ಇಷ್ಟು ಸಣ್ಣ ವಯಸ್ಸಿನಲ್ಲಿ ಇಷ್ಟು ದೊಡ್ಡ ಕಾರು ಖರೀದಿಸಿದ ಬಾಲಕಿ: ನೆಟ್ಟಿಗರು ಹೇಳಿದ್ದೇನು ಗೊತ್ತಾ?

ಮಲಯಾಳಂ ಸ್ಟಾರ್ ಹೀರೋ ಉನ್ನಿ ಮುಕುಂದನ್ ಅವರ ಇತ್ತೀಚಿನ ಚಿತ್ರ ಮಲ್ಲಿಕಾಪುರಂ ಸೂಪರ್ ಹಿಟ್ ಆಗಿದೆ. ಈ ಚಿತ್ರದಲ್ಲಿ ಬಾಲ ಕಲಾವಿದೆ ದೇವಾನಂದ (Devenanda) ಪ್ರಮುಖ ಪಾತ್ರ ನಿರ್ವಹಿಸಿ ಮಿಂಚಿದ್ದಾರೆ. ಈ ಬಾಲನಟಿ ಹಲವಾರು ಮಲಯಾಳಂ ಚಿತ್ರಗಳಲ್ಲಿ ಬಾಲನಟಿಯಾಗಿ ಕಾಣಿಸಿಕೊಂಡರು. ಈ ಪುಟ್ಟ ಪ್ರತಿಭೆ ಈ ಚಿಕ್ಕ ವಯಸ್ಸಿನಲ್ಲೇ ಅನೇಕ ಅಭಿಮಾನಿಗಳನ್ನು ಗಳಿಸಿದ್ದಾಳೆ. ಇದೀಗ ಈ ಬಾಲ ಕಲಾವಿದೆ ದೇವಾನಂದ ಅವರು ಹೊಸ ದುಬಾರಿ ಕಾರನ್ನು ಖರೀದಿಸಿದ್ದಾರೆ. ಇವರು ಕಾರು ಖರೀದಿಸಿದ ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಆಗಿದೆ.

ಕಿಡ್ ಸ್ಟಾರ್ ದೇವಾನಂದ ಅವರು ತಮ್ಮ ಹುಟ್ಟುಹಬ್ಬಕ್ಕೆ ದುಬಾರಿ ಟೊಯೊಟಾ ಇನ್ನೋವಾ ಹೈಕ್ರಾಸ್ ಕಾರನ್ನು ಖರೀದಿಸಿದ್ದಾರೆ. ಹೊಸ ವಾಹನ ಖರೀದಿಸಿದ ಸಂತಸವನ್ನು ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿ ಶೇರ್ ಮಾಡಿದ್ದಾರೆ. ಈ ಪೋಸ್ಟ್ ಸಖತ್ ವೈರಲ್ ಆಗಿದ್ದು, ನೆಟ್ಟಿಗರು ಮತ್ತು ಹಲವು ನಟ, ನಟಿಯರು ಶುಭಾಶಯ ಕೋರಿ ಕಾಮೆಂಟ್ ಮಾಡಿದ್ದಾರೆ. ನೆಟ್ಟಿಗರು ಈ ಬಾಲನಟಿಯ ಸಾಧನೆಯ ಬಗ್ಗೆ ಕೊಂಡಾಡಿದ್ದಾರೆ.

Devanandha Buys Toyota Innova Hycross

ಈ ಬಾಲನಟಿ ಪೋಷಕರೊಂದಿಗೆ ತಮ್ಮ ಹೊಸ ಕಾರನ್ನು ವಿತರಣೆ ಪಡೆದುಕೊಂಡಿದ್ದಾರೆ. ಬಾಲನಟಿ ದೇವಾನಂದ ಅವರು ಖರೀದಿಸಿದ ಮಾದರಿ ಟೊಯೊಟಾ ಇನ್ನೋವಾ ಹೈಕ್ರಾಸ್ ಮಾದರಿಯ ಟಾಪ್ ಎಂಡ್ ಹೈಬ್ರಿಡ್‌ ಮಾಡೆಲ್ ಆಗಿದೆ. ಈ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿ, 7, 8 ಆಸನ ಆಯ್ಕೆಯೊಂದಿಗೆ ಲಭ್ಯವಿದೆ. ಇನ್ನು ಈ ಮಾದರಿಯು ಸೂಪರ್ ವೈಟ್, ಪ್ಲಾಟಿನಂ ವೈಟ್ ಪರ್ಲ್, ಸಿಲ್ವರ್ ಮೆಟಾಲಿಕ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ.

ಹೊರಭಾಗದ ವಿನ್ಯಾಸ ನೋಡುಗರ ಕಣ್ಮನ ಸೆಳೆಯುತ್ತದೆ. ಇನ್ನು ಈ ಇನ್ನೋವಾ ಹೈಕ್ರಾಸ್, 2.0 - ಲೀಟರ್, 4 ಸಿಲಿಂಡರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 2.0 - ಲೀಟರ್, 4 ಸಿಲಿಂಡರ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಹೊಂದಿದೆ. ಇದರಲ್ಲಿ 2.0 ಲೀಟರ್ ಪೆಟ್ರೋಲ್ ಎಂಜಿನ್‌ 172 bhp ಮತ್ತು 205 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು CVT ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

Devanandha Buys Toyota Innova Hycross

ಇನ್ನು 2.0 ಲೀಟರ್ 4-ಸಿಲಿಂಡರ್ ಅಟ್ಕಿನ್ಸನ್ ಸ್ಟ್ರಾಂಗ್ ಹೈಬ್ರಿಡ್ ಪವರ್‌ಟ್ರೇನ್ 172 ಬಿಹೆಚ್‍ಪಿ ಪವರ್ ಮತ್ತು 205 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಸ್ಟ್ರಾಂಗ್ ಹೈಬ್ರಿಡ್ ಟಾಪ್ VX, ZX ಮತ್ತು ZX (O) ಟ್ರಿಮ್‌ಗಳೊಂದಿಗೆ ಮಾತ್ರ ಲಭ್ಯವಿದೆ. ಈ ಎಂಪಿವಿಯು ಮಾಡೆಲ್ ಲೈನ್ ಫ್ರಂಟ್-ವೀಲ್-ಡ್ರೈವ್ ಸೆಟಪ್‌ನೊಂದಿಗೆ ಬರುತ್ತದೆ.

ಇನ್ನು ಈ ಕಾರಿನಲ್ಲಿ ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 10 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, 7 - ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್ಪ್ಲೇ, ಡುಯಲ್ - ಝೋನ್ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ ಕನೆಕ್ಟ್ದ್ ಕಾರ್ ಟೆಕ್ ಅನ್ನು ಒಳಗೊಂಡಿದೆ.

ಸುರಕ್ಷತೆಯ ದೃಷ್ಟಿಯಿಂದ ಕೂಡ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿ ಅತ್ಯುತ್ತಮವಾಗಿದ್ದು, 6 ಏರ್‌ಬ್ಯಾಗ್‌, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360 ಡಿಗ್ರಿ ಕ್ಯಾಮೆರಾ, ಫ್ರಂಟ್ & ರೇರ್ ಪಾರ್ಕಿಂಗ್ ಸೇನಾರ್ಸ್, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, July 25, 2024, 19:23 [IST]
English summary
Child artist devenanda buys new toyota innova hycross details
Read more on celebrity car india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+