Vande Bharat Express: ಕರಾವಳಿ ಕರ್ನಾಟಕದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು, ಬಿಗ್ ಅಪ್ಡೇಟ್
ದೇಶದಲ್ಲಿ ಪ್ರೀಮಿಯಂ ಹೈಸ್ವೀಡ್ ರೈಲಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ಜನಪ್ರಿಯತೆ ಗಳಿಸಿದೆ. ಕರಾವಳಿ ಕರ್ನಾಟಕ (Coastal Karnataka) ಜನರಿಗೆ ಶೀಘ್ರದಲ್ಲೇ ಸಿಹಿಸುದ್ದಿ ಸಿಗಲಿದ್ದು, ನೂತನ ವಂದೇ ಭಾರತ್ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಗೋವಾದ ಮಡಗಾಂವ್ ಗೆ ಸಂಚರಿಸುವ ಕಾಲ ಹತ್ತಿರ ಬಂದಿದೆ.
ಡಿಸೆಂಬರ್ (December) ಅಂತ್ಯದೊಳಗೆ ಮಂಗಳೂರು ಸೆಂಟ್ರಲ್ (Mangaluru Central) ಮತ್ತು ಮಡಗಾಂವ್ (Madgaon) ಮಧ್ಯೆ ಓಡಾಟ ನಡೆಸಲಿರುವ ಕರಾವಳಿ ಕರ್ನಾಟಕದ ಮೊದಲ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ಚಾಲನೆ ನೀಡುವ ಸಾಧ್ಯತೆಯಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕಳೆದ ಸೆಪ್ಟೆಂಬರ್ (September) ತಿಂಗಳು ನವದೆಹಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರನ್ನು ಭೇಟಿ ಮಾಡಿ, ಕರಾವಳಿ ಭಾಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ವಿಸ್ತರಿಸುವಂತೆ ಮನವಿ ಮಾಡಿದ್ದರು. ಸದ್ಯ, ಸಂಸದರ ಬೇಡಿಕೆಗೆ ಮನ್ನಣೆ ದೊರೆತಿದೆ.
ದಕ್ಷಿಣ ಭಾರತದ ಪ್ರಮುಖ ನಗರಗಳಾಗಿರುವ ಮಂಗಳೂರು ಹಾಗೂ ಮಡಗಾಂವ್ (ಗೋವಾ) ಸಾಕಷ್ಟು ಪ್ರಾಮುಖ್ಯತೆಯನ್ನು ಹೊಂದಿದ್ದು, ಪ್ರಸಿದ್ಧ ಪ್ರವಾಸಿ ತಾಣಗಳು, ಕಡಲ ತೀರಗಳು ಹಾಗೂ ನೈಸರ್ಗಿಕ ಸೌಂದರ್ಯಕ್ಕೆ ಹೆಸರುವಾಸಿಯಾಗಿವೆ. ಈ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಪರಿಚಯಿಸುವುದರಿಂದ ವ್ಯಾಪಾರ - ವಹಿವಾಟು ಸೇರಿದಂತೆ ವಿವಿಧ ಕ್ಷೇತ್ರಗಳು ಅಭಿವೃದ್ಧಿಯಾಗಲಿವೆ.

ಕೆಲವೇ ದಿನಗಳಲ್ಲಿ ಬೆಂಗಳೂರು - ಬೆಳಗಾವಿ (ಧಾರವಾಡದಿಂದ ವಿಸ್ತರಿಸಿರುವ) ನಡುವೆಯೂ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಕಾರ್ಯಾಚರಣೆ ನಡೆಸಲಿದೆ. ಈಗಾಗಲೇ, ಈ ರೈಲು ಯಶಸ್ವಿಯಾಗಿ ಪ್ರಾಯೋಗಿಕ ಸಂಚಾರವನ್ನು ನಡೆಸಿದೆ. ಟಿಕೆಟ್ ದರ ಎಷ್ಟಿರಲಿದೆ ಎನ್ನುವುದರ ಬಗ್ಗೆ ಮುಂಬರುವ ದಿನಗಳಲ್ಲಿ ತಿಳಿಯಲಿದ್ದು, ಟಿಕೆಟ್ ವೊಂದಕ್ಕೆ ಸುಮಾರು 1500 ರೂಪಾಯಿ ದರವಿರಬಹುದು ಎಂದು ಅಂದಾಜಿಸಲಾಗಿದೆ.
ಸದ್ಯ ಕರ್ನಾಟಕದಲ್ಲಿ ಚೆನ್ನೈ - ಬೆಂಗಳೂರು - ಮೈಸೂರು ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸುತ್ತಿದೆ. ಸೆಪ್ಟೆಂಬರ್ 24ರಂದು ಪ್ರಧಾನಿ ನರೇಂದ್ರ ಮೋದಿ ಅವರು, ಎರಡು ಪ್ರಮುಖ ಐಟಿ ನಗರಗಳನ್ನು ಸಂಪರ್ಕಿಸಲು ಕಾಚಿಗುಡ (ಹೈದರಾಬಾದ್) - ಯಶವಂತಪುರ (ಬೆಂಗಳೂರು) ಮಧ್ಯೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು.
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಯಾವುದೇ ವಿಮಾನಗಳಿಗೆ ಕಮ್ಮಿ ಇಲ್ಲದಂತೆ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿವೆ. ಈ ರೈಲು ಆರಾಮದಾಯಕ ಆಸನ ವ್ಯವಸ್ಥೆ, ಜೈವಿಕ ಶೌಚಾಲಯ, ವೈಫೈ ಸೌಲಭ್ಯ, ಸ್ವಯಂ ಚಾಲಿತ ಬಾಗಿಲು, ಅಗ್ನಿ ನಿರೋಧಕ ಸಾಧನವನ್ನು ಪಡೆದಿದೆ. ಜೊತೆಗೆ ಪ್ಯಾಂಟಿ ವ್ಯವಸ್ಥೆಯೂ ಇದೆ. ಈ ಕಾರಣ ಏನೋ 'ವಂದೇ ಭಾರತ್' ಅಧಿಕ ಸಂಖ್ಯೆಯಲ್ಲಿ ಯುವ ಜನರನ್ನು ಸೆಳೆದಿರುವುದು.
ಇನ್ನು, ಮಂಗಳೂರಿಂದ ಗೋವಾಕ್ಕೆ ಕೆಲವೇ ದಿನಗಳಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಕಾರ್ಯಚರಣೆ ಆರಂಭಿಸುತ್ತಿರುವುದು ಖುಷಿಯ ವಿಚಾರವಾಗಿದೆ. ಇದರೊಟ್ಟಿಗೆ ಮಂಗಳೂರು - ಬೆಂಗಳೂರು, ಬೆಂಗಳೂರು - ಕಲಬುರಗಿ, ಬೆಂಗಳೂರು - ಶಿವಮೊಗ್ಗ, ಬೆಂಗಳೂರು - ವಿಜಯಪುರ ನಡುವೆ ಹೊಸ ವಂದೇ ಭಾರತ್ ರೈಲು ಬಿಡಬೇಕೆಂಬುದು ಅಲ್ಲಿನ ಸ್ಥಳೀಯರ ಒತ್ತಾಯವಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications