ಮೊದಲ ಬಾರಿಗೆ ಸಿಎನ್‌ಜಿ ಬಸ್ಸುಗಳಿಗೆ ಚಾಲನೆ ನೀಡಿದ ಪಶ್ಚಿಮ ಬಂಗಾಳ ಸರ್ಕಾರ

ಪಶ್ಚಿಮ ಬಂಗಾಳ ಸಾರಿಗೆ ನಿಗಮವು ಬಸ್ ಗಳ ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡಲು ನಿರ್ಧರಿಸಿದೆ. ಇದರ ಜೊತೆಗೆ ಪಶ್ಚಿಮ ಬಂಗಾಳ ಸಾರಿಗೆ ನಿಗಮವು ವಾಯು ಮಾಲಿನ್ಯ ಸಮಸ್ಯೆಯನ್ನು ಕಡಿಮೆ ಮಾಡುವ ಗುರಿಯನ್ನು ಸಹ ಹೊಂದಿದೆ. ಈ ಹಿನ್ನೆಲೆಯಲ್ಲಿ ಕೋಲ್ಕತ್ತಾದಲ್ಲಿ ಮೊದಲ ಬಾರಿಗೆ ಸಿಎನ್‌ಜಿ ಬಸ್‌ಗಳನ್ನು ಪರಿಚಯಿಸಲಾಗಿದೆ.

ಮೊದಲ ಬಾರಿಗೆ ಸಿಎನ್‌ಜಿ ಬಸ್ಸುಗಳಿಗೆ ಚಾಲನೆ ನೀಡಿದ ಪಶ್ಚಿಮ ಬಂಗಾಳ ಸರ್ಕಾರ

ಪಶ್ಚಿಮ ಬಂಗಾಳ ಸಾರಿಗೆ ಸಚಿವ ಫಿರ್ಹತ್ ಹಕೀಂ ರವರು ಸಿಎನ್‌ಜಿ ಬಸ್ ಸೇವೆಯನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ನಾವು ಈಗಾಗಲೇ ಎಲೆಕ್ಟ್ರಿಕ್ ಬಸ್‌ಗಳತ್ತ ಗಮನ ಹರಿಸುತ್ತಿದ್ದೇವೆ. ಜೊತೆಗೆ ಸಿಎನ್‌ಜಿ ಬಸ್ಸುಗಳಿಗೂ ಆದ್ಯತೆ ನೀಡುತ್ತಿದ್ದೇವೆ. ಸಿಎನ್‌ಜಿ ಬಸ್ ಗಳು ಕೋಲ್ಕತ್ತಾದ ಪರಿಸರವನ್ನು ರಕ್ಷಿಸುತ್ತವೆ ಎಂದು ಹೇಳಿದರು.

ಮೊದಲ ಬಾರಿಗೆ ಸಿಎನ್‌ಜಿ ಬಸ್ಸುಗಳಿಗೆ ಚಾಲನೆ ನೀಡಿದ ಪಶ್ಚಿಮ ಬಂಗಾಳ ಸರ್ಕಾರ

ಈಗ ಸದ್ಯಕ್ಕೆ ಎರಡು ಸಿಎನ್‌ಜಿ ಬಸ್'ಗಳಿಗೆ ಚಾಲನೆ ನೀಡಲಾಗಿದೆ. ಡೀಸೆಲ್ ಬಸ್ಸುಗಳನ್ನು ಸಿಎನ್‌ಜಿ ಚಾಲಿತ ಬಸ್ಸುಗಳಾಗಿ ಪರಿವರ್ತಿಸುವ ನಮ್ಮ ಯೋಜನೆಯನ್ನು ಆಧರಿಸಿ ಈ ಬಸ್ಸುಗಳನ್ನು ಪರಿಚಯಿಸಲಾಗಿದೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದೆ.

ಮೊದಲ ಬಾರಿಗೆ ಸಿಎನ್‌ಜಿ ಬಸ್ಸುಗಳಿಗೆ ಚಾಲನೆ ನೀಡಿದ ಪಶ್ಚಿಮ ಬಂಗಾಳ ಸರ್ಕಾರ

ಈ ಯೋಜನೆ ಯಶಸ್ವಿಯಾದರೆ ನಾವು ಮತ್ತಷ್ಟು ಸಿಎನ್‌ಜಿ ಬಸ್ ಗಳನ್ನು ಪರಿಚಯಿಸುತ್ತೇವೆ ಎಂದು ಅವರು ಹೇಳಿದರು. ಜೂನ್ 21 ರಂದು ಪಶ್ಚಿಮ ಬಂಗಾಳ ಸಾರಿಗೆ ಸಂಸ್ಥೆ ಹಾಗೂ ಬಂಗಾಳ ಗ್ಯಾಸ್ ಕಂಪನಿ ಲಿಮಿಟೆಡ್ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಮೊದಲ ಬಾರಿಗೆ ಸಿಎನ್‌ಜಿ ಬಸ್ಸುಗಳಿಗೆ ಚಾಲನೆ ನೀಡಿದ ಪಶ್ಚಿಮ ಬಂಗಾಳ ಸರ್ಕಾರ

ಈ ಒಪ್ಪಂದದ ಪ್ರಕಾರ ಪಶ್ಚಿಮ ಬಂಗಾಳ ಸಾರಿಗೆ ಸಂಸ್ಥೆಯ ಡೀಸೆಲ್ ಬಸ್‌ಗಳನ್ನು ಕ್ರಮೇಣವಾಗಿ ಸಿಎನ್‌ಜಿ ಬಸ್ಸುಗಳಿಗೆ ಪರಿವರ್ತಿಸಲಾಗುವುದು. ಭಾರತದಲ್ಲಿ ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ.

ಮೊದಲ ಬಾರಿಗೆ ಸಿಎನ್‌ಜಿ ಬಸ್ಸುಗಳಿಗೆ ಚಾಲನೆ ನೀಡಿದ ಪಶ್ಚಿಮ ಬಂಗಾಳ ಸರ್ಕಾರ

ಇಂತಹ ವಾತಾವರಣದಲ್ಲಿ ಸಿಎನ್‌ಜಿ ಬಸ್‌ಗಳನ್ನು ನಿರ್ವಹಿಸುವುದರಿಂದ ನಿರ್ವಹಣಾ ವೆಚ್ಚವು ಕಡಿಮೆಯಾಗುತ್ತದೆ. ಹಾಗೆಯೇ ಪರಿಸರ ರಕ್ಷಣೆಯೂ ಆಗುತ್ತದೆ. ಈ ಕಾರಣಕ್ಕಾಗಿಯೇ ಪಶ್ಚಿಮ ಬಂಗಾಳ ಸಾರಿಗೆ ಸಂಸ್ಥೆಯು ಡೀಸೆಲ್ ಬಸ್ ಬದಲು ಸಿಎನ್‌ಜಿ ಬಸ್ಸುಗಳನ್ನು ಓಡಿಸಲು ಹೆಚ್ಚು ಆಸಕ್ತಿ ತೋರಿಸುತ್ತಿದೆ.

ಮೊದಲ ಬಾರಿಗೆ ಸಿಎನ್‌ಜಿ ಬಸ್ಸುಗಳಿಗೆ ಚಾಲನೆ ನೀಡಿದ ಪಶ್ಚಿಮ ಬಂಗಾಳ ಸರ್ಕಾರ

ಕೇವಲ ಪಶ್ಚಿಮ ಬಂಗಾಳ ಸಾರಿಗೆ ಸಂಸ್ಥೆ ಮಾತ್ರವಲ್ಲ, ಸಾರ್ವಜನಿಕರು ಸಹ ಈಗ ಎಲೆಕ್ಟ್ರಿಕ್ ಹಾಗೂ ಸಿಎನ್‌ಜಿ ವಾಹನಗಳ ಖರೀದಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ.

ಮೊದಲ ಬಾರಿಗೆ ಸಿಎನ್‌ಜಿ ಬಸ್ಸುಗಳಿಗೆ ಚಾಲನೆ ನೀಡಿದ ಪಶ್ಚಿಮ ಬಂಗಾಳ ಸರ್ಕಾರ

ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳಿಗೆ ಹೋಲಿಸಿದರೆ ಎಲೆಕ್ಟ್ರಿಕ್ ಮತ್ತು ಸಿಎನ್‌ಜಿ ವಾಹನಗಳ ನಿರ್ವಹಣೆ ವೆಚ್ಚ ತೀರಾ ಕಡಿಮೆ. ಹಾಗೆಯೇ ಎಲೆಕ್ಟ್ರಿಕ್ ಹಾಗೂ ಸಿಎನ್‌ಜಿ ವಾಹನಗಳಿಂದ ಪರಿಸರಕ್ಕೆ ಯಾವುದೇ ಹಾನಿಯಾಗುವುದಿಲ್ಲ. ಈ ಕಾರಣಕ್ಕೆ ಜನರು ಈಗ ಎಲೆಕ್ಟ್ರಿಕ್ ಹಾಗೂ ಸಿಎನ್‌ಜಿ ವಾಹನಗಳ ಖರೀದಿಗೆ ಆದ್ಯತೆ ನೀಡುತ್ತಿದ್ದಾರೆ.

ಮೊದಲ ಬಾರಿಗೆ ಸಿಎನ್‌ಜಿ ಬಸ್ಸುಗಳಿಗೆ ಚಾಲನೆ ನೀಡಿದ ಪಶ್ಚಿಮ ಬಂಗಾಳ ಸರ್ಕಾರ

ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದ್ದ ಎಲೆಕ್ಟ್ರಿಕ್ ಹಾಗೂ ಸಿಎನ್‌ಜಿ ವಾಹನಗಳ ಸಂಖ್ಯೆ ತುಂಬಾ ಕಡಿಮೆ ಇತ್ತು. ಆದರೆ ಈಗ ಜನರು ಈ ವಾಹನಗಳನ್ನು ಖರೀದಿಸಲು ಮುಂದಾಗುತ್ತಿರುವುದರಿಂದ ಪ್ರಮುಖ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ಹಾಗೂ ಸಿಎನ್‌ಜಿ ವಾಹನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುತ್ತಿವೆ.

ಮೊದಲ ಬಾರಿಗೆ ಸಿಎನ್‌ಜಿ ಬಸ್ಸುಗಳಿಗೆ ಚಾಲನೆ ನೀಡಿದ ಪಶ್ಚಿಮ ಬಂಗಾಳ ಸರ್ಕಾರ

ಈಗ ದೇಶಿಯ ಮಾರುಕಟ್ಟೆಯಲ್ಲಿ ಸಿಎನ್‌ಜಿ ವಾಹನಗಳಿಗಿಂತ ಎಲೆಕ್ಟ್ರಿಕ್ ವಾಹನಗಳು ಹೆಚ್ಚು ಮಾರಾಟವಾಗುತ್ತಿವೆ. ವಿವಿಧ ಪ್ರದೇಶಗಳಲ್ಲಿ ಸಿಎನ್‌ಜಿ ಇಂಧನದ ಲಭ್ಯತೆಯಲ್ಲಿ ಸಮಸ್ಯೆಗಳಿವೆ. ಈ ಕಾರಣಕ್ಕೆ ಜನರು ಸಿಎನ್‌ಜಿ ವಾಹನಗಳ ಬದಲು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದಾರೆ.

ಮೊದಲ ಬಾರಿಗೆ ಸಿಎನ್‌ಜಿ ಬಸ್ಸುಗಳಿಗೆ ಚಾಲನೆ ನೀಡಿದ ಪಶ್ಚಿಮ ಬಂಗಾಳ ಸರ್ಕಾರ

ಭಾರತದಲ್ಲಿ ಎಲ್ಲಾ ವಿಧದ ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟ ಮಾಡಲಾಗುತ್ತದೆ. ಅಂದರೆ ಎಲೆಕ್ಟ್ರಿಕ್ ದ್ವಿ ಚಕ್ರ ವಾಹನ, ಎಲೆಕ್ಟ್ರಿಕ್ ಮೂರು ಚಕ್ರ ವಾಹನ ಹಾಗೂ ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳ ಜೊತೆಗೆ ಕೇಂದ್ರ ಸರ್ಕಾರವು ಸಿಎನ್‌ಜಿ ವಾಹನಗಳ ಬಳಕೆಯನ್ನು ಸಹ ಉತ್ತೇಜಿಸುತ್ತಿದೆ.

ಮೊದಲ ಬಾರಿಗೆ ಸಿಎನ್‌ಜಿ ಬಸ್ಸುಗಳಿಗೆ ಚಾಲನೆ ನೀಡಿದ ಪಶ್ಚಿಮ ಬಂಗಾಳ ಸರ್ಕಾರ

ದೇಶದ ಹಲವು ಭಾಗಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗಾಗಿ ಎಲೆಕ್ಟ್ರಿಕ್ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಇದರ ಜೊತೆಗೆ ಸಿಎನ್‌ಜಿ ಕೇಂದ್ರಗಳ ಸಂಖ್ಯೆಯೂ ನಿಧಾನವಾಗಿ ಹೆಚ್ಚುತ್ತಿದೆ. ಇದರಿಂದ ಮುಂಬರುವ ದಿನಗಳಲ್ಲಿ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳು ಹಾಗೂ ಸಿಎನ್‌ಜಿ ವಾಹನಗಳ ಸಂಖ್ಯೆ ಗಮನಾರ್ಹವಾಗಿ ಹೆಚ್ಚಾಗುವ ಸಾಧ್ಯತೆಗಳಿವೆ.

ಹೆಚ್ಚುತ್ತಿರುವ ಇಂಧನಗಳ ಬೆಲೆ ಹಾಗೂ ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗುತ್ತಿದೆ.

ಪೆಟ್ರೋಲ್, ಡೀಸೆಲ್ ವಾಹನಗಳ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಈಗಾಗಲೇ ಫೇಮ್ 2 ಸಬ್ಸಿಡಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಹೊಸ ಯೋಜನೆಯಡಿ ಎಲೆಕ್ಟ್ರಿಕ್ ವಾಹನ ಖರೀದಿ ಮಾಡುವವರಿಗೆ ಗರಿಷ್ಠ ಧನ ಸಹಾಯ ಒದಗಿಸಲಾಗುತ್ತದೆ.

Most Read Articles

Kannada
English summary
Cng bus service started for the first time in kolkata details
Story first published: Wednesday, August 11, 2021, 18:58 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X