ಗಾಯಾಳುಗಳಿಗೆ ಪರಿಹಾರ ನೀಡಲು ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶಿಸಿದ ಹೈಕೋರ್ಟ್

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‍‍ಹೆಚ್‍ಎ‍ಐ) ಹೆದ್ದಾರಿಗಳಲ್ಲಿ ಸಂಭವಿಸುವ ಅಪಘಾತಗಳಿಗೆ ಜವಾಬ್ದಾರಿಯನ್ನು ಹೊರಲು ಮುಂದಾಗಿದೆ. ಇದರಿಂದಾಗಿ ಹೆದ್ದಾರಿಗಳಲ್ಲಿ ಸಂಭವಿಸುವ ರಸ್ತೆ ಅಪಘಾತಗಳಲ್ಲಿ ತೊಂದರೆಗೊಳಗಾಗುವವರಿಗೆ ಪರಿಹಾರ ನೀಡಲಿದೆ.

ಗಾಯಾಳುಗಳಿಗೆ ಪರಿಹಾರ ನೀಡಲು ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶಿಸಿದ ಹೈಕೋರ್ಟ್

ಇತ್ತೀಚಿಗಷ್ಟೇ ಕೇರಳದ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಟ್ರಕ್ ನಡುವೆ ತಮಿಳುನಾಡಿನಲ್ಲಿ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಬಂದ ಕಂಟೇನರ್ ಟ್ರಕ್ ಬಸ್ಸಿಗೆ ಗುದ್ದಿತ್ತು. ಇದರಿಂದಾಗಿ 21 ಜನರು ದುರ್ಮರಣಕ್ಕೀಡಾಗಿದ್ದರು.

ಗಾಯಾಳುಗಳಿಗೆ ಪರಿಹಾರ ನೀಡಲು ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶಿಸಿದ ಹೈಕೋರ್ಟ್

ಜೊತೆಗೆ ಬಸ್ಸಿನಲ್ಲಿದ್ದ ಇತರರು ಗಾಯಗೊಂಡಿದ್ದರು. ಟ್ರಕ್ ಚಾಲಕನು ನಿದ್ದೆ ಮಂಪರಿನಲ್ಲಿ ಅತಿ ವೇಗವಾಗಿ ಟ್ರಕ್ ಚಾಲನೆ ಮಾಡಿದ ಕಾರಣಕ್ಕೆ ಟ್ರಕ್ ನಿಯಂತ್ರಣಕ್ಕೆ ಸಿಗದೇ ಅಪಘಾತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ಬಸ್ ಚಾಲಕನದು ಯಾವುದೇ ರೀತಿಯ ತಪ್ಪುಗಳಿರಲಿಲ್ಲ.

ಗಾಯಾಳುಗಳಿಗೆ ಪರಿಹಾರ ನೀಡಲು ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶಿಸಿದ ಹೈಕೋರ್ಟ್

ಈ ಘಟನೆಯಲ್ಲಿ ಬಸ್ಸಿನ ಬಲಭಾಗವು ಪೂರ್ಣವಾಗಿ ನಜ್ಜುಗುಜ್ಜಾಗಿತ್ತು. ಸ್ಥಳದಲ್ಲಿ 16 ಜನರು ಮೃತಪಟ್ಟರೆ, ಆಸ್ಪತ್ರೆಯಲ್ಲಿ 5 ಜನರು ಸಾವನ್ನಪ್ಪಿದರು. ಈ ದುರ್ಘಟನೆಯಲ್ಲಿ ಮೃತಪಟ್ಟವರಲ್ಲಿ ಬಹುತೇಕ ಜನರು ಕೇರಳಕ್ಕೆ ಸೇರಿದವರು.

ಗಾಯಾಳುಗಳಿಗೆ ಪರಿಹಾರ ನೀಡಲು ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶಿಸಿದ ಹೈಕೋರ್ಟ್

ಈ ಅಪಘಾತ ಸಂಭವಿಸಿದ್ದು ತಮಿಳುನಾಡಿನ ಕೊಯಮತ್ತೂರಿನ ಬಳಿಯಿರುವ ಅವಿನಾಶಿ ಎಂಬ ಸ್ಥಳದಲ್ಲಿ. ಈ ಅಪಘಾತದಿಂದ ಕೇರಳಗಿಂತ ತಮಿಳುನಾಡಿನ ಮೇಲೆ ಹೆಚ್ಚಿನ ಪರಿಣಾಮ ಉಂಟಾಗಿದೆ. ಈ ಘಟನೆ ಸಂಭವಿಸಿದ್ದು ಬೆಳಗಿನ ಜಾವ 3 ಗಂಟೆಯ ಸಮಯದಲ್ಲಿ.

ಗಾಯಾಳುಗಳಿಗೆ ಪರಿಹಾರ ನೀಡಲು ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶಿಸಿದ ಹೈಕೋರ್ಟ್

ಈ ಘಟನೆಯಲ್ಲಿ ಟ್ರಕ್ ಚಾಲಕನ ತಪ್ಪಿರುವುದು ಕಂಡು ಬಂದರೂ ಬಹುತೇಕ ಅಪಘಾತಗಳು ರಸ್ತೆಗಳ ನಿರ್ವಹಣೆಯ ಕೊರತೆಯಿಂದಾಗಿ ಸಂಭವಿಸುತ್ತವೆ. ಇದರಿಂದಾಗಿ ಈ ಅಪಘಾತ ಮಾತ್ರವಲ್ಲದೇ ಭಾರತದ ಅನೇಕ ಭಾಗಗಳಲ್ಲಿ ಅಪಘಾತಗಳು ಸಂಭವಿಸುತ್ತಿವೆ.

ಗಾಯಾಳುಗಳಿಗೆ ಪರಿಹಾರ ನೀಡಲು ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶಿಸಿದ ಹೈಕೋರ್ಟ್

ಹೆದ್ದಾರಿಗಳನ್ನು ನಿರ್ವಹಣೆ ಮಾಡುವುದು ಹೆದ್ದಾರಿ ಪ್ರಾಧಿಕಾರದ ಕೆಲಸವಾಗಿದೆ. ಈ ಹಿನ್ನೆಲೆಯಲ್ಲಿ ಮದ್ರಾಸ್ ಹೈ ಕೋರ್ಟ್ ಹೆದ್ದಾರಿಯಲ್ಲಿ ನಡೆಯುವ ಅಪಘಾತಗಳಲ್ಲಿ ಗಾಯಗೊಳ್ಳುವವರಿಗೆ ಸರಿಯಾದ ಪರಿಹಾರವನ್ನು ನೀಡಬೇಕೆಂದು ಆದೇಶಿಸಿದೆ.

ಗಾಯಾಳುಗಳಿಗೆ ಪರಿಹಾರ ನೀಡಲು ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶಿಸಿದ ಹೈಕೋರ್ಟ್

ಇದೇ ವೇಳೆ ಎಲ್ಲಾ ರಸ್ತೆಗಳನ್ನು ಗುಣಮಟ್ಟಕ್ಕೆ ತಕ್ಕಂತೆ ಸರಿಯಾಗಿ ನಿರ್ಮಿಸಿ ನಿರ್ವಹಣೆ ಮಾಡಬೇಕೆಂದು ಸಹ ಆದೇಶಿಸಿದೆ. ನ್ಯಾ. ಎಂ ಸತ್ಯನಾರಾಯಣನ್ ಹಾಗೂ ನ್ಯಾ. ಹೇಮದೆಲಾ ಅವರಿದ್ದ ನ್ಯಾಯಪೀಠವು ಈ ಆದೇಶವನ್ನು ನೀಡಿದೆ.

ಗಾಯಾಳುಗಳಿಗೆ ಪರಿಹಾರ ನೀಡಲು ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶಿಸಿದ ಹೈಕೋರ್ಟ್

ರಾಷ್ಟ್ರೀಯ ಹೆದ್ದಾರಿ 4ರಲ್ಲಿರುವ ಮದುರಾವಯಲ್ ಹಾಗೂ ವಲಾಜಾಬಾದ್ ನಡುವಿನ ರಸ್ತೆಯು ಪೂರ್ತಿಯಾಗಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ನ್ಯಾಯಪೀಠವು ಈ ಆದೇಶವನ್ನು ನೀಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪರವಾಗಿ ಅಸಿಸ್ಟೆಂಟ್ ಸಾಲಿಸಿಟರ್ ಜನರಲ್ ಜಿ ಕಾರ್ತಿಕೇಯನ್‍‍ರವರು ಹಾಜರಾಗಿದ್ದರು.

ಗಾಯಾಳುಗಳಿಗೆ ಪರಿಹಾರ ನೀಡಲು ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶಿಸಿದ ಹೈಕೋರ್ಟ್

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಹೆದ್ದಾರಿಗಳನ್ನು ಅಭಿವೃದ್ಧಿಪಡಿಸಲು ಕ್ರಮಗಳನ್ನು ಕೈಗೊಂಡಿದೆ ಎಂಬ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಕಾಂಟ್ರಾಕ್ಟರ್‍‍ಗಳಿಂದ ವಿಳಂಬವಾಗುತ್ತಿದೆ ಎಂಬ ಅಂಶವನ್ನು ನ್ಯಾಯಾಲಯದ ಗಮನಕ್ಕೆ ತಂದರು. ನ್ಯಾಯಾಲಯವು ಯಾವ ಕಾರಣಕ್ಕೆ ವಿಳಂಬವಾಗುತ್ತಿದೆ ಎಂದು ಪ್ರಶ್ನಿಸಿತು.

ಗಾಯಾಳುಗಳಿಗೆ ಪರಿಹಾರ ನೀಡಲು ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶಿಸಿದ ಹೈಕೋರ್ಟ್

ಹೆದ್ದಾರಿಯನ್ನು ಅಭಿವೃದ್ಧಿಪಡಿಸುವಾಗ ವಿವಿಧ ಇಲಾಖೆಗಳಿಂದ ಅನುಮತಿಯನ್ನು ಪಡೆಯಬೇಕಿರುವ ಕಾರಣಕ್ಕೆ ವಿಳಂಬವಾಗುತ್ತಿದೆ ಎಂಬ ಅಂಶವನ್ನು ನ್ಯಾಯಾಲಯದ ಗಮನಕ್ಕೆ ತಂದಾಗ ಎಲ್ಲಾ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಸಿಂಗಲ್ ವಿಂಡೊ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದೆಂದು ಕಾರ್ತಿಕೇಯನ್‍‍ರವರು ತಿಳಿಸಿದರು.

ಗಾಯಾಳುಗಳಿಗೆ ಪರಿಹಾರ ನೀಡಲು ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶಿಸಿದ ಹೈಕೋರ್ಟ್

ಇದಕ್ಕೆ ಹೆಚ್ಚು ಸಮಯ ಹಿಡಿಯುವ ಕಾರಣ ಈ ವಿಷಯವನ್ನು ತಮಿಳುನಾಡು ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರುವಂತೆ ಸೂಚಿಸಲಾಯಿತು. ಮದ್ರಾಸ್ ಹೈಕೋರ್ಟ್ ಹದಗೆಟ್ಟ ರಸ್ತೆಗಳಿಂದ ಯಾವುದೇ ತೊಂದರೆಯಾದರೆ ಅದಕ್ಕೆ ಹೆದ್ದಾರಿ ಪ್ರಾಧಿಕಾರವನ್ನು ಹೊಣೆಯಾಗಿಸಲಾಗುವುದೆಂದು ಆದೇಶಿಸಿದೆ.

ಗಾಯಾಳುಗಳಿಗೆ ಪರಿಹಾರ ನೀಡಲು ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶಿಸಿದ ಹೈಕೋರ್ಟ್

ಈಗಾಗಲೇ ವಾಹನ ಸವಾರರು ಹಾಗೂ ಸಾರ್ವಜನಿಕರು ಹದಗೆಟ್ಟ ರಸ್ತೆ ಹಾಗೂ ಟೋಲ್ ಅವ್ಯವಸ್ಥೆ ಬಗ್ಗೆ ಹಲವು ದೂರುಗಳನ್ನು ನೀಡಿದ್ದಾರೆ. ಆದರೆ ಎನ್‍‍ಹೆಚ್‍ಎ‍ಐ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಮದ್ರಾಸ್ ಹೈಕೋರ್ಟಿನ ಈ ಆದೇಶವನ್ನು ಸಾರ್ವಜನಿಕರು ಸ್ವಾಗತಿಸಿದ್ದಾರೆ.

Most Read Articles

Kannada
English summary
NHAI liable to pay compensation to victims of accidents. Read in Kannada.
Story first published: Thursday, February 27, 2020, 15:28 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X