ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರಿನ ಮೊದಲ ಯುನಿಟ್ ವಿತರಣೆ ಪಡೆದುಕೊಂಡ ಬಿಗ್ ಬಿ

ಐಷಾರಾಮಿ ಕಾರುಗಳ ದೊಡ್ಡ ಪಟ್ಟಿಯನ್ನೇ ಹೊಂದಿರುವ ಬಿಗ್ ಬಿ ಅಮಿತಾಬ್ ಬಚ್ಚನ್‌ಗೆ ಕಾರುಗಳ ಮೇಲಿನ ಕ್ರೇಜ್ ಅಷ್ಟಿಷ್ಟಲ್ಲ. ಎಂಟ್ರಿ ಲೆವಲ್‌ನಿಂದ ಹಿಡಿದು ಕೋಟಿ ಮೌಲ್ಯದ ಹಲವಾರು ಕಾರುಗಳನ್ನು ಹೊಂದಿರುವ ಬಿಗ್ ಬಿ ಗ್ಯಾರೇಜ್‌ಗೆ ಇದೀಗ ಟೊಯೊಟಾ ಹೊಸ ಇನೋವಾ ಕ್ರಿಸ್ಟಾ ಕಾರು ಎಂಟ್ರಿ ಕೊಟ್ಟಿದೆ.

ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರಿನ ಮೊದಲ ಯುನಿಟ್ ವಿತರಣೆ ಪಡೆದುಕೊಂಡ ಬಿಗ್ ಬಿ

ಟೊಯೊಟಾ ನಿರ್ಮಾಣದ ಬಹುತೇಕ ಕಾರುಗಳ ವಿತರಣೆ ಪಡೆದಿರುವ ಬಿಗ್ ಬಿ ಇದೀಗ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರನ್ನು ಖರೀದಿಸಿದ್ದು, ಕಳೆದ ಸೆಪ್ಟೆಂಬರ್‌ನಲ್ಲಿ ರೂ.1.38 ಕೋಟಿ ಮೌಲ್ಯದ ಮರ್ಸಿಡಿಸ್ ಎಸ್-ಕ್ಲಾಸ್ ಖರೀದಿಸಿದ್ದರು. ಇದೀಗ ತಮ್ಮ ನೆಚ್ಚಿನ ಕಾರು ಮಾದರಿಗಳಲ್ಲಿ ಒಂದಾಗಿರುವ ಇನೋವಾ ಕಾರಿನ ಹೊಸ ಆವೃತ್ತಿಯನ್ನು ಖರೀದಿಸಿದ್ದು, ಹೊಸ ಆವೃತ್ತಿಯ ಮೊದಲ ಕಾರಿನ ಮಾಲೀಕತ್ವವನ್ನು ಅಮಿತಾಬ್ ಬಚ್ಚನ್ ಅವರಿಗೆ ನೀಡಲಾಗಿದೆ.

ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರಿನ ಮೊದಲ ಯುನಿಟ್ ವಿತರಣೆ ಪಡೆದುಕೊಂಡ ಬಿಗ್ ಬಿ

2005ರಿಂದಲೂ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿರುವ ಇನೋವಾ ಕಾರು ಮಾದರಿಯು ಕಾಲಕ್ಕೆ ತಕ್ಕಂತೆ ಹಲವಾರು ಬದಲಾವಣೆಗಳೊಂದಿಗೆ ಮಾರಾಟವಾಗುತ್ತಿದ್ದು, ಕಳೆದ ತಿಂಗಳ ಕೊನೆಯಲ್ಲಿ ಎರಡನೇ ತಲೆಮಾರಿನ ಫೇಸ್‌ಲಿಫ್ಟ್ ಮಾದರಿಯನ್ನು ಬಿಡುಗಡೆ ಮಾಡಲಾಗಿತ್ತು.

ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರಿನ ಮೊದಲ ಯುನಿಟ್ ವಿತರಣೆ ಪಡೆದುಕೊಂಡ ಬಿಗ್ ಬಿ

2005ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಂಡಿದ್ದ ಇನೋವಾ ಕಾರು ಮಾದರಿಯು ಕಳೆದ 2016ರಲ್ಲಿ ನ್ಯೂ ಜನರೇಷನ್ ಫೀಚರ್ಸ್‌ಗಳೊಂದಿಗೆ ಇನೋನಾ ಕ್ರಿಸ್ಟಾ ಮಾದರಿಯಾಗಿ ಬಿಡುಗಡೆಗೊಂಡಿತ್ತು. ಇದೀಗ 2021ರ ಮಾದರಿಯಾಗಿ ಫೇಸ್‌ಲಿಫ್ಟ್ ಮಾದರಿಯನ್ನು ಬಿಡಗಡೆ ಮಾಡಲಾಗಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 16.26 ಲಕ್ಷದಿಂದ ಟಾಪ್ ಎಂಡ್ ಮಾದರಿಯು 24.33 ಲಕ್ಷ ಬೆಲೆ ಪಡೆದುಕೊಂಡಿದೆ.

ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರಿನ ಮೊದಲ ಯುನಿಟ್ ವಿತರಣೆ ಪಡೆದುಕೊಂಡ ಬಿಗ್ ಬಿ

ಹೊಸ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಮಾದರಿಯು ಜಿಎಕ್ಸ್, ವಿಎಕ್ಸ್ ಮತ್ತು ಜೆಡ್ಎಕ್ಸ್ ಎಂಬ ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಫೀಚರ್ಸ್ ಅಳವಡಿಕೆ ನಂತರ ಕಾರಿನ ಬೆಲೆಯು ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 60 ಸಾವಿರದಿಂದ ರೂ.70 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಂಡಿದೆ.

ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರಿನ ಮೊದಲ ಯುನಿಟ್ ವಿತರಣೆ ಪಡೆದುಕೊಂಡ ಬಿಗ್ ಬಿ

ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರಿನಲ್ಲಿ ಟೊಯೊಟಾ ಕಂಪನಿಯು ಹಲವು ಹೊಸ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿದ್ದು, ಹೊಸ ಕಾರಿನಲ್ಲಿ ಪ್ರಮುಖ ಬದಲಾವಣೆಗಾಗಿ ಕ್ರೊಮ್ ಸೌಲಭ್ಯ ಹೊಂದಿರುವ ಪಿಯಾನೊ ಬ್ಲ್ಯಾಕ್ ಬಣ್ಣದ ಟ್ರಾಪೆಜೊಡಿಯಲ್ ಫ್ರಂಟ್ ಗ್ರಿಲ್ ಮತ್ತು ಹೊಸ ವಿನ್ಯಾಸ ಫ್ರಂಟ್ ಬಂಪರ್ ಪ್ರಮುಖ ಆಕರ್ಷಣೆಯಾಗಿದೆ.

ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರಿನ ಮೊದಲ ಯುನಿಟ್ ವಿತರಣೆ ಪಡೆದುಕೊಂಡ ಬಿಗ್ ಬಿ

ಹಾಗೆಯೇ ಹೊಸ ಕಾರಿನಲ್ಲಿ ಬ್ಯಾನೆಟ್ ಹೊಂದಿಕೊಂಡಂತೆ ಫ್ರಂಟ್ ಗ್ರಿಲ್‌ನೊಳಗೆ ಸೇರ್ಪಡೆಯಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್ ಸೆಟಪ್, ಡೈಮಂಡ್ ಕಟ್ ಅಲಾಯ್ ವೀಲ್ಹ್ ಮತ್ತು ಹೊಸದಾದ ಬಣ್ಣದ ಆಯ್ಕೆ ಪಡೆದುಕೊಂಡಿದ್ದು, ಹೊಸ ಬಣ್ಣದ ಆಯ್ಕೆಯನ್ನು ಸ್ಪಾರ್ಕ್ಲಿಂಗ್ ಬ್ಲ್ಯಾಕ್ ಕ್ರಿಸ್ಟಲ್ ಶೈನ್ ಎಂದು ಹೆಸರಿಸಿದೆ. ಇದು ಕಾರಿನ ಪ್ರೀಮಿಯಂ ಸೌಲಭ್ಯಗಳಿಗೆ ಪೂರಕವಾದ ಹೊಸ ಬಣ್ಣ ಆಯ್ಕೆಯಾಗಿದ್ದು, ಹೊರಭಾಗದಂತೆ ಒಳಭಾಗದಲ್ಲೂ ಪ್ರಮುಖ ಬದಲಾವಣೆಗಳಾಗಿವೆ.

ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರಿನ ಮೊದಲ ಯುನಿಟ್ ವಿತರಣೆ ಪಡೆದುಕೊಂಡ ಬಿಗ್ ಬಿ

ಹೊಸ ಫೇಸ್‌ಲಿಫ್ಟ್ ಕಾರಿನಲ್ಲಿ ಈ ಬಾರಿ ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ ಸರ್ಪೋಟ್ ಮಾಡುವ ಸ್ಮಾರ್ಟ್ ಪ್ಲೇಕಾಸ್ಟ್ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಹೊಂದಿದ್ದು, ಟಾಪ್ ಎಂಡ್ ಮಾದರಿಯಾದ ಜೆಡ್ಎಕ್ಸ್ ಆವೃತ್ತಿಯಲ್ಲಿ ಹೆಚ್ಚುವರಿಯಾಗಿ ಕ್ಯಾಮೆಲ್ ಟಾನ್ ಕಲರ್ ಲೆದರ್ ಸೀಟುಗಳನ್ನು ನೀಡಿರುವುದು ಪ್ರೀಮಿಯಂ ಲುಕ್ ಹೆಚ್ಚಿಸಿದೆ.

ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರಿನ ಮೊದಲ ಯುನಿಟ್ ವಿತರಣೆ ಪಡೆದುಕೊಂಡ ಬಿಗ್ ಬಿ

ಫೇಸ್‌ಲಿಫ್ಟ್ ಕಾರಿನ ಮುಂಭಾಗದ ವಿನ್ಯಾಸ ಮತ್ತು ಒಳಭಾಗದಲ್ಲಿ ಕೆಲವು ಪ್ರೀಮಿಯಂ ಫೀಚರ್ಸ್ ಹೊರತುಪಡಿಸಿ ಕಾರಿನ ಹಿಂಭಾಗದ ವಿನ್ಯಾಸವನ್ನು ಈ ಹಿಂದಿನಂತೆಯೇ ಮುಂದುವರಿಸಲಾಗಿದ್ದು, ಎಂಜಿನ್ ಆಯ್ಕೆಯು ಕೂಡಾ ಯಾವುದೇ ಬದಲಾವಣೆ ಪಡೆದುಕೊಂಡಿಲ್ಲ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರಿನ ಮೊದಲ ಯುನಿಟ್ ವಿತರಣೆ ಪಡೆದುಕೊಂಡ ಬಿಗ್ ಬಿ

ಬಿಎಸ್-6 ಎಮಿಷನ್ ಜಾರಿ ನಂತರ ಪರಿಚಯಿಸಲಾದ ಎಂಜಿನ್ ಮಾದರಿಯೇ ಇದೀಗ ಫೇಸ್‌ಲಿಫ್ಟ್ ಮಾದರಿಯಲ್ಲಿ ಜೋಡಿಸಲಾಗಿದ್ದು, ಇನೋವಾ ಕ್ರಿಸ್ಟಾ ಕಾರಿನಲ್ಲಿ ಗ್ರಾಹಕರು 2.7-ಲೀಟರ್ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಮಾಡಬಹುದಾಗಿದೆ.

ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರಿನ ಮೊದಲ ಯುನಿಟ್ ವಿತರಣೆ ಪಡೆದುಕೊಂಡ ಬಿಗ್ ಬಿ

ಹೊಸ ಎಮಿಷನ್ ನಂತರ 2.8-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಸ್ಥಗಿತಗೊಳಿಸಿರುವ ಟೊಯೊಟಾ ಕಂಪನಿಯು 2.7-ಲೀಟರ್ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಮಾತ್ರ ಮಾರಾಟ ಮಾಡುತ್ತಿದ್ದು, ಪ್ರತಿ ವೆರಿಯೆಂಟ್‌ನಲ್ಲೂ 5-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಲಭ್ಯವಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರಿನ ಮೊದಲ ಯುನಿಟ್ ವಿತರಣೆ ಪಡೆದುಕೊಂಡ ಬಿಗ್ ಬಿ

2.7-ಲೀಟರ್ ಪೆಟ್ರೋಲ್ ಮಾದರಿಯು 164-ಬಿಎಚ್‌ಪಿ, 245-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ 2.4-ಲೀಟರ್ ಡೀಸೆಲ್ ಎಂಜಿನ್ ಮಾದರಿಯು 160-ಬಿಎಚ್‌ಪಿ, 360-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಇಂಧನ ದಕ್ಷತೆಯಲ್ಲೂ ಸುಧಾರಣೆ ಕಂಡಿದೆ.

Article Published On: Thursday, December 17, 2020, 21:58 [IST]
English summary
Amitabh Bachchan Buys Toyota Innova Crysta Facelift. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+