ಆಫ್‌ರೋಡ್ ಕಿಂಗ್ ಮಹೀಂದ್ರಾ ಥಾರ್ ಖರೀದಿಸಿದ ಬಿಗ್ ಬಾಸ್ ಸ್ಪರ್ಧಿ
ಮಹೀಂದ್ರಾ ಥಾರ್ (Mahindra Thar) ಎಸ್‍ಯುವಿಯು ಬಹಳ ವರ್ಷಗಳಿಂದ ಭಾರತದಲ್ಲಿ ಜನಪ್ರಿಯ ಆಫ್ ರೋಡರ್ ಎಸ್‍ಯುವಿ ಮಾದರಿಯಾಗಿದೆ. ಮಹೀಂದ್ರಾ ಥಾರ್ ಎಸ್‍ಯುವಿಯು ಭಾರತದಲ್ಲಿ ದೊಡ್ಡ ಅಭಿಮಾನಿ ಬಳಗವಿದೆ. ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಈ ಮಹೀಂದ್ರಾ ಥಾರ್ ಆಫ್-ರೋಡ್ ಮಾದರಿಯು ಬಹುಬೇಡಿಯೊಂದಿಗೆ ಭರ್ಜರಿಯಾಗಿ ಮಾರಾಟವಾಗುತ್ತಿದೆ.
ಈ ಮಹೀಂದ್ರಾ ಥಾರ್ ಆಫ್-ರೋಡ್ ಎಸ್‍ಯುವಿಯು ಸೆಲೆಬ್ರಿಟಿಗಳನ್ನು ಕೂಡ ಸೆಳೆಯುತ್ತಿದೆ. ಇದೀಗ ಬಿಗ್ ಬಾಸ್ ತಮಿಳು 7ನೇ ಸೀಸನ್ ನಲ್ಲಿ ಭಾಗವಹಿಸಿದ್ದ ಮಣಿ ಚಂದ್ರ ಮಹೀಂದ್ರಾ ಥಾರ್ ಎಸ್‍ಯುವಿ ಖರೀದಿಸಿದ್ದಾರೆ. ಬಿಗ್ ಬಾಸ್ ಮೂಲಕ ಮಣಿ ಚಂದ್ರ ಹೆಚ್ಚು ಜನಪ್ರಿಯತೆಯನ್ನು ಗಳಿಸಿದರು. ಬಿಗ್ ಬಾಸ್ ಶೋನಲ್ಲಿ ಫೈನಲ್ ಪ್ರವೇಶಿಸಿದರು ಆದರೆ ವೀನ್ನರ್ ಕೀರಿಟ ಪಡೆಯುವಲ್ಲಿ ಯಶಸ್ವಿಯಾಗಿಲ್ಲ. ಇವರಿಗೆ ತಮಿಳುನಾಡಿನಲ್ಲಿ ದೊಡ್ಡ ಅಭಿಮಾನಿ ಬಳಿಗವಿದೆ.

ಬಿಗ್ ಬಾಸ್ ಸ್ಟಾರ್ ಮಣಿ ಚಂದ್ರು ಖರೀದಿಸಿದ ಎಸ್‍ಯುವಿಯ ಬೆಲೆಯು ರೂ. 17.20 ಲಕ್ಷವಾಗಿದೆ. ಮಣಿ ಚಂದ್ರ (Mani Chandra) ಹೊಸ ಎಸ್‍ಯುವಿ ಜೊತೆ ಇರುವ ಪೋಟೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡಿದ್ದಾರೆ. ಈ ಪೋಟೋಗಳು ಬಾರೀ ವೈರಲ್ ಆಗಿದೆ. ಇವರು ಅಭಿಮಾನಿಗಳು ಸೇರಿದಂತೆ ಹಲವರು ಇವರಿಗೆ ಶುಭ ಕೋರಿದ್ದಾರೆ.
ಮಣಿ ಚಂದ್ರು ಅವರು ಖರೀದಿಸಿದ ಈ ಮಹೀಂದ್ರಾ ಥಾರ್ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಇದು ಹಲವು ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಿದೆ. ಇದರಲ್ಲಿ ಮೊದಲಿಗೆ 2.0 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಆಗಿದೆ. ಈ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು 2.2 ಲೀಟರ್ ಟರ್ಬೊ-ಡೀಸೆಲ್ ಎಂಜಿನ್ 130 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಇನ್ನು ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಇದು ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 4 ಸ್ಟಾರ್ ಸೇಫ್ಚಿ ರೇಟಿಂಗ್ ಪಡೆದುಕೊಳ್ಳುವ ಮೂಲಕ ಸುರಕ್ಷಿತ ಕಾರು ಮಾದರಿಯಾಗಿ ಗುರುತಿಸಿಕೊಂಡ ನಂತರ ಈ ಥಾರ್ ಎಸ್‍ಯುವಿಗೆ ಮತ್ತಷ್ಟು ಬೇಡಿಕೆ ಪಡೆದುಕೊಂಡಿದೆ. ಈ ಎಸ್‍ಯುವಿಯ ವೈಟಿಂಗ್ ಪಿರೇಡ್ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ನಿರ್ಧಾರವಾಗಲಿದೆ.
ಈ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಎಸ್‍ಯುವಿಯ ಒಳಭಾಗದಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿಯನ್ನು ಹೊಂದಿದೆ. ಇದರೊಂದಿಗೆ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಈ ಥಾರ್ ಎಸ್‍ಯುವಿ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಪೋಟೈನ್ ಮೆಂಟ್ ಸಿಸ್ಟಂ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಅನ್ನು ಒಳಗೊಂಡಿದೆ.

ಈ ಥಾರ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ ಹಲವಾರು ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ ಹೊಂದಿದೆ. ಇದರೊಂದಿಗೆ ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಮತ್ತು ಹಿಲ್ ಸ್ಟಾರ್ಟ್ ಅಸಿಸ್ಟ್ ಅನ್ನು ಹೊಂದಿದೆ.
ಇನ್ನು ಈ ಎಸ್‍ಯುವಿಯು ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್ ಮತ್ತು ರಿಯರ್ ವ್ಯೂ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಥಾರ್ ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿದೆ. ಈ ಮಹೀಂದ್ರಾ ಥಾರ್ ಎಸ್‍ಯುವಿಯು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








