ಸಾಮಾಜಿಕ ಅಂತರ ಕಾಯ್ದುಕೊಳ್ಳಲಿದೆ ಎನ್‌ಹೆಚ್‌ಎಐನ ಈ ಟೆಕ್ನಾಲಜಿ
ಭಾರತದಲ್ಲಿ ಕರೋನಾ ವೈರಸ್ ಹರಡುವುದನ್ನು ತಡೆಯಲು ಮಾರ್ಚ್ 24ರಂದು ಲಾಕ್‌ಡೌನ್ ಜಾರಿಗೊಳಿಸಲಾಯಿತು. ಅಂದಿನಿಂದ ಸುಮಾರು ಎರಡು ತಿಂಗಳವರೆಗೆ ಸಾರ್ವಜನಿಕ ಸಾರಿಗೆ ಸೇವೆಗಳಾದ ಬಸ್, ರೈಲು, ವಿಮಾನ, ಆಟೋ ಹಾಗೂ ಟ್ಯಾಕ್ಸಿಗಳ ಸೇವೆಗಳನ್ನು ಸ್ಥಗಿತಗೊಳಿಸಲಾಯಿತು.

ಖಾಸಗಿ ವಾಹನಗಳು ಹಾಗೂ ದ್ವಿಚಕ್ರ ವಾಹನಗಳ ಸಂಚಾರದ ಮೇಲೂ ನಿರ್ಬಂಧ ವಿಧಿಸಲಾಯಿತು. ಇದರಿಂದಾಗಿ ಸದಾ ಜನನಿಬಿಡವಾಗಿರುತ್ತಿದ್ದ ಭಾರತದ ರಸ್ತೆಗಳು ನಿರ್ಜನವಾಗಿದ್ದವು. ಈಗ ಪರಿಸ್ಥಿತಿ ವಿಭಿನ್ನವಾಗಿದೆ. ಕರೋನಾ ವೈರಸ್ ವೇಗವಾಗಿ ಹರಡುತ್ತಿದ್ದರೂ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಲಾಕ್‌ಡೌನ್‌ನಿಂದ ವಿನಾಯಿತಿ ನೀಡಿವೆ. ಈ ಕಾರಣಕ್ಕೆ ಎಲ್ಲಾ ರೀತಿಯ ಸಾರ್ವಜನಿಕ ಸಾರಿಗೆ ಸೇವೆಗಳನ್ನು ಪುನರಾರಂಭಿಸಲಾಗಿದೆ.

ಇದರ ಜೊತೆಗೆ ಖಾಸಗಿ ವಾಹನಗಳ ಸಂಚಾರಕ್ಕೂ ಅವಕಾಶ ನೀಡಲಾಗಿದೆ. ಎಲ್ಲಾ ರೀತಿಯ ವಾಹನಗಳ ಓಡಾಟದಿಂದಾಗಿ ವಾಹನ ದಟ್ಟಣೆ ಹೆಚ್ಚಾಗಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿಯೂ ವಾಹನ ದಟ್ಟಣೆ ಹೆಚ್ಚಾಗಿದೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಕರೋನಾ ವೈರಸ್‌ಗೆ ಯಾವುದೇ ಲಸಿಕೆ ಇಲ್ಲ. ವೈರಸ್ ಹರಡದಂತೆ ತಡೆಯುವುದೇ ಇದಕ್ಕಿರುವ ಮದ್ದು. ಈ ಕಾರಣಕ್ಕೆ ಫೇಸ್ ಮಾಸ್ಕ್, ಸ್ಯಾನಿಟೈಜರ್ ಬಳಕೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಸೇರಿದಂತೆ ಹಲವಾರು ಮುಂಜಾಗೃತಾ ಕ್ರಮಗಳನ್ನು ಪಾಲಿಸಲಾಗುತ್ತಿದೆ.

ಫಾಸ್ಟ್‌ಟ್ಯಾಗ್ ಬಳಸಿದರೆ ಕರೋನಾ ವೈರಸ್ ಸೋಂಕು ಹರಡುವುದನ್ನು ತಡೆಯಬಹುದು. ಫಾಸ್ಟ್‌ಟ್ಯಾಗ್ ಟೆಕ್ನಾಲಜಿಯು ವಾಹನ ಸವಾರರ ನಡುವೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲುನೆರವಾಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಹೆಚ್‌ಎಐ) ಹೇಳಿದೆ.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಫಾಸ್ಟ್‌ಟ್ಯಾಗ್‌ಗಳನ್ನು ಆರ್‌ಎಫ್ಐಡಿ ಟೆಕ್ನಾಲಜಿ ಮೇಲೆ ತಯಾರಿಸಲಾಗಿದೆ. ಫಾಸ್ಟ್‌ಟ್ಯಾಗ್ ಹೊಂದಿರುವ ವಾಹನಗಳು ಟೋಲ್‌ಗೇಟ್‌ಗಳಲ್ಲಿ ನಿಂತು ಹಣ ಪಾವತಿಸುವ ಅಗತ್ಯವಿಲ್ಲ. ಟೋಲ್‌ಗೇಟ್‌ಗಳಲ್ಲಿರುವ ಸ್ಕ್ಯಾನರ್‌ಗಳು ವಾಹನದ ಮುಂಭಾಗದ ವಿಂಡ್‌ಶೀಲ್ಡ್‌ನಲ್ಲಿ ಅಂಟಿಸಿರುವ ಫಾಸ್ಟ್‌ಟ್ಯಾಗ್ ಕೋಡ್‌ಗಳನ್ನು ಸ್ಕ್ಯಾನ್ ಮಾಡುತ್ತವೆ.

ಇದರಿಂದ ನಿಮ್ಮ ಫಾಸ್ಟ್‌ಟ್ಯಾಗ್ ಖಾತೆಯಿಂದ ಹಣ ಕಡಿತಗೊಳ್ಳುತ್ತದೆ. ಇದರಿಂದಾಗಿ ಟೋಲ್‌ಗೇಟ್‌ಗಳಲ್ಲಿ ಕ್ಯೂನಲ್ಲಿ ನಿಂತು ಹಣ ಪಾವಟಿಸುವ ಅಗತ್ಯ ಎದುರಾಗುವುದಿಲ್ಲ. ಫಾಸ್ಟ್‌ಟ್ಯಾಗ್ ಹೊಂದಿಲ್ಲದಿದ್ದರೆ, ಗಂಟೆಗಟ್ಟಲೇ ಕ್ಯೂನಲ್ಲಿ ನಿಲ್ಲಬೇಕಾದ ಸಂದರ್ಭ ಎದುರಾಗುತ್ತದೆ.
MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ಇದು ಕರೋನಾ ವೈರಸ್ ಹರಡುವ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಫಾಸ್ಟ್‌ಟ್ಯಾಗ್ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸುತ್ತದೆ ಎಂದು ರಾಷ್ಟ್ರೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೇಳಿದೆ.ಫಾಸ್ಟ್‌ಟ್ಯಾಗ್ ಬಳಕೆಯಿಂದ ಕ್ಯಾಶ್‌ಲೆಸ್ ವ್ಯವಹಾರ ನಡೆಯುತ್ತದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಭಿಪ್ರಾಯ ನಿಜ. ಫಾಸ್ಟ್‌ಟ್ಯಾಗ್‌ನಿಂದ ಕರೋನಾ ವೈರಸ್ ಹರಡುವ ಸಾಧ್ಯತೆಯನ್ನು ತಪ್ಪಿಸುವುದರ ಜೊತೆಗೆ ಟೋಲ್‌ಗಳಲ್ಲಿ ಗಂಟೆಗಟ್ಟಲೇ ಕಾಯುವುದು ತಪ್ಪುತ್ತದೆ ಹಾಗೂ ಇಂಧನ ಉಳಿತಾಯವಾಗುತ್ತದೆ.
ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್‌ಗಾಗಿ ಬಳಸಲಾಗಿದೆ.


Click it and Unblock the Notifications