ಐಷಾರಾಮಿ ಹ್ಯುಂಡೈ ಎಲೆಕ್ಟ್ರಿಕ್ ಕಾರು ಆಯ್ಕೆ ಮಾಡಿ ಪರಿಸರ ಪ್ರೇಮ ಮರೆದ ಮುಖ್ಯಮಂತ್ರಿ
ಬಿಹಾರದ ಮುಖ್ಯಮಂತ್ರಿಯಾಗಿ ಜೆಡಿಯು ನಾಯಕ ನಿತೀಶ್ ಕುಮಾರ್ ಅವರು 9ನೇ ಬಾರಿ ಕಳೆದು ತಿಂಗಳು ಪ್ರಮಾಣ ವಚನ ಸ್ವೀಕರಿಸಿದರು. ಇತ್ತೀಚೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹ್ಯುಂಡೈ ಐಯೊನಿಕ್ 5 ಎಲೆಕ್ಟ್ರಿಕ್ ಕಾರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದು ಅತ್ಯಾಧುನಿಕ ತಂತ್ರಜ್ಞಾನಕ್ಕೆ ವೈಯಕ್ತಿಕ ಆದ್ಯತೆ ಮಾತ್ರವಲ್ಲದೆ ರಾಜ್ಯದಲ್ಲಿ ಪರಿಸರ ಸ್ನೇಹಿ ಸಾರಿಗೆಯತ್ತ ವ್ಯಾಪಕ ಬದಲಾವಣೆಯನ್ನು ಸೂಚಿಸುತ್ತದೆ.
ಈ ಹಿಂದೆ ನಿತೀಶ್ ಕುಮಾರ್ (Nitish Kumar) ಅವರು ಅಂಬಾಸಿಡರ್ ಮತ್ತು ಟಾಟಾ ಸಫಾರಿಯಂತಹ ಸರಳವಾದ ವಾಹನಗಳಲ್ಲಿ ಬಳಸುತ್ತಿದ್ದರು. 2023ರ ಜನವರಿ ತಿಂಗಳಿನಲ್ಲಿ ಹ್ಯುಂಡೈ ಐಯೊನಿಕ್ 5 ಆಗಮನದೊಂದಿಗೆ ಭಾರತದಲ್ಲಿ ಐಷಾರಾಮಿ ಎಲೆಕ್ಟ್ರಿಕ್ ವಿಭಾಗದಲ್ಲಿ ಭಾರೀ ಸಂಚಲನವನ್ನು ಸೃರ್ಷ್ಟಿಸಿತು. ಇನ್ನು ಮಹಾ ಘಟಬಂಧನದ ಸಿಎಂ ಸ್ಥಾನಕ್ಕೆ ಬೆಳಿಗ್ಗೆ ರಾಜೀನಾಮೆ ಸಲ್ಲಿಸಿದ್ದ 72 ವರ್ಷದ ನಿತೀಶ್, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ಸೇರಿಕೊಂಡಿದ್ದರು.

ವಿಶೇಷವೆಂದರೆ ನಿತೀಶ್ ಅವರು 9ನೇ ಬಾರಿ ಸಿಎಂ ಆಗಿ ಅಧಿಕಾರ ಹಿಡಿದಿದ್ದರೂ, ಈ ಅವಧಿಯಲ್ಲಿ ಚುನಾವಣೆ ನಡೆದಿರುವುದು 5 ಬಾರಿ ಮಾತ್ರ. ಮಿತ್ರ ಪಕ್ಷಗಳನ್ನು ಬದಲಿಸಿ, ಹೊಸ ಸಮ್ಮಿಶ್ರ ಸರ್ಕಾರವನ್ನು ರಚಿಸುವ ಮೂಲಕ ಅವರು ಮತ್ತೆ ಮತ್ತೆ ಸಿಎಂ ಆಗಿದ್ದಾರೆ.ಅದೇ ಏನೇ ಇದ್ರು ಅವರು ಎಲೆಕ್ಟ್ರಿಕ್ ಕಾರನ್ನು ಆಯ್ಕೆ ಮಾಡಿಕೊಂಡಿರುವುದು ಉತ್ತಮ ನಿರ್ಧಾರವಾಗಿದೆ. ಎಲೆಕ್ಟ್ರಿಕ್ ಕಾರುಗಳ ಬಳಕೆಯಿಂದ ವಾಯು ಮಾಲೀನ್ಯ ಕಡಿಮೆ ಮಾಡುವುದರಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದರು.
ಈ ಹ್ಯುಂಡೈ ಐಯೊನಿಕ್ 5 (Hyundai Ioniq 5) ಎಲೆಕ್ಟ್ರಿಕ್ ಕಾರಿನ ಬಗ್ಗೆ ಹೇಳುವುದಾದರೆ, ಕೊರಿಯನ್ ಕಾರು ತಯಾರಕರಿಂದ ಭಾರತದಲ್ಲಿ ಬಿಡುಗಡೆಯಾದ ಎರಡನೇ ಎಲೆಕ್ಟ್ರಿಕ್ ಕಾರು ಆಗಿದೆ. ಇದು ಪ್ರೀಮಿಯಂ ಎಲೆಕ್ಟ್ರಿಕ್ ಕಾರು. ಇದು ಕಿಯಾ EV6 ಎಲೆಕ್ಟ್ರಿಕ್ ಕಾರಿಗೂ ಸಹ ಆಧಾರವಾಗಿದೆ. ಇದು ಹ್ಯುಂಡೈ ಎಲೆಕ್ಟ್ರಿಕ್ ಮಾದರಿಯು ಆಗಿದ್ದು, ಹೊರಭಾಗದಲ್ಲಿ ಭವಿಷ್ಯದ ವಿನ್ಯಾಸವನ್ನು ಹೊಂದಿದೆ.
ಇದು ಪಿಕ್ಸಲೇಟೆಡ್ LED ಟೈಲ್-ಲೈಟ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಮತ್ತು ಡ್ಯುಯಲ್-ಟೋನ್ ಅಲಾಯ್ ವ್ಹೀಲ್ ಗಳೊಂದಿಗೆ ಡ್ಯುಯಲ್ LED ಹೆಡ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ. ಈ ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ ಡ್ಯುಯಲ್ ಫ್ಲೋಟಿಂಗ್ ಸ್ಕ್ರೀನ್ ಮತ್ತು 2-ಸ್ಪೋಕ್ ಸ್ಟೀರಿಂಗ್ ವೀಲ್‌ನೊಂದಿಗೆ ಆಕರ್ಷಕ ಒಳಾಂಗಣದೊಂದಿಗೆ ಬರುತ್ತದೆ. ಈ ಕಾರಿನಲ್ಲಿ 12.3-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ನೀಡಲಾಗಿದೆ.
ಈ ಹ್ಯುಂಡೈ ಕಾರಿನಲ್ಲಿ ಡ್ರೈವರ್ ಡಿಸ್‌ಪ್ಲೇಗಳು, 360 ಡಿಗ್ರಿ ಕ್ಯಾಮೆರಾ, ಪನೋರಮಿಕ್ ಸನ್‌ರೂಫ್, V2L ಮತ್ತು ಇತರವುಗಳೊಂದಿಗೆ ಸುಸಜ್ಜಿತವಾಗಿರುತ್ತದೆ. ಹ್ಯುಂಡೈ Ioniq 5 ಎಲೆಕ್ಟ್ರಿಕ್ ಎಸ್‍ಯುವಿ 4,635 ಎಂಎಂ ಉದ್ದ, 1,890 ಎಂಎಂ ಅಗಲ ಮತ್ತು 1,625 ಎಂಎಂ ಎತ್ತರವಿದೆವನ್ನು ಹೊಂದಿದೆ. ಇನ್ನು ಈ ಎಲೆಕ್ಟ್ರಿಕ್ ಎಸ್‍ಯುವಿ 3,000mm ವೀಲ್‌ಬೇಸ್ ಅನ್ನು ಹೊಂದಿದೆ.
ಈ ಹ್ಯುಂಡೈ ಐಯಾನಿಕ್ 5 ಎಲೆಕ್ಟ್ರಿಕ್ ಕಾರಿನಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋಮ್ಯಾಟಿಕ್ ಎಮರ್ಜನ್ಸಿ ಬ್ರೇಕಿಂಗ ಅನ್ನು ಹೊಂದಿದೆ. ಇದರೊಂದಿಗೆ ಲೇನ್ ಕೀಪ್ ಮತ್ತು ಡಿಪಾರ್ಚರ್ ಏಡ್ ಮತ್ತು ಬ್ಲೈಂಡ್ ಸ್ಪಾಟ್ ಮಾನಿಟರಿಂಗ್ ಸಿಸ್ಟಮ್‌ನಂತಹ ಫೀಚರ್ಸ್ ಗಳೊಂದಿಗೆ ADAS (ಅಡ್ವಾನ್ಸ್ಡ್ ಡ್ರೈವರ ಅಸಿಸ್ಟ್ ಸಿಸ್ಟಂ) ನೊಂದಿಗೆ ಬರುತ್ತದೆ. ಈ ಹೊಸ ಹ್ಯುಂಡೈ ಐಯಾನಿಕ್ 5 ಎಲೆಕ್ಟ್ರಿಕ್ ಕಾರಿನಲ್ಲಿ 72.6kWh ಬ್ಯಾಟರಿ ಪ್ಯಾಕ್ ಅನ್ನು ನೀಡಲಾಗಿದೆ.
ಇದು ಸಿಂಗಲ್ ಚಾರ್ಜ್‌ನಲ್ಲಿ ARAI- ಪ್ರಕಾರ, 631 ಕಿ.ಮೀ ರೇಂಜ್ ಅನ್ನು ನೀಡುತ್ತದೆ. ಈ ಎಲೆಕ್ಟ್ರಿಕ್ ಮೋಟರ್ 217 ಬಿಹೆಚ್‍ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಹ್ಯುಂಡೈ ಐಯಾನಿಕ್ 5 ಎಲೆಕ್ಟ್ರಿಕ್ ಕ್ರಾಸ್ಒವರ್ RWD (ರೇರ್-ವ್ಹೀಲ್ ಡ್ರೈವ್) ಸಿಸ್ಟಂ ಅನ್ನು ಹೊಂದಿದೆ. ಇದು ಸಿಂಗಲ್ ಚಾರ್ಜ್‌ನಲ್ಲಿ ARAI- ಪ್ರಕಾರ, 631 ಕಿ.ಮೀ ರೇಂಜ್ ಅನ್ನು ನೀಡುತ್ತದೆ.
ಈ ಎಲೆಕ್ಟ್ರಿಕ್ ಮೋಟರ್ 217 ಬಿಹೆಚ್‍ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಹ್ಯುಂಡೈ ಐಯಾನಿಕ್ 5 ಎಲೆಕ್ಟ್ರಿಕ್ ಕ್ರಾಸ್ಒವರ್ RWD (ರೇರ್-ವ್ಹೀಲ್ ಡ್ರೈವ್) ಸಿಸ್ಟಂ ಅನ್ನು ಹೊಂದಿದೆ. ಚಾರ್ಜಿಂಗ್ ವಿಷಯದಲ್ಲಿ, ಈ ಹ್ಯುಂಡೈ Ioniq 5 ಎಲೆಕ್ಟ್ರಿಕ್ ಕ್ರಾಸ್ಒವರ್ 350kW DC ಫಾಸ್ಟ್ ಚಾರ್ಜರ್ ಬಳಸಿ ಚಾರ್ಜ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ.


Click it and Unblock the Notifications