ಐಷಾರಾಮಿ ವ್ಯಾನಿಟಿ ವ್ಯಾನ್, ದುಬಾರಿ ಕಾರುಗಳ ಒಡತಿ ಶಿಲ್ಪಾ ಶೆಟ್ಟಿ: ಇವರ ಹೊಸ ಕಾರಿನ ಬೆಲೆ ಗೊತ್ತಾ?

ಸಿನಿಮಾ ನಟರು ಮಾತ್ರವಲ್ಲದೇ ನಟಿಯರು ಕೂಡ ಕಾರುಗಳ ಮೇಲೆ ಕ್ರೇಜ್ ಹೊಂದಿದ್ದಾರೆ. ಅದರಲ್ಲೂ ಬಾಲಿವುಡ್ ಸಿನಿಮಾರಂಗ ಕಲರ್ ಫುಲ್ ದುನಿಯಾದ ನಟಿಯರು ಐಷಾರಾಮಿ ಕ್ರೇಜ್ ಹೊಂದಿದ್ದಾರೆ. ಬಾಲಿವುಡ್ ನಟಿಯರು ತಾವು ಹೆಚ್ಚಾಗಿ ಐಷಾರಾಮಿ ಕಾರುಗಳಲ್ಲಿ ಓಡಾಡಲು ಇಷ್ಟ ಪಡುತ್ತಾರೆ. ಇತ್ತೀಚೆಗೆ ಬಾಲಿವುಡ್‌ನ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರಾದ ಶಿಲ್ಪಾ ಶೆಟ್ಟಿ (Shilpa Shetty) ಬಹುಕೋಟಿ ಬೆಲೆಯ ಹೊಸ ಎಸ್‍ಯುವಿಯನ್ನು ಖರೀದಿಸಿದ್ದಾರೆಹಲವಾರು ದುಬಾರಿ ಕಾರುಗಳನ್ನು ಹೊಂದಿರುವ ಬಾಲಿವುಡ್ ನಟಿಯರಲ್ಲಿ ಇವರು ಕೂಡ ಒಬ್ಬರು. ನಟಿ ಶಿಲ್ಪಾ ಶೆಟ್ಟಿ ತಮ್ಮ ಹೊಸ ಎಸ್‍ಯುವಿಯಲ್ಲಿ ಇತ್ತೀಚೆಗೆ ಮುಂಬೈನಲ್ಲಿ ಕಾಣಿಸಿಕೊಂಡರು.

ನಟಿ ಶಿಲ್ಪಾ ಶೆಟ್ಟಿ ತಮ್ಮ ಹೊಸ ಎಸ್‍ಯುವಿಯಲ್ಲಿ ಕಾಣಿಸಿಕೊಂಡ ವೀಡಿಯೋವನ್ನು ಕಾರ್ಸ್ ಫಾರ್ ಯೂ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದಾರೆ. ಕಪ್ಪು ಬಣ್ಣದ ರೇಂಜ್ ರೋವರ್ ಎಸ್‌ಯುವಿ ಮುಂಬೈನಲ್ಲಿರುವ ಆಕೆಯ ನಿವಾಸದ ಮುಂಭಾಗದಲ್ಲಿ ಆಗಮಿಸುತ್ತಿರುವುದನ್ನು ವೀಡಿಯೊದಲ್ಲಿ ನೋಡಬಹುದು. ಶಿಲ್ಪಾ ಕೊನೆಯ ಬಾರಿಗೆ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ವಿವೇಕ್ ಒಬೆರಾಯ್ ಅಭಿನಯದ ಇಂಡಿಯನ್ ಪೊಲೀಸ್ ಫೋರ್ಸ್ ವೆಬ್ ಸರಣಿಯಲ್ಲಿ ಕಾಣಿಸಿಕೊಂಡಿದ್ದರು.

Shilpa Shetty car

ಶಿಲ್ಪಾ ಅವರ ರೇಂಜ್ ರೋವರ್ ಎಸ್‍ಯುವಿ ಬಾಲಿವುಡ್ ಸೆಲೆಬ್ರಿಟಿಗಳ ಟ್ರೆಂಡಿಂಗ್ ಕಾರುಗಳಲ್ಲಿ ಒಂದಾಗಿದೆ. ಇನ್ನು ಇನ್ನು ಶಿಲ್ಪಾ ಶೆಟ್ಟಿ ಯೋಗ ಉತ್ಸಾಹಿ ಮತ್ತು ಬಾಲಿವುಡ್‌ನ ಫಿಟೆಸ್ಟ್ ನಟಿಯರಲ್ಲಿ ಒಬ್ಬರು. ಅತಿ ವಿರಳವಾಗಿ ಶಿಲ್ಪಾ ಶೆಟ್ಟಿ ದಂಪತಿ ಕಾಣಿಸಿಕೊಳ್ಳುವ ಕಾರುಗಳೆಂದರೆ ಲ್ಯಾಂಬೋರ್ಗಿನಿ ಅವೆಂಟಡಾರ್, ಲಂಬೋರ್ಘಿನಿ ಗಲ್ಲಾರ್ಡೊ, BMW i8, ಮತ್ತು ಪೋರ್ಷೆ ಕಯೆನ್ನೆ GTS ಸ್ಪೋರ್ಟ್ಸ್ SUV ನಂತಹ ಕೆಲವು ಸ್ಪೋರ್ಟ್ಸ್ ಕಾರುಗಳಾಗಿವೆ.

ನಟಿ ಮತ್ತು ಅವರ ಪತಿ ಹೊಂದಿರುವ ಅನೇಕ ಕಾರುಗಳು ಸೆಕೆಂಡ್‌ ಹ್ಯಾಂಡ್ ಕಾರುಗಳು ಎಂದು ಹೇಳಲಾಗುತ್ತಿದೆ. ನಟಿಯ ಹೊಸ ಲ್ಯಾಂಡ್ ರೋವರ್ ರೇಂಜ್ ರೋವರ್ ಎಸ್‌ಯುವಿಯ ಬಗ್ಗೆ ಹೇಳುವುದಾದರೆ, ಇದು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಿದೆ. ಇಲ್ಲಿ ಕಂಡುಬರುವ ಎಸ್‌ಯುವಿ ಡೀಸೆಲ್ ಆವೃತ್ತಿ ಎಂದು ಹೇಳಲಾಗುತ್ತದೆ. ಶಿಲ್ಪಾ ಶೆಟ್ಟಿ LWB HSE ರೂಪಾಂತರವನ್ನು ಖರೀದಿಸಿದ್ದಾರೆ. ಇದು ಅತ್ಯಂತ ಐಷಾರಾಮಿ ಎಂದು ತಿಳಿದುಬಂದಿದೆ.

Shilpa Shetty car

ಈ ಮಾದರಿಯು ಪಿವಿ ಪ್ರೊ ಸಾಫ್ಟ್‌ವೇರ್ ಅನ್ನು ಒಳಗೊಂಡಿರುವ ಫ್ಲೋಟಿಂಗ್ 13.1-ಇಂಚಿನ ಟಚ್ ಡಿಸ್ಪ್ಲೇ ಸೇರಿದಂತೆ ಹಲವಾರು ವೈಶಿಷ್ಟ್ಯಗಳೊಂದಿಗೆ ಸಜ್ಜುಗೊಂಡಿದೆ. ಶಿಲ್ಪಾ ಶೆಟ್ಟಿ ಒಳಾಂಗಣಕ್ಕೆ ವೈನ್ ರೆಡ್ ಶೇಡ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಮಾದರಿಯ ಬೆಲೆಯು ಸುಮಾರು ರೂ.3 ಆಗಿದೆ. ಈ ಎಸ್‍ಯುವಿಯ ಟರ್ನ್ ಇಂಡಿಕೇಟರ್‌ಗಳನ್ನು ಸಂಯೋಜಿಸುವ ಟೈಲ್‌ಗೇಟ್‌ನಲ್ಲಿನ ಬ್ಲ್ಯಾಕ್ ಅಸ್ಸೆಂಟ್ ಗಳನ್ನು ಸಂಪರ್ಕಗೊಂಡಿರುವ ಹಿಂಭಾಗದ ಸ್ಪೋರ್ಟ್ಸ್ ಬ್ಲ್ಯಾಕ್ಡ್-ಔಟ್ ಟೈಲ್‌ಲೈಟ್‌ಗಳಾಗಿವೆ.

ಈ ರೇಂಜ್ ರೋವರ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ 13.7-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಇದರ ಸೆಂಟರ್ ಕನ್ಸೋಲ್ ದೊಡ್ಡ 13.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ ಪ್ಲೇ ಹ್ಯಾಪ್ಟಿಕ್ ಪ್ರತಿಕ್ರಿಯೆಯೊಂದಿಗೆ ಹೊಂದಿದೆ. ಇನ್ನು ಹಿಂಭಾಗದಲ್ಲಿ ಪ್ರಯಾಣಿಕರು 11.4-ಇಂಚಿನ ಮನರಂಜನಾ ಡಿಸ್ ಪ್ಲೇಯನ್ನು ಪಡೆಯುತ್ತಾರೆ. ಅದನ್ನು ಮುಂಭಾಗದ ಸೀಟ್‌ಬ್ಯಾಕ್‌ಗಳಿಗೆ ಜೋಡಿಸಲಾಗಿದೆ.

ಎಕ್ಸಿಕ್ಯುಟಿವ್ ಕ್ಲಾಸ್ ಹಿಂಬದಿಯ ಸೀಟುಗಳೊಂದಿಗೆ, ಸೆಂಟರ್ ಆರ್ಮ್‌ರೆಸ್ಟ್‌ನಲ್ಲಿ 8.0-ಇಂಚಿನ ಟಚ್‌ಸ್ಕ್ರೀನ್ ಕೂಡ ಇದೆ. ಇದರೊಂದಿಗೆ ರೇಂಜ್ ರೋವರ್ 1600-ವ್ಯಾಟ್, 35-ಸ್ಪೀಕರ್ ಮೆರಿಡಿಯನ್ ಸಿಗ್ನೇಚರ್ ಸೌಂಡ್ ಸಿಸ್ಟಂ ಅನ್ನು ಸಹ ಪಡೆಯುತ್ತದೆ. ಆದರೆ ಆಟೋಬಯೋಗ್ರಫಿ ಟ್ರಿಮ್ ಹೆಡ್‌ರೆಸ್ಟ್‌ನಲ್ಲಿ ಎಂಬೆಡ್ ಮಾಡಲಾದ ವಿಶ್ವದ ಮೊದಲ ಆಕ್ಟಿವ್ ಸ್ಪೀಕರ್‌ಗಳನ್ನು ಹೊಂದಿದೆ.

ಈ ರೇಂಜ್ ರೋವರ್ ಎಸ್‍ಯುವಿಯಲ್ಲಿ 3 ಎಂಜಿನ್ ಆಯ್ಕೆಗಳಲ್ಲಿ ನೀಡಲಾಗಿದೆ. ಇದು 3.0-ಲೀಟರ್ ಪೆಟ್ರೋಲ್ ಮೈಲ್ಡ್-ಹೈಬ್ರಿಡ್, 3.0-ಲೀಟರ್ ಟರ್ಬೊ-ಡೀಸೆಲ್ ಮತ್ತು 4.4-ಲೀಟರ್ ಟ್ವಿನ್-ಟರ್ಬೊ ವಿ8 ಎಂಜಿನ್ ಗಳಾಗಿವೆ. ಇದರಲ್ಲಿ 3.0-ಲೀಟರ್ ಪೆಟ್ರೋಲ್ ಮೈಲ್ಡ್-ಹೈಬ್ರಿಡ್ 394 ಬಿಹೆಚ್‍ಪಿ ಪವರ್ ಮತ್ತು 550 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಟರ್ಬೊ-ಡೀಸೆಲ್ ಎಂಜಿನ್ 346 ಬಿಹೆಚ್‍ಪಿ ಪವರ್ ಮತ್ತು 700 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಇನ್ನು ಟ್ವಿನ್-ಟರ್ಬೊ ವಿ8 ಎಂಜಿನ್ 523 ಬಿಹೆಚ್‍ಪಿ ಪವರ್ ಮತ್ತು 750 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಸ್‍ಯುವಿಯು 5.3 ಸೆಕೆಂಡ್‌ಗಳಲ್ಲಿ 0-100 ವೇಗವನ್ನು ಪಡೆದುಕೊಳ್ಳುತ್ತದೆ. ಇನ್ನು ಈ ಎಸ್‍ಯುವಿಯು ಸುಮಾರು 80 ಕಿ.ಮೀ ರೇಂಜ್ ಹೊಂದಿರಲಿದೆ. ಎಲ್ಲಾ ಮಾದರಿಗಳು ಆಲ್-ವೀಲ್ ಡ್ರೈವ್ ಮತ್ತು ಸಕ್ರಿಯ-ಲಾಕಿಂಗ್ ರಿಯರ್ ಡಿಫರೆನ್ಷಿಯಲ್ ಜೊತೆಗೆ ಸ್ಟ್ಯಾಂಡರ್ಡ್ ಬರುತ್ತವೆ.

More from DriveSpark

Article Published On: Monday, July 29, 2024, 17:13 [IST]
English summary
Bollywood actress shilpa shetty spotted in new range rover suv details
Read more on celebrity car india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+