ಕಡಿಮೆ ಬೆಲೆಗೆ ಪೆಟ್ರೋಲ್ ಬೇಕಾದರೆ ಅಫ್ಘಾನಿಸ್ತಾನಕ್ಕೆ ಹೋಗಿ ಎಂದ ಬಿಜೆಪಿ ನಾಯಕ

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಸಮಸ್ಯೆ ವಾಹನ ಸವಾರರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಭಾರತದ ವಿವಿಧ ನಗರಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಈಗಾಗಲೇ ರೂ. 100 ಗಡಿ ದಾಟಿದೆ. ಇದರಿಂದ ದಿನ ನಿತ್ಯದ ಸಂಚಾರಕ್ಕಾಗಿ ವಾಹನಗಳನ್ನು ಅವಲಂಬಿಸಿರುವವರು ಕಂಗಾಲಾಗಿದ್ದಾರೆ.

ಕಡಿಮೆ ಬೆಲೆಗೆ ಪೆಟ್ರೋಲ್ ಬೇಕಾದರೆ ಅಫ್ಘಾನಿಸ್ತಾನಕ್ಕೆ ಹೋಗಿ ಎಂದ ಬಿಜೆಪಿ ನಾಯಕ

ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕಡಿಮೆ ಮಾಡುವಂತೆ ವಾಹನ ಸವಾರರು ಕೇಂದ್ರ ಸರ್ಕಾರಕ್ಕೆ ಪದೇ ಪದೇ ಮನವಿ ಮಾಡುತ್ತಲೇ ಇದ್ದಾರೆ. ಆದರೆ ವಾಹನ ಸವಾರರ ಈ ಬೇಡಿಕೆ ಈಡೇರುವ ಯಾವುದೇ ಲಕ್ಷಣಗಳಿಲ್ಲ. ಈ ಕಾರಣಕ್ಕೆ ಭಾರತದ ವಿವಿಧ ಭಾಗಗಳಲ್ಲಿ ಸಾರ್ವಜನಿಕರು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಕಡಿಮೆ ಬೆಲೆಗೆ ಪೆಟ್ರೋಲ್ ಬೇಕಾದರೆ ಅಫ್ಘಾನಿಸ್ತಾನಕ್ಕೆ ಹೋಗಿ ಎಂದ ಬಿಜೆಪಿ ನಾಯಕ

ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕಡಿತಗೊಳಿಸದ ಕೇಂದ್ರ ಸರ್ಕಾರದ ವಿರುದ್ಧ ಜನರು ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಕೆಲವು ಬಿಜೆಪಿ ನಾಯಕರು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಜನರ ಆಕ್ರೋಶಕ್ಕೆ ಗುರಿಯಾಗುತ್ತಿದ್ದಾರೆ. ಹೌದು ಕೆಲವು ಬಿಜೆಪಿ ನಾಯಕರು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಕೇಳಲಾಗುವ ಪ್ರಶ್ನೆಗೆ ವಿವಾದಾತ್ಮಕ ಉತ್ತರವನ್ನು ನೀಡುತ್ತಾರೆ.

ಕಡಿಮೆ ಬೆಲೆಗೆ ಪೆಟ್ರೋಲ್ ಬೇಕಾದರೆ ಅಫ್ಘಾನಿಸ್ತಾನಕ್ಕೆ ಹೋಗಿ ಎಂದ ಬಿಜೆಪಿ ನಾಯಕ

ಈ ಸಾಲಿಗೆ ಮಧ್ಯಪ್ರದೇಶ ರಾಜ್ಯದ ಬಿಜೆಪಿ ಮುಖಂಡರೊಬ್ಬರು ಸೇರ್ಪಡೆಯಾಗಿದ್ದಾರೆ. ರಾಮ್ ರತನ್ ಪಾಯಲ್ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ಬಿಜೆಪಿ ನಾಯಕರು. ಇತ್ತೀಚೆಗೆ ಸಸಿ ನೆಡುವ ಕಾರ್ಯಕ್ರಮದಲ್ಲಿ ರಾಮ್ ರತನ್ ಪಾಯಲ್ ಭಾಗವಹಿಸಿದ್ದರು. ಈ ವೇಳೆ ಕೆಲವು ವರದಿಗಾರರು ಅವರನ್ನು ಇಂಧನ ಬೆಲೆ ಏರಿಕೆಯ ಬಗ್ಗೆ ಪ್ರಶ್ನಿಸಿದ್ದಾರೆ.

ಕಡಿಮೆ ಬೆಲೆಗೆ ಪೆಟ್ರೋಲ್ ಬೇಕಾದರೆ ಅಫ್ಘಾನಿಸ್ತಾನಕ್ಕೆ ಹೋಗಿ ಎಂದ ಬಿಜೆಪಿ ನಾಯಕ

ಅಷ್ಟಕ್ಕೇ ಆಕ್ರೋಶಗೊಂಡ ರಾಮ್ ರತನ್ ಪಾಯಲ್, ನಿಮಗೆ ಕಡಿಮೆ ಬೆಲೆಯ ಪೆಟ್ರೋಲ್ ಬೇಕಾದರೆ, ಅಫ್ಘಾನಿಸ್ತಾನಕ್ಕೆ ಹೋಗಿ. ಅಲ್ಲಿ ಒಂದು ಲೀಟರ್ ಪೆಟ್ರೋಲ್ 50 ರೂಪಾಯಿಗೆ ದೊರೆಯುತ್ತದೆ ಎಂದು ಹೇಳಿದ್ದಾರೆ. ಬಿಜೆಪಿ ನಾಯಕರ ಈ ಹೇಳಿಕೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.

ಕಡಿಮೆ ಬೆಲೆಗೆ ಪೆಟ್ರೋಲ್ ಬೇಕಾದರೆ ಅಫ್ಘಾನಿಸ್ತಾನಕ್ಕೆ ಹೋಗಿ ಎಂದ ಬಿಜೆಪಿ ನಾಯಕ

ತಾಲಿಬಾನ್ ಆಡಳಿತವಿರುವ ಅಫ್ಘಾನಿಸ್ತಾನಕ್ಕೆ ತೆರಳಿದರೆ 50 ರೂಪಾಯಿಗಳಿಗೆ ಒಂದು ಪೆಟ್ರೋಲ್ ದೊರೆಯಬಹುದು, ಆದರೆ ಭಾರತದಂತೆ ಸುರಕ್ಷಿತವಾಗಿರಲು ಸಾಧ್ಯವೇ ಇಲ್ಲವೆಂದು ಜನರು ರಾಮ್ ರತನ್ ಪಾಯಲ್ ರವರ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಆಡಳಿತಾರೂಢ ಬಿಜೆಪಿ ನಾಯಕರ ಈ ಹೇಳಿಕೆಯು ಬೆಲೆ ಏರಿಕೆಯಿಂದ ತತ್ತರಿಸಿರುವ ಜನರನ್ನು ಮತ್ತಷ್ಟು ಕೆರಳಿಸಿದೆ.

ಕಡಿಮೆ ಬೆಲೆಗೆ ಪೆಟ್ರೋಲ್ ಬೇಕಾದರೆ ಅಫ್ಘಾನಿಸ್ತಾನಕ್ಕೆ ಹೋಗಿ ಎಂದ ಬಿಜೆಪಿ ನಾಯಕ

ರಾಮ್ ರತನ್ ಪಾಯಲ್ ರವರ ಅಫ್ಘಾನಿಸ್ತಾನಕ್ಕೆ ಹೋಗಿ ಹೇಳಿಕೆಯು ಬೇಜವಾಬ್ದಾರಿತನದಿಂದ ಕೂಡಿದೆ ಎಂದು ಸಾರ್ವಜನಿಕರು ಹಾಗೂ ವಾಹನ ಸವಾರರು ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಮುಖಂಡರು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಹೀಗೆ ವಿವಾದಾತ್ಮಕವಾಗಿ ಮಾತನಾಡುತ್ತಿರುವುದು ಇದೇ ಮೊದಲ ಬಾರಿಯಲ್ಲ.

ಕಡಿಮೆ ಬೆಲೆಗೆ ಪೆಟ್ರೋಲ್ ಬೇಕಾದರೆ ಅಫ್ಘಾನಿಸ್ತಾನಕ್ಕೆ ಹೋಗಿ ಎಂದ ಬಿಜೆಪಿ ನಾಯಕ

ಈ ಹಿಂದೆಯೂ ಹಲವು ಬಿಜೆಪಿ ಮುಖಂಡರು ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿದ್ದಾರೆ. ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಕಡಿಮೆ ಮಾಡಲು ಅಗತ್ಯವಾದ ಕ್ರಮಗಳನ್ನು ತೆಗೆದು ಕೊಂಡರೆ ಒಳ್ಳೆಯದು ಎಂಬುದು ವಾಹನ ಸವಾರರ ಅಭಿಪ್ರಾಯವಾಗಿದೆ.

ಕಡಿಮೆ ಬೆಲೆಗೆ ಪೆಟ್ರೋಲ್ ಬೇಕಾದರೆ ಅಫ್ಘಾನಿಸ್ತಾನಕ್ಕೆ ಹೋಗಿ ಎಂದ ಬಿಜೆಪಿ ನಾಯಕ

ನಮ್ಮ ನೆರೆ ರಾಜ್ಯ ತಮಿಳುನಾಡಿನಲ್ಲಿ ಅಲ್ಲಿನ ರಾಜ್ಯ ಸರ್ಕಾರವು ಇತ್ತೀಚೆಗೆ ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ ಗೆ ರೂ. 3 ಗಳಷ್ಟು ಕಡಿಮೆ ಮಾಡಿದೆ. ಇದರಿಂದ ತಮಿಳುನಾಡಿನ ವಾಹನ ಸವಾರರು ತುಸು ನಿರಾಳರಾಗಿದ್ದಾರೆ. ಅದರಲ್ಲೂ ತಮಿಳುನಾಡಿನ ಈ ಕ್ರಮದಿಂದಾಗಿ ದ್ವಿ ಚಕ್ರ ವಾಹನ ಸವಾರರಿಗೆ ಹೆಚ್ಚು ಪ್ರಯೋಜನವಾಗಿದೆ. ವಾಹನ ಸವಾರರು ಇದೇ ರೀತಿ ಕೇಂದ್ರ ಸರ್ಕಾರವು ಸಹ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಲಿ ಎಂದು ಬಯಸುತ್ತಿದ್ದಾರೆ.

ಕಡಿಮೆ ಬೆಲೆಗೆ ಪೆಟ್ರೋಲ್ ಬೇಕಾದರೆ ಅಫ್ಘಾನಿಸ್ತಾನಕ್ಕೆ ಹೋಗಿ ಎಂದ ಬಿಜೆಪಿ ನಾಯಕ

ಆದರೆ ವಾಹನ ಸವಾರರ ಈ ಬೇಡಿಕೆ ಈಡೇರುವುದು ಅನುಮಾನ. ಪೆಟ್ರೋಲ್, ಡೀಸೆಲ್ ಅನ್ನು ಜಿಎಸ್‌ಟಿ ಮಿತಿಯೊಳಗೆ ತರುವಂತೆ ಹಲವು ದಿನಗಳಿಂದ ವಾಹನ ಸವಾರರು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಆದರೆ ಅವರ ಈ ಬೇಡಿಕೆ ಇದುವರೆಗೂ ಈಡೇರಿಲ್ಲ. ಒಂದು ವೇಳೆ ಪೆಟ್ರೋಲ್, ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಯೊಳಗೆ ತಂದರೆ ಅವುಗಳ ಬೆಲೆಗಳು ಗಣನೀಯವಾಗಿ ಇಳಿಯುವ ಸಾಧ್ಯತೆಗಳಿವೆ.

ಕಡಿಮೆ ಬೆಲೆಗೆ ಪೆಟ್ರೋಲ್ ಬೇಕಾದರೆ ಅಫ್ಘಾನಿಸ್ತಾನಕ್ಕೆ ಹೋಗಿ ಎಂದ ಬಿಜೆಪಿ ನಾಯಕ

ಆದರೆ ಕೇಂದ್ರ ಸರ್ಕಾರ ಹಾಗೂ ಹಲವು ರಾಜ್ಯ ಸರ್ಕಾರಗಳು ಇದರಲ್ಲಿ ಆಸಕ್ತಿ ಹೊಂದಿಲ್ಲ. ಒಂದು ವೇಳೆ ಪೆಟ್ರೋಲ್, ಡೀಸೆಲ್ ಅನ್ನು ಜಿ‌ಎಸ್‌ಟಿ ವ್ಯಾಪ್ತಿಯೊಳಗೆ ತಂದರೆ ಆದಾಯ ಕೊರೆತೆಯನ್ನು ಎದುರಿಸಬೇಕಾಗುತ್ತದೆ ಎಂಬುದು ಇದರ ಹಿಂದಿರುವ ಪ್ರಮುಖ ಕಾರಣವಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ಬಹುತೇಕ ಜನರು ಈಗ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಮುಂದಾಗುತ್ತಿದ್ದಾರೆ.

ಕಡಿಮೆ ಬೆಲೆಗೆ ಪೆಟ್ರೋಲ್ ಬೇಕಾದರೆ ಅಫ್ಘಾನಿಸ್ತಾನಕ್ಕೆ ಹೋಗಿ ಎಂದ ಬಿಜೆಪಿ ನಾಯಕ

ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸ್ಟಾರ್ಟ್ ಅಪ್ ಕಂಪನಿಗಳು ಸೇರಿದಂತೆ ಹಲವು ಕಂಪನಿಗಳು ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ. ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಕೇಂದ್ರ ಸರ್ಕಾರವು ಫೇಮ್ 2 ಯೋಜನೆಯಡಿಯಲ್ಲಿ ಸಬ್ಸಿಡಿಯನ್ನು ನೀಡುತ್ತದೆ.

ಕಡಿಮೆ ಬೆಲೆಗೆ ಪೆಟ್ರೋಲ್ ಬೇಕಾದರೆ ಅಫ್ಘಾನಿಸ್ತಾನಕ್ಕೆ ಹೋಗಿ ಎಂದ ಬಿಜೆಪಿ ನಾಯಕ

ಕೇಂದ್ರ ಸರ್ಕಾರಗಳು ಮಾತ್ರವಲ್ಲದೇ ವಿವಿಧ ರಾಜ್ಯ ಸರ್ಕಾರಗಳೂ ಸಹ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಬ್ಸಿಡಿ ನೀಡುತ್ತವೆ. ಕೆಲವು ರಾಜ್ಯ ಸರ್ಕಾರಗಳು ತಮ್ಮದೇ ಆದ ಎಲೆಕ್ಟ್ರಿಕ್ ವಾಹನ ನೀತಿಯನ್ನು ಸಹ ಜಾರಿಗೊಳಿಸಿವೆ. ಅದರಲ್ಲೂ ದೆಹಲಿ ರಾಜ್ಯ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಅನುಷ್ಟಾನದಲ್ಲಿ ಉಳಿದ ರಾಜ್ಯ ಸರ್ಕಾರಗಳಿಗಿಂತ ಒಂದು ಹೆಜ್ಜೆ ಮುಂದಿದೆ ಎಂದೇ ಹೇಳಬಹುದು.

ಗಮನಿಸಿ: ಈ ಲೇಖನದಲ್ಲಿ ಮೊದಲ ಎರಡು ಚಿತ್ರಗಳನ್ನು ಹೊರತುಪಡಿಸಿ ಉಳಿದ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Bjp leader says to go to afghanistan to get cheap petrol details
Story first published: Saturday, August 21, 2021, 10:23 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X