್ನು ಇವರು ಡ್ಯುಯಲ್ ಟೋನ್ ಬಣ್ಣದ ಮಾರುತಿ ಸ್ವಿಫ್ಟ್ ಕಾರನ್ನು ಖರೀದಿಸಿದ್ದಾರೆ. ಈ ಮಾರುತಿ ಸ್ವಿಫ್ ಕಾರಿನ ಬಗ್ಗೆ ಹೇಳುವುದಾದರೆ,ಎಷ್ಟೇ ಅತ್ಯಾಧುನಿಕ ಕಾರುಗಳು ಬಿಡುಗಡೆಯಾದರೂ ಮಾರುತಿ ಸ್ವಿಫ್ಟ್ ಕಳೆದ 15 ವರ್ಷದಿಂದ ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ದೇಶಿಯ ಮಾರುಕಟ್ಟೆಯಲ್ಲಿ ಬಹುಬೇಡಿಕೆಯೊಂದಿಗೆ ದಾಖಲೆಯ ಮಟ್ಟದಲ್ಲಿ ಜನಪ್ರಿಯ ಸ್ವಿಫ್ಟ್ ಕಾರು ಮಾರಾಟವಾಗುತ್ತಿದೆ.

ಸ್ವಂತ ಗಳಿಕೆಯಲ್ಲಿ ಮೊದಲ ಕಾರು ಖರೀದಿಸಿದ ಸಂಭ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ಧನುಶ್ರೀ

ಅಲ್ಲದೇ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿಯು ಕೂಡ ಉತ್ತಮವಾಗಿ ಮಾರಾಟವಾಗುತ್ತಿದೆ. ಪ್ರಸ್ತುತ ತಲೆಮಾರಿನ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಅನ್ನು ಭಾರತದಲ್ಲಿ 2017ರ ಆರಂಭದಲ್ಲಿ ಮಾರುತಿ ಸುಜುಕಿ ಕಂಪನಿಯು ಪರಿಚಯಿಸಿತು. ಈ ಮಾರುತಿ ಸುಜುಕಿ ಸ್ವಿಫ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಹುಬೇಡಿಕೆಯೊಂದಿಗೆ ಮಾರಾಟವಾಗುತ್ತಿದೆ.

ಸ್ವಂತ ಗಳಿಕೆಯಲ್ಲಿ ಮೊದಲ ಕಾರು ಖರೀದಿಸಿದ ಸಂಭ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ಧನುಶ್ರೀ

ಈ ಹೊಸ ಮಾರುತಿ ಸ್ವಿಫ್ಟ್ ಫೇಸ್‌ಲಿಫ್ಟ್‌ ಕಾರಿನಲ್ಲಿ 1.2-ಲೀಟರ್ ಡ್ಯುಯಲ್ ಜೆಟ್ 12 ಎನ್ ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 89 ಬಿಹೆಚ್‌ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಸ್ವಂತ ಗಳಿಕೆಯಲ್ಲಿ ಮೊದಲ ಕಾರು ಖರೀದಿಸಿದ ಸಂಭ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ಧನುಶ್ರೀ

ಈ ಸ್ವಿಫ್ಟ್ ಕಾರಿನಲ್ಲಿ ಆಲ್-ಎಲ್ಇಡಿ ಲೈಟಿಂಗ್ ಸಿಸ್ಟಂ(ಹೆಡ್‌ಲೈಟ್‌ಗಳು, ಡಿಆರ್‌ಎಲ್‌ಗಳು, ಟೈಲ್‌ಲೈಟ್‌ಗಳು) ಅನ್ನು ಹೊಂದಿದೆ. ಇನ್ನು 7 ಇಂಚಿನ ಟಚ್‌ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಪ್ಲೇ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಈ ಸಿಸ್ಟಂ ನಲ್ಲಿ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಕನೆಕ್ಟಿವಿಟಿಯನ್ನು ಕೂಡ ಹೊಂದಿದೆ.

ಸ್ವಂತ ಗಳಿಕೆಯಲ್ಲಿ ಮೊದಲ ಕಾರು ಖರೀದಿಸಿದ ಸಂಭ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ಧನುಶ್ರೀ

ಇನ್ನು ಮಲ್ಟಿ-ಕಲರ್ ಎಂಐಡಿ, ಫ್ಲಾಟ್ ಸಂಯೋಜಿತ ಕಂಟ್ರೋಲ್ ಗಳು, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್‌ಗಳು ಇತ್ಯಾದಿಗಳೊಂದಿಗೆ ಬಾಟಮ್ ಸ್ಟೀಯರಿಂಗ್ ವ್ಹೀಲ್ ಅನ್ನು ಪಡೆಯುತ್ತದೆ. ಈ ಸ್ವಿಫ್ಟ್ ಕಾರಿನ ಮುಂಭಾಗದಲ್ಲಿ ಕ್ರೋಮ್ ಆಕ್ಸೆಂಟ್ ಹೊಂದಿರುವ ಆಕರ್ಷಕ ಕ್ರಾಸ್ ಮೆಶ್ ಗ್ರಿಲ್ ಮತ್ತು ಗ್ರಿಲ್ ಸುತ್ತಲು ನೀಡಲಾಗಿರುವ ಕಪ್ಪು ಪಟ್ಟಿಯು ಕಾರಿನ ಹೊಸ ಲುಕ್ ಅನ್ನು ಹೆಚ್ಚಿಸಿದೆ.

ಸ್ವಂತ ಗಳಿಕೆಯಲ್ಲಿ ಮೊದಲ ಕಾರು ಖರೀದಿಸಿದ ಸಂಭ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ಧನುಶ್ರೀ

ಇನ್ನು ಭಾರತದಲ್ಲಿ ಮಾರುತಿ ಕಂಪನಿಯು ನ್ಯೂ ಜನರೇಷನ್ ಮಾರುತಿ ಸ್ವಿಫ್ಟ್ ಕಾರನ್ನು ಅಭಿವೃದ್ದಿ ಪಡಿಸಲು ಪ್ರಾರಂಭಿಸಿದ್ದಾರೆ ಎಂದು ವರದಿಗಳಾಗಿದೆ. ಪ್ರಸ್ತುತ ಮಾದರಿಗೆ ಹೋಲಿಸಿದರೆ ಮುಂಬರುವ ನ್ಯೂ ಜನರೇಷನ್ ಮಾದರಿಯಲ್ಲಿ ಸಾಕಷ್ಟು ಬದಲಾವಣೆಗಳಿರುತ್ತವೆ. ನ್ಯೂ ಜನರೇಷನ್ Swift ಅನ್ನು ಹೊಸ ಪ್ಲಾಟ್‌ಫಾರ್ಮ್ ಅನ್ನು ಬಿಡುಗಡೆಯಾಗಲಿದೆ. ಇದು ಪ್ರಸ್ತುತಕ್ಕಿಂತ ಹಗುರವಾಗಿರುತ್ತದೆ ಮತ್ತು ಬಲವಾಗಿರುತ್ತದೆ.

ಸ್ವಂತ ಗಳಿಕೆಯಲ್ಲಿ ಮೊದಲ ಕಾರು ಖರೀದಿಸಿದ ಸಂಭ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ಧನುಶ್ರೀ

ನ್ಯೂ ಜನರೇಷನ್ ಮಾರುತಿ ಸ್ವಿಫ್ಟ್ ಕಾರನ್ನು (ವೈಇಡಿ ಕೋಡ್ ನೇಮ್) ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ ಅನ್ನು ಹಿಯರ್‌ಟೆಕ್ಟ್ ಪ್ಲಾಟ್‌ಫಾರ್ಮ್ ಅಡಿಯಲ್ಲಿ ತಯಾರಿಸಬಹುದು ಎಂದು ಹೇಳಲಾಗುತ್ತಿದೆ. ಈ ಹೊಸ ಮಾರುತಿ ಸ್ವಿಫ್ಟ್ ಕಾರು ಪರಿಷ್ಕೃತ ಪ್ಲಾಟ್‌ಫಾರ್ಮ್ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ನ ಒಟ್ಟಾರೆ ಸ್ಥಿರತೆ, ಸುರಕ್ಷತೆ ಮತ್ತು ನಿರ್ವಹಣೆಯಲ್ಲಿ ಹೆಚ್ಚಿನ ಸುಧಾರಣೆಯನ್ನು ಕಾಣಬಹುದು. ನ್ಯೂ ಜನರೇಷನ್ ಮಾರುತಿ ಸ್ವಿಫ್ಟ್ ಕಾರು ಹೊಸ ಫೀಚರ್ಸ್ ಗಳನ್ನು ಮತ್ತು ತಂತ್ರಜ್ಙಾನಗಳನ್ನು ಪಡೆಯಲಿದೆ.

ಸ್ವಂತ ಗಳಿಕೆಯಲ್ಲಿ ಮೊದಲ ಕಾರು ಖರೀದಿಸಿದ ಸಂಭ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ಧನುಶ್ರೀ

ಮಾರುತಿ ಸ್ವಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಗ್ರಾಂಡ್ ಐ10 ನಿಯೋಸ್, ಫೋರ್ಡ ಫಿಗೊ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತಿದೆ. ಸ್ವಿಫ್ಟ್ ಕಾರು ಮಾರುತಿ ಸುಜುಕಿ ಕಂಪನಿಗೆ ಮಾರಾಟದಲ್ಲಿ ಹೆಚ್ಚಿನ ಕೊಡುಗೆಯನ್ನು ನೀಡುತ್ತಿದೆ.

Most Read Articles

Kannada
English summary
Bigg boss kannada season 8 fame dhanushree bought new maruti swift car details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X