ಅನುಕಂಪದ ಆಧಾರದಡಿ BMTC ಖಾಲಿ ಹುದ್ದೆಗಳ ಭರ್ತಿ: ಹೆಚ್ಚುವರಿ 2,500 ಹುದ್ದೆಗಳಿಗೆ ಅರ್ಜಿ ಆಹ್ವಾನ
ನೌಕರಿಗಾಗಿ ನಿರೀಕ್ಷಣೆಯಲ್ಲಿದ್ದ ಮೃತಾವಲಂಭಿತ ಅಭ್ಯರ್ಥಿಗಳ ಪೈಕಿ ಅರ್ಹತೆಯನುಸಾರ ಹಾಗೂ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ ಬಿಎಂಟಿಸಿ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಡಿಯಲ್ಲಿ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಗಿದೆ. ಮಾರ್ಚ್ 3 ರಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಈ ಆದೇಶ ಪತ್ರಗಳನ್ನು ವಿತರಿಸಿದ್ದಾರೆ.
ಬಿಎಂಟಿಸಿಗೆ ಅರ್ಹತೆಯನುಸಾರ ಹಾಗೂ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ ಸುಮಾರು 200 ಮೃತಾವಲಂಭಿತರುಗಳನ್ನು ಕಳೆದ ಅಕ್ಟೋಬರ್ ಮತ್ತು ನವೆಂಬರ್ - 2023ರಲ್ಲಿ ದರ್ಜೆ - 3 (ಮೇಲ್ವಿಚಾರಕೇತರ) ಮತ್ತು ದರ್ಜೆ - 4ರ ಖಾಲಿ ಹುದ್ದೆಗಳಿಗೆ ನೇಮಕ ಮಾಡಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.

ಅಲ್ಲದೇ, ಪ್ರಸ್ತುತ ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ ಮೃತಾವಲಂಭಿತರುಗಳನ್ನು ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಿ, ಕಿರಿಯ ಸಹಾಯಕ ಕಂ ಡೇಟಾ ಎಂಟ್ರಿ ಆಪರೇಟರ್, ದರ್ಜೆ - 3 (ಮೇಲ್ವಿಚಾರಕೇತರ) ಹುದ್ದೆಗೆ 50 ಮೃತಾವಲಂಭಿತರುಗಳನ್ನು ಆಯ್ಕೆ ಮಾಡಿ ನೇಮಕಾತಿ ಪತ್ರವನ್ನು ವಿತರಿಸಲಾಗಿದೆ.
ನಿರ್ವಾಹಕ ಹುದ್ದೆಗೆ ಅರ್ಜಿ ಆಹ್ವಾನ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2,500 ನಿರ್ವಾಹಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಗೊಳಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು 'ನಿರ್ವಾಹಕ ಹುದ್ದೆಗೆ ದಿನಾಂಕ 10 - 03 - 2024 ರಿಂದ 10 - 04 - 2024 ರವರೆಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ - https://kea.kar.nic.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಸೂಚಿಸಿರುವ ವಿದ್ಯಾರ್ಹತೆ, ದೈಹಿಕ ದೃಢತೆ, ಷರತ್ತು ಮತ್ತು ಸೂಚನೆಗಳನ್ನು ಸ್ಪಷ್ಟವಾಗಿ ಓದಿ, ಅರ್ಥೈಸಿಕೊಂಡು ಅರ್ಹತೆ ಹೊಂದಿದ ಪಕ್ಷದಲ್ಲಿ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಬಹುದು ಎಂದು ಬಿಎಂಟಿಸಿ ತಿಳಿಸಿದೆ.
BMTC ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಎಸಿ ಬಸ್‌ಗಳು?: BMTC, ಡಬಲ್ ಡೆಕ್ಕರ್ ಬಸ್‌ಗಳನ್ನು ಪರಿಚಯಿಸಲು ತಯಾರಿ ನಡೆಸುತ್ತಿದೆ. ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ರಾಮಚಂದ್ರ ಆರ್ ಅವರು, ಒಟ್ಟು ವೆಚ್ಚದ ಒಪ್ಪಂದದ (Gross Cost Contract - GCC) ಮಾದರಿಯಲ್ಲಿ ಹೊಸ 10 ಡಬಲ್ ಡೆಕ್ಕರ್ ಎಸಿ ಎಲೆಕ್ಟ್ರಿಕ್ ಬಸ್‌ಗಳನ್ನು ಪರಿಚಯಿಸಲು ಟೆಂಡರ್‌ಗೆ ಅನುಮೋದನೆ ನೀಡಲಾಗಿದೆ ಎಂದು ಈ ಹಿಂದೆ ಹೇಳಿದ್ದರು.
1997ರಲ್ಲಿ ಬೆಂಗಳೂರು ನಗರದ ರಸ್ತೆಗಳಲ್ಲಿ ಕೊನೆಯ ಬಾರಿಗೆ ಡಬಲ್ ಡೆಕ್ಕರ್ ಬಸ್‌ಗಳು ಕಂಡುಬಂದಿದ್ದವು. ಕಾರ್ಯಾಚರಣೆ ಮತ್ತು ನಿರ್ವಹಣೆ ಸಮಸ್ಯೆಗಳಿಂದ ಈ ಬಸ್‌ಗಳನ್ನು ಹಂತ ಹಂತವಾಗಿ ಸೇವೆಯಿಂದ ತೆಗೆದುಹಾಕಲಾಗಿತ್ತು. ಡಬಲ್ ಡೆಕ್ಕರ್ ಬಸ್ ಯೋಜನೆಗಾಗಿ ಬಿಎಂಟಿಸಿ ನಗರ ಭೂ ಸಾರಿಗೆ ನಿರ್ದೇಶನಾಲಯದ (Directorate of Urban Land Transport) ಅನುದಾನ ಉಪಯೋಗಿಸಲು ತೀರ್ಮಾನ ಮಾಡಿದೆ ಎಂದು ತಿಳಿದುಬಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.


Click it and Unblock the Notifications








