ಗೊಂಬೆ ನಿವೇದಿತಾ ಗೌಡ ಹುಟ್ಟುಹಬ್ಬಕ್ಕೆ ದೊಡ್ಡ ಫಾರ್ಚುನರ್ ಕಾರ್ ಗಿಫ್ಟ್ ನೀಡಿದ ಚಂದನ್ ಶೆಟ್ಟಿ

ನಿವೇದಿತಾ ಗೌಡ ಟಿಕ್ ಟಾಕ್ ಮೂಲಕ ಗೊಂಬೆ ಎಂದೇ ಖ್ಯಾತಿ ಪಡೆದಿದ್ದಾರೆ. ನಂತರ ಕನ್ನಡ ಬಿಗ್ ಬಾಸ್ ಐದನೇ ಸೀಸನ್ ಸ್ಪರ್ಧಿಯಾಗಿ ಖ್ಯಾತಿಯನ್ನು ಪಡೆದರು. ನಿವೇದಿತಾ ಗೌಡ ಅವರು ತಮ್ಮ 25ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ವಿಶೇಷ ದಿನಕ್ಕೆ ಅವರ ಪತಿ ಚಂದನ್‌ ಶೆಟ್ಟಿ ದುಬಾರಿ ಬೆಲೆಯ ಐಷಾರಾಮಿ ಕಾರನ್ನು ಖರಿದೀಸಿದ್ದಾರೆ.

ಚಂದನ್‌ ಶೆಟ್ಟೆ ಹೊಸ ಕಾರಿನೊಂದಿಗಿನ ಚಿತ್ರವನ್ನು ಸೋಶಿಯಲ್‌ ಮೀಡಿಯಾದಲ್ಲಿ ಶೇಋ ಮಾಡಿದ್ದಾರೆ. ಈ ಚಿತ್ರವು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಚಂದನ್‌ ಶೆಟ್ಟಿ, ನಿವೇದಿತಾ ಗೌಡ, ಚಂದನ್‌ ಅವರ ತಾಯಿ ಹೊಸ ಕಾರನ್ನು ದೇವಸ್ಥಾನಕ್ಕೆ ತೆಗೆದುಕೊಂಡು ಹೋಗಿ ಪೂಜೆ ಮಾಡಿಸಿದ್ದಾರೆ. ಚಂದನ್‌ ಶೆಟ್ಟಿ ದಂಪತಿ ಬಳಿ ಹಲವು ದುಬಾರಿ ಕಾರುಗಳಿವೆ. ಇದೀಗ ಹೊಸದಾಗಿ ಖರೀದಿಸಿದ ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್‍ಯುವಿಯು ಇನ್ನೊಂದು ಸೇರ್ಪಡೆಯಾಗಿದೆ.

Chandan ShettyCar

ಹುಟ್ಟುಹಬ್ಬದ ಶುಭಾಶಯಗಳು. ಇಂದು ನೀನು ನಿನ್ನ ಜನ್ಮದಿನ ಆಚರಿಸುತ್ತಿರುವೆ, ನಿನಗೆ ಒಳ್ಳೆಯದಾಗಲಿ ಎಂದು ಬಯಸುವೆ. ನಾನು ನನ್ನ ಜೀವನದಲ್ಲಿ ಭೇಟಿ ಆಗಿರುವ ಅದ್ಭುತ, ಸುಂದರವಾದ ವ್ಯಕ್ತಿ ನೀನು. ನಿನ್ನನ್ನು ನನ್ನ ಜೀವನದಲ್ಲಿ ಪಡೆದಿರೋದಿಕ್ಕೆ ತುಂಬ ಪುಣ್ಯ ಮಾಡಿದ್ದೇನೆ ನಿನ್ನ ನಗು ನನ್ನ ಜೀವನವನ್ನು ಬೆಳಕಾಗಿಸುತ್ತದೆ, ನಿನ್ನ ನಗು ನನ್ನ ಹೃದಯಕ್ಕೆ ಸಂತೋಷ ನೀಡುವುದು. ನಿನ್ನ ಪ್ರೀತಿ ಜೀವನದಲ್ಲಿ ಎದುರಾಗುವ ಎಲ್ಲ ಸವಾಲುಗಳನ್ನು ಎದುರಿಸಲು ಶಕ್ತಿ ನೀಡುತ್ತದೆ

ಮುಂದುವರೆದು, ಈ ವಿಶೇಷ ದಿನ ನಾನು ನಿನಗೆ ತುಂಬ ಪ್ರೀತಿ ನೀಡ್ತಿನಿ. ನಾವು ಒಂದಾಗಿ ಕಳೆದ ಸಮಯವನ್ನೆಲ್ಲ ನೆನಪಿಸಿಕೊಂಡು ಸಂಭ್ರಮಿಸೋಣ. ನಿನ್ನ ಕನಸುಗಳು ಈಡೇರಲಿ, ಖುಷಿ, ನಗುವಿನ ಜೊತೆ ಬಾಳು. ನನ್ನ ಸುಂದರ ಪತ್ನಿಗೆ ಹುಟ್ಟುಹಬ್ಬದ ಶುಭಾಶಯಗಳು. ಪದಗಳಲ್ಲಿ ಹೇಳಲಾಗದಷ್ಟು ನಾನು ನಿನ್ನ ಪ್ರೀತಿಸುವೆ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಥ್ಯಾಂಕ್ಯೂ 'ಐ ಲವ್ ಯೂ' ಎಂದು ನಿವೇದಿತಾ ಗೌಡ ಕಾಮೆಂಟ್ ಮೂಲಕ ರಿಯಾಕ್ಟ್ ಮಾಡಿದ್ದಾರೆ.

ಚಂದನ್‌ ಶೆಟ್ಟಿ ಖರೀದಿಸಿದ ಕಾರ್ ಟೊಯೊಟಾ ಫಾರ್ಚುನರ್ ಲೆಜೆಂಡರ್ ಆಗಿದೆ. ಈ ದೊಡ್ಡ ಪುಲ್ ಸೈಜ್ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಟೊಯೊಟಾ ಫಾರ್ಚುನರ್ ಲೆಜೆಂಡರ್ ಎಸ್‍ಯುವಿಯು 4X4 ವೆರಿಯೆಂಟ್ ಮತ್ತು 4X2 ವೆರಿಯೆಂಟ್ ಎಂಬ ಎರಡೂ ರೂಪಾಂತರಗಳಲ್ಲಿ ಲಭ್ಯವಿದೆ. ಡ್ಯುಯಲ್ ಟೋನ್ ಪರ್ಲ್ ವೈಟ್ ಜೊತೆಗೆ ಬ್ಲಾಕ್ ರೂಫ್ ಕಲರ್ ಸ್ಕೀಮ್ ನಲ್ಲಿ ನೀಡಲಾಗುತ್ತಿದೆ.

ಟೊಯೊಟಾ ಫಾರ್ಚುನರ್ ಲೆಜೆಂಡರ್ 4X2 ಮಾದರಿಗೆ ಹೋಲಿಸಿದರೆ 4X4 ವೆರಿಯೆಂಟ್ ಯಾವುದೇ ವಿಶೇಷ ಬಾಹ್ಯ ಬಿಟ್‌ಗಳನ್ನು ಪಡೆಯುವುದಿಲ್ಲ. ಫಾರ್ಚುನರ್ ಲೆಜೆಂಡರ್ ಎಸ್‍ಯುವಿಯು ಹೆಚ್ಚು ಅಗ್ರೇಸಿವ್ ಮತ್ತು ಸ್ಪೋರ್ಟಿಯರ್ ವಿನ್ಯಾಸವನ್ನು ಹೊಂದಿದೆ. ಈ ಟೊಯೊಟಾ ಲೆಜೆಂಡರ್ ಮರುವಿನ್ಯಾಸಗೊಳಿಸಲಾದ ಹೆಡ್‌ಲ್ಯಾಂಪ್ ಕ್ಲಸ್ಟರ್ ಅನ್ನು ಹೊಂದಿದೆ. ಡಿಆರ್‌ಎಲ್‌ಗಳು ಹೊಂದಿದೆ. ಇದನ್ನು ಟೊಯೊಟಾ ವಾಟರ್ ಫಾಲ್ ಡಿಆರ್‌ಎಲ್‌ಗಳು ಎಂದು ಕರೆಯಲಾಗುತ್ತದೆ.

ಈ ಎಸ್‍ಯುವಿ ಹೆಡ್‌ಲ್ಯಾಂಪ್‌ಗಳ ಕೆಳಗೆ ಫಾಗ್ ಲ್ಯಾಂಪ್ ಗಳಿವೆ. ಇನ್ನು ಡೈನಾಮಿಕ್ ಟರ್ನ್ ಸಿಗ್ನಲ್ ಇಂಡೀಕೆಟರ್ ಗಳಿವೆ. ಫಾರ್ಚೂನರ್ ಲೆಜೆಂಡರ್ ಸುತ್ತಲೂ ಎಲ್ಇಡಿ ಲೈಟಿಂಗ್ ಹೊಂದಿದೆ. ಇನ್ನು ಇದರ ಸೈಡ್ ಪ್ರೊಫೈಲ್‌ ಬಗ್ಗೆ ಹೇಳುವುದಾದರೆ, ಇದರಲ್ಲಿ 18 ಇಂಚಿನ ಮೆಷಿನ್-ಕಟ್ ಅಲಾಯ್ ವ್ಹೀಲ್‌ಗಳನ್ನು ಅಳವಡಿಸಲಾಗಿದೆ. ಇನ್ನು ಡೋರಿನ ಹ್ಯಾಂಡಲ್‌ಗಳಲ್ಲಿ ಕೆಲವು ಕ್ರೋಮ್ ಇದೆ ಮತ್ತು ಉದ್ದಕ್ಕೂ ಸ್ಟ್ರಿಪ್ ಅನ್ನು ಸಹ ಕ್ರೋಮ್‌ನಿಂದ ಮಾಡಲಾಗಿದೆ.

ಈ ಟೊಯೊಟಾ ಲೆಜೆಂಡರ್ ಮಾದರಿಯ ಹಿಂಭಾಗದಲ್ಲಿ ನಯವಾದ-ಕಾಣುವ ಎಲ್ಇಡಿ ಟೈಲ್ ಲ್ಯಾಂಪ್ ಗಳನ್ನು ಅಳವಡಿಸಲಾಗಿದೆ. ಅದನ್ನು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ. ಇದು ಬ್ಲ್ಯಾಕ್ ಸ್ಟ್ರಿಪ್ ಸಹ ಪಡೆಯುತ್ತದೆ, ಅದು ಎರಡೂ ಟೈಲ್ ಲೈಟ್‌ಗಳನ್ನು ಅದರ ಉದ್ದಕ್ಕೂ 'ಫೋರ್ಟೂನರ್' ಬ್ರ್ಯಾಂಡಿಂಗ್‌ನೊಂದಿಗೆ ಸಂಪರ್ಕಗೊಂಡಿದೆ, ಲೆಜೆಂಡರ್ ವೆರಿಯೆಂಟ್ ಒಳಭಾಗದಲ್ಲಿಯು ಕೆಲವು ಅತ್ಯಾಧುನಿಕ ಫೀಚರ್ ಗಳನ್ನು ಒಳಗೊಂಡಿದೆ.

ಫಾರ್ಚೂನರ್ ಲೆಜೆಂಡರ್ ಇಂಟಿರಿಯರ್ ಅಥವಾ ಒಳಭಾಗದಲ್ಲಿ ಡ್ಯುಯಲ್-ಟೋನ್ (ಬ್ಲ್ಯಾಕ್ ಮತ್ತು ಮರೂನ್) ಅಂಶಗಳನ್ನು ಹೊಂದಿದೆ, ಈ ಟೊಯೊಟಾ ಲೆಜೆಂಡರ್ ಮಾದರಿಯ ಹಿಂಭಾಗದಲ್ಲಿ ನಯವಾದ-ಕಾಣುವ ಎಲ್ಇಡಿ ಟೈಲ್ ಲ್ಯಾಂಪ್ ಗಳನ್ನು ಅಳವಡಿಸಲಾಗಿದೆ. ಅದನ್ನು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ. ಇದು ಬ್ಲ್ಯಾಕ್ ಸ್ಟ್ರಿಪ್ ಸಹ ಪಡೆಯುತ್ತದೆ, ಅದು ಎರಡೂ ಟೈಲ್ ಲೈಟ್‌ಗಳನ್ನು ಅದರ ಉದ್ದಕ್ಕೂ 'ಫೋರ್ಟೂನರ್' ಬ್ರ್ಯಾಂಡಿಂಗ್‌ನೊಂದಿಗೆ ಸಂಪರ್ಕಗೊಂಡಿದೆ,

More from DriveSpark

Article Published On: Friday, May 12, 2023, 17:57 [IST]
English summary
Chandan shetty buys toyota fortuner legender on niveditha gowda birthday details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+