ಹೊಸ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಖರೀದಿಸಿದ ಖ್ಯಾತ ಬಾಲಿವುಡ್ ನಟಿ

ಬಾಲಿವುಡ್ ಸಿನಿಮಾ ರಂಗ ಎಂಬ ಕಲರ್‍‍‍ಫುಲ್ ದುನಿಯಾದಲ್ಲಿ ಇರುವ ಸೆಲಬ್ರಿಟಿಗಳಿಗೆ ವಿಭಿನ್ನ ಕ್ರೇಜ್‍‍ಗಳಿವೆ. ಇದರಲ್ಲಿ ಬಹುತೇಕ ನಟ, ನಟಿಯರಿಗೆ ಕಾರು ಹಾಗೂ ಬೈಕುಗಳ ಬಗ್ಗೆ ಕ್ರೇಜ್ ಹೊಂದಿರುತ್ತಾರೆ. ಇತ್ತೀಚೆಗೆ ಬಾಲಿವುಡ್ ಖ್ಯಾತ ನಟಿ ಕೀರ್ತಿ ಕುಲ್ಹಾರಿ (Kirti Kulhari) ಹೊಸ ಬೈಕ್ ಅನ್ನು ಖರೀದಿಸಿದ್ದಾರೆ.

ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಖರೀದಿಸಿದ ಬಾಲಿವುಡ್ ಖ್ಯಾತ ನಟಿ

ನಟಿ ಕೀರ್ತಿ ಕುಲ್ಹಾರಿ ಅವರು ಪಿಂಕ್, ಬ್ಲ್ಯಾಕ್‌ಮೇಲ್, ಉರಿ: ದಿ ಸರ್ಜಿಕಲ್ ಸ್ಟ್ರೈಕ್ ಮುಂತಾದ ಚಲನಚಿತ್ರಗಳ ಮೂಲಕ ಭಾರತೀಯ ಚಲನಚಿತ್ರ ಪ್ರೇಮಿಗಳ ಗಮನಸೆಳೆದಿದ್ದಾರೆ. ನಟಿ ಕೀರ್ತಿ ಕುಲ್ಹಾರಿ ಹೊಸ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 (Royal Enfield Classic 350) ಬೈಕ್ ಖರೀದಿಸಿದ್ದಾರೆ. ಮುಂಬೈನಲ್ಲಿ ನಟಿ ಕೀರ್ತಿ ಹೊಸ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಅನ್ನು ವಿತರಣೆ ಪಡೆದಿದ್ದಾರೆ. ವಿತರಣೆ ಪಡೆಯುವ ಚಿತ್ರಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಹೊಸ ಬೈಕ್ ಹ್ಯಾಲಿಕಾನ್ ಗ್ರೇ ಬಣ್ಣದ ಥೀಮ್‌ನ ಮಾದರಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಖರೀದಿಸಿದ ಬಾಲಿವುಡ್ ಖ್ಯಾತ ನಟಿ

ನಟಿ ಕೀರ್ತಿ ಕುಲ್ಹಾರಿ 2010ರಲ್ಲಿ ಖಿಚ್ಡಿ ಚಿತ್ರದ ಮೂಲಕ ಬಾಲಿವುಡ್‌ ಚಿತ್ರರಂಗಕ್ಕೆ ಕಾಲಿಟ್ಟರು. ಕೀರ್ತಿ ಕುಲ್ಹಾರಿ ಹುಟ್ಟಿದ್ದು ಮುಂಬೈನಲ್ಲಾದರೂ ಮೂಲತಃ ರಾಜಸ್ಥಾನದ ಬೆಡಗಿ, ಈ ನಟಿ ಹೆಚ್ಚಾಗಿ ಟಿ.ವಿ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಇವರು 13ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಖರೀದಿಸಿದ ಬಾಲಿವುಡ್ ಖ್ಯಾತ ನಟಿ

ನಟಿ ಕೀರ್ತಿ ಕುಲ್ಹಾರಿ ಖರೀದಿಸಿದ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಬಗ್ಗೆ ಹೇಳುವುದಾದರೆ, ರಾಯಲ್ ಎನ್‌ಫೀಲ್ಡ್ ತನ್ನ ಈ ಹೊಸ ಕ್ಲಾಸಿಕ್ 350 ಬೈಕ್ ಅನ್ನು ಈ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಈ ಹೊಸ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿಯು ಕೂಡ ಮಾರಾಟವಾಗುತ್ತಿದೆ.

ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಖರೀದಿಸಿದ ಬಾಲಿವುಡ್ ಖ್ಯಾತ ನಟಿ

ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಬಿಡುಗಡೆಗೊಂಡ ಬಳಿಕ ಭಾರತದಲ್ಲಿ ಹೊಸ ಸಂಚಲವನ್ನು ಸೃಷ್ಟಿಸಿತ್ತು. ಈ ಹೊಸ ಕ್ಲಾಸಿಕ್ 350 ಬೈಕಿಗೆ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಹೊಂದಿದೆ. ಇದರ ಪರಿಣಾಮವಾಗಿ ಕಾಯುವ ಅವಧಿಯು ಹೆಚ್ಚಾಗುತ್ತಿದೆ. ಈ ಹೊಸ ಬೈಕ್ ಮಾದರಿಯು ರೆಡ್‌ಡಿಚ್, ಹಾಲ್ಕೈನ್, ಸಿಗ್ನಲ್ಸ್, ಡಾರ್ಕ್ ಮತ್ತು ಕ್ರೋಮ್ ಎಂಬ ಐದು ವೆರಿಯೆಂಟ್ ಗಳಲ್ಲಿ ಲಭ್ಯವಿದೆ.

ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಖರೀದಿಸಿದ ಬಾಲಿವುಡ್ ಖ್ಯಾತ ನಟಿ

ಈ ಹೊಸ ಬೈಕ್ J1A ಪ್ಲಾಟ್‌ಫಾರ್ಮ್ ಅಡಿಯಲ್ಲಿ ತಯಾರಿಸಲಾಗಿದೆ. ಹೊಸ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಕ್ರೋಮ್ ರೆಡ್, ಕ್ರೋಮ್ ಬ್ರೊಂಜ್, ಡಾರ್ಕ್ ಸ್ಟೆಲ್ತ್ ಬ್ಲ್ಯಾಕ್, ಡಾರ್ಕ್ ಗನ್‌ಮೆಟಲ್ ಗ್ರೇ, ಸಿಗ್ನಲ್ಸ್ ಮಾರ್ಷ್ ಗ್ರೇ, ಸಿಗ್ನಲ್ಸ್ ಸ್ಯಾಂಡ್ ಸ್ಟಾರ್ಮ, ಹಾಲ್ಸಿಯಾನ್ ಗ್ರೀನ್, ಹಾಲ್ಸಿಯಾನ್ ಬ್ಲ್ಯಾಕ್, ಹಾಲ್ಸಿಯಾನ್ ಗ್ರೇ, ರೆಡ್‌ಡಿಚ್ ಗ್ರೀನ್ ಮತ್ತು ರೆಡ್‌ಡಿಚ್ ಗ್ರೇ ಎಂಬ ಬಣ್ಣಗಳನ್ನು ಹೊಂದಿದೆ.

ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಖರೀದಿಸಿದ ಬಾಲಿವುಡ್ ಖ್ಯಾತ ನಟಿ

ಹೊಸ ಕ್ಲಾಸಿಕ್ 350 ಮಾದರಿಯು ಇತ್ತೀಚೆಗೆ ಬಿಡುಗಡೆಯಾಗಿರುವ ಮಿಟಿಯೊರ್ 350 ಮಾದರಿಯಿಂದಲೂ ಕೆಲವು ತಾಂತ್ರಿಕ ಅಂಶಗಳನ್ನು ಎರವಲು ಪಡೆದುಕೊಳ್ಳಲಾಗಿದೆ. 2021ರ ಕ್ಲಾಸಿಕ್ 350 ಬೈಕ್ ಮಾದರಿಯಲ್ಲಿ ಸಸ್ಷೆಂಷನ್ ಸೆಟಪ್ ಮತ್ತು ಬ್ರೇಕಿಂಗ್ ಸಿಸ್ಟಂ ಅನ್ನು ಸಂಪೂರ್ಣವಾಗಿ ಬದಲಾವಣೆಗೊಳಿಸಲಾಗಿದೆ. ಈ ಹೊಸ ಬೈಕಿನಲ್ಲಿ ಫ್ಯೂಲ್ ಗೇಜ್ ಮತ್ತು ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಪ್ರಮುಖ ಆಕರ್ಷಣೆಯಾಗಿದೆ.

ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಖರೀದಿಸಿದ ಬಾಲಿವುಡ್ ಖ್ಯಾತ ನಟಿ

ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಬೈಕ್ ಮಾದರಿಯಲ್ಲಿ ಮಿಟಿಯೊರ್ 350 ಮಾದರಿಗಾಗಿ ಪರಿಚಯಿಸಿರುವ 349 ಸಿಸಿ SOHC ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 19.1 ಬಿಎಚ್‌ಪಿ ಪವರ್ ಮತ್ತು 28 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ, ಈ ಹಿಂದಿನ ಮಾದರಿಗಳಲ್ಲಿ ಇದ್ದ ವೈಬ್ರೆಷನ್ ಪ್ರಮಾಣವು ಗಣನೀಯವಾಗಿ ಸುಧಾರಣೆಯಾಗಿದೆ.

ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಖರೀದಿಸಿದ ಬಾಲಿವುಡ್ ಖ್ಯಾತ ನಟಿ

ಜೊತೆಗೆ ಎಲೆಕ್ಟ್ರಾನಿಕ್ಸ್ ಸೌಲಭ್ಯಗಳು ಬೈಕ್ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸಲಿದ್ದು, ಹೊಸ ಮಾದರಿಯ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಇದರ ಜೊತೆಗೆ ಎಲ್‌ಸಿಡಿ ಜೊತೆಗೆ ಪ್ರತ್ಯೇಕವಾದ ಫ್ಯೂಲ್ ಗೇಜ್ ಮತ್ತು ಟ್ರಿಪ್ಲರ್ ಮೀಟರ್ ಅನ್ನು ನೀಡಲಾಗಿದ್ದು, ಮಿಟಿಯೊರ್ ಮಾದರಿಯಲ್ಲಿರುವಂತೆ ಪ್ರತ್ಯೇಕವಾದ ಟ್ವಿನ್ ಪಾಡ್ ನೀಡದೆ ಇಂಟ್ರಾಗ್ರೆಟೆಡ್ ನೀಡಲಾಗಿದೆ,

ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಖರೀದಿಸಿದ ಬಾಲಿವುಡ್ ಖ್ಯಾತ ನಟಿ

ಕ್ಲಾಸಿಕ್ 350 ಟಾಪ್ ಎಂಡ್ ಮಾದರಿಗಳಿಗಾಗಿ ಮಾತ್ರವೇ ಕಂಪನಿಯು ಟ್ರಿಪ್ಪರ್ ಮೀಟರ್ ಅನ್ನು ಜೋಡಣೆ ಮಾಡಿದ್ದು, ಈ ಸ್ಮಾರ್ಟ್ ಫೋನ್ ಕನೆಕ್ಟಿವಿಟಿ ಮೂಲಕ ಟರ್ನ್ ಬೈ ಟರ್ನ್ ನ್ಯಾವಿಗೇಷನ್ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಆದರೆ ಹೊಸ ಬೈಕಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು ಎಲ್ಇಡಿ ಹೆಡ್‌ಲ್ಯಾಂಪ್‌ಗಳ ಬದಲಾಗಿ ಹಾಲೊಜೆನ್ ಬಲ್ಬ್ ಬಳಕೆ ಮಾಡಿದ್ದು, ಹೆಡ್‌ಲ್ಯಾಂಪ್ ಮಾತ್ರವಲ್ಲ ಟೈಲ್ ಲ್ಯಾಂಪ್, ಟರ್ನ್ ಇಂಡಿಕೇಟರ್ ಸಹ ಹಾಲೊಜೆನ್ ಬಲ್ಬ್ ಅನ್ನು ಒಳಗೊಂಡಿದೆ.

ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಖರೀದಿಸಿದ ಬಾಲಿವುಡ್ ಖ್ಯಾತ ನಟಿ

ಹೊಸ ಬೈಕಿನಲ್ಲಿರುವ ಸ್ವಿಚ್ ಗೇರ್ ಸೌಲಭ್ಯವನ್ನು ಮಿಟಿಯೊರ್ 350 ಮಾದರಿಯಿಂದ ಎರವಲು ಪಡೆದುಕೊಳ್ಳಲಾಗಿದ್ದು, ಕಂಪನಿಯು ಹೊಸ ಬೈಕ್ ಮಾದರಿಯನ್ನು ಸಿಂಗಲ್ ಕ್ರೆಡಲ್ ಫ್ರೆಮ್ ಬದಲಾಗಿ ಡ್ಯುಯಲ್ ಡೌನ್ ಟ್ಯೂಬ್ ಚಾರ್ಸಿ‌ಯೊಂದಿಗೆ ಅಭಿವೃದ್ದಿಗೊಳಿಸಿದೆ. ಇದು ಡಬಲ್ ಕ್ರೆಡ್ ಚಾರ್ಸಿಸ್ ಬದಲಾವಣೆಯಿಂದಾಗಿ ಬೈಕ್ ರೈಡಿಂಗ್ ದೂರದ ಪ್ರಯಾಣದಲ್ಲೂ ಉತ್ತಮ ಅನುಭವವನ್ನು ನೀಡುತ್ತದೆ.

ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಖರೀದಿಸಿದ ಬಾಲಿವುಡ್ ಖ್ಯಾತ ನಟಿ

ಈ ಹೊಸ ಕ್ಲಾಸಿಕ್ 350 ಬೈಕ್ ಸಸ್ಪೆಂಕ್ಷನ್ 41 ಎಂಎಂ ಟೆಲಿಸ್ಕೊಪಿಕ್ ಫೋರ್ಕ್‌ನೊಂದಿಗೆ 170 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ. ಇನ್ನು ಇದರ , ಈ ಬ್ರೇಕಿಂಗ್ ಕೂಡ ಸಾಕಷ್ಟು ಸುಧಾರಿಸಿದೆ. ಇದು ಎರಡೂ ಕಡೆಗಳಲ್ಲಿ ಡಿಸ್ಕ್ ಬ್ರೇಕ್ ಅನ್ನು ನೀಡಲಾಗಿದೆ, ಇದರೊಂದಿಗೆ ಎಬಿಎಸ್‌ನೊಂದಿಗೆ ಸ್ಟ್ಯಾಂಡರ್ಡ್ ಆಗಿ ಹೊಂದಿದೆ. ಖರೀದಿದಾರರು ಆಯ್ಕೆ ಮಾಡಿದ ರೂಪಾಂತರವನ್ನು ಅವಲಂಬಿಸಿ ಸಿಂಗಲ್-ಚಾನೆಲ್ ಅಥವಾ ಡ್ಯುಯಲ್-ಚಾನೆಲ್ ಎಬಿಎಸ್ ಪಡೆಯುತ್ತಾರೆ. ಈ ಬೈಕ್ 13-ಲೀಟರ್ ಇಂಧನ ಟ್ಯಾಂಕ್ ನೊಂದಿಗೆ ಬರುತ್ತದೆ.

ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಖರೀದಿಸಿದ ಬಾಲಿವುಡ್ ಖ್ಯಾತ ನಟಿ

ಹೊಸ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಹಳೆಯ ಮಾದರಿಗಿಂತ ದೊಡ್ಡ ಸುಧಾರಣೆಯಾಗಿದೆಈ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ಹೈನೆಸ್ ಸಿಬಿ350 ಮತ್ತು ಜಾವಾ ಬೈಕ್ ಗಳಿಗೆ ಪೈಪೋಟಿ ನೀಡುತ್ತಿದೆ.

More from DriveSpark

Article Published On: Monday, December 20, 2021, 19:32 [IST]
English summary
Bollywood actress kirti kulhari bought new royal enfield classic 350 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+