Just In
Don't Miss!
- Movies
ಜನವರಿ 22ರಂದು ಐದು ಕನ್ನಡ ಸಿನಿಮಾ ಬಿಡುಗಡೆ
- News
ಲಿಂಗಾಂಬೂದಿಪಾಳ್ಯ ಕೆರೆಗೆ ಹರಿಯಲಿದೆ ಕೆಆರ್ಎಸ್ ನೀರು
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Sports
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನಾಯಿಯನ್ನು ಕಾರಿಗೆ ಕಟ್ಟಿ ಸುಮಾರು 2 ಕಿ.ಮೀ ಎಳೆದೊಯ್ದ ದುಷ್ಟ
ನಾಯಿಯನ್ನು ಕಾರಿಗೆ ಕಟ್ಟಿಹಾಕಿ ಎಳೆದೊಯ್ಯುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಡಿಸೆಂಬರ್ 11ರಂದು ಕೇರಳದಲ್ಲಿ ನಡೆದಿದೆ. ಈ ಘಟನೆಯ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

ಘಟನೆಗೆ ಕಾರಣನಾದ ಕಾರು ಚಾಲಕನಿಗೆ ದಂಡ ವಿಧಿಸಲಾಗಿದ್ದು, ಕಾರನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಕೇರಳ ಮೋಟಾರು ವಾಹನ ಇಲಾಖೆ ಸಹ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದೆ. ಕಾರು ಚಾಲಕನ ಡ್ರೈವಿಂಗ್ ಲೈಸೆನ್ಸ್ ಹಿಂಪಡೆಯಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಶಿಫಾರಸು ಮಾಡಲಾಗಿದೆ.

ಈ ಘಟನೆ ಡಿಸೆಂಬರ್ 11ರಂದು ಬೆಳಿಗ್ಗೆ 11 ಗಂಟೆಯ ಸುಮಾರಿಗೆ ನಡೆದಿದೆ ಎನ್ನಲಾಗಿದೆ. ಇದೇ ಹಾದಿಯಲ್ಲಿ ಸಾಗುತ್ತಿದ್ದ ದ್ವಿಚಕ್ರ ವಾಹನ ಸವಾರನೊಬ್ಬ ನಾಯಿ ಕಾರಿನ ಹಿಂದೆ ಓಡುತ್ತಿದೆ ಎಂದು ಕೊಂಡಿದ್ದಾನೆ. ಆದರೆ ಅವನು ಕಾರಿನ ಹತ್ತಿರ ಬಂದಾಗ ನಾಯಿಯನ್ನು ಕಾರಿಗೆ ಕಟ್ಟಿ ಎಳೆದೊಯ್ಯುತ್ತಿರುವುದು ಕಂಡು ಬಂದಿದೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಕಾರು ಚಾಲಕನು ನಾಯಿಯ ಕುತ್ತಿಗೆಗೆ ಹಗ್ಗವನ್ನು ಕಟ್ಟಿ ನಂತರ ಹಗ್ಗವನ್ನು ಕಾರಿಗೆ ಕಟ್ಟಿ ನಾಯಿಯನ್ನು ಎಳೆದೊಯ್ಯುತ್ತಿದ್ದ. ಈ ದೃಶ್ಯವನ್ನು ನೋಡಿ ಗಾಬರಿಗೊಂಡ ದ್ವಿಚಕ್ರ ವಾಹನ ಸವಾರನು ಸುಮಾರು 2 ಕಿ.ಮೀ ಕಾರನ್ನು ಚೇಸ್ ಮಾಡಿದ್ದಾನೆ.
ಕ್ಲಾಸಿಕ್ ಬೈಕ್ ಪ್ರಿಯರಿಗಾಗಿ ಬಿಡುಗಡೆಯಾದ ರಾಯಲ್ ಎನ್‌ಫೀಲ್ಡ್ ಹೊಸ ಮಿಟಿಯೊರ್ 350 ಹೇಗಿದೆ? ಈ ವಿಡಿಯೋ ನೋಡಿ..
ಒಂದು ಹಂತದಲ್ಲಿ ಕಾರನ್ನು ನಿಲ್ಲಿಸಿ ಕಾರಿನ ಚಾಲಕನಿಗೆ ನೀವು ಮಾಡುತ್ತಿರುವುದು ಸರಿಯಲ್ಲ ಎಂದು ಬುದ್ದಿ ಹೇಳಿ, ಕಾರಿಗೆ ಕಟ್ಟಿದ್ದ ನಾಯಿಯನ್ನು ಬಿಚ್ಚಿದ್ದಾನೆ. ಈ ವೇಳೆ ಕಾರಿನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ವರದಿಗಳ ಪ್ರಕಾರ ನಾಯಿಯನ್ನು ರಕ್ಷಿಸಿದ ದ್ವಿಚಕ್ರ ವಾಹನ ಸವಾರನ ಹೆಸರು ಅಖಿಲ್ ಎಂದು ತಿಳಿದು ಬಂದಿದೆ. ಅಖಿಲ್ ಈ ಘಟನೆಯನ್ನು ವೀಡಿಯೊ ಮಾಡಿದ್ದಾರೆ. ಈ ವೀಡಿಯೊದಲ್ಲಿ ರಕ್ತ ಸಿಕ್ತವಾಗಿರುವ ನಾಯಿ ನೋವಿನಿಂದ ನರಳುತ್ತಿರುವುದನ್ನು ಕಾಣಬಹುದು. ನಾಯಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ನಾಯಿಯ ಸದ್ಯದ ಸ್ಥಿತಿ ಏನಾಗಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಲಭ್ಯವಿರುವ ಮಾಹಿತಿಯ ಪ್ರಕಾರ, ಕಾರಿನ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತಲೆ ಮರೆಸಿಕೊಂಡಿರುವ ಕಾರು ಚಾಲಕನಿಗಾಗಿ ಬಲೆ ಬೀಸಿದ್ದಾರೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ
ಕಾರು ಚಾಲಕನ ಕುಟುಂಬದವರು ನಾಯಿಯ ಬಗ್ಗೆ ದೂರು ನೀಡಿದ ಕಾರಣಕ್ಕೆ ಆತ ಈ ದುಷ್ಕೃತ್ಯಕ್ಕೆ ಕೈ ಹಾಕಿದ್ದಾನೆ ಎಂದು ಹೇಳಲಾಗಿದೆ. ಕೇರಳ ರಾಜ್ಯ ಪೊಲೀಸರ ಪ್ರಕಾರ, ನಾಯಿಯನ್ನು ಎಳೆದೊಯ್ಯುತ್ತಿದ್ದ ಕಾರನ್ನು ಟ್ಯಾಕ್ಸಿಯಾಗಿ ಬಳಸಲಾಗುತ್ತಿದೆ.

ಕಾರಿನಲ್ಲಿ ನಾಯಿಯನ್ನು ಎಳೆದೊಯುತ್ತಿದ್ದ ನೀಚನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಾರ್ವಜನಿಕರು ನಾಯಿಯನ್ನು ನೋವಿನಿಂದ ನರಳುವಂತೆ ಮಾಡಿದ ದುರುಳನಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ.