65ನೇ ಹುಟ್ಟುಹಬ್ಬದ ಸಂಭ್ರಮ.. ರೂ.5 ಕೋಟಿಯ ರೇಂಜ್ ರೋವರ್ ಖರೀದಿಸಿದ 'ಅಧೀರ'
ಬಾಲಿವುಡ್ ಜನಪ್ರಿಯ ನಟ ಸಂಜಯ್ ದತ್ (Sanjay Dutt) ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಜುಲೈ 29ರಂದು 65ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸಿನಿರಂಗದ ಗಣ್ಯರು, ಸ್ನೇಹಿತರು ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಹುಟ್ಟುಹಬ್ಬದ ಹಿನ್ನೆಲೆ, ಸರಿ ಸುಮಾರು ರೂ.5 ಕೋಟಿ ಮೌಲ್ಯದ ಹೊಚ್ಚ ಹೊಸ 'ಲ್ಯಾಂಡ್ ರೋವರ್ ರೇಂಜ್ ರೋವರ್' ಕಾರನ್ನು ಅವರು ಖರೀದಿಸಿದ್ದಾರೆ. ಸದ್ಯ, ಆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿವೆ.
ನಟ ಸಂಜಯ್ ದತ್ ಜನ್ಮದಿನವನ್ನು ಅವರ ಕುಟುಂಬಸ್ಥರು ಕೂಡ ಸಂಭ್ರಮಿಸಿದ್ದಾರೆ. ಪತ್ನಿ ಮಾನ್ಯತಾ ದತ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದು, 'ನನ್ನ ಪತಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮಲಿರುವ ಆಂತರಿಕ ಶಕ್ತಿ ಎಲ್ಲ ಅಡೆತಡೆಗಳನ್ನು ಮರೆಮಾಡುತ್ತದೆ. ಯಾವುದೇ ತೊಂದರೆಗಳು ಮತ್ತು ಸವಾಲುಗಳನ್ನು ಜಯಿಸುತ್ತದೆ. ಹಾಗೆಯೇ ನೀವು ನಿಸ್ವಾರ್ಥವಾಗಿ ಪ್ರೀತಿಸುವ ಸಾಮರ್ಥ್ಯವನ್ನು ಹೊಂದಿದ್ದೀರಿ' ಎಂದು ಬರೆದುಕೊಂಡಿದ್ದಾರೆ.

ಸಂಜಯ್ ದತ್ ಪುತ್ರಿ ತ್ರಿಶಾಲಾ ದತ್ ತಮ್ಮ ತಂದೆಗೆ ಜನ್ಮದಿನದ ಶುಭಕೋರಿದ್ದು, 'ಐ ಲವ್ ಯು, ಪಾಪ್ಸ್! ಹುಟ್ಟುಹಬ್ಬದ ಶುಭಾಶಯಗಳು' ಎಂದು ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಸಂಜಯ್ ದತ್ ಅವರು ವಿವಿಧ ಸಿನಿಮಾಗಳ ಶೂಟಿಂಗ್‌ನಲ್ಲಿ ಫುಲ್ ಬ್ಯುಸಿಯಾಗಿದ್ದು, ಆಕ್ಷನ್-ಕಾಮಿಡಿ 'ಸನ್ ಆಫ್ ಸರ್ದಾರ್ 2'ನಲ್ಲಿ ಅಭಿನಯಿಸಲು ಸಿದ್ಧರಾಗಿದ್ದಾರೆ. ಕೆಜಿಎಫ್-2 ಚಿತ್ರದಲ್ಲಿ ಸಂಜಯ್ ದತ್ ಮಾಡಿದ್ದ 'ಅಧೀರ' ಪಾತ್ರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.
ನಟ ಸಂಜಯ್ ದತ್ ತೆಗೆದುಕೊಂಡಿರುವ ಕಾರಿನ ಕುರಿತಂತೆಯೂ ಒಂದಷ್ಟು ವಿವರಗಳು ಲಭ್ಯವಾಗಿವೆ. ಅವರು ಲ್ಯಾಂಡ್ ರೋವರ್ ರೇಂಜ್ ರೋವರ್ (Land Rover Range Rover) ಎಸ್‌ಯುವಿಯ 'ಎಸ್‌ವಿ' ರೂಪಾಂತರ (ವೇರಿಯೆಂಟ್)ವನ್ನು ಖರೀದಿಸಿದ್ದಾರೆ. ಇದು 4.4-ಲೀಟರ್ ಟ್ವಿನ್ ಟರ್ಬೊ ವಿ8 ಪೆಟ್ರೋಲ್ ಎಂಜಿನ್ ಹೊಂದಿದ್ದು, 615 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 750 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

ಈ ಕಾರು 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿದ್ದು, ಕೇವಲ 4.5 ಸೆಕೆಂಡುಗಳಲ್ಲಿ 0-100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 13.7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, 13.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪನೋರಮಿಕ್ ಗ್ಲಾಸ್ ರೂಫ್, 4-ಝೋನ್ ಕ್ಲೇಮೇಟ್ ಕಂಟ್ರೋಲ್, 1600ಡಬ್ಲ್ಯೂ ಮೆರಿಡಿಯನ್ ಸೌಂಡ್ ಸಿಸ್ಟಮ್ ಮತ್ತು ಪಿಎಂ2.5 ಏರ್ ಫಿಲ್ಟರ್‌ನಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಲ್ಯಾಂಡ್ ರೋವರ್ ರೇಂಜ್ ರೋವರ್ ಎಸ್‌ವಿ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಮಲ್ಟಿಪಲ್ ಏರ್‌ಬ್ಯಾಗ್, ಡಿಎಸ್‌ಸಿ (ಡೈನಾಮಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ಸಾಮಾನ್ಯವಾಗಿ ರೇಂಜ್ ರೋವರ್ ಎಸ್‌ಯುವಿಗಳ ಬೆಲೆ ರೂ.2.36 ಕೋಟಿಯಿಂದ ಆರಂಭವಾಗುತ್ತದೆ. ವಿನ್ಯಾಸದಲ್ಲಿ ಕೊಂಚ ಬದಲಾವಣೆ ಮಾಡಿದರೆ, ರೂ.5 ಕೋಟಿ (ಎಕ್ಸ್ ಶೋರೂಂ) ಬೆಲೆಯಾಗುತ್ತದೆ.
ನಟ ಸಂಜಯ್ ದತ್ ಹಲವು ಐಷಾರಾಮಿ ಕಾರುಗಳ ಮಾಲೀಕರು ಸಹ ಆಗಿದ್ದಾರೆ. ಈ ಹಿಂದೆ, ಅವರು ತಮ್ಮ ಪತ್ನಿಗೆ ಮಾನ್ಯತಾಗೆ ರೋಲ್ಸ್ ರಾಯ್ಸ್ ಘೋಸ್ಟ್ ಸೆಡಾನ್‌ನ್ನು ಉಡುಗೊರೆಯಾಗಿ ನೀಡಿದ್ದರು. ಈ ಕಾರು 6.95 ಕೋಟಿ ಆರಂಭಿಕ ಬೆಲೆಯನ್ನು ಹೊಂದಿದೆ. ಇನ್ನುಳಿದಂತೆ ಫೆರಾರಿ 599 ಜಿಟಿಬಿ, ಆಡಿ ಆರ್8 ಮತ್ತು ಆಡಿ ಕ್ಯೂ7 ಕಾರುಗಳನ್ನು ಹೊಂದಿದ್ದಾರೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








