'ಸೈನಿಕನ ಚಕ್ರವ್ಯೂಹ ಭೇದಿಸಲು ಅಭಿಮನ್ಯು ರೆಡಿ'.. ಬಿಡದಿಯಲ್ಲೇ ತಯಾರಿಸುವ ಈ ಲಕ್ಸುರಿ ಕಾರುಗಳ ಒಡೆಯ!
ರಾಜ್ಯದಲ್ಲಿ ವಿಧಾನಸಭಾ ಉಪ ಚುನಾವಣೆ ಕಣ ರಂಗೇರಿದೆ. ಚನ್ನಪಟ್ಟಣ (Channapatna), ಶಿಗ್ಗಾವಿ (Shiggaon) ಹಾಗೂ ಸಂಡೂರು (Sandur) ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಶುಕ್ರವಾರ ನಾಮಪತ್ರ ಸಲ್ಲಿಕೆಗೆ ಕಡೆ ದಿನವಾಗಿತ್ತು. ಅಭ್ಯರ್ಥಿಗಳು ಕೂಡ ಬಹಳ ಉತ್ಸಾಹದಿಂದ ಉಮೇದುವಾರಿಕೆ ಸಲ್ಲಿಸಿದರು. ಅದರಲ್ಲೂ ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರವವಾಗಿದೆ. ಕಾಂಗ್ರೆಸ್‌ನಿಂದ ಸಿ.ಪಿ.ಯೋಗೀಶ್ವರ್ (C.P.Yogeshwara) ಹಾಗೂ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅಖಾಡದಲ್ಲಿದ್ದಾರೆ.
ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್ ಕುಮಾರಸ್ವಾಮಿ ಅವರು, ನಾಮಪತ್ರ ಸಲ್ಲಿಕೆ ವೇಳೆಯಲ್ಲಿ ತಮ್ಮ ಆಸ್ತಿ ವಿವರಗಳನ್ನು ಘೋಷಿಸಿದ್ದಾರೆ. ಅವರು ಬರೋಬ್ಬರಿ ರೂ.113 ಕೋಟಿ ಮೌಲ್ಯದ ಆಸ್ತಿಯ ಒಡೆಯರಾಗಿದ್ದಾರೆ. ರೂ.78.15 ಕೋಟಿ ಚರಾಸ್ತಿ ಹಾಗೂ ರೂ.29.34 ಕೋಟಿ ಸ್ಥಿರಾಸ್ತಿ ಇದ್ದು, ರೂ.70.44 ಕೋಟಿ ಸಾಲವಿದೆ. ಪತ್ನಿ ರೇವತಿ ಅವರು ರೂ.5.49 ಕೋಟಿ ಚರಾಸ್ತಿ ಮತ್ತು ರೂ.43 ಲಕ್ಷ ಮೌಲ್ಯದ ಸ್ಥಿರಾಸ್ತಿಯನ್ನು ಹೊಂದಿದ್ದಾರೆ.

ನಿಖಿಲ್ ಕುಮಾರಸ್ವಾಮಿ ತಮ್ಮ ಬಳಿ, 1 ಟೊಯೊಟಾ ಇನ್ನೋವಾ ಕ್ರಿಸ್ಟಾ, 1 ಇನ್ನೋವಾ ಹೈಕ್ರಾಸ್, 1 ರೇಂಜ್ ರೋವರ್ ಕಾರು ಹಾಗೂ 2 ಕ್ಯಾರಾವ್ಯಾನ್‌ಗಳು ಸಹ ಇದೆ ಎಂದು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ವಿವಿಧ ಮಾಧ್ಯಮಗಳು ವರದಿ ಮಾಡಿವೆ.
ಟೊಯೊಟಾ ಇನ್ನೋವಾ ಕ್ರಿಸ್ಟಾ (Toyota Innova Crysta) ವಿಶೇಷತೆ ಬಗ್ಗೆ ಹೇಳುವುದಾದರೆ, ಇದೊಂದು ಜನಪ್ರಿಯ ಎಂಪಿವಿಯಾಗಿದೆ. ರಾಮನಗರದ ಬಿಡದಿಯಲ್ಲಿ ತಯಾರಿಸಿರುವ ಈ ಕಾರು, ರೂ.19.99 ರಿಂದ ರೂ.26.55 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಜಿಎಕ್ಸ್, ಜಿಎಕ್ಸ್ ಪ್ಲಸ್, ವಿಎಕ್ಸ್ ಹಾಗೂ ಝಡ್ಎಕ್ಸ್ ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ.

ಈ ಇನ್ನೋವಾ ಕ್ರಿಸ್ಟಾ 2.4-ಲೀಟರ್ ಡಿಸೇಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 150 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 343 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದ್ದು, 7/ 8 ಆಸನಗಳನ್ನು ಒಳಗೊಂಡಿದೆ.
ನೂತನ ಇನ್ನೋವಾ ಕ್ರಿಸ್ಟಾ ಎಂಪಿವಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು), ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು, ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 7- ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಎಂಪಿವಿ ಕುರಿತಂತೆ ಮಾತನಾಡುವುದಾದರೆ, ಇದು ರೂ.19.77 ಲಕ್ಷದಿಂದ ರೂ.30.98 ಲಕ್ಷ (ಎಕ್ಸ್ ಶೋರೂಂ - ಬೆಂಗಳೂರು) ಬೆಲೆಯನ್ನು ಹೊಂದಿದೆ. 2.0-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 2.0-ಲೀಟರ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 23.24 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಈ ಇನ್ನೋವಾ ಹೈಕ್ರಾಸ್ ಎಂಪಿವಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.1-ಇಂಚು), ಡಿಜಿಟಲ್ ಡ್ರೈವರ್ಸ್ ಡಿಸ್ಪ್ಲೇ, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಪನೋರಮಿಕ್ ಸನ್‌ರೂಫ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿದೆ. 6-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications