ಭಾನುವಾರ ಬಸ್ ಹತ್ತಿದ್ರೆ ಸಿಎಂ ಸಿದ್ದು ಕಂಡಕ್ಟರ್! ಮುಖ್ಯಮಂತ್ರಿನೇ ಬಂದು ಟೆಕೆಟ್ ಕೇಳಿದ್ರೆ ಕೊಡ್ತೀರಾ?
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ಬಸ್ ಕಂಡಕ್ಟರ್ (conductor) ಆಗಿ ಬದಲಾಗಲಿದ್ದಾರೆ. ಅದು ಹೇಗೆ ಅಂದ್ರೆ, ಕಾಂಗ್ರೆಸ್ ನೀಡಿರುವ 5 ಗ್ಯಾರೆಂಟಿಗಳಲ್ಲಿ ಒಂದಾದ ಸರಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ವಿನೂತನವಾಗಿಯೇ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಜೂನ್ 11 ರಂದು ಬಸ್ ಕಂಡಕ್ಟರ್ ಆಗಿ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಮಹಿಳೆಯರಿಗೆ ಟಿಕೆಟ್ ನೀಡುವ ಮೂಲಕ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆದ ಶಕ್ತಿ ಯೋಜನೆಗೆ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಭಾನುವಾರ ಬೆಂಗಳೂರಿನ ಮೆಜೆಸ್ಟಿಕ್‌ನಿಂದ ಹೊರಡುವ ರೂಟ್ ನಂಬರ್ 43ರ ಬಸ್‌ನಲ್ಲಿ ಭಾನುವಾರಪಾರ್ಟ್‌ಟೈಂ ಕಂಡಕ್ಟರ್ ಆಗಿ ಮಹಿಳಾ ಪ್ರಯಾಣಿಕರ ಬಳಿ ತೆರಳಿ ಟಿಕೆಟ್ ಟಿಕೆಟ್ ಎಂದು ಹೇಳುತ್ತಾ, ಉಚಿತ ಟಿಕೆಟ್ ವಿತರಿಸಲಿದ್ದಾರೆ.

ಕಾಂಗ್ರೆಸ್ ಸರ್ಕಾರದ ನೀಡಿರುವ 5 ಗ್ಯಾರೆಂಟಿ ಯೋಜನೆಗಳಲ್ಲಿ ಮೊಟ್ಟಮೊದಲ ಯೋಜನೆಯಾಗಿ ಶಕ್ತಿ ಯೋಜನೆ ಜೂನ್ 11 ಭಾನುವಾರ ಜಾರಿಗೆ ಬರಲಿದೆ. ಈ ವೇಳೆ ಶಕ್ತಿ ಯೋಜನೆಯ ಲೋಗೋ ಹಾಗೂ ಸ್ಮಾರ್ಟ್ ಕಾರ್ಡ್ ಕೂಡ ಬಿಡುಗಡೆಯಾಗಲಿದೆ ಎಂದು ವರದಿಗಳಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಈ ಸಮಯದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಾಥ್ ಕೊಡಲಿದ್ದಾರೆ.
ವರದಿಗಳ ಪ್ರಕಾರ, ಈ ವಿಶಿಷ್ಟ ರೀತಿಯ ಉದ್ಘಾಟನೆಯು ಕೇವಲ ಶಕ್ತಿ ಯೋಜನೆಗೆ ಸೀಮಿತವಲ್ಲ. ಉಳಿದ ನಾಲ್ಕು ಯೋಜನೆಗಳನ್ನು ಕೂಡ ವಿಶಿಷ್ಟವಾಗಿ ಉದ್ಘಾಟಿಸುವ ಸಾದ್ಯತೆಗಳಿದೆ. ಕಾಂಗ್ರೆಸ್ ಚುನಾವಣೆ ತಂತ್ರಗಾರಿಗೆ ರೀತಿಯಲ್ಲಿ ಲೋಕಸಭೆಯ ಚುನಾವಣೆಯನ್ನು ಗುರಿಯಾಗಿಸಿಕೊಂಡು ಜನರ ಗಮನಸೆಳೆಯಲು ವಿವಿಧ ರೀತಿಯ ತಂತ್ರಗಾರಿಗೆ ಮಾಡುತ್ತಿದೆ. ಶಕ್ತಿ ಯೋಜನೆಯ ರ್ಯಕ್ರಮಗಳು ಕೇವಲ ರಾಜ್ಯ ರಾಜಧಾನಿಗೆ ಸೀಮಿತವಾಗಬಾರದು ಎಂಬ ಕಾರಣಕ್ಕೆ ಅಂದೇ ಜಿಲ್ಲೆಗಳಲ್ಲಿ ಸಚಿವರಿಂದ ಏಕಕಾಲದಲ್ಲಿ ಯೋಜನೆಗೆ ಚಾಲನೆ ಸಿಗಲಿದೆ.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡುವ ಶಕ್ತಿ ಯೋಜನೆ ಬೆಂಗಳೂರಿನಲ್ಲಿ ಉದ್ಘಾಟನೆಯಾದರೆ, ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಜು.1ರಂದು ಮೈಸೂರಿನಲ್ಲಿ ಜಾರಿಗೆ ಬರಲಿದೆ. ಇನ್ನು ಕುಟುಂಬದ ಯಜಮಾನಿಗೆ ಮಾಸಿಕ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಉದ್ಘಾಟನೆಯಾಗುವ ಸಾಧ್ಯತೆಗಳಿದೆ ಎಂದು ಹೇಳಲಾಗುತ್ತಿದೆ. 200 ಯೂನಿಟ್‌ವರೆಗೂ ಉಚಿತವಾಗಿ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಕಲಬುರಗಿಯಲ್ಲಿ ಉದ್ಘಾಟನೆಯಾಗುವ ಸಾಧ್ಯತೆಯಿದೆ
ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೋಮಾ ಹೊಂದಿರುವವರಿಗೆ ಭತ್ಯೆ ನೀಡುವ ಯುವನಿಧಿ ಯೋಜನೆ ಮಂಗಳೂರಲ್ಲಿ ಉದ್ಘಾಟನೆಯಾಗುವ ಸಾಧ್ಯತೆ ಇದೆ. ಇನ್ನೂ ಶಕ್ತಿ ಯೋಜನೆಯ ಬಗ್ಗೆ, ಕಳೆದ ಬಾರಿ ಸಾರಿಗೆ ನಿಗಮಗಳು ಈ ಯೋಜನೆಯಿಂದ ಮತ್ತಷ್ಟು ನಷ್ಟ ಅನುಭವಿಸುವ ಆತಂಕವನ್ನು ಕೂಡ ವ್ಯಕ್ತಪಡಿಸುತ್ತಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯುವ್ಯ ಕರ್ನಾಟಕ ಸಾರಿಗೆ ನಿಗಮ ಮತ್ತು ಈಶಾನ್ಯ ಕರ್ನಾಟಕ ಸಾರಿಗೆ ನಿಗಮಗಳು ಬಹುಪಾಲು ನಷ್ಟದಲ್ಲೇ ನಡೆಯುತ್ತಿವೆ.
ಹೀಗಿರುವಾಗ ಮತ್ತೆ ಮಹಿಳೆಯರಿಗೆ ಸಂಪೂರ್ಣ ಉಚಿತ ಪ್ರಯಾಣದಿಂದ ಮತ್ತಷ್ಟು ನಷ್ಟ ಅನುಭವಿಸಬಹುದು. ಇದನ್ನು ಭರಿಸುವ ವ್ಯವಸ್ಥೆ ಬಗ್ಗೆ ಗಂಭೀರ ಚರ್ಚೆ ಶುರುವಾಗಿದೆ. ಸಾರಿಗೆ ಸಂಸ್ಥೆಗಳಲ್ಲಿ 240 ಘಟಕಗಳಿದೆ. ಇದರಲ್ಲಿ 21,574 ವಾಹನಗಳಿವೆ. ಎಲ್ಲಾ ಸೇರಿ ಒಟ್ಟು 82.51 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಇದರೊಂದಿಗೆ ಈ ವರ್ಷ ಹೊಸದಾಗಿ 4,500ಕ್ಕೂ ಹೆಚ್ಚು ಬಸ್‌ಗಳು ಸೇರ್ಪಡೆಯಾಗುತ್ತಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡಲು ಮರೆಯದಿರಿ.


Click it and Unblock the Notifications