ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪತ್ನಿಯ ಐಷಾರಾಮಿ ಕಾರೇ ಕಳ್ಳತನ! ಸಾಮಾನ್ಯರ ಕಾರಿನ ಗತಿ ಏನು?

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda) ಅವರ ಪತ್ನಿಯ ಕಾರು ದೆಹಲಿಯಲ್ಲಿ ಕಳ್ಳತನವಾಗಿದೆ ಎಂದು ವರದಿಯಾಗಿದೆ. ಜೆ.ಪಿ. ನಡ್ಡಾ ಅವರ ಪತ್ನಿ ಮಲ್ಲಿಕಾ ನಡ್ಡಾ ಅವರ ದುಬಾರಿ ಕಾರು ಟೊಯೊಟಾ ಫಾರ್ಚುನರ್‌ (Toyota Fortuner) ಕಳ್ಳತನವಾಗಿದೆ. ಈ ಕಾರು ಕಳ್ಳತನವಾಗುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಲ್ಲಿಕಾ ನಡ್ಡಾ ಅವರ ಟೊಯೊಟಾ ಫಾರ್ಚುನರ್ ಎಸ್‍ಯುವಿಯು ದೆಹಲಿಯ ಗೋವಿಂದ್‌ಪುರಿಯಲ್ಲಿಯ ಕಾರು ಸರ್ವಿಸ್‌ಗೆ ಕೊಟ್ಟಾಗ ಸರ್ವಿಸ್‌ ಸೆಂಟರ್‌ನಿಂದಲೇ ಕಳ್ಳತನವಾಗಿದೆ ಎಂದು ವರದಿಯಾಗಿದೆ. ಹಿಮಾಚಲ ಪ್ರದೇಶದಲ್ಲಿ ನೋಂದಣಿಯಾದ ಎಚ್‌ಪಿ 03 ಡಿ 0021 ನಂಬರ್‌ನ ಟೊಯೊಟಾ ಫಾರ್ಚುನರ್ ಎಸ್‍ಯುವಿಯನ್ನು ಸರ್ವಿಸ್‌ ಮಾಡಿಸಲು ಚಾಲಕ ಜೋಗಿಂದರ್‌ ಸಿಂಗ್‌ ಅವರು ಮಾರ್ಚ್‌ 19ರಂದು ಗೋವಿಂದ್‌ಪುರಿಗೆ ತೆಗೆದುಕೊಂಡು ಹೋಗಿದ್ದರು.

JP Nadda s Wife Car Stolen I

ಕಾರನ್ನು ಸರ್ವಿಸ್‌ ಸೆಂಟರ್‌ನಲ್ಲಿ ಬಿಟ್ಟ ಜೋಗಿಂದರ್‌ ಸಿಂಗ್‌ ಊಟ ಮಾಡಲು ತೆರಳಿದ್ದರು. ಆದರೆ, ಊಟ ಮಾಡಿ ಬರುವಷ್ಟರಲ್ಲಿ ಕಾರು ಕಳ್ಳತನವಾಗಿದೆ ಎಂದು ಡ್ರೈವರ್ ಜೋಗಿಂದರ್‌ ಸಿಂಗ್‌ ಹೇಳಿದ್ದಾರೆ. ಬಳಿಕ ಅವರು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಕಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಲಾಗಿದ್ದು, ಪೊಲೀಸರು ಶೋಧ ಆರಂಭಿಸಿದ್ದಾರೆ.

ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ಕಾರಿಗಾಗಿ ಶೋಧ ನಡೆಸುತ್ತಿದ್ದಾರೆ. ಆದರೆ ಇದುವರೆಗೂ ಕಾರು ಎಲ್ಲಿದೆ, ಕದ್ದವರು ಯಾರು ಎಂಬ ಕುರಿತು ಯಾವುದೇ ಸುಳಿವು ಸಿಕ್ಕಿಲ್ಲ ಎಂದು ವರದಿಯಾಗಿದೆ. ಇನ್ನು ಕಳ್ಳತನವಾದ ಟೊಯೊಟಾ ಫಾರ್ಚುನರ್ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಇದರ ಬೆಲೆಯು ರೂ.33.43 ಲಕ್ಷದಿಂದ ರೂ.51.44 ಲಕ್ಷವಾಗಿದೆ. ಇದು ಎಕ್ಸ್ ಶೋರೂಂ ಬೆಲೆಯಾಗಿದ್ದು, ಆನ್ ರೋಡ್ ಬೆಲೆಯು ಹೆಚ್ಚು ಇದೆ.

JP Nadda s Wife Car Stolen I

ಭಾರತದಲ್ಲಿ ಫುಲ್ ಸೈಜ್ ಎಸ್‌ಯುವಿ ವಿಭಾಗದಲ್ಲಿ ಟೊಯೊಟಾ ಫಾರ್ಚೂನರ್ ತನ್ನ ಪ್ರಾಬಲ್ಯವನ್ನು ಎಂದಿನಂತೆ ಮುಂದುವರೆಸುತ್ತಿದೆ. ಪ್ರತಿ ತಿಂಗಳಿನಲ್ಲೂ, ಫುಲ್ ಸೈಜ್ ಎಸ್‌ಯುವಿ ವಿಭಾಗದ ಮಾರಾಟದಲ್ಲಿ ಟೊಯೊಟಾ ಫಾರ್ಚೂನರ್ ತನ್ನ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿ ಅಗ್ರಸ್ಥಾನದಲ್ಲಿ ಮುಂದುವರೆಯುತ್ತಿದೆ.ಈ ಕಾರಿಗೆ ಭರ್ಜರಿ ಬೇಡಿಕೆ ಹೊಂದಿರುವುದರಿಂದ ಕಾಯುವ ಅವಧಿಯನ್ನು ಹೊಂದಿದೆ.

ಈ ಟೊಯೊಟಾ ಫಾರ್ಚುನರ್ ಖರೀದಿಸುವ ಗ್ರಾಹಕರು ಬುಕಿಂಗ್ ದಿನಾಂಕದಿಂದ ಸರಿ ಸುಮಾರು 2 ತಿಂಗಳವರೆಗೆ ಕಾಯಬೇಕಾಗುತ್ತದೆ. ಇದು ಪ್ರದೇಶ, ರಾಜ್ಯ, ಡೀಲರ್‌ಶಿಪ್, ರೂಪಾಂತರ, ಬಣ್ಣ ಮತ್ತು ಇತರ ಅಂಶಗಳನ್ನು ಅವಲಂಬಿಸಿ ಬದಲಾಗುತ್ತದೆ. ಗಾತ್ರದ ಎಸ್‌ಯುವಿ ವಿಭಾಗದ ಮಾರಾಟದಲ್ಲಿ ಟೊಯೊಟಾ ಫಾರ್ಚೂನರ್ ದೀರ್ಘಕಾಲದಿಂದ ಅಗ್ರಸ್ಥಾನದಲ್ಲಿದೆ. ಹೆಚ್ಚಿನ ಮಾಹಿತಿಯನ್ನು ತಿಳಿಯಲು ನಿಮ್ಮ ಹತ್ತಿರದ ಡೀಲರ್‌ಶಿಪ್ ಅನ್ನು ಸಂಪರ್ಕಿಸಿ.

JP Nadda s Wife Car Stolen I

7-ಸೀಟುಗಳ ಪ್ರಸ್ತುತ ಜನರೇಷನ್ ಫಾರ್ಚೂನರ್ ಎಸ್‍ಯುವಿಯನ್ನು 2016 ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಫಾರ್ಚೂನರ್ ಜಿಆರ್ ಸ್ಪೋರ್ಟ್ ರೂಪಾಂತರವನ್ನು ಶ್ರೇಣಿಗೆ ಸೇರಿಸಲಾಯಿತು. ಟೊಯೊಟಾ ಫಾರ್ಚುನರ್ ಎಸ್‍ಯುವಿಯ ಲೆಜೆಂಡರ್ ಆವೃತ್ತಿಯು ಮಾರಾಟದಲ್ಲಿದೆ ಮತ್ತು ಇದು 4X4 ಆಯ್ಕೆಯೊಂದಿಗೆ ಸಹ ಲಭ್ಯವಿದೆ. ಟೊಯೊಟಾ ಲೆಜೆಂಡರ್‌ನ 4×4 ರೂಪಾಂತರವನ್ನು ಫಾರ್ಚುನರ್‌ನ ಸರಣಿಗೆ ಸೇರಿಸಿತು.

ಈ ಟೊಯೊಟಾ ಫಾರ್ಚುನರ್‌ನ ಜಿಆರ್-ಸ್ಪೋರ್ಟ್ ರೂಪಾಂತರವನ್ನು ಕೂಡ ಬಿಡುಗಡೆಗೊಳಿಸಿತ್ತು. ಈ ಟೊಯೊಟಾ ಫಾರ್ಚುನರ್ ಎಸ್‍ಯುವಿಯ ಬೆಲೆಗಳಲ್ಲಿನ ಹೆಚ್ಚಳವನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಯನ್ನು ಮಾಡಿಲ್ಲ. ಫಾರ್ಚೂನರ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯು ಸಂಯೋಜಿತ ಎಲ್‌ಇಡಿ ಡಿಆರ್‌ಎಲ್‌ಗಳೊಂದಿಗೆ ನವೀಕರಿಸಿದ ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳನ್ನು ಹೊಂದಿವೆ.

ಈ ಎಸ್‍ಯುವಿಯಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋಗಳೊಂದಿಗಿನ ಹೊಸ 8.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಕನೆಕ್ಟಿವಿಟಿ ಕಾರು ತಂತ್ರಜ್ಞಾನವನ್ನು ಕೂಡ ನೋಡಬಹುದು. ಇದರಲ್ಲಿ ವೆಂಟಿಲೇಟಡ್ ಮುಂಭಾಗದ ಸೀಟುಗಳು, ಇನ್ಸ್ ಟ್ರೂಮೆಂಟ್ ಕ್ಲಸ್ಟರ್, 11-ಸ್ಪೀಕರ್ ಜೆಬಿಎಲ್ ಆಡಿಯೊ ಸಿಸ್ಟಂ, ಆಂಬಿಯೆಂಟ್ ಲೈಟಿಂಗ್ ಮತ್ತು ಇತರ ಫೀಚರ್ ಗಳನ್ನು ಕೂಡ ನೀಡಿದೆ.

ಟೊಯೊಟಾ ತನ್ನ ಫಾರ್ಚುನರ್ ಲೆಜೆಂಡರ್ 4X4 ವೆರಿಯೆಂಟ್ ಭಾರತೀಯ ಮಾರುಕಟ್ಟೆಯಲ್ಲಿ ಕೆಲವು ತಿಂಗಳುಗಳ ಹಿಂದೆ ಬಿಡುಗಡೆಗೊಳಿಸಿತ್ತು. ಈ ಬಹುಬೇಡಿಕೆಯ ಟೊಯೊಟಾ ಫಾರ್ಚುನರ್ ಎಸ್‍ಯುವಿಯ ಟಾಪ್ ವೆರಿಯೆಂಟ್ ಲೆಜೆಂಡರ್ ಆಗಿದೆ. ಈ ಫಾರ್ಚುನರ್ ಲೆಜೆಂಡರ್ 4X4 ವೆರಿಯೆಂಟ್ ಡ್ಯುಯಲ್ ಟೋನ್ ಪರ್ಲ್ ವೈಟ್ ಜೊತೆಗೆ ಬ್ಲಾಕ್ ರೂಫ್ ಕಲರ್ ಸ್ಕೀಮ್ ನಲ್ಲಿ ಮಾರಾಟ ಮಾಡುತ್ತಿದೆ.

Article Published On: Monday, March 25, 2024, 13:40 [IST]
English summary
Bjp president j p naddas wife car stolen in delhi details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+