BYD: ಭಾರತದಲ್ಲಿ ಚೀನಾ ಕಂಪನಿ ಸ್ಥಾಪನೆಗೆ ಒಪ್ಪೋದಿಲ್ಲ... ಬೃಹತ್ ಹೂಡಿಕೆ ತಿರಸ್ಕರಿಸಿದ ಮೋದಿ ಸರ್ಕಾರ!

ವಿಶ್ವದ ಅತಿದೊಡ್ಡ ಎಲೆಕ್ಟ್ರಿಕ್ ಕಾರು ತಯಾರಕಾ ಕಂಪನಿಯಾದ BYD (ಬಿಲ್ಡ್ ಯುವರ್ ಡ್ರೀಮ್ಸ್) ಭಾರತದಲ್ಲಿ ತನ್ನ ಉತ್ಪಾದನಾ ಸ್ಥಾವರಕ್ಕಾಗಿ ತುದಿಗಾಲಲ್ಲಿ ಕಾಯುತ್ತಿದೆ. ಇತ್ತೀಚೆಗಷ್ಟೆ ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಮತ್ತು ಇನ್‌ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್‌ನ ಸಹಭಾಗಿತ್ವದಲ್ಲಿ ಭಾರತದಲ್ಲಿ EV ಮತ್ತು ಬ್ಯಾಟರಿ ಉತ್ಪಾದನಾ ಘಟಕವನ್ನು ಸ್ಥಾಪಿಸುವುದಾಗಿ ಕಂಪನಿ ಹೇಳಿಕೊಂಡಿತ್ತು.

ಇದಕ್ಕಾಗಿ ಎಲ್ಲವನ್ನು ಸಜ್ಜುಗೊಳಿಸಿದ್ದ ಕಂಪನಿಗೆ ಈಗ ಭಾರತ ಸರ್ಕಾರ ಆಘಾತ ನೀಡಿದೆ. ಬಿವೈಡಿ ಕಂಪನಿಯ ಪ್ರಸ್ತಾವನೆಯನ್ನು ನಯವಾಗಿಯೇ ತಿರಸ್ಕರಿಸಿದೆ ಎಂದು ತಿಳಿದುಬಂದಿದೆ. ಭಾರತದಲ್ಲಿ EV ಮತ್ತು ಬ್ಯಾಟರಿ ಉತ್ಪಾದನಾ ಘಟಕವನ್ನು ಸ್ಥಾಪಿಸಲು $1 ಬಿಲಿಯನ್ ಹೂಡಿಕೆಯನ್ನು ಪ್ರಸ್ತಾಪಿಸಿ, ಎರಡು ಕಂಪನಿಗಳು ಉದ್ಯಮ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆಗೆ (DPIIT) ತಮ್ಮ ಅರ್ಜಿಯನ್ನು ಸಲ್ಲಿಸಿದ್ದವು.

byd-1-billion-investment-india-modi-government-rejected

ಇತರ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಭದ್ರತಾ ಕಾರಣಗಳಿಂದಾಗಿ DPIIT ಈ ಪ್ರಸ್ತಾವನೆಯನ್ನು ತಿರಸ್ಕರಿಸಿದೆ ಎಂದು ವರದಿಯಾಗಿದೆ. ಇನ್ನು ವಿವರವಾಗಿ ಹೇಳುವುದಾದರೆ, ಭಾರತದಲ್ಲಿನ ಚೀನೀ ಹೂಡಿಕೆಗಳಿಗೆ ಸಂಬಂಧಿಸಿದಂತೆ ಭದ್ರತಾ ಕಾಳಜಿಗಳನ್ನು ಚರ್ಚೆಯ ಸಮಯದಲ್ಲಿ ಎತ್ತಿತೋರಲಾಗಿದೆ. ಸದ್ಯಕ್ಕಿರುವ ನಿಯಮಗಳು ಇಂತಹ ಹೂಡಿಕೆಗಳನ್ನು ಅನುಮತಿಸುವುದಿಲ್ಲ ಎಂದು DPIIT ತಿರಸ್ಕರಿಸಿದೆ.

ಒಂದು ವೇಳೆ ಇದಕ್ಕೆ ಅನುಮತಿ ಸಿಕ್ಕಿದ್ದರೆ BYD ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ಸ್ ಜೊತೆ ಪಾಲುದಾರಿಕೆಯಡಿ ಹೈದರಾಬಾದ್‌ನಲ್ಲಿ ಇವಿ ಘಟಕವನ್ನು ಸ್ಥಾಪಿಸಲು ಯೋಜಿಸಲಾಗಿತ್ತು. ಆದರೆ ಭಾರತ ಮತ್ತು ಚೀನಾ ನಡುವೆ ಉದ್ವಿಗ್ನತೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

byd-1-billion-investment-india-modi-government-rejected

ಇದೇ ಮೊದಲಲ್ಲ: GWM (ಗ್ರೇಟ್ ವಾಲ್ ಮೋಟಾರ್) ಕಾರು ತಯಾರಕಾ ಕಂಪನಿ ಭಾರತಕ್ಕೆ ಎಂಟ್ರಿ ಕೊಡಲು ಸುಮಾರು ಎರಡೂವರೆ ವರ್ಷಗಳಿಂದ ಕಾದಿತ್ತು. ಕೊನೆಗೂ ಭಾರತ ಸರ್ಕಾರದ ಅನುಮತಿ ನಿರಾಕರಣೆಯಿಂದಾಗಿ ಭಾರತದಲ್ಲಿ ತನ್ನ ಹೂಡಿಕೆ ಮಾಡುವ ಯೋಜನೆಯನ್ನು ಸ್ಥಗಿತಗೊಳಿಸಬೇಕಾಯಿತು. ಇದು ಕೂಡ ಬರೋಬ್ಬರಿ $1 ಬಿಲಿಯನ್ ಡಾಲರ್ ಹೂಡಿಕೆ ಮಾಡುವುದಾಗಿ ಪ್ರಸ್ತಾವನೆ ಸಲ್ಲಿಸಿತ್ತು.

ಸುಮಾರು ಎರಡೂವರೆ ವರ್ಷಗಳ ಕಾಲ ಕಾದರೂ, ಸರ್ಕಾರದಿಂದ ಅನುಮೋದನೆ ಪಡೆಯುವಲ್ಲಿ ವಿಫಲವಾದ ನಂತರ GWM ಕಳೆದ ವರ್ಷ ಜುಲೈನಲ್ಲಿ ತನ್ನ ಯೋಜನೆಗಳನ್ನು ಸ್ಥಗಿತಗೊಳಿಸಬೇಕಾಯಿತು. ಇನ್ನು ಇದೀಗ ಬಿವೈಡಿ ತನ್ನ ಅದೃಷ್ಟ ಪರೀಕ್ಷಿಸಿಕೊಳ್ಳಲು ಭಾರತೀಯ ಕಂಪನಿಯೊಂದಿಗೆ ಕೈಜೋಡಿಸಿ ಮುಂದೆ ಬಂದಿತ್ತು. ಆದ್ರೆ ಮೋದಿ ಸರ್ಕಾರ ತಿರಸ್ಕರಿಸಿ ಮನೆಗೆ ಕಳುಹಿಸಿದೆ.

byd-1-billion-investment-india-modi-government-rejected

BYD ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ Atto 3 ಮತ್ತು e6 ಎಂಬ ಎರಡು ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುತ್ತಿದೆ. ಈಗ ಸೀಲ್ EV ಎಂಬ ಹೊಸ ಕಾರನ್ನು ವರ್ಷಾಂತ್ಯದಲ್ಲಿ ಬಿಡುಗಡೆ ಮಾಡಲು ಯೋಜಿಸಿದ್ದಾರೆ. ಈ ಮೂಲಕ ಭಾರತದಲ್ಲಿ ಹ್ಯಾಚ್‌ಬ್ಯಾಕ್‌ಗಳಿಂದ ಹಿಡಿದು ಐಷಾರಾಮಿ ಮಾದರಿಗಳವರೆಗೆ EVಗಳ ಶ್ರೇಣಿಯನ್ನು ನಿರ್ಮಿಸುವ ಯೋಜನೆಯನ್ನು ಹೊಂದಿದ್ದರು.

ಭಾರತದಲ್ಲಿ ಉತ್ಪಾದನಾ ಘಟಕವನ್ನು ಸ್ಥಾಪಿಸಲು BYD ಯ ಬೃಹತ್ $1 ಬಿಲಿಯನ್ ಪ್ರಸ್ತಾವನೆಯನ್ನು ತಿರಸ್ಕರಿಸಿರುವ ಮೋದಿ ಸರ್ಕಾರದ ನಿರ್ಧಾರದ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಮೆಂಟ್‌ನಲ್ಲಿ ತಿಳಿಸಿ. ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ.

Article Published On: Monday, July 24, 2023, 11:45 [IST]
English summary
Byd 1 billion investment india modi government rejected
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+