ಶಿಕ್ಷಕರ ದೂರಿಗೆ ಸ್ಪಂದಿಸಿದ ಪ್ರಧಾನಿ ಕಚೇರಿ, ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ಸೂಚನೆ

ಶಿಕ್ಷಕರೊಬ್ಬರು ನೀಡಿದ ದೂರಿನ ಮೇರೆಗೆ ಉತ್ತರ ಪ್ರದೇಶ ಸರ್ಕಾರವು ಜಾತಿ ಸೂಚಕ ಸ್ಟಿಕ್ಕರ್‌ಗಳನ್ನು ಅಳವಡಿಸಿಕೊಂಡಿರುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ. ಉತ್ತರ ಪ್ರದೇಶದಲ್ಲಿ ಹಲವಾರು ವಾಹನಗಳು ಜಾತಿಗಳನ್ನು ಹಾಗೂ ಹೆಸರುಗಳನ್ನು ಸೂಚಿಸುವ ಸ್ಟಿಕ್ಕರ್‌ಗಳನ್ನು ಹೊಂದಿವೆ.

ಶಿಕ್ಷಕರ ದೂರಿಗೆ ಸ್ಪಂದಿಸಿದ ಪ್ರಧಾನಿ ಕಚೇರಿ, ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ಸೂಚನೆ

ವರದಿಗಳ ಪ್ರಕಾರ ಪ್ರತಿ 20 ವಾಹನಕ್ಕೆ ಒಂದು ವಾಹನವು ಈ ರೀತಿಯ ಸ್ಟಿಕ್ಕರ್‌ಗಳನ್ನು ಹೊಂದಿರುತ್ತದೆ ಎಂದು ಹೇಳಲಾಗಿದೆ. ಮಹಾರಾಷ್ಟ್ರದ ಶಿಕ್ಷಕ ಹರ್ಷಲ್ ಪ್ರಭು ಎಂಬುವವರು ಈ ಕುರಿತು ಪ್ರಧಾನಿ ಕಚೇರಿಗೆ (ಪಿಎಂಒ) ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೆಚ್ಚುವರಿ ಸಾರಿಗೆ ಆಯುಕ್ತ ಮುಖೇಶ್ ಚಂದ್ರರವರಿಗೆ ಪಿಎಂಒ ಆದೇಶ ನೀಡಿತ್ತು.

ಶಿಕ್ಷಕರ ದೂರಿಗೆ ಸ್ಪಂದಿಸಿದ ಪ್ರಧಾನಿ ಕಚೇರಿ, ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ಸೂಚನೆ

ಸಾರಿಗೆ ಉಪ ಆಯುಕ್ತರ ನೇತೃತ್ವದಲ್ಲಿ ಉತ್ತರ ಪ್ರದೇಶ ಪೊಲೀಸರು ಈ ರೀತಿಯ ಸ್ಟಿಕ್ಕರ್'ಗಳನ್ನು ಹೊಂದಿರುವ ವಾಹನಗಳ ವಿರುದ್ಧ ಅಭಿಯಾನ ಕೈಗೊಂಡಿದ್ದಾರೆ. ಮೋಟಾರು ವಾಹನ ಕಾಯ್ದೆಯಡಿ ವಾಹನದ ಯಾವುದೇ ಭಾಗದಲ್ಲಿ ಜಾತಿ ಸೂಚಕ ಪದಗಳನ್ನು ಅಳವಡಿಸುವುದು ಕಾನೂನುಬಾಹಿರ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಶಿಕ್ಷಕರ ದೂರಿಗೆ ಸ್ಪಂದಿಸಿದ ಪ್ರಧಾನಿ ಕಚೇರಿ, ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ಸೂಚನೆ

ಕಾಯ್ದೆಯ ಪ್ರಕಾರ ವಾಹನದ ಮೇಲೆ ಜಾತಿ ಪದಗಳನ್ನು ಬರೆಯುವುದರಿಂದ ಸಮಾಜದಲ್ಲಿ ಜಾತಿ ಆಧಾರಿತ ತಾರತಮ್ಯ ಉಂಟಾಗುತ್ತದೆ. ಇದರಿಂದಾಗಿ ಸಮಾಜದಲ್ಲಿ ಸಾಮಾಜಿಕ ಸಂಘರ್ಷ ಎದುರಾಗುತ್ತದೆ.

ಶಿಕ್ಷಕರ ದೂರಿಗೆ ಸ್ಪಂದಿಸಿದ ಪ್ರಧಾನಿ ಕಚೇರಿ, ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ಸೂಚನೆ

ಮೋಟಾರು ವಾಹನ ಕಾಯ್ದೆಯ ಪ್ರಕಾರ, ವಾಹನದ ನಂಬರ್ ಪ್ಲೇಟ್‌ನಲ್ಲಿ ವಾಹನದ ನೋಂದಣಿ ಸಂಖ್ಯೆಯನ್ನು ಮಾತ್ರ ಬರೆಯಬೇಕು. ವಾಹನದ ವಿಂಡ್‌ಸ್ಕ್ರೀನ್‌ಗಳ ಮೇಲೆ ಯಾವುದೇ ರೀತಿಯ ಪೋಸ್ಟರ್ ಅಥವಾ ಸ್ಟಿಕ್ಕರ್'ಗಳನ್ನು ಅಂಟಿಸುವುದನ್ನು ಸಹ ನಿಷೇಧಿಸಲಾಗಿದೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಶಿಕ್ಷಕರ ದೂರಿಗೆ ಸ್ಪಂದಿಸಿದ ಪ್ರಧಾನಿ ಕಚೇರಿ, ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ಸೂಚನೆ

ಕೆಲವು ದಿನಗಳ ಹಿಂದಷ್ಟೇ ಜಾರ್ಖಂಡ್ ಹೈಕೋರ್ಟ್ ವಾಹನಗಳ ನಂಬರ್ ಪ್ಲೇಟ್‌ಗಳಲ್ಲಿ ಹೆಸರುಗಳಿರುವುದರ ಬಗ್ಗೆ ರಾಜ್ಯ ಸಾರಿಗೆ ಇಲಾಖೆಯನ್ನು ಪ್ರಶ್ನಿಸಿತ್ತು. ಅಂತಹ ವಾಹನಗಳ ನಂಬರ್‌ ಪ್ಲೇಟ್‌ಗಳನ್ನು ಪರಿಶೀಲಿಸಲು ಹಾಗೂ ಹೆಸರುಗಳನ್ನು ತೆಗೆದುಹಾಕಲು ಅಭಿಯಾನ ನಡೆಸುವಂತೆ ನ್ಯಾಯಾಲಯವು ರಾಜ್ಯ ಸಾರಿಗೆ ಇಲಾಖೆಗೆ ಆದೇಶ ನೀಡಿತ್ತು.

ಶಿಕ್ಷಕರ ದೂರಿಗೆ ಸ್ಪಂದಿಸಿದ ಪ್ರಧಾನಿ ಕಚೇರಿ, ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ಸೂಚನೆ

ಸಾಂವಿಧಾನಿಕ ಸ್ಥಾನಗಳಲ್ಲಿರುವವರು ಮಾತ್ರ ತಮ್ಮ ಅಧಿಕೃತ ವಾಹನಗಳಲ್ಲಿ ನಂಬರ್ ಪ್ಲೇಟ್‌ ಜೊತೆಗೆ ಹುದ್ದೆಯ ಬಳಸಬಹುದೆಂದು ನ್ಯಾಯಾಲಯವು ಹೇಳಿದೆ. ಇವರನ್ನು ಹೊರತುಪಡಿಸಿ ಇತರರು ತಮ್ಮ ವಾಹನಗಳಲ್ಲಿ ನಂಬರ್ ಪ್ಲೇಟ್ ಜೊತೆಗೆ ಹೆಸರನ್ನು ಬರೆಸುವಂತಿಲ್ಲ ಎಂದು ಹೇಳಿದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಶಿಕ್ಷಕರ ದೂರಿಗೆ ಸ್ಪಂದಿಸಿದ ಪ್ರಧಾನಿ ಕಚೇರಿ, ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ಸೂಚನೆ

ಇಬ್ಬರು ನ್ಯಾಯಮೂರ್ತಿಗಳಿದ್ದ ನ್ಯಾಯಪೀಠವು ಪಂಚಾಯತ್ ಮುಖ್ಯಸ್ಥರು, ಪಂಚಾಯತ್ ಸದಸ್ಯರು, ಖಾಸಗಿ ಕಂಪನಿಗಳ ನೌಕರರು, ಎನ್‌ಜಿಒ ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳಿಗೆ ಸೇರಿದವರು ಸಹ ತಮ್ಮ ವಾಹನಗಳಲ್ಲಿ ತಮ್ಮ ಹೆಸರುಗಳನ್ನು ಬರೆಸುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

ಶಿಕ್ಷಕರ ದೂರಿಗೆ ಸ್ಪಂದಿಸಿದ ಪ್ರಧಾನಿ ಕಚೇರಿ, ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ಸೂಚನೆ

ಹೈಕೋರ್ಟ್ ನ್ಯಾಯಾಧೀಶರು ಸಹ ತಮ್ಮ ಖಾಸಗಿ ವಾಹನಗಳಲ್ಲಿ ತಮ್ಮ ಹೆಸರುಗಳನ್ನು ಬರೆಸುವಂತಿಲ್ಲವೆಂದು ನ್ಯಾಯಪೀಠ ಹೇಳಿದೆ. ಕೆಳ ನ್ಯಾಯಾಲಯಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ತಮ್ಮ ಖಾಸಗಿ ವಾಹನಗಳಲ್ಲಿರುವ ಹೆಸರನ್ನು ತೆಗೆದುಹಾಕುವಂತೆ ನ್ಯಾಯಾಲಯವು ಆದೇಶ ನೀಡಿದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಶಿಕ್ಷಕರ ದೂರಿಗೆ ಸ್ಪಂದಿಸಿದ ಪ್ರಧಾನಿ ಕಚೇರಿ, ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ಸೂಚನೆ

ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಾರ್ಖಂಡ್ ಸರ್ಕಾರಕ್ಕೆ ಜಾರ್ಖಂಡ್ ಹೈಕೋರ್ಟ್ ಆದೇಶ ನೀಡಿದೆ. ಮೋಟಾರು ವಾಹನ ಕಾಯ್ದೆ 1988ರ ಪ್ರಕಾರ ನಂಬರ್ ಪ್ಲೇಟ್ ಆಗಲಿ ಅಥವಾ ವಾಹನದ ಇನ್ನಾವುದೇ ಭಾಗದಲ್ಲಿ ಆಗಲಿ ಹೆಸರನ್ನು ಬರೆಸುವುದು ಕಾನೂನುಬಾಹಿರ.

ಶಿಕ್ಷಕರ ದೂರಿಗೆ ಸ್ಪಂದಿಸಿದ ಪ್ರಧಾನಿ ಕಚೇರಿ, ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ಸೂಚನೆ

ಮೋಟಾರು ವಾಹನ ಕಾಯ್ದೆಯು ಸಾಂವಿಧಾನಿಕ ಹುದ್ದೆಗಳಿಗೆ ನೇಮಕಗೊಂಡವವರಿಗೆ ಮಾತ್ರವೇ ವಾಹನದ ವಾಹನದ ನಂಬರ್ ಪ್ಲೇಟ್‌ನಲ್ಲಿ ತಮ್ಮ ಹುದ್ದೆಯ ಹೆಸರುಗಳನ್ನು ಬರೆಯಲು ಅನುಮತಿ ನೀಡುತ್ತದೆ.

Most Read Articles

Kannada
English summary
Caste and name stickers on vehicles banned in Uttar Pradesh. Read in Kannada.
Story first published: Monday, December 28, 2020, 19:05 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X