ಮೂರುವರೆ ಕೋಟಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಬಾಲಿವುಡ್ ನಟಿ ಕಂಗನಾ ರಣಾವತ್

ಬಾಲಿವುಡ್ ನಟಿ ಕಂಗನಾ ರಣಾವತ್ ಸದಾ ಒಂದಿಲ್ಲೊಂದು ಸುದ್ದಿಯಲ್ಲಿರಲು ಬಯಸುವಂತ ವ್ಯಕ್ತಿತ್ವ ಎಂದರೆ ತಪ್ಪಾಗಲಾರದು. ಸಿನಿಮಾ ಸುದ್ದಿಗಳಿಗೆ ಹೊರತಾಗಿ ನಟಿ ಕಂಗನಾ ರಣಾವತ್ ಸುದ್ದಿಯಲ್ಲಿರಲು ಬಯಸುತ್ತಾರೆ. ನೆಗಟಿವ್ ವಿಚಾರಗಳಿಗೆ ಹೆಚ್ಚಾಗಿ ಸುದ್ದಿಯಾಗುವ ನಟಿ ಇದೀಗ ಹೊಸ ಐಷಾರಾಮಿ ಕಾರೊಂದನ್ನು ಖರೀದಿಸುವ ಮೂಲಕ ತಮ್ಮ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ್ದಾರೆ.

ಮೂರುವರೆ ಕೋಟಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಬಾಲಿವುಡ್ ನಟಿ ಕಂಗನಾ ರಣಾವತ್

ಹೌದು, ನಟಿ ಕಂಗನಾ ರಣಾವತ್ ಹೊಸ ಚಿತ್ರವೊಂದರ ಪ್ರಚಾರದ ಸುದ್ದಿಯಲ್ಲಿರುವಾಗಲೇ ಹೊಸ ಐಷಾರಾಮಿ ಕಾರು ಖರೀದಿ ಮಾಡಿರುವ ಸುದ್ದಿಯು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಬಾಲಿವುಡ್ ಚಿತ್ರೋದ್ಯಮಕ್ಕೆ ಪದಾರ್ಪಣೆ ಮಾಡಿದ ಕೆಲವೇ ವರ್ಷಗಳಲ್ಲಿ ಹಲವಾರು ಸವಾಲು ಎದುರಿಸಿರುವ ನಟಿ ಇದೀಗ ಬಹುಕೋಟಿ ಮೌಲ್ಯದ ಐಷಾರಾಮಿ ಕಾರಿನ ಒಡತಿಯಾಗಿದ್ದಾರೆ.

ಮೂರುವರೆ ಕೋಟಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಬಾಲಿವುಡ್ ನಟಿ ಕಂಗನಾ ರಣಾವತ್

ನಟಿ ಕಂಗನಾ ಬಳಿ ಈಗಾಗಲೇ ಹಲವಾರು ಐಷಾರಾಮಿ ಕಾರುಗಳಿದ್ದು, ಇದೀಗ ನಟಿಮಣಿಯ ಕಾರು ಸಂಗ್ರಹಕ್ಕೆ ಮರ್ಸಿಡಿಸ್ ನಿರ್ಮಾಣದ ದುಬಾರಿ ಕಾರು ಮೇಬ್ಯಾಕ್ ಎಸ್-ಕ್ಲಾಸ್ ಸೇರ್ಪಡೆಯಾಗಿದೆ.

ಮೂರುವರೆ ಕೋಟಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಬಾಲಿವುಡ್ ನಟಿ ಕಂಗನಾ ರಣಾವತ್

ಭಾರತದಲ್ಲಿ ಕಳೆದ ಮಾರ್ಚ್‌ನಲ್ಲಿ ಬಿಡುಗಡೆಗೊಂಡಿದ್ದ ಮೇಬ್ಯಾಕ್ ಎಸ್-ಕ್ಲಾಸ್ ಕಾರನ್ನು ಕಂಪನಿಯು ಇದೀಗ ವಿತರಣೆ ಆರಂಭಿಸಿದ್ದು, ಹೊಸ ಕಾರು ಕಂಪನಿ ನಿರ್ಮಾಣದ ಇತರೆ ಕಾರುಗಳಿಂತೂ ವಿಭಿನ್ನವಾದ ವಿನ್ಯಾಸದೊಂದಿಗೆ ದುಬಾರಿ ಬೆಲೆ ಹೊಂದಿದೆ.

ಮೂರುವರೆ ಕೋಟಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಬಾಲಿವುಡ್ ನಟಿ ಕಂಗನಾ ರಣಾವತ್

ಮೇಬ್ಯಾಕ್ ಎಸ್-ಕ್ಲಾಸ್ ಐಷಾರಾಮಿ ಕಾರು ಭಾರತದಲ್ಲಿ ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ಎರಡು ವೆರಿಯೆಂಟ್‌ಗಳಲ್ಲಿ ಮಾರಾಟಗೊಳ್ಳುತ್ತಿದ್ದು, ಮೇಬ್ಯಾಕ್ ಎಸ್-ಕ್ಲಾಸ್ ಎಸ್580 ಮತ್ತು ಮೇಬ್ಯಾಕ್ ಎಸ್-ಕ್ಲಾಸ್ ಎಸ್680 ವೆರಿಯೆಂಟ್ ಹೊಂದಿದೆ.

ಮೂರುವರೆ ಕೋಟಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಬಾಲಿವುಡ್ ನಟಿ ಕಂಗನಾ ರಣಾವತ್

ನಟಿ ಕಂಗನಾ ರಣಾವತ್ ಇದೀಗ ಮೇಬ್ಯಾಕ್ ಎಸ್-ಕ್ಲಾಸ್ ಎಸ್680 ವೆರಿಯೆಂಟ್ ಖರೀದಿಸಿದ್ದು, ಇದು ಎಕ್ಸ್‌ಶೋರೂಂ ಪ್ರಕಾರ ಭಾರತದಲ್ಲಿ ರೂ. 3.20 ಕೋಟಿ ಬೆಲೆ ಹೊಂದಿದೆ. ಹೊಸ ಕಾರು ಆನ್‌ರೋಡ್ ಪ್ರಕಾರ ಹೆಚ್ಚುವರಿ ರೂ. 45 ಲಕ್ಷದಷ್ಟು ದುಬಾರಿಯಾಗಲಿದ್ದು, ಹೊಸ ಕಾರು ಸಂಪೂರ್ಣವಾಗಿ ವಿದೇಶಿ ಮಾರುಕಟ್ಟೆಯಿಂದ ಆಮದು ಮಾಡಿಕೊಳ್ಳಲಾದ ಮಾದರಿಯಾಗಿದೆ.

ಮೂರುವರೆ ಕೋಟಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಬಾಲಿವುಡ್ ನಟಿ ಕಂಗನಾ ರಣಾವತ್

7ನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಂಡಿರುವ ಹೊಸ ಮರ್ಸಿಡಿಸ್-ಮೇಬ್ಯಾಕ್ ಎಸ್-ಕ್ಲಾಸ್ ಕಾರು ಮಾದರಿಯು ಸ್ಟ್ಯಾಂಡರ್ಡ್ ಎಸ್-ಕ್ಲಾಸ್ ಮಾದರಿಯಂತೆಯೇ ಹೊರನೋಟವನ್ನು ಹೊಂದಿದ್ದರೂ ಮೇಬ್ಯಾಕ್ ಎಸ್-ಕ್ಲಾಸ್ ಕಾರಿನಲ್ಲಿ ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ತಂತ್ರಜ್ಞಾನ ಸೌಲಭ್ಯಗಳನ್ನು ನೀಡಲಾಗಿದೆ.

ಮೂರುವರೆ ಕೋಟಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಬಾಲಿವುಡ್ ನಟಿ ಕಂಗನಾ ರಣಾವತ್

ಹೊಸ ಕಾರು ಸ್ಟ್ಯಾಂಡರ್ಡ್ ಎಸ್-ಕ್ಲಾಸ್ ಮಾದರಿಗಿಂತಲೂ 180 ಎಂಎಂ ಹೆಚ್ಚುವರಿ ಉದ್ದಳತೆ ಹೊಂದಿದ್ದು, ಹೊಸ ಕಾರು ಒಟ್ಟು 5,469 ಎಂಎಂ ಉದ್ದಳತೆಯೊಂದಿಗೆ ವಿಶಾಲವಾದ ಕ್ಯಾಬಿನ್ ಸ್ಪೆಸ್ ಹೊಂದಿದ್ದು, ಸ್ಟ್ಯಾಂಡರ್ಡ್ ಮಾದರಿಗಿಂತೂ ವಿಭಿನ್ನವಾಗಿ ಗುರುತಿಸಲು ಹೊಸ ಕಾರಿನಲ್ಲಿ ಕಂಪನಿಯು ಡ್ಯುಯಲ್ ಟೋನ್ ಪೇಟಿಂಗ್ ಮತ್ತು ಆಕರ್ಷಕವಾದ ಸಿ ಪಿಲ್ಲರ್‌ ವಿನ್ಯಾಸದಲ್ಲಿ ಮೇಬ್ಯಾಕ್ ಬ್ಯಾಜ್ಡ್ ಬಳಸಿರುವುದು ಆಕರ್ಷಕವಾಗಿದೆ.

ಮೂರುವರೆ ಕೋಟಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಬಾಲಿವುಡ್ ನಟಿ ಕಂಗನಾ ರಣಾವತ್

ಇದಕ್ಕಿಂತಲೂ ಮುಖ್ಯವಾಗಿ ಈ ಹೊಸ ಕಾರಿನಲ್ಲಿ ಕಂಪನಿಯು ವಿಶೇಷ ತಂತ್ರಜ್ಞಾನ ಪ್ರೇರಿತ ಇ-ಆಕ್ಟಿವ್ ಬಾಡಿ ಕಂಟ್ರೋಲ್ 48 ವೊಲ್ಟ್ ಆಕ್ಟಿವಾ ರೋಲ್ ಬಳಕೆ ಮಾಡಿದ್ದು, ಇದು ಚಾಲನೆ ವೇಳೆ ಹಂಪ್ ಮತ್ತು ರಸ್ತೆ ಗುಂಡಿಗಳಲ್ಲಿ ಕಾರಿನ ಅಂಡರ್ ಬಾಡಿ ಪ್ಯಾನೆಲ್‌ಗೆ ಹಾನಿಯಾಗದಂತೆ ತಡೆಯುತ್ತದೆ.

ಮೂರುವರೆ ಕೋಟಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಬಾಲಿವುಡ್ ನಟಿ ಕಂಗನಾ ರಣಾವತ್

ಹೊಸ ಕಾರಿನ ಒಳಭಾಗವು ಸಹ ಹೊಸ ವಿನ್ಯಾಸದೊಂದಿಗೆ ವಿಶ್ವದರ್ಜೆ ಸೌಲಭ್ಯಗಳನ್ನು ನೀಡಲಿದ್ದು, ಹೊಸ ಕಾರಿನಲ್ಲಿ ಬಳಸಲಾಗಿರುವ ಲೆದರ್ ಕೂಡಾ ಮೇಬ್ಯಾಕ್ ಎಕ್ಸ್‌ಕ್ಲೂಸಿವ್ ನಪ್ಪಾ ಲೆದರ್ ಮಾದರಿಯಾಗಿದೆ. ಇದರೊಂದಿಗೆ ಹೊಸ ಕಾರಿನಲ್ಲಿ ಕೇವಲ ನಾಲ್ಕು ಆಸನಗಳ ಸೌಲಭ್ಯವಿದ್ದು, ವಿಸ್ತರಿತವಾಗಿ ಸೆಂಟರ್ ಕನ್ಸೊಲ್ ಹಿಂಬದಿಯ ಸವಾರಿಗೆ ಹೆಚ್ಚಿನ ಮಟ್ಟದ ಸವಾರಿ ಅನುಭವ ನೀಡಲು ಇದನ್ನು ಅಭಿವೃದ್ದಿಗೊಳಿಸಲಾಗಿದೆ.

ಮೂರುವರೆ ಕೋಟಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಬಾಲಿವುಡ್ ನಟಿ ಕಂಗನಾ ರಣಾವತ್

ಇದರೊಂದಿಗೆ ಹೊಸ ಕಾರಿನಲ್ಲಿ ಅಡಾಪ್ಟಿವ್ ಡಿಜಿಟಲ್ ಎಲ್ಇಡಿ ಹೆಡ್‌ಲೈಟ್ಸ್, ಹಿಂತೆಗೆದುಕೊಳ್ಳಬಹುದಾದ ಡೋರ್ ಹ್ಯಾಂಡಲ್‌, ಫಿಂಗರ್‌ಪ್ರಿಂಟ್ ರೀಡರ್, ಪನೋರಮಿಕ್ ಸನ್‌ರೂಫ್, 360-ಡಿಗ್ರಿ ಕ್ಯಾಮೆರಾ ಸಿಸ್ಟಮ್ ಮತ್ತು ಚಾಲಿತ ಹ್ಯಾಂಡ್ಸ್-ಫ್ರೀ ಬೂಟ್ ಲಿಡ್‌ನೊಂದಿಗೆ ಪೋರ್ ವಾಲ್‌ನಟ್ ಮರದ ಟ್ರಿಮ್ ಹೊಂದಿದೆ.

ಮೂರುವರೆ ಕೋಟಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಬಾಲಿವುಡ್ ನಟಿ ಕಂಗನಾ ರಣಾವತ್

ಹಾಗೆಯೇ ಹೊಸ ಕಾರಿನಲ್ಲಿ ಮರ್ಸಿಡಿಸ್ ಕಂಪನಿಯು ಬರ್ಮೆಸ್ಟರ್‌ 4ಡಿ ಸರೌಂಡ್ ಸೌಂಡ್ ಸಿಸ್ಟಂ ಜೊತೆ ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯತೆಗಳನ್ನು ನೀಡಿದ್ದು, ಮೇಬ್ಯಾಕ್ ಎಸ್-ಕ್ಲಾಸ್‌ನಲ್ಲಿ ಒಟ್ಟು 13 ಏರ್‌ಬ್ಯಾಗ್‌ಗಳು, ಲೆವೆಲ್-2 ಅಟೋನಮಸ್ ಡ್ರೈವಿಂಗ್ ಟೆಕ್ನಾಲಜಿ ಹೊಂದಿದೆ.

ಮೂರುವರೆ ಕೋಟಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಬಾಲಿವುಡ್ ನಟಿ ಕಂಗನಾ ರಣಾವತ್

ಲೆವೆಲ್-2 ಅಟೋನಮಸ್ ಡ್ರೈವಿಂಗ್ ಟೆಕ್ನಾಲಜಿಯಲ್ಲಿ ಮರ್ಸಿಡಿಸ್ ಬೆಂಝ್ ಭಾರತದಲ್ಲಿ ಮೊದಲ ಬಾರಿಗೆ 'ಎವೇಸಿವ್ ಸ್ಟೀರಿಂಗ್ ಅಸಿಸ್ಟ್' ಮತ್ತು 'ಕ್ರಾಸ್ ಟ್ರಾಫಿಕ್ ಫಂಕ್ಷನ್' ಜೊತೆಗೆ ಆಕ್ಟಿವ್ ಬ್ರೇಕ್ ಅಸಿಸ್ಟ್‌ನಂತಹ ವೈಶಿಷ್ಟ್ಯಗಳನ್ನು ನೀಡುತ್ತದೆ.

ಮೂರುವರೆ ಕೋಟಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಬಾಲಿವುಡ್ ನಟಿ ಕಂಗನಾ ರಣಾವತ್

ಇನ್ನು ಹೊಸ ಕಾರು ಮಾದರಿಯಲ್ಲಿ 4 ಮ್ಯಾಟಿಕ್ ತಂತ್ರಜ್ಞಾನ ಪ್ರೇರಿತ 9 ಸ್ಪೀಡ್ ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪ್ರೇರಿತ ಎರಡು ಎಂಜಿನ್ ಆಯ್ಕೆಗಳಿದ್ದು, ಎಸ್580 ಮಾದರಿಯಲ್ಲಿ 4.0-ಲೀಟರ್ ವಿ8 ಎಂಜಿನ್ ಮತ್ತು ಎಸ್680 ಮಾದರಿಯಲ್ಲಿ 6.0-ಲೀಟರ್ ವಿ12 ಎಂಜಿನ್ ಜೋಡಿಸಲಾಗಿದೆ.

ಮೂರುವರೆ ಕೋಟಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಬಾಲಿವುಡ್ ನಟಿ ಕಂಗನಾ ರಣಾವತ್

4.0-ಲೀಟರ್ ವಿ8 ಎಂಜಿನ್ ಮಾದರಿಯು 48 ವೊಲ್ಟ್ ಇಕ್ಯೂ ಬೂಸ್ಟ್ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನದೊಂದಿಗೆ 496 ಬಿಎಚ್‌ಪಿ ಮತ್ತು 700 ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ ಎಸ್680 ಮಾದರಿಯಲ್ಲಿರುವ 6.0-ಲೀಟರ್ ವಿ12 ಎಂಜಿನ್ ಮಾದರಿಯು 612 ಬಿಎಚ್‌ಪಿ ಮತ್ತು 900 ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

Most Read Articles

Kannada
English summary
Bollywood actor kangana ranaut buys mercedes maybach s 680 worth 3 2 crore
Story first published: Friday, May 20, 2022, 18:23 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X