ಸಂಚಾರ ನಿಯಮ ಉಲ್ಲಂಘಿಸಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ದಂಡ ತೆತ್ತ ಬೈಕ್ ಸವಾರ

2019ರಲ್ಲಿ ಜಾರಿಗೆ ಬಂದ ಹೊಸ ಮೋಟಾರು ವಾಹನ ಕಾಯ್ದೆಯನ್ವಯ ದೇಶದಲ್ಲಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ವಾಹನ ಸವಾರರಿಗೆ ಭಾರೀ ಪ್ರಮಾಣದ ದಂಡ ವಿಧಿಸಿದ ಹಲವು ಪ್ರಕರಣಗಳು ದೇಶಾದ್ಯಂತ ವರದಿಯಾಗಿವೆ.

ಸಂಚಾರ ನಿಯಮ ಉಲ್ಲಂಘಿಸಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ದಂಡ ತೆತ್ತ ಬೈಕ್ ಸವಾರ

ಇತ್ತೀಚೆಗೆ ಒಡಿಶಾದ ಮಾಂಡ್ಸೌರ್ ಜಿಲ್ಲೆಯಲ್ಲಿ ಬೈಕ್ ಸವಾರಣಿಗೆ ವಿವಿಧ ಸಂಚಾರ ನಿಯಮಗಳ ಉಲ್ಲಂಘಿಸಿದ ಕಾರಣಕ್ಕೆ ರೂ.1,13,500 ದಂಡ ವಿಧಿಸಲಾಗಿದೆ. ಆಟೋ ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ ಜಿಲ್ಲೆಯ ಮುಖ್ಯ ರಸ್ತೆಯಲ್ಲಿ ನಂಬರ್ ಪ್ಲೇಟ್ ಇಲ್ಲದೆ ಚಲಿಸುತ್ತಿದ್ದ ಬೈಕ್ ಸವಾರನನ್ನು ಪೊಲೀಸರು ವಿಚಾರಣೆಗಾಗಿ ನಿಲ್ಲಿಸಿದ್ದಾರೆ. ಬೈಕ್ ಸವಾರ ಹೆಲ್ಮೆಟ್ ಧರಿಸಿರಲಿಲ್ಲ. ಜೊತೆಗೆ ಚಾಲನಾ ಪರವಾನಗಿ ಸೇರಿದಂತೆ ಬೈಕಿಗೆ ಸಂಬಂಧಿಸಿದ ಯಾವುದೇ ದಾಖಲೆಗಳು ಇರಲಿಲ್ಲವೆಂದು ತಿಳಿದುಬಂದಿದೆ.

ಸಂಚಾರ ನಿಯಮ ಉಲ್ಲಂಘಿಸಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ದಂಡ ತೆತ್ತ ಬೈಕ್ ಸವಾರ

ಈ ಬೈಕ್‌ ಸವಾರನು ತನ್ನ ಬೈಕಿನಲ್ಲಿ ಕಬ್ಬಿಣದ ರಾಡ್ ಅಳವಡಿಸಿಕೊಂಡು ಅದರ ಮೂಲಕ ಸಣ್ಣ ನೀರಿನ ಟ್ಯಾಂಕ್'ಗಳನ್ನು ಮಾರಾಟ ಮಾಡುವ ಕೆಲಸ ಮಾಡುತ್ತಾನೆ. ಹೊಸ ಮೋಟಾರ್ ವಾಹನ ಕಾಯ್ದೆಯಡಿ ಪೊಲೀಸರು ಬೈಕ್‌ ಸವಾರನಿಗೆ ಹೆಲ್ಮೆಟ್‌ ಧರಿಸದಿದ್ದಕ್ಕಾಗಿ ರೂ.1,000, ಚಾಲನಾ ಪರವಾನಗಿ ಹೊಂದಿಲ್ಲದ ಕಾರಣಕ್ಕೆ ರೂ.5,000, ವಿಮೆ ಇಲ್ಲದ ಕಾರಣಕ್ಕೆ ರೂ.2,000 ಹಾಗೂ ರಿಜಿಸ್ಟ್ರೇಷನ್ ಪ್ಲೇಟ್‌ ಇಲ್ಲದೇ ಇರುವುದಕ್ಕೆ ರೂ.5,000 ದಂಡ ವಿಧಿಸಿದ್ದಾರೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಸಂಚಾರ ನಿಯಮ ಉಲ್ಲಂಘಿಸಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ದಂಡ ತೆತ್ತ ಬೈಕ್ ಸವಾರ

ಇದರ ಜೊತೆಗೆ ನೋಂದಣಿ ಫಲಕವಿಲ್ಲದೆ ಡೀಲರ್ ಬಳಿ ವಾಹನ ಖರೀದಿಸಿರುವುದಕ್ಕೆ ರೂ.1 ಲಕ್ಷ ದಂಡ ವಿಧಿಸಲಾಗಿದೆ. ಹೊಸ ಮೋಟಾರು ವಾಹನ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿರುವ ರಾಜ್ಯಗಳಲ್ಲಿ ಒಡಿಶಾ ಸಹ ಸೇರಿದೆ.

ಸಂಚಾರ ನಿಯಮ ಉಲ್ಲಂಘಿಸಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ದಂಡ ತೆತ್ತ ಬೈಕ್ ಸವಾರ

ಆರಂಭದಲ್ಲಿ ಒಡಿಶಾ ಮುಖ್ಯಮಂತ್ರಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅಲ್ಲಿನ ಜನ ಪ್ರತಿಭಟಿಸಿದ ಕಾರಣಕ್ಕೆ ಹೊಸ ಕಾನೂನನ್ನು ಜಾರಿಗೆ ತರಲು ನಿರಾಕರಿಸಿದ್ದರು. ಆದರೆ ರಾಜ್ಯದ ಸಂಚಾರ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ಹೊಸ ನಿಯಮವನ್ನು ಜಾರಿಗೆ ತರಲಾಯಿತು.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಸಂಚಾರ ನಿಯಮ ಉಲ್ಲಂಘಿಸಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ದಂಡ ತೆತ್ತ ಬೈಕ್ ಸವಾರ

ದೇಶದಲ್ಲಿ ನಡೆದಿರುವ ರಸ್ತೆ ಅಪಘಾತದ ಅಂಕಿಅಂಶಗಳನ್ನು ಗಮನಿಸಿದರೆ, ಕಳೆದ ಸೆಪ್ಟೆಂಬರ್-ಅಕ್ಟೋಬರ್‌ ತಿಂಗಳಿನಲ್ಲಿ ಒಡಿಶಾದಲ್ಲಿ ಸಂಭವಿಸಿರುವ ರಸ್ತೆ ಅಪಘಾತಗಳ ಸಂಖ್ಯೆ 2019ರ ಸೆಪ್ಟೆಂಬರ್ - ಅಕ್ಟೋಬರ್ ತಿಂಗಳಿಗೆ ಹೋಲಿಸಿದರೆ 27.5%ನಷ್ಟು ಹೆಚ್ಚಾಗಿದೆ.

ಸಂಚಾರ ನಿಯಮ ಉಲ್ಲಂಘಿಸಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ದಂಡ ತೆತ್ತ ಬೈಕ್ ಸವಾರ

ಹೊಸ ಮೋಟಾರು ವಾಹನ ಕಾಯ್ದೆಯನ್ವಯ ದಂಡದ ಪ್ರಮಾಣವನ್ನು 10 ಪಟ್ಟು ಹೆಚ್ಚಿಸಲಾಗಿದೆ. ಹಳೆ ಕಾಯ್ದೆಯ ತಿದ್ದುಪಡಿಯ ನಂತರ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರಿಗೆ ರೂ.1,000ರಿಂದ ರೂ.10,000ಗಳವರೆಗೆ ದಂಡ ವಿಧಿಸಬಹುದು.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಸಂಚಾರ ನಿಯಮ ಉಲ್ಲಂಘಿಸಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ದಂಡ ತೆತ್ತ ಬೈಕ್ ಸವಾರ

ಹೆಲ್ಮೆಟ್ ಧರಿಸದಿದ್ದರೆ ಮೊದಲು ರೂ.100 ದಂಡ ವಿಧಿಸಲಾಗುತ್ತಿತ್ತು. ಹೊಸ ಕಾಯ್ದೆ ಜಾರಿಯಾದ ನಂತರ ಈ ಮೊತ್ತವನ್ನು ರೂ.1,000ಗಳಿಗೆ ಏರಿಸಲಾಗಿದೆ. ಈಗ ಸಂಚಾರಿ ನಿಯಮಗಳನ್ನು ಹೆಚ್ಚು ಬಾರಿ ಉಲ್ಲಂಘಿಸಿದರೆ, ಚಾಲನಾ ಪರವಾನಗಿಯನ್ನು ರದ್ದುಗೊಳಿಸಬಹುದು. ಜೊತೆಗೆ ನ್ಯಾಯಾಲಯವು ಕ್ರಮ ಕೈಗೊಳ್ಳುತ್ತದೆ.

ಸಂಚಾರ ನಿಯಮ ಉಲ್ಲಂಘಿಸಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ದಂಡ ತೆತ್ತ ಬೈಕ್ ಸವಾರ

ಸೀಟ್‌ಬೆಲ್ಟ್ ಧರಿಸದಿದ್ದರೆ ಈಗ ರೂ.1,000 ದಂಡ ವಿಧಿಸಲಾಗುತ್ತದೆ. ಅತಿ ವೇಗದಲ್ಲಿ ವಾಹನ ಚಾಲನೆ ಮಾಡುವವರಿಗೆ ರೂ.500ಗಳ ಬದಲು ರೂ.5,000ಗಳ ದಂಡ ವಿಧಿಸಲಾಗುತ್ತದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಸಂಚಾರ ನಿಯಮ ಉಲ್ಲಂಘಿಸಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ದಂಡ ತೆತ್ತ ಬೈಕ್ ಸವಾರ

ಡ್ರಿಂಕ್ ಅಂಡ್ ಡ್ರೈವ್, ಚಾಲನಾ ಪರವಾನಗಿ ಅಥವಾ ಮಾನ್ಯ ದಾಖಲೆಗಳಿಲ್ಲದೆ ಸಿಕ್ಕಿಬಿದ್ದರೆ ರೂ.10,000 ದಂಡ ವಿಧಿಸಲಾಗುತ್ತದೆ. ವಾಹನ ಸವಾರರು ವಾಹನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಜೊತೆಗೆ ಕೊಂಡೊಯ್ಯುವ ಬದಲು ಎಂ ಟ್ರಾನ್ಸ್‌ಪೋರ್ಟ್ ಅಪ್ಲಿಕೇಶನ್ ಹಾಗೂ ಡಿಜಿಲಾಕರ್ ಅಪ್ಲಿಕೇಶನ್‌ನಲ್ಲಿ ಕೊಂಡೊಯ್ಯಬಹುದು.

ಸಂಚಾರ ನಿಯಮ ಉಲ್ಲಂಘಿಸಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ದಂಡ ತೆತ್ತ ಬೈಕ್ ಸವಾರ

ಈ ಅಪ್ಲಿಕೇಶನ್‌ಗಳಲ್ಲಿ ವಾಹನ ಸವಾರರು ತಮ್ಮ ಡ್ರೈವಿಂಗ್ ಲೈಸೆನ್ಸ್, ಆರ್ ಸಿ ಬುಕ್, ವಾಹನ ವಿಮೆ, ಎನ್‌ಒಸಿ ಸಂಬಂಧಿತ ದಾಖಲೆಗಳನ್ನು ಡೌನ್‌ಲೋಡ್ ಮಾಡಿಕೊಂಡು, ಮೊಬೈಲ್‌ನಲ್ಲಿ ಇಟ್ಟುಕೊಳ್ಳಬಹುದು.

Most Read Articles

Kannada
English summary
Bike rider in Odisha fined more than one lakh rupees for violating traffic rules. Read in Kannada.
Story first published: Friday, January 15, 2021, 14:41 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X