ಆಂಬ್ಯುಲೆನ್ಸ್‌ಗಳ ಕೊರತೆ ಹಿನ್ನೆಲೆಯಲ್ಲಿ ತನ್ನ ಐಷಾರಾಮಿ ಕಾರನ್ನು ನೀಡಿದ ಕಾಂಗ್ರೆಸ್ ಶಾಸಕ

ಭಾರತದಲ್ಲಿ ಕೊರೋನಾ ಎರಡನೇ ಅಲೆಯು ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸಿದೆ. ಕೊರೋನಾ ಸೋಂಕುವಿನ ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ. ಹಲವು ಕಡೆಗಳಲ್ಲಿ ಕೊರೋಣಾ ಸೋಂಕಿತರು ಬೆಡ್, ಆಂಬ್ಯುಲೆನ್ಸ್ ಸೇವೆ ಸಿಗದೇ ಪರದಾಡುತ್ತಿದ್ದಾರೆ.

ಆಂಬ್ಯುಲೆನ್ಸ್‌ಗಳ ಕೊರತೆ ಹಿನ್ನೆಲೆಯಲ್ಲಿ ತನ್ನ ಐಷಾರಾಮಿ ಕಾರನ್ನು ನೀಡಿದ ಕಾಂಗ್ರೆಸ್ ಶಾಸಕ

ಇದೇ ರೀತಿ ಆಂಬ್ಯುಲೆನ್ಸ್‌ಗಳ ಕೊರತೆ ಎದುರಾದಾಗ ರಾಜಸ್ಥಾನದ ಜೈಪುರದ ಶಾಸಕರೊಬ್ಬರು ತಮ್ಮ ಟೊಯೊಟಾ ಫಾರ್ಚೂನರ್ ಅನ್ನು ಆಂಬ್ಯುಲೆನ್ಸ್ ಆಗಿ ಬಳಸಲು ನೀಡಿದ್ದಾರೆ. ಈ ಐಷಾರಾಮಿ ಕಾರು ನೀಡಿರುವುದು ಕಾಂಗ್ರೆಸ್ ಪಕ್ಷದ ಶಾಸಕ ಲಕ್ಷ್ಮಣ್ ಸಿಂಗ್ ಅವರು ಆಗಿದ್ದಾರೆ. ಚಂದುದಾ ವಿಧಾನಸಭೆಯ ಬಿನಗಂಜ್ ಆರೋಗ್ಯ ಕೇಂದ್ರಕ್ಕೆ ತಮ್ಮ ಐಷಾರಾಮಿ ಕಾರನ್ನು ನೀಡಿದ್ದಾರೆ. ಗುನಾ ಜಿಲ್ಲೆಯ ಚಂಚುದಾ ವಿಧಾನಸಭಾ ಕ್ಷೇತ್ರದಲ್ಲಿ ಆಂಬ್ಯುಲೆನ್ಸ್‌ಗಳು ಸಿಗದೇ ರೋಗಿಗಳು ಪರದಾಡುತ್ತಿದ್ದಾರೆ.

ಆಂಬ್ಯುಲೆನ್ಸ್‌ಗಳ ಕೊರತೆ ಹಿನ್ನೆಲೆಯಲ್ಲಿ ತನ್ನ ಐಷಾರಾಮಿ ಕಾರನ್ನು ನೀಡಿದ ಕಾಂಗ್ರೆಸ್ ಶಾಸಕ

ಇದರಿಂದ ಶಾಸಕ ಲಕ್ಷ್ಮಣ್ ಸಿಂಗ್ ಅವರು ತಮ್ಮ ಸ್ವಂತ ವಾಹನವನ್ನು ಆರೋಗ್ಯ ಕೇಂದ್ರಕ್ಕೆ ನೀಡಲು ನಿರ್ಧರಿಸಿದರು. ಇವರ ಐಷಾರಾಮಿ ಕಾರನ್ನು ಆರೋಗ್ಯ ಕೇಂದ್ರವು ಆಂಬ್ಯುಲೆನ್ಸ್ ಆಗಿ ಬಳಸಲು ಪ್ರಾರಂಭಿಸಿದ್ದಾರೆ.

MOST READ: ಕರೋನಾ ವೈರಸ್ ಬಗ್ಗೆ ಜನ ಜಾಗೃತಿ ಮೂಡಿಸಲು ಉಬರ್ ಜೊತೆಗೆ ಕೈಜೋಡಿಸಿದ ಪೊಲೀಸ್ ಇಲಾಖೆ

ಆಂಬ್ಯುಲೆನ್ಸ್‌ಗಳ ಕೊರತೆ ಹಿನ್ನೆಲೆಯಲ್ಲಿ ತನ್ನ ಐಷಾರಾಮಿ ಕಾರನ್ನು ನೀಡಿದ ಕಾಂಗ್ರೆಸ್ ಶಾಸಕ

ಕೆಲವೇ ದಿನಗಳ ಹಿಂದೆ ಲಕ್ಷ್ಮಣ್ ಸಿಂಗ್ ಅವರು ಈ ಕ್ಷೇತ್ರದಲ್ಲಿ ಸಮಸ್ಯೆಗಳ ಬಗ್ಗೆ ವಿಡೀಯೋವನ್ನು ಬಿಡುಗಡೆ ಮಾಡಿದರು. ವಿಡಿಯೋದಲ್ಲಿ ಶಾಸಕ ಲಕ್ಷ್ಮಣ್ ಸಿಂಗ್ ಅವರು ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಸಿಗುತ್ತಿಲ್ಲ ಮತ್ತು ಗ್ರಾಮಸ್ಥರು ತೀವ್ರ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದರು.

ಆಂಬ್ಯುಲೆನ್ಸ್‌ಗಳ ಕೊರತೆ ಹಿನ್ನೆಲೆಯಲ್ಲಿ ತನ್ನ ಐಷಾರಾಮಿ ಕಾರನ್ನು ನೀಡಿದ ಕಾಂಗ್ರೆಸ್ ಶಾಸಕ

ನಂತರ ಅವರು ಮಂಗಳವಾರ ಕೊರೋನಾ ಸೋಂಕಿತರ ನೆರವಿಗಾಗಿ ತಮ್ಮ ಐಷಾರಾಮಿ ಕಾರನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸಿದರು. ಇವರ ಕಾರನ್ನು ಆರೋಗ್ಯ ಇಲಾಖೆಯು ಆಂಬ್ಯುಲೆನ್ಸ್ ಆಗಿ ಬಳಸುತ್ತಿದೆ. ಇದರ ಸೇವೆಯು ಚಂಚುದಾ ವಿಧಾನಸಭಾ ಕ್ಷೇತ್ರದ ಜನರಿಗೆ 24 ಗಂಟೆಗಳ ಕಾಲ ಲಭ್ಯವಿರುತ್ತದೆ.

MOST READ: ಐಷಾರಾಮಿ ಬಿಎಂಡಬ್ಲ್ಯು ಎಕ್ಸ್7 ಕಾರು ಚಾಲನೆ ವೇಳೆ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್

ಆಂಬ್ಯುಲೆನ್ಸ್‌ಗಳ ಕೊರತೆ ಹಿನ್ನೆಲೆಯಲ್ಲಿ ತನ್ನ ಐಷಾರಾಮಿ ಕಾರನ್ನು ನೀಡಿದ ಕಾಂಗ್ರೆಸ್ ಶಾಸಕ

ಇನ್ನು ಅವರು ನೀಡಿರುವ ಟೊಯೊಟಾ ಫಾರ್ಚೂನರ್ ಹಿಂದಿನ ಮಾದರಿಯಾಗಿದೆ. ಟೊಯೊಟಾ ಕಂಪನಿಯು ಹೊಸ 2021ರ ಫಾರ್ಚೂನರ್ ಫೇಸ್‌ಲಿಫ್ಟ್ ಮಾದರಿಯನ್ನು ಈ ವರ್ಷದ ಆರಂಭದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದಾರೆ. ಸದ್ಯ ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ಸುಮಾರು ರೂ.30 ಲಕ್ಷಗಳಾಗಿದೆ.

ಆಂಬ್ಯುಲೆನ್ಸ್‌ಗಳ ಕೊರತೆ ಹಿನ್ನೆಲೆಯಲ್ಲಿ ತನ್ನ ಐಷಾರಾಮಿ ಕಾರನ್ನು ನೀಡಿದ ಕಾಂಗ್ರೆಸ್ ಶಾಸಕ

ಹೊಸ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, 2021ರ ಫಾರ್ಚೂನರ್ ಫೇಸ್‌ಲಿಫ್ಟ್ ಸಂಯೋಜಿತ ಎಲ್‌ಇಡಿ ಡಿಆರ್‌ಎಲ್‌ಗಳೊಂದಿಗೆ ನವೀಕರಿಸಿದ ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳನ್ನು ಹೊಂದಿವೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಆಂಬ್ಯುಲೆನ್ಸ್‌ಗಳ ಕೊರತೆ ಹಿನ್ನೆಲೆಯಲ್ಲಿ ತನ್ನ ಐಷಾರಾಮಿ ಕಾರನ್ನು ನೀಡಿದ ಕಾಂಗ್ರೆಸ್ ಶಾಸಕ

ಇದರೊಂದಿಗೆ ಕ್ರೋಮ್ ಸರೌಂಡ್‌ನೊಂದಿಗೆ ದೊಡ್ಡ ಫ್ರಂಟ್ ಗ್ರಿಲ್, ಫಾಗ್ ಲ್ಯಾಂಪ್‌ಗಳಿಗಾಗಿ ಹೊಸ ಹೌಸಿಂಗ್‌ಗಳೊಂದಿಗೆ ನವೀಕರಿಸಿದ ಫ್ರಂಟ್ ಬಂಪರ್ ಹೊಂದಿದೆ. ಹೊಸ 18 ಇಂಚಿನ ಅಲಾಯ್ ವ್ಹೀಲ್ ಗಳು ಮತ್ತು ಹಿಂಭಾಗದಲ್ಲಿ ಎಲ್ಇಡಿ ಟೈಲ್ ಲ್ಯಾಂಪ್ ಗಳನ್ನು ಒಳಗೊಂಡಿವೆ.

ಆಂಬ್ಯುಲೆನ್ಸ್‌ಗಳ ಕೊರತೆ ಹಿನ್ನೆಲೆಯಲ್ಲಿ ತನ್ನ ಐಷಾರಾಮಿ ಕಾರನ್ನು ನೀಡಿದ ಕಾಂಗ್ರೆಸ್ ಶಾಸಕ

ಇನ್ನು ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋಗಳೊಂದಿಗಿನ ಹೊಸ 8.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಕನೆಕ್ಟಿವಿಟಿ ಕಾರು ತಂತ್ರಜ್ಞಾನವನ್ನು ಹೊಂದಿದೆ. ಇದರೊಂದಿಗೆ ವೆಂಟಿಲೇಟಡ್ ಮುಂಭಾಗದ ಸೀಟುಗಳು, ಇನ್ಸ್ ಟ್ರೂಮೆಂಟ್ ಕ್ಲಸ್ಟರ್, 11-ಸ್ಪೀಕರ್ ಜೆಬಿಎಲ್ ಆಡಿಯೊ ಸಿಸ್ಟಂ, ಆಂಬಿಯೆಂಟ್ ಲೈಟಿಂಗ್ ಮತ್ತು ಇತರ ಫೀಚರ್ ಗಳನ್ನು ಒಳಗೊಂಡಿದೆ.

ಆಂಬ್ಯುಲೆನ್ಸ್‌ಗಳ ಕೊರತೆ ಹಿನ್ನೆಲೆಯಲ್ಲಿ ತನ್ನ ಐಷಾರಾಮಿ ಕಾರನ್ನು ನೀಡಿದ ಕಾಂಗ್ರೆಸ್ ಶಾಸಕ

ಫಾರ್ಚೂನರ್ ಫೇಸ್‌ಲಿಫ್ಟ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. ಈ ಎಸ್‍ಯುವಿ 2.7-ಲೀಟರ್ ಪೆಟ್ರೋಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳನ್ನು ಒಳಗೊಂಡಿದೆ. ಇದರಲ್ಲಿ 2.7-ಲೀಟರ್ ಪೆಟ್ರೋಲ್ ಎಂಜಿನ್ 166 ಬಿಹೆಚ್‍ಪಿ ಪವರ್ ಮತ್ತು 245 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದನ್ನು 5-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಆಂಬ್ಯುಲೆನ್ಸ್‌ಗಳ ಕೊರತೆ ಹಿನ್ನೆಲೆಯಲ್ಲಿ ತನ್ನ ಐಷಾರಾಮಿ ಕಾರನ್ನು ನೀಡಿದ ಕಾಂಗ್ರೆಸ್ ಶಾಸಕ

ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಹೊಂದಿಕೆಯಾದಾಗ ಡೀಸೆಲ್ ಎಂಜಿನ್ 177 ಬಿಹೆಚ್‍ಪಿ ಪವರ್ ಮತ್ತು 420 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಆರು-ಸ್ಪೀಡ್ ಟಾರ್ಕ್ ಕರ್ನವಾಟರ್ ಗೇರ್ ಬಾಕ್ಸ್ ಜೋಡಿಸಲಾದ ಯುನಿಟ್ 201 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

Most Read Articles

Kannada
English summary
Congress Politician Donates Gis Toyota Fortuner. Read In Kannada.
Story first published: Wednesday, May 19, 2021, 19:19 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X