ಕಷ್ಟಪಟ್ಟು ದುಡಿದು ಖರೀದಿಸಿದ ತುಕಾಲಿ ಸಂತೋಷ್ ಕಾರು ಅಪಘಾತ: ಆಟೋ ಚಾಲಕ ಸಾವು
ಬಿಗ್ ಬಾಸ್ ಕನ್ನಡ ಸೀಸನ್ 10ರ (Bigg Boss Kannada 10) ಸ್ಪರ್ಧಿ ತುಕಾಲಿ ಸಂತೋಷ್ (Tukali Santhosh) ಅವರು ಹೊಸ ಕಿಯಾ ಸೆಲ್ಟೋಸ್ ಎಸ್‍ಯುವಿಯನ್ನು ಖರೀದಿಸಿದ್ದರಿ. ಈ ಹೊಸ ಕಾರನ್ನು ಖರೀದಿಸಬೇಕೆಂಬ ತುಕಾಲಿ ಸಂತೋಷ್ ಬಹುದಿನಗಳ ಕನಸು ನನಸಾಗಿತ್ತು. ಆದರೆ ಇದೀಗ ಅದೇ ಕಿಯಾ ಸೆಲ್ಟೋಸ್ ಕಾರು ಅಪಘಾತಕ್ಕೀಡಾಗಿದೆ.
ಪತ್ನಿ ಮಾನಸಾ ಜೊತೆಗೆ ತುಕಾಲಿ ಸಂತು ಅವರು ಹೊಸ ಕಾರಿನಲ್ಲಿ ತುಮಕೂರು ಕಡೆಯಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ಕಡೆ ಹೋಗುತ್ತಿದ್ದರು. ಈ ವೇಳೆ ಕುಣಿಗಲ್ನಿಂದ ಕುರುಡಿಹಳ್ಳಿಗೆ ಆಟೋ ತೆರಳುತ್ತಿತ್ತು. ತುಕಾಲಿ ಸಂತೋಷ್ ಕಾರಿನ ಬಲ ಭಾಗಕ್ಕೆ ಆಟೋ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆಟೋ ಜಖಂ ಆಗಿದೆ. ತೀವ್ರವಾಗಿ ಗಾಯಗೊಂಡ ಆಟೋ ಚಾಲಕ ಜಗದೀಶ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಆ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಆಟೋ ಚಾಲಕ ಜಗದೀಶ್ 40 ವರ್ಷ ಮೃತ ದುರ್ದೈವಿ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆಟೋ ಡ್ರೈವರ್ ಏಕಾಏಕಿ ಬಂದು ನಮ್ಮ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ನಾವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದೆವು. ನಮ್ಮ ಕಾರು ಈಗ ಕುಣಿಗಲ್ ಸ್ಟೇಷನ್ ನಲ್ಲಿದೆ. ಪೊಲೀಸರು ನಾಳೆ ಬರೋಕೆ ಹೇಳಿದ್ದಾರೆ ತುಕಾಲಿ ಸಂತು ಹೇಳಿದ್ದಾರೆ.
ಇನ್ನು ಅತ್ಯಂತ ಬಡ ಕುಟುಂಬದಿಂದ ಬಂದ ತುಕಾಲಿ ಸಂತೋಷ್ ಕಾಮಿಡಿ ಶೋಗಳಲ್ಲಿ ತೊಡಗಿಸಿಕೊಂಡು ತಮ್ಮ ಹಾಸ್ಯದಿಂದಲೇ ರಾಜ್ಯಾದ್ಯಂತ ಜನಪ್ರಿಯತೆಗಳಿಸಿದರು. ಬಿಗ್‌ಬಾಸ್ ಸೀಸನ್ 10ಕ್ಕೆ ಆಯ್ಕೆಯಾದರು. ಇಲ್ಲಿ ಗೆಲ್ಲುವುದಕ್ಕೆ ಸಾಧ್ಯವಾಗದಿದ್ದರೂ ಉತ್ತಮ ಆಟವಾಡಿ ಇಡೀ ರಾಜ್ಯದ ಜನರ ಪ್ರೀತಿಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಗ್ ಬಾಸ್ ಶೋ ಮುಗಿದ್ಮೇಲೆ ಹಲವರ ಬದುಕು ಬದಲಾಗಿದೆ. ತುಕಾಲಿ ಸಂತೋಷ್ ಲೈಫ್‌ನಲ್ಲಿಯೂ ಕೂಡ ಹೊಸ ಜರ್ನಿ ಶುರುವಾಗಿದೆ. ರಿಯಾಲಿಟಿ ಶೋ ಮಧ್ಯೆ ಸಿನಿಮಾ ಅವಕಾಶಗಳು ಬರುತ್ತಿದೆ.

ಕಾಮಿಡಿ ಮೂಲಕ ಖ್ಯಾತಿ ಗಳಿಸಿದ ತುಕಾಲಿ ಸಂತೋಷ್ ಬಿಗ್ ಬಾಸ್ ಮನೆಯಿಂದ ಹೊರ ಬಂದ ನಂತರ ಪುನಃ ಕಾಮಿಡಿ ಶೋಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಕಾಮಿಡಿ ಶೋಗಳಲ್ಲಿ ಅವರ ಪತ್ನಿ ಮಾನಸ ಕೂಡ ಭಾಗವಹಿಸುತ್ತಿದ್ದಾರೆ. ಬಿಗ್ ಬಾಸ್ ಫಿನಾಲೆವರೆಗೆ ಇದ್ದ ಅವರು ನಾಲ್ಕನೇ ರನ್ನರ್ ಅಪ್ ಆಗಿ ಹೊರಹೊಮ್ಮಿದರು. ದೊಡ್ಮನೆಯಿಂದ ಬಂದ ಸಂಭಾವನೆಯಿಂದ ಅವರು ಹೊಸ ಕಿಯಾ ಕಾರು ಖರೀದಿ ಮಾಡಿದ್ದರು.
ತುಕಾಲಿ ಸಂತೋಷ್ ಖರೀದಿಸಿದ ಕಾರು ಬಗ್ಗೆ ಹೇಳುವುದಾದರೆ, ಇದು ಕಿಯಾ ಸೆಲ್ಟೋಸ್ (kia seltos) ಆಗಿದೆ. ಕಿಯಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ ಮೊದಲ ಮಾದರಿ ಸೆಲ್ಟೋಸ್ ಎಸ್‍ಯುವಿಯಾಗಿದೆ. ಇತ್ತೀಚೆಗೆ ಹೊಸ ನವೀಕರಣಗಳೊಂದಿಗೆ ಕಿಯಾ ಇಂಡಿಯಾ ಕಂಪನಿಯು ಕಿಯಾ ಸೆಲ್ಟೋಸ್ ಭಾರತದಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿ ಸುನಾಮಿ ಎಬ್ಬಿಸಿತು. ಭಾರತದ ಗ್ರಾಹಕರು ಹೊಸ ಸೆಲ್ಟೋಸ್ ಎಸ್‍ಯುವಿಯ ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ಸ್‌ಗಳಿಗೆ ಫುಲ್ ಫಿದಾ ಆಗಿದ್ದಾರೆ.

ದೇಶಿಯ ಮಾರುಕಟ್ಟೆಯ ಗ್ರಾಹಕರ ಗಮನ ಸೆಳೆಯುವಲ್ಲಿ ಕಿಯಾ ಸೆಲ್ಟೋಸ್ ಎಸ್‍ಯುವಿಯು ಯಶ್ವಸಿಯಾಗಿದೆ. ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಮಾಡೆಲ್ ಅದರ ಸ್ಪೋರ್ಟಿ ವಿನ್ಯಾಸದೊಂದಿಗೆ ಆಕರ್ಷಕ ಲುಕ್ ಅನ್ನು ಹೊಂದಿದೆ. ಇನ್ನು ಈ ಹೊಸ ಎಸ್‍ಯುವಿಯ ಒಳಭಾಗವು ಅದರ ಹೊಸ ಡ್ಯುಯಲ್-ಸ್ಕ್ರೀನ್ ವಿನ್ಯಾಸದೊಂದಿಗೆ ಹೆಚ್ಚು ಹೈಟೆಕ್ ಆಗಿ ಕಾಣುತ್ತದೆ. ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಪ್ರಮುಖ ಅಂಶವೆಂದರೆ ಈಗ ಲೆವೆಲ್-2 ADAS ತಂತ್ರಜ್ಞಾನವನ್ನು ಹೊಂದಿದೆ.
ಈ ಲೆವೆಲ್-2 ADAS ತಂತ್ರಜ್ಞಾನವು ಆಟೋ ಎಮರ್ಜೆನ್ಸಿ ಬ್ರೇಕಿಂಗ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ರಿಯರ್ ಕ್ರಾಸ್-ಟ್ರಾಫಿಕ್ ಅಲರ್ಟ್, ಲೇನ್-ಕೀಪಿಂಗ್ ಅಸಿಸ್ಟ್, ಬ್ಲೈಂಡ್-ಸ್ಪಾಟ್ ಮಾನಿಟರಿಂಗ್ ಮತ್ತು ಹೆಚ್ಚಿನ ಸುರಕ್ಷತಾ ಫೀಚರ್ಸ್ ಗಳನ್ನು ಒಳಗೊಂಡಿವೆ. ಈ ಹೊಸ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್‌ಎಸ್‍ಯುವಿಗೆ HTE, HTK, HTK+ ಮತ್ತು HTX ಎಂಬ ರೂಪಾಂತರಗಳಲ್ಲಿ ಲಭ್ಯವಿದೆ.
ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ ನ್ಯಾಚುರಲ್ ಆಸ್ಪರರ್ಡ್ ಪೆಟ್ರೋಲ್ ಎಂಜಿನ್, ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಮತ್ತು ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಒಳಗೊಂಡಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್, 6-ಸ್ಪೀಡ್ ಐಎಂಟಿ ಯುನಿಟ್, ಸಿವಿಟಿ ಯುನಿಟ್, ಸಿವಿಟಿ ಯುನಿಟ್, 6-ಜಿ-ಸ್ಪೀಡ್ ಡ್ಯುಯಲ್ ಟ್ರಾನ್ಸ್‌ಮಿಷನ್ ಮತ್ತು 6-ಜಿ-ಸ್ಪೀಡ್ ಡ್ಯುಯಲ್ ಟ್ರಾನ್ಸ್‌ಮಿಷನ್ ಆಯ್ಕೆಗಳನ್ನು ಹೊಂದಿವೆ.


Click it and Unblock the Notifications