ಚೆನ್ನೈ ಪ್ರವಾಹ: ತಮಿಳು ನಟನ ಮನೆಯಲ್ಲಿ ಸಿಲುಕಿದ್ದ ಬಾಲಿವುಡ್ ಸೂಪರ್ ಸ್ಟಾರ್ ಆಮಿರ್ ಖಾನ್ ರಕ್ಷಣೆ
ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಮಿಚಾಂಗ್ (michaung) ಚಂಡಮಾರುತದಿಂದ ಸತತ ಭಾರೀ ಮೆಳೆಯಾಗಿದ್ದು, ಪ್ರವಾಹದ ಸ್ಥಿತಿ ಉಂಟಾಗಿದೆ. ಹಲವಾರು ಮನೆಗಳಿಗೆ ನೀರು ನುಗ್ಗಿದೆ. ಈಗಾಗಲೇ ಸುಮಾರು 10 ಮಂದಿ ಈ ಮಹಾಮಳೆಗೆ ಬಲಿಯಾಗಿದ್ದು, ಜನ ಜೀವನ ಅಸ್ಥವ್ಯಸ್ಥವಾಗಿದೆ. ಚೆನ್ನೈ ನಗರ ಸೇರಿದಂತೆ ಹಲವು ಕಡೆಗಳಲ್ಲಿ ಜನ ಮನೆಗಳಲ್ಲಿ ಸಿಲುಕಿದ್ದು ಯಾರೂ ಹೊರಬರಲಾರದ ಸ್ಥಿತಿಯಲ್ಲಿದ್ದಾರೆ.
ಮನೆಗಳಲ್ಲಿ ಸಿಲುಕಿದ ಜನರನ್ನು ಬೋಟ್ಗಳ ಮೂಲಕ ರಕ್ಷಣೆ ಮಾಡಲಾಗುತ್ತಿದೆ. ತಮಿಳು ನಟ ವಿಷ್ಣು ವಿಶಾಲ್ (Vishnu Vishal) ಮನೆಗೆ ಬಾಲಿವುಡ್ ನಟ ಆಮಿರ್ ಖಾನ್ (Aamir Khan) ಭೇಟಿ ಕೊಟ್ಟಿದ್ದರು. ಪ್ರವಾಹ ಪರಿಸ್ಥಿತಿಯಿಂದಾಗಿ ವಿಷ್ಣು ವಿಶಾಲ್ ಅವರ ನಿವಾಸದಲ್ಲೇ ಆಮಿರ್ ಖಾನ್ ಸಿಲುಕಿದರು. ಎಡಬಿಡದೆ ಸುರಿದ ಭಾರೀ ಮಳೆಯಿಂದಾಗಿ ಕಾಲಿವುಡ್ ಹೀರೋ ವಿಷ್ಣು ವಿಶಾಲ್ ಮನೆಯಿರುವ ಪ್ರದೇಶ ಜಲಾವೃತ್ತಗೊಂಡಿದೆ. ಈ ಪರಿಣಾಮ, ಮನೆಯಿಂದ ಯಾರೂ ಹೊರಬರಲಾರದ ಸ್ಥಿತಿಯಲ್ಲಿದ್ದರು.

ಇದರಿಂದ ಬಾಲಿವುಡ್ ನಟ ಆಮೀರ್ ಖಾನ್ ಅವರು ನಟ ವಿಷ್ಣು ಮನೆಯಲ್ಲೇ ಲಾಕ್ ಆಗಿದ್ದಾರೆ. ಅಷ್ಟೇ ಅಲ್ಲದೇ ಕರಪಾಕ್ಕಂನಲ್ಲಿ ನೀರಿನ ಮಟ್ಟ ತೀವ್ರವಾಗಿ ಏರುತ್ತಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿತು. ಇದೇ ಸಮಯದಲ್ಲಿ ವಿಷ್ಣು ವಿಶಾಲ್ ಮನೆಯೊಳಗೆ ನೀರು ನುಗ್ಗಿದ್ರಿಂದ ಸಹಾಯಕ್ಕಾಗಿ ವಿಷ್ಣು ವಿಶಾಲ್ ಸೋಷಿಯಲ್ ಮೀಡಿಯಾದಲ್ಲಿ ಮನವಿ ಮಾಡಿದ್ದರು. ಕೂಡಲೆ ಅಗ್ನಿಶಾಮಕ ದಳ ನಟ ವಿಷ್ಣು ವಿಶಾಲ್ ಮತ್ತು ಆಮೀರ್ ಖಾನ್ ಅವರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಧಾವಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ, 'ನನ್ನ ಮನೆಯೊಳಗೆ ನೀರು ನುಗ್ಗಿದೆ. ಕರಪಾಕ್ಕಂನಲ್ಲಿ ನೀರಿನ ಮಟ್ಟ ತೀವ್ರವಾಗಿ ಏರಿಕೆಯಾಗುತ್ತಿದೆ. ಸಹಾಯಕ್ಕಾಗಿ ಕರೆ ಮಾಡಿದ್ದೇನೆ. ವಿದ್ಯುತ್ ಸಂಪರ್ಕ ಇಲ್ಲ. ವೈಪೈ, ಫೋನ್ ಸಿಗ್ನಲ್ ಇಲ್ಲ. ಟೆರೆಸ್‌ನಲ್ಲಿ ಸಿಕ್ಕ ನಿರ್ದಿಷ್ಟ ಸಿಗ್ನಲ್‌ನಿಂದ ಸಹಾಯಕ್ಕಾಗಿ ಕೋರಿದ್ದೇನೆ. ಇಲ್ಲಿರುವವರ ಸಹಾಯಕ್ಕೆ ಯಾರಾದರೂ ಧಾವಿಸಲಿ ಎಂದು ಬಯಸುತ್ತೇನೆ'' ಎಂದು ವಿಷ್ಣು ವಿಶಾಲ್ ಪೋಸ್ಟ್ ಮಾಡಿದ್ದರು.

ಮನೆಯ ಒಂದು ಮೂಲೆಯಲ್ಲಷ್ಟೆ ಸಿಗ್ನಲ್ ಬರುತ್ತಿತ್ತು, ಅಲ್ಲಿ ನಿಂತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ ಎಂದು ನಟ ವಿಷ್ಣು ವಿಶಾಲ್ ಹೇಳಿಕೊಂಡಿದ್ದಾರೆ. ಆ ಬಳಿಕ ವಿಷಯ ಅರಿತ, ಅಗ್ನಿಶಾಮಕ ದಳ ವಿಷ್ಣು ಮನೆಗೆ ಧಾವಿಸಿ, ನಟ ವಿಷ್ಣು ಮತ್ತು ಆಮೀರ್ ಖಾನ್ ರಕ್ಷಣೆ ಮಾಡಿದ್ದಾರೆ. ಆಮಿರ್ ಖಾನ್, ವಿಷ್ಣು ವಿಶಾಲ್ ಸೇರಿದಂತೆ ಇನ್ನೂ ಕೆಲವರನ್ನು ರಕ್ಷಣಾ ಸಿಬ್ಬಂದಿ ಬೋಟ್ನಲ್ಲಿ ಕರೆದುಕೊಂಡು ಬರುತ್ತಿರುವ ಚಿತ್ರಗಳು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿವೆ.
ತಾಯಿಯವರಿಗೆ ಚಿಕಿತ್ಸೆ ಕೊಡಿಸಲು ಆಮಿರ್ ಖಾನ್ ಚೆನ್ನೈಗೆ ಬಂದಿದ್ದರು. ಕಳೆದ ಕೆಲವು ದಿನಗಳಿಂದಲೂ ಅವರು ಚೆನ್ನೈನಲ್ಲಿಯೇ ಇದ್ದರು. ತಮಿಳು ನಟ ವಿಷ್ಣು ವಿಶಾಲ್ ಮನೆಯಲ್ಲಿ ಆಮಿರ್ ಖಾನ್ ತಂಗಿದ್ದರು ಎಂದು ವರದಿಯಾಗಿದೆ. ಈ ವೇಳೆ ಚೆನ್ನೈನಲ್ಲಿ ಮಹಾ ಮಳೆ ಪ್ರಾರಂಭವಾಗಿದೆ ವಿಷ್ಣು ವಿಶಾಲ್ ಜಲಾವೃತ್ತಗೊಂಡು ಅವರು ಕೂಡ ಅಲ್ಲೇ ಸಿಲುಕಿಕೊಂಡರು.
ಇನ್ನು ಮಿಚಾಂಗ್ ಚಂಡಮಾರುತದ ಪರಿಣಾಮ ಚೆನ್ನೈನಲ್ಲಿ ಭಾರೀ ಮಳೆಯಾಗುತ್ತಿದ್ದು, ನಗರದ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ವಾಲಾಜಾ ರಸ್ತೆ, ಮೌಂಟ್ ರೋಡ್, ಅಣ್ಣಾ ಸಲೈ, ಚೆಪಾಕ್, ಓಮಂಡೂರರ್ ಆಸ್ಪತ್ರೆಯ ಹೊರಗೆ ಮತ್ತು ಇತರ ತಗ್ಗು ಪ್ರದೇಶಗಳು ಸೇರಿದಂತೆ ಹಲವಾರು ಪ್ರದೇಶಗಳು ನಿರಂತರ ಭಾರೀ ಮಳೆಯಿಂದಾಗಿ ಜಲಾವೃತಗೊಂಡಿವೆ.
ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಎಲ್ಲರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ರೈಲ್ವೆ ಮತ್ತು ವಿಮಾನ ಪ್ರಯಾಣ ಸೇರಿದಂತೆ ರಾಜ್ಯದ ಹಲವಾರು ಸೇವೆಗಳನ್ನು ಅವಶ್ಯಕತೆಗಳಿಗೆ ಅನುಗುಣವಾಗಿ ಸ್ಥಗಿತಗೊಳಿಸಲಾಗಿದೆ. ಮಿಚಾಂಗ್ ಚಂಡಮಾರುತದ ಹಿನ್ನೆಲೆ ತಮಿಳುನಾಡು ಹಾಗೂ ಆಂಧ್ರ ಪ್ರದೇಶಕ್ಕೆ ವಿಮಾನ ಸಂಚಾರ ರದ್ದಾಗಿದೆ. ಕೆಂಪೇಗೌಡ ಏರ್ಪೋರ್ಟ್ನಿಂದ ತೆರಳಬೇಕಿದ್ದ ವಿಮಾನ ಸಂಚಾರ ರದ್ದುಗೊಳಿಸಲಾಗಿದೆ. ಸೋಮವಾರ ರಾತ್ರಿಯಿಂದ ರಾತ್ರಿಯಿಂದ ಈವರೆಗೆ 15ಕ್ಕೂ ಹೆಚ್ಚು ವಿಮಾನಗಳ ಸಂಚಾರ ರದ್ದು ಆಗಿದೆ ಎಂದು ವರದಿಯಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಲು ಮರೆಯದಿರಿ.


Click it and Unblock the Notifications