ಮಧ್ಯಮ ವರ್ಗದವರ ನೆಚ್ಚಿನ ಎಲೆಕ್ಟ್ರಿಕ್ ಕಾರನ್ನು ಖರೀದಿಸಿದ ದಕ್ಷಿಣದ ಹಾಸ್ಯ ನಟಿ: ನೀವು ನೋಡೇ ಇರ್ತೀರಾ..

ದಕ್ಷಿಣ ಭಾರತದ ಜನಪ್ರಿಯ ಹಾಸ್ಯ ನಟಿಯಾಗಿ ವಿದ್ಯುಲ್ಲೇಖಾ ರಾಮನ್ (Vidyullekha Raman) ಗುರುತಿಸಿಕೊಂಡಿದ್ದು, ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೆಚ್ಚಾಗಿ ತಮಿಳು ಮತ್ತು ತೆಲುಗು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡದಲ್ಲಿ ಶರಣ್, ಆಶಿಕಾ ರಂಗನಾಥ್ ಹಾಗೂ ಚಿಕ್ಕಣ್ಣ ಅಭಿನಯಿಸಿದ್ದ ರ‍್ಯಾಂಬೊ 2 (Raambo 2) ಚಿತ್ರದಲ್ಲಿಯೂ ಬಣ್ಣ ಹಚ್ಚಿದ್ದರು. ತಮ್ಮ ಅದ್ಭುತ ನಟನೆಗಾಗಿ 'ನಂದಿ ಪ್ರಶಸ್ತಿ'ಯನ್ನು ಮುಡಿಗೇರಿಸಿಕೊಂಡಿದ್ದಾರೆ. ಸದ್ಯ, ನಟಿ ವಿದ್ಯುಲ್ಲೇಖಾ ಹೊಚ್ಚ ಹೊಸ ಎಂಜಿ ಕಾಮೆಟ್ ಇವಿ (MG Comet EV) ಖರೀದಿಸಿದ್ದಾರೆ.

ಈ ಬಗ್ಗೆ ಸ್ವತಃ ನಟಿ ವಿದ್ಯುಲ್ಲೇಖಾ ತಮ್ಮ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿ, ಸಂತಸ ಹಂಚಿಕೊಂಡಿದ್ದಾರೆ. 'ನಾನು ಮೊದಲ ಇವಿ ತೆಗೆದುಕೊಂಡೆ. ಇದು ಟ್ರಾಫಿಕ್ ಹಾಗೂ ಪಾರ್ಕಿಂಗ್ ಸಮಸ್ಯೆಗೆ ಉತ್ತಮ ಪರಿಹಾರ ಒದಗಿಸುತ್ತದೆ' ಎಂದು ಹೇಳಿದ್ದಾರೆ. ನೂತನ ಕಾರಿಗೆ 'ಕುಟ್ಟಿ' ಎಂಬ ಹೆಸರನ್ನು ನಾಮಕರಣ ಮಾಡಿದ್ದಾರೆ. ಸ್ನೇಹಿತರು, ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

Comedy Actress Vidyullekha Raman Buy New Mg Comet Ev Low Price 230 Km Range

ಆದಾಗ್ಯೂ ನಟಿ ವಿದ್ಯುಲ್ಲೇಖಾ ರಾಮನ್ 'ಎಂಜಿ ಕಾಮೆಟ್ ಇವಿ'ಯ ಯಾವ ರೂಪಾಂತರ (ವೇರಿಯೆಂಟ್)ವನ್ನು ಮನೆಗೆ ತಂದಿದ್ದಾರೆ ಎಂಬುದರ ಕುರಿತಂತೆ ಯಾವುದೇ ವಿವರಗಳು ಲಭ್ಯವಾಗಿಲ್ಲ. ದೇಶೀಯ ಮಾರುಕಟ್ಟೆಯಲ್ಲಿ ನೂತನ ಕಾರು, ರೂ.6.99 ಲಕ್ಷದಿಂದ ರೂ.9.53 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. ಎಕ್ಸಿಕ್ಯೂಟಿವ್ ಮತ್ತು ಎಕ್ಸ್‌ಕ್ಲೂಸಿವ್ ಸೇರಿದಂತೆ ವಿವಿಧ ರೂಪಾಂತರಗಳನ್ನು ಹೊಂದಿದೆ.

ಈ ಕಾರು 17.3 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ. ಇದರಲ್ಲಿವ ಎಲೆಕ್ಟ್ರಿಕ್ ಮೋಟಾರ್, 42 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 110 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಆರ್‌ಡಬ್ಲ್ಯೂಡಿ (ರೇರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 230 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ.

Comedy Actress Vidyullekha Raman Buy New Mg Comet Ev Low Price 230 Km Range

ಹೊಸ ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರು, ಅರೋರಾ ಸಿಲ್ವರ್ ಹಾಗೂ ಕ್ಯಾಂಡಿ ವೈಟ್ ಒಳಗೊಂಡಂತೆ 2-ಡುಯಲ್ ಟೋನ್, 3-ಮೊನೊಟೋನ್ ಬಣ್ಣಗಳೊಂದಿಗೂ ದೊರೆಯುತ್ತದೆ. 2-ಡೋರ್ (ಬಾಗಿಲು) ಆಯ್ಕೆಯನ್ನು ಪಡೆದಿದ್ದು, 4 ಮಂದಿ ಸಂಚರಿಸಬಹುದು. 7.4 ಕೆಡಬ್ಲ್ಯೂ ಸಾಮರ್ಥ್ಯದ ಚಾರ್ಜರ್ ಬಳಕೆಯಲ್ಲಿ ಇದರ ಬ್ಯಾಟರಿ ಪ್ಯಾಕ್ 0-100% ಚಾರ್ಜ್ ಆಗುವುದಕ್ಕೆ ಕೇವಲ 3.5 ಗಂಟೆ ತೆಗೆದುಕೊಳ್ಳುತ್ತದೆ.

ಎಂಜಿ ಕಾಮೆಟ್ ಇವಿ ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಡುಯಲ್ 10.25-ಇಂಚಿನ ಸ್ಕ್ರೀನ್ (ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್), ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 55ಕ್ಕೂ ಹೆಚ್ಚು ಕನೆಕ್ಟ್ದ್ ಕಾರ್ ಟೆಕ್ ಮತ್ತು ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ಸುರಕ್ಷತೆ ಒದಗಿಸುತ್ತದೆ. ಅದಕ್ಕಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ರೇರ್ ಪಾರ್ಕಿಂಗ್ ಸೆನ್ಸರ್ಸ್, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ರೇರ್ ಡಿಸ್ಕ್ ಬ್ರೇಕ್ಸ್, ಹೋಲ್ಡ್ ಅಸಿಸ್ಟ್‌ ಅನ್ನು ಪಡೆದಿದೆ. ನೂತನ ಕಾಮೆಟ್ ಇವಿಗೆ ಟಾಟಾ ಟಿಯಾಗೊ ಇವಿ ಹಾಗೂ ಸಿಟ್ರನ್ ಇಸಿ3 ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, August 5, 2024, 16:19 [IST]
English summary
Comedy actress vidyullekha raman buy new mg comet ev low price 230 km range
Read more on celebrity car india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+