ಮಂಡಿನೋವು: ಹೊಸ ಟೊಯೊಟಾ ಕಾರನ್ನು ಖರೀದಿಸಲು ಮುಂದಾದ ಸಿದ್ದರಾಮಯ್ಯ.. ಯಾವುದು?

ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಮಂಡಿನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆ ತಾವು ಉಪಯೋಗಿಸುತ್ತಿರುವ ಸರ್ಕಾರಿ ಕಾರನ್ನು ಹತ್ತಲು ಮತ್ತು ಇಳಿಯಲು ಅವರಿಗೆ ಸಾಧ್ಯವಾಗುತ್ತಿಲ್ಲ. ಇದರಿಂದ ಹೊಚ್ಚ ಹೊಸ ಕಾರನ್ನು ಖರೀದಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ನಿನ್ನೆ ಮುಖ್ಯಮಂತ್ರಿಗಳು ನೂತನ ಟೊಯೊಟಾ ವೆಲ್‌ಫೈರ್‌ (Toyota Vellfire) ಎಂಪಿವಿಯ ಟೆಸ್ಟ್ ಡ್ರೈವ್ ನಡೆಸಿದ್ದು, ಅದರಲ್ಲಿಯೇ ಬಜೆಟ್ ಪೂರ್ವಭಾವಿ ಸಭೆಗೆ ವಿಧಾನಸೌಧಕ್ಕೂ ಆಗಮಿಸಿ, ಎಲ್ಲರ ಗಮನವನ್ನು ಸೆಳೆದ್ದರು.

ಟೊಯೊಟಾ ವೆಲ್‌ಫೈರ್‌ ವಿಶೇಷತೆಗಳೇನು: ಇದೊಂದು ಬೃಹತ್ ಗಾತ್ರದ ಎಂಪಿವಿಯಾಗಿದ್ದು, ದುಬಾರಿ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.1.22 ಕೋಟಿಯಿಂದ ರೂ.1.32 ಕೋಟಿ ಎಕ್ಸ್-ಶೋರೂಂ ದರವನ್ನು ಪಡೆದಿದೆ. ಹೈ & ವಿಐಪಿ ಎಕ್ಸಿಕ್ಯೂಟಿವ್ ಲೌಂಜ್ ಎಂಬ 2 ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ.

Cm Siddaramaiah To Buy New Toyota Vellfire Mpv

ಟೊಯೊಟಾ ವೆಲ್‌ಫೈರ್‌ ಎಂಪಿವಿ 2.5-ಲೀ. ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್‌ನ್ನು ಒಳಗೊಂಡಿದೆ. 193 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 240 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ ಇ-ಸಿವಿಟಿ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. 19 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಎಂಪಿವಿ 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 148 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.

Cm Siddaramaiah To Buy New Toyota Vellfire Mpv

ನೂತನ ಟೊಯೊಟಾ ವೆಲ್‌ಫೈರ್‌ ಎಂಪಿವಿ ಬ್ಲ್ಯಾಕ್ ಮತ್ತು ಪ್ಲಾಟಿನಂ ವೈಟ್ ಪರ್ಲ್ ಸೇರಿದಂತೆ 3 ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಾಗುತ್ತದೆ. 14 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಬಿಯೆಂಟ್ ಲೈಟಿಂಗ್, ಜೆಬಿಎಲ್ ಸೌಂಡ್ ಸಿಸ್ಟಮ್, ಡುಯಲ್-ಪ್ಯಾನಲ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ ಹೆಡ್ಸ್-ಅಪ್ ಡಿಸ್‌ಪ್ಲೇ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಟೊಯೊಟಾ ವೆಲ್‌ಫೈರ್‌ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಲೇನ್-ಕೀಪ್ ಅಸಿಸ್ಟ್ ಮತ್ತು ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ಮತ್ತು ಆಲ್-ವೀಲ್ ಡಿಸ್ಕ್ ಬ್ರೇಕ್‌ನಂತಹ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಈ ಕಾರಿಗೆ ಲೆಕ್ಸಸ್ ಎಲ್ಎಂ ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ.

ಇನ್ನು, ಸಿಎಂ ಸಿದ್ದರಾಮಯ್ಯ ಅವರು ಟೊಯೊಟಾ ಫಾರ್ಚುನರ್‌ (Toyota Fortuner) ಎಸ್‌ಯುವಿಯನ್ನು ಬಳಕೆ ಮಾಡುತ್ತಿದ್ದಾರೆ. ಈ ಕಾರು ರೂ.33.78 ಲಕ್ಷದಿಂದ ರೂ.51.94 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಇದು 2.7 ಲೀಟರ್ ಪೆಟ್ರೋಲ್ ಎಂಜಿನ್ ಪಡೆದಿದೆ. 8 - ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, 11-ಸ್ಪೀಕರ್ ಸೌಂಡ್ ಸಿಸ್ಟಮ್ ಮತ್ತು ವೈರ್‌ಲೆಸ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, February 19, 2025, 15:26 [IST]
English summary
Cm siddaramaiah to buy new toyota vellfire mpv
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+