ಫೇಸ್ ಮಾಸ್ಕ್ ಧರಿಸದವರಿಗೆ ಕಾದಿದೆ ವಿಭಿನ್ನ ಶಿಕ್ಷೆ

ಕರೋನಾ ವೈರಸ್ ಭಾರತದಲ್ಲಿ ವೇಗವಾಗಿ ಹರಡುತ್ತಿದ್ದರೂ ಸಹ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಲಾಕ್ ಡೌನ್ ನಲ್ಲಿ ಹಲವಾರು ವಿನಾಯಿತಿಗಳನ್ನು ನೀಡಿವೆ. ಕಳೆದ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಅಷ್ಟೇನೂ ಟ್ರಾಫಿಕ್ ಜಾಮ್ ಉಂಟಾಗಿಲ್ಲ.

ಫೇಸ್ ಮಾಸ್ಕ್ ಧರಿಸದವರಿಗೆ ಕಾದಿದೆ ವಿಭಿನ್ನ ಶಿಕ್ಷೆ

ಆದರೆ ಹೈ ರಿಸ್ಕ್ ಪ್ರದೇಶಗಳಲ್ಲಿ ವಾಹನಗಳ ಚಾಲನೆಗೆ ಹಲವಾರು ನಿರ್ಬಂಧಗಳನ್ನು ವಿಧಿಸಲಾಗಿದೆ. ಈ ನಿರ್ಬಂಧಗಳನ್ನು ಉಲ್ಲಂಘಿಸುವ ವಾಹನ ಚಾಲಕರ ವಿರುದ್ಧ ಪೊಲೀಸರು ದಂಡ ವಿಧಿಸುವುದು ಹಾಗೂ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಸೇರಿದಂತೆ ವಿವಿಧ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅನಗತ್ಯವಾಗಿ ವಾಹನ ಚಲಾಯಿಸುವವರ ವಿರುದ್ಧ ಪೊಲೀಸರು ಇನ್ನೂ ಕ್ರಮ ಕೈಗೊಳ್ಳುತ್ತಲೇ ಇದ್ದಾರೆ.

ಫೇಸ್ ಮಾಸ್ಕ್ ಧರಿಸದವರಿಗೆ ಕಾದಿದೆ ವಿಭಿನ್ನ ಶಿಕ್ಷೆ

ಅಂತಹ ವಾಹನಗಳನ್ನು ಪೊಲೀಸರು ವಶಪಡಿಸಿಕೊಳ್ಳುತ್ತಲೇ ಇದ್ದಾರೆ. ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ತಮಿಳುನಾಡಿನಲ್ಲಿಯೇ 6 ಲಕ್ಷಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಭಾರತದ ಇತರ ರಾಜ್ಯಗಳಲ್ಲಿಯೂ ಇದೇ ಪರಿಸ್ಥಿತಿ ಎದುರಾಗಿದೆ.

MOST READ:ಪೊಲೀಸರಿಗೆ ತಲೆ ನೋವು ತಂದಿಟ್ಟ ಸೀಜ್ ಆದ ವಾಹನಗಳು

ಫೇಸ್ ಮಾಸ್ಕ್ ಧರಿಸದವರಿಗೆ ಕಾದಿದೆ ವಿಭಿನ್ನ ಶಿಕ್ಷೆ

ಬಹುತೇಕ ವಾಹನ ಸವಾರರು ಮಾಸ್ಕ್ ಧರಿಸುತ್ತಿಲ್ಲ. ಫೇಸ್ ಮಾಸ್ಕ್ ಧರಿಸುವುದರಿಂದ ಕರೋನಾ ವೈರಸ್ ಹರಡುವುದನ್ನು ಸ್ವಲ್ಪ ಮಟ್ಟಿಗೆ ತಡೆಯಬಹುದು. ಈ ಕಾರಣಕ್ಕೆ ಫೇಸ್ ಮಾಸ್ಕ್ ಧರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೂಚನೆ ನೀಡಿದ್ದರೂ ಬಹುತೇಕ ವಾಹನ ಸವಾರರು ಈ ಸೂಚನೆಯನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ.

ಫೇಸ್ ಮಾಸ್ಕ್ ಧರಿಸದವರಿಗೆ ಕಾದಿದೆ ವಿಭಿನ್ನ ಶಿಕ್ಷೆ

ಇದುವರೆಗೂ ಫೇಸ್ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುತ್ತಿದ್ದ ಪೊಲೀಸರು ಈಗ ವಿಭಿನ್ನ ರೀತಿಯ ಕ್ರಮಕ್ಕೆ ಮುಂದಾಗಿದ್ದಾರೆ. ಉತ್ತರ ಪ್ರದೇಶದ ಫಿರೋಜಾಬಾದ್‌ ಪೊಲೀಸರು ಈ ವಿಶಿಷ್ಟ ರೀತಿಯ ಕ್ರಮ ಕೈಗೊಳ್ಳುತ್ತಿದ್ದಾರೆ.

MOST READ:ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಆಂಬ್ಯುಲೆನ್ಸ್ ಪಡೆದ ಜಗನ್ ಸರ್ಕಾರ

ಫೇಸ್ ಮಾಸ್ಕ್ ಧರಿಸದವರಿಗೆ ಕಾದಿದೆ ವಿಭಿನ್ನ ಶಿಕ್ಷೆ

ಇದರನ್ವಯ ಫೇಸ್ ಮಾಸ್ಕ್ ಧರಿಸದವರು 500 ಬಾರಿ ಫೇಸ್ ಮಾಸ್ಕ್ ಧರಿಸಬೇಕು ಎಂದು ಬರೆಯಬೇಕಾಗುತ್ತದೆ. ಅದಕ್ಕೂ ಮೊದಲು ಫೇಸ್ ಮಾಸ್ಕ್ ಧರಿಸದವರು ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ತೆಗೆದುಕೊಳ್ಳುವ ತರಗತಿಗೆ ಹಾಜರಾಗಬೇಕು.

ಫೇಸ್ ಮಾಸ್ಕ್ ಧರಿಸದವರಿಗೆ ಕಾದಿದೆ ವಿಭಿನ್ನ ಶಿಕ್ಷೆ

ಈ ತರಗತಿಯಲ್ಲಿ 3-4 ಗಂಟೆಗಳ ಕಾಲ ಕಳೆಯಬೇಕಾಗುತ್ತದೆ. ಈ ಬಗ್ಗೆ ಮಾತನಾಡಿರುವ ಅಧಿಕಾರಿಗಳು ಫೇಸ್ ಮಾಸ್ಕ್ ಧರಿಸದವರಿಗೆ ಈ ತರಗತಿಯಲ್ಲಿ ವೀಡಿಯೊ ತೋರಿಸಲಾಗುತ್ತದೆ. ಫೇಸ್ ಮಾಸ್ಕ್ ಧರಿಸುವುದರಿಂದ ಆಗುವ ಪ್ರಯೋಜನಗಳೇನು ಎಂಬುದನ್ನು ಈ ವೀಡಿಯೊ ಮೂಲಕ ತಿಳಿಸಲಾಗುತ್ತದೆ ಎಂದು ಹೇಳಿದ್ದಾರೆ.

MOSTREAD: ಕೆಟ್ಟು ನಿಂತ ವಾಹನಗಳನ್ನು ತಳ್ಳುವ ಜನಪ್ರಿಯ ವಿಧಾನವಿದು

ಫೇಸ್ ಮಾಸ್ಕ್ ಧರಿಸದವರಿಗೆ ಕಾದಿದೆ ವಿಭಿನ್ನ ಶಿಕ್ಷೆ

ಇದಾದ ನಂತರ 500 ಬಾರಿ ಫೇಸ್ ಮಾಸ್ಕ್ ಧರಿಸಬೇಕು ಎಂದು ಬರೆಯಬೇಕಾಗುತ್ತದೆ. ಈ ವಿಶಿಷ್ಟ ಕ್ರಮದಿಂದ ಪ್ರಯೋಜನವಾಗಲಿದೆ ಎಂದು ಪೊಲೀಸರು ಭಾವಿಸಿದ್ದಾರೆ. ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವಾಗ ಹೆಲ್ಮೆಟ್ ಕಡ್ಡಾಯ. ಕಾರಿನಲ್ಲಿ ಪ್ರಯಾಣಿಸುವಾಗ ಸೀಟ್‌ಬೆಲ್ಟ್ ಧರಿಸುವುದು ಕಡ್ಡಾಯ.

ಫೇಸ್ ಮಾಸ್ಕ್ ಧರಿಸದವರಿಗೆ ಕಾದಿದೆ ವಿಭಿನ್ನ ಶಿಕ್ಷೆ

ಇವುಗಳ ಜೊತೆಗೆ ಸದ್ಯದ ಪರಿಸ್ಥಿತಿಯಲ್ಲಿ ಫೇಸ್ ಮಾಸ್ಕ್ ಧರಿಸುವುದು ಸಹ ಕಡ್ಡಾಯವಾಗಿದೆ. ಹೊರಗೆ ಹೋಗುವ ಮುನ್ನ ಫೇಸ್ ಮಾಸ್ಕ್ ಧರಿಸಲು ಮರೆಯದಿರಿ. ವಾಹನಗಳಲ್ಲಿಯೇ ಸಂಚರಿಸಲಿ ಅಥವಾ ನಡೆದುಕೊಂಡೇ ಹೋಗಲಿ ಫೇಸ್ ಮಾಸ್ಕ್ ಧರಿಸುವುದನ್ನು ಮರೆಯದಿರಿ.

ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್ ಗಾಗಿ ಬಳಸಲಾಗಿದೆ.

Most Read Articles

Kannada
English summary
Cops punishes people not wearing face mask in a unique way. Read in Kannada.
Story first published: Wednesday, July 15, 2020, 10:10 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X