Just In
- 25 min ago
ಓಲಾ S1 ಮತ್ತು S1 Pro ನಡುವೆ ಗೊಂದಲವೇ?: ಬೆಲೆ, ಡಿಸೈನ್, ಫೀಚರ್ಸ್ ಬಗೆಗಿನ ಮಾಹಿತಿ ಇಲ್ಲಿದೆ
- 28 min ago
24.90 ಕಿ.ಮೀ ಮೈಲೇಜ್ ನೀಡುವ ಆಲ್ಟೋ ಕೆ10 ಕಾರಿನ ಟಿವಿಸಿ ಬಿಡುಗಡೆಗೊಳಿಸಿದ ಮಾರುತಿ ಸುಜುಕಿ
- 1 hr ago
ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ನವೀಕೃತ ಮಾರುತಿ ಆಲ್ಟೊ ಕೆ10 ಸಿಎನ್ಜಿ
- 2 hrs ago
ಪೊಲೀಸರಿಗ್ಯಾಕೆ ಬುಲೆಟ್ ಪ್ರೂಫ್ ವಾಹನವಿಲ್ಲ: ಗಣ್ಯರಿಗಿರುವ ಭದ್ರತೆ ಆರಕ್ಷಕರಿಗಿಲ್ಲವೇ? ಕಾರಣ ಇಲ್ಲಿದೆ...
Don't Miss!
- Movies
ನನಸಾಯ್ತು ಕಾಫಿನಾಡು ಚಂದು ಕನಸು, ಎಲ್ಲಾ ಶ್ರೇಯ ಅನುಶ್ರೀಗೆ
- News
ಕದ್ದ ಹಣದಲ್ಲಿ ವಿಮಾನದಲ್ಲಿ ಪ್ರಯಾಣಿಸುವ ಹೈಟೆಕ್ ಕಳ್ಳಿ
- Technology
ವಿಶ್ವ ಛಾಯಾಗ್ರಹಣ ದಿನ: ಈ ಸ್ಮಾರ್ಟ್ಫೋನ್ಗಳು ಫೋಟೋಗ್ರಫಿಗೆ ಸೂಕ್ತ ಎನಿಸಲಿವೆ!
- Sports
ಯುಎಇ ಟಿ20 ಲೀಗ್: 14 ಆಟಗಾರರ ಬಲಿಷ್ಠ ತಂಡ ಪ್ರಕಟಿಸಿದ ದುಬೈ ಕ್ಯಾಪಿಟಲ್ಸ್
- Lifestyle
ಈ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದರೆ ಕೆಲಸಕ್ಕಂತೂ ಅಲ್ಪ ವಿರಾಮ ನೀಡಲೇಬೇಕು..!
- Travel
ಮೋಜಿನ ವಾರಾಂತ್ಯದ ಪ್ರವಾಸಕ್ಕಾಗಿ ಇಲ್ಲಿಗೆ ಭೇಟಿ ನೀಡಿ
- Education
Karnataka High Court Recruitment 2022 : 129 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಫೋನ್ ಪೇ, ಗೂಗಲ್ ಪೇ, ಭೀಮ್ App ಬಳಕೆಗೆ ಪೇಮೆಂಟ್ ಶುಲ್ಕ?
ಏನೇ ಹೇಳಿ ಸುರಕ್ಷತೆ ಮುಖ್ಯ, 6 ಏರ್‌ಬ್ಯಾಗ್‌ಗಳು ಕಡ್ಡಾಯ: ಕಾರು ಕಂಪನಿಗಳ ಮನವಿಗೆ ಬಗ್ಗದ ಗಡ್ಕರಿ
ಕೇಂದ್ರ ಸರ್ಕಾರವು ರಸ್ತೆ ಅಪಘಾತಗಳನ್ನು ತಪ್ಪಿಸಲು ಹಾಗೂ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರು ಎಲ್ಲಾ ಕಾರು ತಯಾರಕ ಕಂಪನಿಗಳು ತಮ್ಮ ಕಾರುಗಳಲ್ಲಿ ಕನಿಷ್ಠ 6 ಏರ್‌ಬ್ಯಾಗ್‌ಗಳನ್ನು ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಸರ್ಕಾರವು ಡ್ಯುಯಲ್ ಏರ್‌ಬ್ಯಾಗ್‌ಗಳು, ಎಬಿಎಸ್ ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸಾರ್‌ಗಳನ್ನು ಭಾರತದಲ್ಲಿನ ಎಲ್ಲಾ ಪ್ರಯಾಣಿಕ ವಾಹನಗಳಲ್ಲಿ ಗುಣಮಟ್ಟದ ವೈಶಿಷ್ಟ್ಯಗಳೊಂದಿಗೆ ನೀಡಲು ಒತ್ತಾಯಿಸಿದೆ. ಈಗ ಭಾರತದಲ್ಲಿನ ಎಲ್ಲಾ ಪ್ರಯಾಣಿಕ ವಾಹನಗಳಿಗೆ ಸೈಡ್ ಮತ್ತು ಕರ್ಟನ್ ಏರ್‌ಬ್ಯಾಗ್‌ಗಳನ್ನು ಪ್ರಮಾಣಿತಗೊಳಿಸಲು ಸರ್ಕಾರ ಸಜ್ಜಾಗಿದೆ.

ವಾಹನ ಚಾಲಕರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮವು ಶ್ಲಾಘನೀಯವಾಗಿದ್ದರೂ, ವಾಹನಕ್ಕೆ ಹೆಚ್ಚುವರಿ ಏರ್‌ಬ್ಯಾಗ್‌ಗಳನ್ನು ಸೇರಿಸುವುದರಿಂದ ಬೆಲೆ ಹೆಚ್ಚಾಗುವುದರ ಜೊತೆಗೆ ಗ್ರಾಹಕರ ಜೇಬಿಗೆ ಗಮನಾರ್ಹ ಕತ್ತರಿ ಬೀಳುತ್ತದೆ ಎಂಬುದು ಕಾರು ತಯಾರಕರ ವಾದವಾಗಿದೆ.

ಆದರೆ ಈ ಪರಿಕಲ್ಪನೆಯ ಪ್ರಕಾರ, ವಾಹನದಲ್ಲಿನ ಪ್ರತಿ ಹೆಚ್ಚುವರಿ ಏರ್‌ಬ್ಯಾಗ್‌ಗೆ ಕೇವಲ 800 ರೂಪಾಯಿಗಳಷ್ಟು ಹೆಚ್ಚಾಗುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಹೇಳಿಕೆಯೊಂದಿಗೆ, ಮುಂಬರುವ ತಿಂಗಳುಗಳಲ್ಲಿ ಸೈಡ್ ಮತ್ತು ಕರ್ಟನ್ ಏರ್‌ಬ್ಯಾಗ್‌ಗಳನ್ನು ಸರ್ಕಾರ ಕಡ್ಡಾಯಗೊಳಿಸಲಿದೆ ಎಂದು ಗಡ್ಕರಿ ದೃಢಪಡಿಸಿದರು.

ವಾಹನ ತಯಾರಕರ ಪ್ರಕಾರ, ಗ್ರಾಹಕರು ಏರ್‌ಬ್ಯಾಗ್‌ಗಳ ಹೆಚ್ಚುವರಿ ವೆಚ್ಚವನ್ನು ಭರಿಸಬೇಕಾಗುತ್ತದೆ, ಇದರ ಪರಿಣಾಮವಾಗಿ ಹೊಸ ಕಾರನ್ನು ಹೆಚ್ಚು ದುಬಾರಿ ಬೆಲೆಗೆ ಖರೀದಿಸಬೇಕಾಗುತ್ತದೆ. ಇದರೊಂದಿಗೆ ನಿರ್ಮಾಣ ವೆಚ್ಚವೂ ಹೆಚ್ಚಾಗಬಹುದು. ಆದರೆ, ಕೇಂದ್ರ ಸಚಿವರ ಪ್ರಕಾರ ಪ್ರತಿ ಹೆಚ್ಚುವರಿ ಏರ್‌ಬ್ಯಾಗ್‌ನ ಬೆಲೆ ಕೇವಲ 800 ರೂ., ಇದು ಕಾರುಗಳನ್ನು ಖರೀದಿಸಬಲ್ಲ ಗ್ರಾಹಕರಿಗೆ ಕೈಗೆಟುಕುವಂತಿದೆ ಎಂದು ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ನಿತಿನ್ ಗಡ್ಕರಿ, ಭಾರತದಲ್ಲಿ ಮಾರಾಟವಾಗುವ ಎಲ್ಲಾ ಪ್ರಯಾಣಿಕ ವಾಹನಗಳಿಗೆ ಸರ್ಕಾರ ಈಗಾಗಲೇ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಿದೆ. ಹಿಂಬದಿ ಪ್ರಯಾಣಿಕರ ಹೆಚ್ಚುವರಿ ಸುರಕ್ಷತೆಗಾಗಿ, ಸರ್ಕಾರವು ಸೈಡ್ ಮತ್ತು ಕರ್ಟನ್ ಏರ್‌ಬ್ಯಾಗ್‌ಗಳನ್ನು ಪರಿಚಯಿಸುವ ನೀತಿಯನ್ನು ತರುತ್ತಿದೆ.

ಇದು ವಾಹನದಲ್ಲಿ ಕಡ್ಡಾಯ ಏರ್‌ಬ್ಯಾಗ್‌ಗಳ ಸಂಖ್ಯೆಯನ್ನು ಆರಕ್ಕೆ ಹೆಚ್ಚಿಸುತ್ತದೆ. ಅಂತಿಮ ಅಧಿಸೂಚನೆ ಹೊರಡಿಸುವ ನಿರ್ಧಾರ ಈಗ ಕೇಂದ್ರ ಸರ್ಕಾರದ ಪರಿಗಣನೆಯಲ್ಲಿದೆ ಎಂದು ಅವರು ಖಚಿತಪಡಿಸಿದರು. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಈ ಹೊಸ ಮಾನದಂಡವನ್ನು ಅಕ್ಟೋಬರ್ 2022 ರಿಂದ ಪರಿಚಯಿಸಲಿದೆ ಎಂದು ಹೇಳಲಾಗಿದೆ.

ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿ ವಾಹನ ತಯಾರಕ ಕಂಪನಿ ಈಗಾಗಲೇ ತಮ್ಮ ವಾಹನಗಳಲ್ಲಿ ಸೈಡ್ ಏರ್‌ಬ್ಯಾಗ್‌ಗಳನ್ನು ಪ್ರಮಾಣಿತವಾಗಿ ಹೊರತರಲು ಪ್ರಾರಂಭಿಸಿವೆ. ಕಿಯಾದಿಂದ ಸೋನೆಟ್ ಮತ್ತು ಸೆಲ್ಟೋಸ್ ಆರು ಏರ್‌ಬ್ಯಾಗ್‌ಗಳೊಂದಿಗೆ ಇತ್ತೀಚಿನ ಉದಾಹರಣೆಗಳಾಗಿವೆ. ಇತರ ಪ್ರಮುಖ ತಯಾರಕರು ಈ ಕ್ರಮಕ್ಕೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕು.

ಪ್ರಪಂಚದಲ್ಲಿ ಅತಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುವ ದೇಶಗಳಲ್ಲಿ ಭಾರತವೂ ಸಹ ಸೇರಿದೆ. ಭಾರತದಲ್ಲಿ ಪ್ರತಿ ವರ್ಷ ಸುಮಾರು 1.50 ಲಕ್ಷ ಜನರು ರಸ್ತೆ ಅಪಘಾತಗಳಿಂದ ಸಾವನ್ನಪ್ಪುತ್ತಿದ್ದಾರೆ ಎಂಬ ಸಂಗತಿ ಅಂಕಿ ಅಂಶಗಳಿಂದ ಬೆಳಕಿಗೆ ಬಂದಿದೆ. ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಕಳೆದ ವರ್ಷ ಕರೋನಾ ಸಾಂಕ್ರಾಮಿಕದ ನಡುವೆಯೂ ಸುಮಾರು 1 ಲಕ್ಷಕ್ಕೂ ಹೆಚ್ಚು ಜನರು ರಸ್ತೆ ಅಪಘಾತಗಳಿಂದ ಮೃತ ಪಟ್ಟಿದ್ದಾರೆ.

ಅಂದರೆ ಪ್ರತಿ ದಿನ ಸರಾಸರಿ 328 ಜನರು ರಸ್ತೆ ಅಪಘಾತಗಳಿಂದ ಸಾವನ್ನಪ್ಪಿದ್ದಾರೆ. ಕೇಂದ್ರ ಸರ್ಕಾರವು ರಸ್ತೆ ಅಪಘಾತಗಳನ್ನು ತಪ್ಪಿಸಲು ಹಾಗೂ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರು ಎಲ್ಲಾ ಕಾರು ತಯಾರಕ ಕಂಪನಿಗಳು ತಮ್ಮ ಕಾರುಗಳಲ್ಲಿ ಕನಿಷ್ಠ 6 ಏರ್‌ಬ್ಯಾಗ್‌ಗಳನ್ನು ನೀಡಬೇಕು ಎಂದು ಈ ಹಿಂದೆಯೇ ಹೇಳಿದ್ದರು.

ಭಾರತದಲ್ಲಿ ಹೆಚ್ಚಿನ ಜನರು ಖರೀದಿಸುವ ಬಜೆಟ್ ಕಾರುಗಳನ್ನು ಹೆಚ್ಚು ಏರ್ ಬ್ಯಾಗ್ ಗಳೊಂದಿಗೆ ಉತ್ಪಾದಿಸಬೇಕೆಂದು ನಿತಿನ್ ಗಡ್ಕರಿ ಹೇಳಿದ್ದಾರೆ. ಸಣ್ಣ ಗಾತ್ರದ ಬಜೆಟ್ ಕಾರುಗಳಲ್ಲಿ ಹೆಚ್ಚಿನ ಏರ್ ಬ್ಯಾಗ್‌ಗಳನ್ನು ಅಳವಡಿಸುವ ಮೂಲಕ ಪ್ರಯಾಣಿಕರ ಸುರಕ್ಷತೆಯನ್ನು ಖಾತ್ರಿ ಪಡಿಸಿಕೊಳ್ಳಬಹುದು ಹಾಗೂ ರಸ್ತೆ ಅಪಘಾತಗಳಿಂದ ಉಂಟಾಗುವ ಸಾವುಗಳನ್ನು ತಡೆಯಬಹುದು ಎಂದು ಅವರು ಹೇಳಿದ್ದಾರೆ.

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ
ಪ್ರಸ್ತುತ ಟ್ರೆಂಡ್ ಪ್ರಕಾರ ವಾಹನದ ಸುರಕ್ಷತಾ ರೇಟಿಂಗ್ ಮತ್ತು ಸುರಕ್ಷತಾ ವೈಶಿಷ್ಟ್ಯಗಳು ಇಂದು ಕಾರನ್ನು ಖರೀದಿಸುವಲ್ಲಿ ಮಹತ್ವದ ಅಂಶಗಳಾಗಿವೆ. ವಾಸ್ತವವೆಂದರೆ ಕ್ರ್ಯಾಶ್ ಟೆಸ್ಟ್ ರೇಟಿಂಗ್‌ಗಳು, ಏರ್‌ಬ್ಯಾಗ್‌ಗಳ ಸಂಖ್ಯೆ ಮತ್ತು ಇತರ ಸುಧಾರಿತ ಸುರಕ್ಷತಾ ತಂತ್ರಜ್ಞಾನವು ತುಂಬಾ ಪ್ರಭಾವಶಾಲಿಯಾಗಿದ್ದು, ಬ್ರಾಂಡ್‌ಗಳಿಗೆ ಮಾರುಕಟ್ಟೆಯಲ್ಲಿ ಉಳಿಯಲು ಗ್ರಾಹಕರನ್ನು ಆಕರ್ಷಿಸಲು ಮತ್ತು ಅವರ ವಿಶ್ವಾಸಾರ್ಹತೆಯನ್ನು ಹೆಚ್ಚಿಸಲು ಕಂಪನಿಗಳಿಗೆ ಬೇರೆ ಆಯ್ಕೆಗಳಿಲ್ಲದಂತಾಗಿದೆ.