ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿರ್ಬಂಧ ಜಾರಿಗೊಳಿಸಿದ ಪೊಲೀಸರು

ಕರೋನಾ ವೈರಸ್ ಎರಡನೇ ಅಲೆ ದೇಶಾದ್ಯಂತ ವೇಗವಾಗಿ ಹರಡುತ್ತಿದೆ. ಕರೋನಾ ವೈರಸ್ ಹರಡುವುದನ್ನು ತಡೆಯಲು ದೇಶದ ವಿವಿಧ ಭಾಗಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಿದ್ದರೆ, ಕೆಲವು ಪ್ರದೇಶಗಳಲ್ಲಿ ಭಾಗಶಃ ಲಾಕ್‌ಡೌನ್ ಜಾರಿಗೊಳಿಸಲಾಗಿದೆ.

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿರ್ಬಂಧ ಜಾರಿಗೊಳಿಸಿದ ಪೊಲೀಸರು

ಲಾಕ್‌ಡೌನ್ ಜಾರಿಗೊಳಿಸಿದ್ದರಿಂದ ವೈರಸ್‌ನ ಹರಡುವಿಕೆ ಪ್ರಮಾಣ ಕಡಿಮೆಯಾಗಿದೆ ಗಮನಾರ್ಹ. ಇದು ಜನರಿಗೆ ಕೊಂಚ ಸಮಾಧಾನ ತರುವ ವಿಷಯವಾದರೂ ಈ ಮಹಾಮಾರಿ ವೈರಸ್'ನಿಂದ ಸಾವನ್ನಪ್ಪುವವರ ಪ್ರಮಾಣ ಮೊದಲಿಗಿಂತ ಹಲವು ಪಟ್ಟು ಹೆಚ್ಚಾಗಿದೆ ಎಂಬ ವಿಷಯ ಕಳವಳಕಾರಿಯಾಗಿದೆ.

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿರ್ಬಂಧ ಜಾರಿಗೊಳಿಸಿದ ಪೊಲೀಸರು

ಈ ಬಿಕ್ಕಟ್ಟನ್ನು ಎದುರಿಸಲು ತಮಿಳುನಾಡಿನಾದ್ಯಂತ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಮೇ 24ರಂದು ಕೊನೆಗೊಳ್ಳಬೇಕಿದ್ದ ಲಾಕ್‌ಡೌನ್ ಅನ್ನು ಇನ್ನೂ ಒಂದು ವಾರ ವಿಸ್ತರಿಸಲಾಗಿದೆ.

MOST READ:ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್‌ಟಿಒ ಫಾರಂಗಳಿವು!

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿರ್ಬಂಧ ಜಾರಿಗೊಳಿಸಿದ ಪೊಲೀಸರು

ವೈದ್ಯಕೀಯ ವೃತ್ತಿಪರರೊಂದಿಗಿನ ಸಭೆಯು ಲಾಕ್‌ಡೌನ್ ಅನ್ನು ಇನ್ನೂ ಎರಡು ವಾರಗಳವರೆಗೆ ವಿಸ್ತರಿಸುವಂತೆ ಸೂಚಿಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಈಗ ಚೆನ್ನೈ ಪೊಲೀಸರು ದ್ವಿಚಕ್ರ ವಾಹನಗಳಲ್ಲಿ ಹೊರ ಬರುವವರಿಗೆ ಹೊಸ ನಿರ್ಬಂಧಗಳನ್ನು ವಿಧಿಸುತ್ತಿರುವ ಬಗ್ಗೆ ವರದಿಯಾಗಿದೆ.

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿರ್ಬಂಧ ಜಾರಿಗೊಳಿಸಿದ ಪೊಲೀಸರು

ದ್ವಿಚಕ್ರ ವಾಹನಗಳಲ್ಲಿ ಒಬ್ಬರಿಗಿಂತ ಹೆಚ್ಚು ವ್ಯಕ್ತಿಗಳು ಪ್ರಯಾಣಿಸುವಂತಿಲ್ಲವೆಂದು ಚೆನ್ನೈ ಮೆಟ್ರೋಪಾಲಿಟನ್ ಪೊಲೀಸ್ ಮೂಲಗಳು ತಿಳಿಸಿವೆ. ಒಂದೇ ಕುಟುಂಬದ ಇಬ್ಬರು ಸದಸ್ಯರು ಸಹ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಂತಿಲ್ಲ ಎಂದು ಹೇಳಲಾಗಿದೆ.

MOST READ:ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿರ್ಬಂಧ ಜಾರಿಗೊಳಿಸಿದ ಪೊಲೀಸರು

ತಾಯಿ, ತಂದೆ, ಸಹೋದರ, ಸಹೋದರಿ ಯಾರೇ ಆಗಲಿ ದ್ವಿಚಕ್ರ ವಾಹನದಲ್ಲಿ ಇಬ್ಬರು ಪ್ರಯಾಣಿಸಬಾರದು ಎಂದು ಚೆನ್ನೈ ಪೊಲೀಸರು ಹೇಳಿದ್ದಾರೆ. ಇದೇ ವೇಳೆ ದ್ವಿಚಕ್ರ ವಾಹನಗಳಲ್ಲಿ ಹೊರಬರುವವರು ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಬರಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿರ್ಬಂಧ ಜಾರಿಗೊಳಿಸಿದ ಪೊಲೀಸರು

ಒಬ್ಬನೇ ವ್ಯಕ್ತಿ ವಿನಾ ಕಾರಣ ದ್ವಿಚಕ್ರ ವಾಹನದಲ್ಲಿ ಹೊರ ಬಂದರೆ ಆತನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. ವಾಹನ ಮುಟ್ಟುಗೋಲು ಅಥವಾ ಗರಿಷ್ಠ ದಂಡದಂತಹ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

MOST READ:10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿರ್ಬಂಧ ಜಾರಿಗೊಳಿಸಿದ ಪೊಲೀಸರು

ಹೊರ ಹೋಗುವ ಪ್ರಯಾಣಿಕರ ಅನುಕೂಲಕ್ಕಾಗಿ ಇಂದು ಮತ್ತು ನಾಳೆ ಖಾಸಗಿ ಹಾಗೂ ಸರ್ಕಾರಿ ಬಸ್‌ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ವರದಿಯಾಗಿದೆ. ಇದರ ಜೊತೆಗೆ ಇಂದು ಮತ್ತು ನಾಳೆ ಅಂಗಡಿಗಳನ್ನು ಹೆಚ್ಚುವರಿ ಅವಧಿಗೆ ತೆರೆಯಲು ಅವಕಾಶ ನೀಡಲಾಗಿದೆ.

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿರ್ಬಂಧ ಜಾರಿಗೊಳಿಸಿದ ಪೊಲೀಸರು

ಇದಲ್ಲದೆ ಅಸ್ತಿತ್ವದಲ್ಲಿರುವ ಹೊಸ ಇ-ನೋಂದಣಿ ವ್ಯವಸ್ಥೆಯನ್ನು ರದ್ದುಗೊಳಿಸಲು ಹಾಗೂ ಇ-ಪಾಸ್ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ವರದಿಗಳಾಗಿವೆ.

MOST READ:ವರ್ಷಗಳ ಕಾಲ ಉಪ್ಪು ನೀರಿನಲ್ಲಿದ್ದರೂ ಹಡಗುಗಳ ಆಂಕರ್‌ಗಳಿಗೆ ತುಕ್ಕು ಹಿಡಿಯದಿರಲು ಕಾರಣಗಳಿವು

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿರ್ಬಂಧ ಜಾರಿಗೊಳಿಸಿದ ಪೊಲೀಸರು

ಕರೋನಾ ವೈರಸ್ ಹರಡುವುದನ್ನು ಸೋಂಕು ಹರಡುವಿಕೆಯನ್ನು ಕಡಿಮೆ ಮಾಡಲು ಮತ್ತಷ್ಟು ಕಠಿಣ ಲಾಕ್‌ಡೌನ್ ನಿಯಮಗಳನ್ನು ಜಾರಿಗೆ ತರಲು ತಮಿಳುನಾಡು ಸರ್ಕಾರವು ನಿರ್ಧರಿಸಿದೆ.

Most Read Articles

Kannada
English summary
Chennai police brings new guidelines for two wheelers. Read in Kannada.
Story first published: Saturday, May 22, 2021, 18:38 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X