Just In
Don't Miss!
- News
ಕೊರೊನಾ ಬಂದಿದ್ದು ಚೀನಾದಿಂದ ಅಲ್ಲ... ಶಿವನಿಂದ, ನಾನೇ ಶಿವ!
- Sports
ಯುಎಇ ಆಟಗಾರರಿಂದ ಮ್ಯಾಚ್ ಫಿಕ್ಸಿಂಗ್; ಅಮಾನತು ಮಾಡಿದ ಐಸಿಸಿ
- Movies
'ಬೆಲ್ ಬಾಟಂ-2' ಟೈಟಲ್ ಪೋಸ್ಟರ್ ಅನಾವರಣ: ಡಿಟೆಕ್ಟಿವ್ ದಿವಾಕರ್ ಈಸ್ ಬ್ಯಾಕ್
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Finance
ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ದರ; ಯಾವ ನಗರದಲ್ಲಿ ಎಷ್ಟು?
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪೆಟ್ರೋಲ್ ಜೊತೆಗೆ ಎಥೆನಾಲ್ ಬೆರೆಸಿ ಮಾರಾಟ ಮಾಡಲು ಮುಂದಾದ ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರವು 2030ರಿಂದ 20%ನಷ್ಟು ಎಥೆನಾಲ್ ಅನ್ನು ಪೆಟ್ರೋಲ್'ನೊಂದಿಗೆ ಬೆರೆಸಿ ಮಾರಾಟ ಮಾಡಲು ನಿರ್ಧರಿಸಿದೆ. ಆದರೆ 2030ಕ್ಕೆ ಬದಲು ಈ ಯೋಜನೆಯನ್ನು ಇನ್ನಷ್ಟು ಮುಂಚಿತವಾಗಿ ಜಾರಿಗೆ ತರಲು ಕೇಂದ್ರ ಸರ್ಕಾರವು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.

ಅಂದರೆ ಈ ಯೋಜನೆಯನ್ನು 2023 ಅಥವಾ 2025ರಲ್ಲಿ ಜಾರಿಗೆ ತರುವ ಸಾಧ್ಯತೆಗಳಿವೆ. ಬ್ರೆಜಿಲ್'ನಂತಹ ದೇಶಗಳಲ್ಲಿ ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ಹೆಚ್ಚಾಗುತ್ತಿರುವುದರಿಂದ ಭಾರತವು ಈ ಯೋಜನೆಯಲ್ಲಿ ಹೆಚ್ಚಿನ ಆಸಕ್ತಿ ತೋರಿಸಲು ಆರಂಭಿಸಿದೆ.

20%ನಷ್ಟು ಎಥೆನಾಲ್ ಅನ್ನು ಪೆಟ್ರೋಲ್ ನೊಂದಿಗೆ ಬೆರೆಸಿ ಮಾರಾಟ ಮಾಡುವುದರಿಂದ ಭಾರತಕ್ಕೆ ಹಲವಾರು ರೀತಿಯ ಪ್ರಯೋಜನಗಳಿವೆ. ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ಆಮದು ಮಾಡಿಕೊಳ್ಳುವ ದೇಶಗಳಲ್ಲಿ ಒಂದಾಗಿದೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಕಚ್ಚಾ ತೈಲ ಆಮದಿಗಾಗಿಯೇ ಭಾರತವು ಪ್ರತಿ ವರ್ಷ ಸುಮಾರು ರೂ.8 ಲಕ್ಷ ಕೋಟಿ ವ್ಯಯಿಸುತ್ತಿದೆ. ಇದರಿಂದ ಭಾರತಕ್ಕೆ ಹೆಚ್ಚಿನ ಆರ್ಥಿಕ ಸಮಸ್ಯೆ ಎದುರಾಗುತ್ತಿದೆ. 20%ನಷ್ಟು ಎಥೆನಾಲ್ ಅನ್ನು ಪೆಟ್ರೋಲ್ ನೊಂದಿಗೆ ಬೆರೆಸಿದರೆ ಕಚ್ಚಾ ತೈಲ ಆಮದಿನ ಮೇಲೆ ಮಾಡುವ ವೆಚ್ಚವು ಕಡಿಮೆಯಾಗುತ್ತದೆ.

ಇದರ ಜೊತೆಗೆ ಎಥೆನಾಲ್'ಗೆ ಬೇಡಿಕೆಯು ಹೆಚ್ಚಾಗುತ್ತದೆ. ಎಥೆನಾಲ್'ಗೆ ಬೇಡಿಕೆ ಹೆಚ್ಚುವುದರಿಂದ ಸಂಬಂಧಪಟ್ಟ ಉದ್ಯೋಗವೂ ಹೆಚ್ಚಾಗುತ್ತದೆ. ಎಥೆನಾಲ್ ಉತ್ಪಾದನೆಯಿಂದ ರೈತರ ಆರ್ಥಿಕ ಪರಿಸ್ಥಿತಿಯು ಸಹ ಸುಧಾರಿಸುತ್ತದೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಎಥೆನಾಲ್ ಬಳಕೆಯಿಂದಾಗಿ ವಾಯುಮಾಲಿನ್ಯದ ಸಮಸ್ಯೆಯು ಕಡಿಮೆಯಾಗುತ್ತದೆ. ಭಾರತದಲ್ಲಿ ಪೆಟ್ರೋಲ್, ಡೀಸೆಲ್ ವಾಹನಗಳಿಂದಾಗಿ ವಾಯುಮಾಲಿನ್ಯದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹಲವು ಪ್ರಮುಖ ನಗರಗಳು ವಾಯುಮಾಲಿನ್ಯ ಸಮಸ್ಯೆಯಿಂದ ತತ್ತರಿಸಿವೆ. ಎಥೆನಾಲ್ ಬಳಕೆಯನ್ನು ಹೆಚ್ಚಿಸುವುದರಿಂದ ವಾಯುಮಾಲಿನ್ಯದ ಸಮಸ್ಯೆಯನ್ನು ಕಡಿಮೆ ಮಾಡಬಹುದು.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಹೀಗೆ ಎಥೆನಾಲ್ ಬಳಕೆಯಿಂದಾಗಿ ಹಲವಾರು ಪ್ರಯೋಜನಗಳು ದೊರೆಯಲಿವೆ. ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆಗೊಳಿಸುವುದು ಹಾಗೂ ವಾಯುಮಾಲಿನ್ಯದ ಸಮಸ್ಯೆಯನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ.

ಮುಖ್ಯವಾಗಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುತ್ತಿದೆ. ಕೇಂದ್ರ ಸರ್ಕಾರ ನೀಡುತ್ತಿರುವ ಪ್ರೋತ್ಸಾಹದಿಂದಾಗಿ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಎಲೆಕ್ಟ್ರಿಕ್ ವಾಹನಗಳ ಮಾರಾಟವು ನಿಧಾನಗತಿಯಲ್ಲಿದ್ದರೂ ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಸಮನಾಗಿರುವುದು ಖಚಿತ.

ಕೇಂದ್ರ ಸರ್ಕಾರವು ಮಾತ್ರವಲ್ಲದೆ ದೆಹಲಿ, ಕೇರಳ ಸೇರಿದಂತೆ ಹಲವು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ, ರಸ್ತೆ ತೆರಿಗೆಯಿಂದ ವಿನಾಯಿತಿ, ರಿಜಿಸ್ಟ್ರೇಷನ್ ಶುಲ್ಕದಿಂದ ವಿನಾಯಿತಿ ಸೇರಿದಂತೆ ಹಲವಾರು ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿವೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಈ ರೀತಿಯ ಕ್ರಮಗಳಿಂದಾಗಿ ಮುಂಬರುವ ದಿನಗಳಲ್ಲಿ ಯುರೋಪಿಯನ್ ದೇಶಗಳಂತೆ ಭಾರತವು ಸಹ ಎಲೆಕ್ಟ್ರಿಕ್ ವಾಹನಗಳ ರಾಷ್ಟ್ರವಾಗಲಿದೆ.
ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.