ಉದ್ಯೋಗಿಗಳೇ ನನಗೆ ಮನೆಮಂದಿ... ಮಾಲೀಕ ಮಾಡಿದ ಕೆಲಸಕ್ಕೆ ಕಣ್ಣೀರಿಟ್ಟ ನೌಕರರು!
ಯಾವುದೇ ಸಂಸ್ಥೆಯ ಉದ್ಯೋಗಿಗಳಾಗಲಿ ನೀಡುವ ಸಂಬಳಕ್ಕಿಂತ ಹೆಚ್ಚಾಗಿ ಕೆಲಸ ಮಾಡಿದರೆ, ಒಂದು ಅದು ಓವರ್‌ಟೈಮ್ ಪೇಮೆಂಟ್‌ಗಾಗಿ ಅಥವಾ ಮಾಲೀಕನ ಮೇಲಿರುವ ಪ್ರೀತಿಯಿಂದಿರುತ್ತದೆ. ನೌಕರರಿಂದ ಈ ಪ್ರೀತಿಯನ್ನು ಗಳಿಸುವುದು ಅಷ್ಟು ಸುಲಭವಲ್ಲ, ಆದರೂ ತಮಿಳುನಾಡಿನ ಚೆನ್ನೈನಲ್ಲಿ ಖಾಸಗಿ ಕಂಪನಿಯೊಂದರ ಮಾಲೀಕ ತನ್ನ ಉದ್ಯೋಗಿಗಳಿಂದ ಅನನ್ಯ ಪ್ರೀತಿಯನ್ನು ಗಳಿಸಿದ್ದಾರೆ. ನಗರದ ಸುರ್ಮೌಂಟ್ ಲಾಜಿಸ್ಟಿಕ್ಸ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್‌ನ ಮಾಲೀಕ ತನ್ನ ಉದ್ಯೋಗಿಗಳ ಕಠಿಣ ಪರಿಶ್ರಮವನ್ನು ಗುರ್ತಿಸಿ ಉತ್ತೇಜಿಸಲು ದುಬಾರಿ ಉಡುಗೊರೆಗಳನ್ನು ಕೊಟ್ಟು ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ.
ಚೆನ್ನೈ ನಗರದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಸರ್ಮೌಂಟ್ ಲಾಜಿಸ್ಟಿಕ್ಸ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು, ವಿಳಂಬವಾದ ಸಾಗಣೆ, ಪಾರದರ್ಶಕತೆಯ ಕೊರತೆ ಮತ್ತು ಅಸಮರ್ಥ ಪೂರೈಕೆ ಸರಪಳಿ ಪರಿಹಾರಗಳಂತಹ ಲಾಜಿಸ್ಟಿಕ್ಸ್ ಕ್ಷೇತ್ರದ ಸಾಮಾನ್ಯ ಸವಾಲುಗಳನ್ನು ಪರಿಹರಿಸುವ ಪ್ರಮುಖ ಕಂಪನಿಗಳಲ್ಲಿ ಒಂದಾಗಿದೆ. ಡೆನ್ಜಿಲ್ ರಾಯನ್ ಎಂಬುವವರು ಕಂಪನಿಯ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.

ಈ ಡೆನ್ಜಿಲ್ ರಾಯನ್ ತನ್ನ ಉದ್ಯೋಗಿಗಳನ್ನು ಉತ್ತೇಜಿಸಲು ಅವರ ಕಠಿಣ ಪರಿಶ್ರಮ ಮತ್ತು ಸಂಸ್ಥೆಗೆ ಸಮರ್ಪಣೆಯನ್ನು ಗುರುತಿಸಲು ಕಾರುಗಳು ಮತ್ತು ಮೋಟಾರ್ ಸೈಕಲ್‌ಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದರಲ್ಲಿ ಟಾಟಾ ಕಾರುಗಳು, ಆಕ್ಟಿವಾ ಸ್ಕೂಟರ್‌ಗಳು ಮತ್ತು ರಾಯಲ್ ಎನ್‌ಫೀಲ್ಡ್ ಬೈಕ್‌ಗಳನ್ನು 20 ಉದ್ಯೋಗಿಗಳಿಗೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಎಲ್ಲಾ ಗಾತ್ರದ ವ್ಯವಹಾರಗಳಿಗೆ ಲಾಜಿಸ್ಟಿಕ್ಸ್ ಅನ್ನು ಸರಳಗೊಳಿಸುವುದು ನಮ್ಮ ಧ್ಯೇಯವಾಗಿದೆ. ಸಾಂಪ್ರದಾಯಿಕ ಹಡಗು ಮತ್ತು ಲಾಜಿಸ್ಟಿಕ್ಸ್ ಪ್ರಕ್ರಿಯೆಗಳ ನೋವಿನ ಅಂಶಗಳನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಪರಿಣಾಮಕಾರಿ ಮಾತ್ರವಲ್ಲದೆ ಪರಿಸರ ಪ್ರಜ್ಞೆಯುಳ್ಳ ಪರಿಹಾರಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ. ಇದಕ್ಕಾಗಿ ನಮ್ಮ ಉದ್ಯೋಗಿಗಳ ಶ್ರಮ ತುಂಬಾ ಇದೆ ಎಂದು ಕಂಪನಿಯ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಡೆನ್ಜಿಲ್ ರಾಯನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಾಹನಗಳನ್ನು ಉಡುಗೊರೆಯಾಗಿ ನೀಡುವ ಬಗ್ಗೆ ಮಾತನಾಡಿ, ದೃಢವಾದ ಉದ್ಯೋಗಿ ಕಲ್ಯಾಣ ಕಾರ್ಯಕ್ರಮವನ್ನು ಜಾರಿಗೆ ತರುವುದು ಒಟ್ಟಾರೆ ಉದ್ಯೋಗಿಗಳ ತೃಪ್ತಿಯನ್ನು ಸುಧಾರಿಸುತ್ತದೆ. ಉತ್ಪಾದಕತೆ, ತೊಡಗಿಸಿಕೊಳ್ಳುವಿಕೆ ಮತ್ತು ಉಳಿಸಿಕೊಳ್ಳುವಿಕೆಯನ್ನು ಹೆಚ್ಚಿಸುತ್ತದೆ. ಏಕೆಂದರೆ ಪ್ರೇರೇಪಿತ ಉದ್ಯೋಗಿಗಳು ತಮ್ಮ ಕೌಶಲ್ಯಗಳೊಂದಿಗೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.
ಉದ್ಯೋಗಿಗಳಿಗೆ ಟಾಟಾ ಟಿಯಾಗೋದ ಯಾವ ವೇರಿಯೆಂಟ್ ನೀಡಿದ್ದಾರೆ ಎಂಬುದರ ಬಗ್ಗೆ ತಿಳಿದುಬಂದಿಲ್ಲ. ಆದರೆ, ಟಾಟಾ ಟಿಯಾಗೊ ಕಾರಿನ ಬೆಲೆಯು ಎಕ್ಸ್ ಶೋರೂಂ ದರದಂತೆ ರೂ.5 ಲಕ್ಷದಿಂದ ರೂ.7.65 ಲಕ್ಷಗಳಾಗಿದೆ. ಆರಾಮದಾಯಕ ಮತ್ತು ಅನುಕೂಲವನ್ನು ಹೆಚ್ಚಿಸಲು ಟಾಟಾ ಟಿಯಾಗೊ ಆಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಟಿಯಾಗೊ ಕಾರು ತನ್ನ ವಿಭಾಗದಲ್ಲಿ ಸ್ಪರ್ಧಾತ್ಮಕ ಆಯ್ಕೆಯಾಗಿದೆ ಎಂದು ಹೇಳಬಹುದು.

ಕೆಲ ಉದ್ಯೋಗಿಗಳಿಗೆ ರಾಯಲ್ ಎನ್‌ಫೀಲ್ಡ್ ಬುಲ್ಲೆಟ್ ಮಾದರಿಗಳನ್ನು ನೀಡಲಾಗಿದ್ದು, ಇದು 349 ಸಿಸಿ ಕ್ರೂಸರ್ ಬೈಕ್ ಆಗಿದೆ. ಇದರ ಬೆಲೆ ರೂ. 1.73 (ಎಕ್ಸ್ ಶೋರೂಂ) ಲಕ್ಷವಿದೆ. ಇದು 7 ಬಣ್ಣಗಳು ಮತ್ತು 4 ವೇರಿಯೆಂಟ್‌ಗಳಲ್ಲಿ ಲಭ್ಯವಿದೆ. ಮೈಲೇಜ್ ವಿಷಯಕ್ಕೆ ಬಂದರೆ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಮೋಟಾರ್‌ಸೈಕಲ್ ಪ್ರತಿ ಲೀಟರ್‌ಗೆ 37 ಕಿ.ಮೀ ಮೈಲೇಜ್ ನೀಡುವುದಾಗಿ ಕಂಪನಿ ಹೇಳಿದೆ.
ಉಳಿದ ಉದ್ಯೋಗಿಗಳಿಗೆ ಹೋಂಡಾ ಆಕ್ಟೀವಾ ಸ್ಕೂಟರ್‌ಗಳನ್ನು ಉಡುಗೊರೆ ನೀಡಲಾಗಿದೆ. ಉದ್ಯೋಗಿಗಳಿಗೆ ಕಡಿಮೆ ಸಂಬಳ ಕೊಟ್ಟು ದುಪ್ಪಟ್ಟು ಕೆಲಸ ಮಾಡಿಸಿಕೊಳ್ಳುವ ಇಂದಿನ ಸಮಾಜದಲ್ಲಿ ಚೆನ್ನೈನ ಈ ಮಾಲೀಕ ನೌಕರರಿಗೆ ದುಬಾರಿ ಉಡುಗೊರೆಗಳನ್ನು ಕೊಟ್ಟು ಮನೆಮಂದಿಯಂತೆ ನೋಡಿಕೊಂಡ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಮೆಂಟ್‌ನಲ್ಲಿ ತಿಳಿಸಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications