ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ತೆರಿಗೆ ಕಡಿಮೆ ಮಾಡಲು ನಿರಾಕರಿಸಿದ ಕೇಂದ್ರ ಸರ್ಕಾರ

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೆಲವು ನಗರಗಳಲ್ಲಿ ಪೆಟ್ರೋಲ್ ಬೆಲೆ ರೂ.90ರ ಗಡಿ ದಾಟಿದೆ. ಈ ಕಾರಣಕ್ಕೆ ಸಾರ್ವಜನಿಕರು ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ತೆರಿಗೆಯನ್ನು ಕಡಿಮೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ತೆರಿಗೆ ಕಡಿಮೆ ಮಾಡಲು ನಿರಾಕರಿಸಿದ ಕೇಂದ್ರ ಸರ್ಕಾರ

ಆದರೆ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಯಾವುದೇ ಯೋಜನೆ ಇಲ್ಲವೆಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಲು ಕೇಂದ್ರ ಸರ್ಕಾರವು ಅಬಕಾರಿ ತೆರಿಗೆಯನ್ನು ಇಳಿಸುವುದೇ ಎಂದು ಕೇಳಲಾದ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ತೆರಿಗೆ ಕಡಿಮೆ ಮಾಡಲು ನಿರಾಕರಿಸಿದ ಕೇಂದ್ರ ಸರ್ಕಾರ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಾದಾಗ ಬೆಲೆಗಳು ಏರಿಕೆಯಾಗುತ್ತವೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಕಡಿಮೆಯಾದಾಗ ಭಾರತದಲ್ಲಿಯೂ ಬೆಲೆಗಳನ್ನು ಇಳಿಸಲಾಗುವುದು ಎಂದು ಅವರು ಹೇಳಿದರು.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ತೆರಿಗೆ ಕಡಿಮೆ ಮಾಡಲು ನಿರಾಕರಿಸಿದ ಕೇಂದ್ರ ಸರ್ಕಾರ

ಪೆಟ್ರೋಲಿಯಂ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪರಿಷ್ಕರಿಸುತ್ತವೆ. ಬೆಲೆ ಪರಿಷ್ಕರಿಸಲು ನಾವು ಕಂಪನಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ ಎಂದು ಅವರು ಹೇಳಿದರು.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ತೆರಿಗೆ ಕಡಿಮೆ ಮಾಡಲು ನಿರಾಕರಿಸಿದ ಕೇಂದ್ರ ಸರ್ಕಾರ

ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯಿಂದ ಬರುವ ಆದಾಯವನ್ನು ಹೆಚ್ಚು ಅವಲಂಬಿಸಿವೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ತೆರಿಗೆ ಕಡಿಮೆ ಮಾಡಲು ನಿರಾಕರಿಸಿದ ಕೇಂದ್ರ ಸರ್ಕಾರ

ಭಾರತದಲ್ಲಿ ಕಳೆದ 300 ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 60%ನಷ್ಟು ಏರಿಕೆಯಾಗಿದೆ. ಇದೇ ವೇಳೆ 7 ದಿನ ಪೆಟ್ರೋಲ್ ಬೆಲೆಯನ್ನು ಹಾಗೂ 21 ದಿನ ಡೀಸೆಲ್ ಬೆಲೆಯನ್ನು ಇಳಿಸಲಾಗಿತ್ತು.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ತೆರಿಗೆ ಕಡಿಮೆ ಮಾಡಲು ನಿರಾಕರಿಸಿದ ಕೇಂದ್ರ ಸರ್ಕಾರ

ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಧರ್ಮೇಂದ್ರ ಪ್ರಧಾನ್, ನಾವು ಸುಮಾರು 250 ದಿನ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಹೆಚ್ಚಿಸಿಲ್ಲ ಅಥವಾ ಕಡಿಮೆ ಮಾಡಿಲ್ಲ ಎಂದು ತಿಳಿಸಿದರು.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ತೆರಿಗೆ ಕಡಿಮೆ ಮಾಡಲು ನಿರಾಕರಿಸಿದ ಕೇಂದ್ರ ಸರ್ಕಾರ

ಅಬಕಾರಿ ತೆರಿಗೆಯನ್ನು ಕಡಿಮೆ ಮಾಡುವುದಿಲ್ಲ ಎಂಬ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹೇಳಿಕೆ ವಾಹನ ಚಾಲಕರಲ್ಲಿ ಆತಂಕವನ್ನುಂಟು ಮಾಡಿದೆ. ಭಾರತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚಿನ ತೆರಿಗೆ ವಿಧಿಸುವುದರಿಂದ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿದೆ.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ತೆರಿಗೆ ಕಡಿಮೆ ಮಾಡಲು ನಿರಾಕರಿಸಿದ ಕೇಂದ್ರ ಸರ್ಕಾರ

ತೆರಿಗೆಗಳನ್ನು ಕಡಿಮೆ ಮಾಡಲು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಜಿಎಸ್'ಟಿ ವ್ಯಾಪ್ತಿಗೆ ತರುವಂತೆ ಹಲವಾರು ದಿನಗಳಿಂದ ಒತ್ತಾಯಿಸಲಾಗುತ್ತಿದೆ.ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಜಿಎಸ್'ಟಿ ವ್ಯಾಪ್ತಿಗೆ ತಂದರೆ ಬೆಲೆ ಗಮನಾರ್ಹವಾಗಿ ಇಳಿಯುತ್ತದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ತೆರಿಗೆ ಕಡಿಮೆ ಮಾಡಲು ನಿರಾಕರಿಸಿದ ಕೇಂದ್ರ ಸರ್ಕಾರ

ಆದರೆ ಸಾರ್ವಜನಿಕರ ಬೇಡಿಕೆಗೆ ಕೇಂದ್ರ ಸರ್ಕಾರವು ಮನ್ನಣೆ ನೀಡಿಲ್ಲ. ಇದರಿಂದಾಗಿ ವಾಹನ ಸವಾರರು ಪೆಟ್ರೋಲ್, ಡೀಸೆಲ್ ಖರೀದಿಸಲು ಹೆಚ್ಚಿನ ಹಣ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ತೆರಿಗೆ ಕಡಿಮೆ ಮಾಡಲು ನಿರಾಕರಿಸಿದ ಕೇಂದ್ರ ಸರ್ಕಾರ

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳು ಹೆಚ್ಚುತ್ತಿರುವುದರಿಂದ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಮುಂದಾಗಿದ್ದಾರೆ. ಇದರಿಂದಾಗಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ತೆರಿಗೆ ಕಡಿಮೆ ಮಾಡಲು ನಿರಾಕರಿಸಿದ ಕೇಂದ್ರ ಸರ್ಕಾರ

ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆ ಮಾಡಲು ಹಾಗೂ ವಾಯುಮಾಲಿನ್ಯ ಸಮಸ್ಯೆಗಳಿಗೆ ಪರಿಹಾರ ನೀಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹಲವು ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿವೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Central government refuses to reduce excise duty on petrol diesel. Read in Kannada.
Story first published: Thursday, February 11, 2021, 12:04 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X