ಪ್ರೀತಿಯ ಅಮ್ಮನಿಗೆ ತಾನೇ ವಿನ್ಯಾಸಗೊಳಿಸದ 'ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ' ಕಾರನ್ನು ಗಿಫ್ಟ್ ನೀಡಿದ ಮಗ!

ನಾವು ಏನೂ ಹೇಳದಿದ್ದರೂ ನಮ್ಮ ಮನಸ್ಸಿನ ಬಯಕೆಯನ್ನು ತಿಳಿದುಕೊಳ್ಳುವ ಹಾಗೂ ನಮ್ಮ ನಗುವಿನಲ್ಲೂ ನೋವನ್ನು ತಿಳಿದುಕೊಳ್ಳುವ ಏಕೈಕ ಜೀವ ಎಂದರೆ ನಮ್ಮ ತಾಯಿ ಮಾತ್ರ.. ಬಿದ್ದಾಗ ಮುದ್ದಿಸಿದಳು, ಎದ್ದಾಗ ಸಂಭ್ರಮಿಸಿದಳು, ಅತ್ತಾಗ ನಗಿಸಿದವಳು, ನಮ್ಮ ಜೀವನಕ್ಕೆ ಒಂದು ಅರ್ಥ ಕೊಟ್ಟವಳು ಅಮ್ಮ.. ಅಂತಹ ತಾಯಿಗೆ ಮಗನೊಬ್ಬ ತಾನೇ ವಿನ್ಯಾಸಗೊಳಿಸದ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV3XO) ಎಸ್‌ಯುವಿಯನ್ನು ಉಡೊಗೊರೆಯಾಗಿ ನೀಡಿದ್ದಾರೆ. ಪುತ್ರನಿಂದ ನೂತನ ಕಾರನ್ನು ಗಿಫ್ಟ್ ಪಡೆದ ಅಮ್ಮನ ಸಂತೋಷಕ್ಕೆ ಪಾರವೇ ಇರಲಿಲ್ಲ.

ಭಾರತದ ಪ್ರಸಿದ್ಧ ಆಟೋಮೊಬೈಲ್ ಡಿಸೈನರ್ ಪ್ರತಾಪ್ ಬೋಸ್ (Pratap Bose), ತಮ್ಮ ತಾಯಿಗೆ ಹೊಸ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಕಾರನ್ನು ಉಡುಗೊರೆಯಾಗಿ ನೀಡುವ ಮಾತೃ ಪ್ರೇಮವನ್ನು ಮೆರೆದಿದ್ದಾರೆ. ಸದ್ಯ ಅವರು ಮಹೀಂದ್ರಾ ಕಂಪನಿಯಲ್ಲಿ ಚೀಫ್ ಡಿಸೈನರ್ & ಕ್ರಿಯೇಟಿವ್ ಆಫೀಸರ್ ಹುದ್ದೆಯಲಿದ್ದು, ಇದೇ 'ಎಕ್ಸ್‌ಯುವಿ 3ಎಕ್ಸ್ಒ' ಎಸ್‌ಯುವಿಯನ್ನು ವಿನ್ಯಾಸಗೊಳಿಸುವ ಜವಾಬ್ದಾರಿಯನ್ನು ಹೊತ್ತಿದ್ದರು. ಅದಕ್ಕೂ ಮೊದಲು ಟಾಟಾ ಮೋಟಾರ್ಸ್‌ನಲ್ಲಿ ಡಿಸೈನ್ ಹೆಡ್ ಆಗಿ ಕಾರ್ಯನಿರ್ವಹಿಸಿದ್ದರು.

Car Design King Pratap Bose Gifted His Mother New Mahindra XUV3XO Suv

ಪ್ರತಾಪ್ ಬೋಸ್ ತಮ್ಮ ಅಮ್ಮನಿಗೆ ನೂತನ ಕಾರನ್ನು ಗಿಫ್ಟ್ ನೀಡುತ್ತಿರುವ ವಿಡಿಯೋವನ್ನು 'ಮಹೀಂದ್ರಾ ಆಟೋಮೋಟಿವ್' ಯುಟ್ಯೂಬ್ ವಾಹಿನಿಯಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಪ್ರತಾಪ್ ಬೋಸ್ ಅವರ ಬಗ್ಗೆ ತಾಯಿ ಸಹ ಮೆಚ್ಚುಗೆಯ ಮಾತುಗಳನ್ನು ಆಡಿರುವುದನ್ನು ನೋಡಬಹುದು. ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ರೂ.7.49 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

ಈ ಕಾರು ಎಂಎಕ್ಸ್1, ಎಂಎಕ್ಸ್2, ಎಂಎಕ್ಸ್2 ಪ್ರೊ, ಎಂಎಕ್ಸ್3, ಎಂಎಕ್ಸ್3 ಪ್ರೊ ಒಳಗೊಂಡಂತೆ ಹಲವು ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿಯೂ ಲಭ್ಯವಿದೆ. ಆಕರ್ಷಕವಾದ ವಿನ್ಯಾಸವನ್ನು ಕೂಡ ಒಳಗೊಂಡಿದ್ದು, ಎಲ್ಇಡಿ ಹೆಡ್‌ಲೈಟ್‌ಗಳು, ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್‌ಗಳು (ಡಿಆರ್‌ಎಲ್ಎಸ್), ಹೊಸದಾಗಿರುವ ಬಂಪರ್, ಅಲಾಯ್ ವೀಲ್‌ಗಳು ಹಾಗೂ ಸಿ-ಆಕಾರಕ್ಕೆ ಹೋಲುವ ಟೈಲ್‌ಲ್ಯಾಂಪ್‌ಗಳನ್ನು ಹೊಂದಿದೆ.

Car Design King Pratap Bose Gifted His Mother New Mahindra XUV3XO Suv

ನೂತನ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV3XO) ಎಸ್‌ಯುವಿಯು 1.2-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಟಿಜಿಡಿಐ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17.96 ರಿಂದ 21.2 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಹೊಸ ಕಾರು ಸಿಟ್ರಿನ್ ಯೆಲ್ಲೋ, ಡೀಪ್ ಫಾರೆಸ್ಟ್, ಡ್ಯೂನ್ ಬೀಜ್, ಎವರೆಸ್ಟ್ ವೈಟ್, ಗ್ಯಾಲಕ್ಸಿ ಗ್ರೇ, ನೆಬ್ಯುಲಾ ಬ್ಲೂ, ಸ್ಟೆಲ್ತ್ ಬ್ಲ್ಯಾಕ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಡಿಸ್ಪ್ಲೇಗಳು, ಕ್ರೂಸ್ ಕಂಟ್ರೋಲ್, ಡುಯಲ್ ಝೋನ್ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಸೇರಿ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಇದರಲ್ಲಿ 5 ಮಂದಿ ಆರಾಮದಾಯಕ ಪ್ರಯಾಣಿಸಬಹುದು.

Car Design King Pratap Bose Gifted His Mother New Mahindra XUV3XO Suv

ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಎಸ್‌ಯುವಿಯು ಸುರಕ್ಷೆತೆಗೂ ಹೆಸರುವಾಸಿಯಾಗಿದೆ. 6 ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ರೇರ್ ವ್ಯೂ ಕ್ಯಾಮೆರಾ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಈ ಕಾರಿಗೆ ಹ್ಯುಂಡೈ ವೆನ್ಯೂ, ರೆನಾಲ್ಟ್ ಕಿಗರ್, ಟಾಟಾ ನೆಕ್ಸಾನ್ ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, June 14, 2024, 12:59 [IST]
English summary
Car design king pratap bose gifted his mother new mahindra xuv3xo suv
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+