Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕರೋನಾ ವೈರಸ್ ಎಫೆಕ್ಟ್: ಐಷಾರಾಮಿ ಕಾರುಗಳ ಮಾರಾಟಕ್ಕೆ ಮುಂದಾದ ಜನ
ಕರೋನಾ ವೈರಸ್ ಹರಡಬಹುದೆಂಬ ಭೀತಿಯಿಂದಾಗಿ ಜನರು ಬಸ್, ಆಟೋ ಹಾಗೂ ಟ್ಯಾಕ್ಸಿಗಳಲ್ಲಿ ಸಂಚರಿಸುವ ಬದಲು ದ್ವಿಚಕ್ರ ವಾಹನ, ಕಾರು ಸೇರಿದಂತೆ ತಮ್ಮ ಸ್ವಂತ ವಾಹನಗಳಲ್ಲಿ ಪ್ರಯಾಣಿಸುವುದಕ್ಕೆ ಆದ್ಯತೆ ನೀಡುತ್ತಿದ್ದಾರೆ.

ಬಹುತೇಕ ಎಲ್ಲಾ ವರ್ಗದ ಜನರು ತಮ್ಮ ಸ್ವಂತ ವಾಹನಗಳಲ್ಲಿ ಸಂಚರಿಸುತ್ತಿದ್ದಾರೆ. ಇದರಿಂದಾಗಿ ಹೊಸ ಕಾರು ಹಾಗೂ ದ್ವಿಚಕ್ರ ವಾಹನಗಳ ಮಾರಾಟವು ಏರಿಕೆಯಾಗುವ ನಿರೀಕ್ಷೆಗಳಿವೆ. ಜೊತೆಗೆ ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟವು ಸಹ ಏರಿಕೆಯನ್ನು ಕಾಣುತ್ತಿದೆ. ವೇತನ ಕಡಿತ, ಉದ್ಯೋಗ ನಷ್ಟ, ಉದ್ಯೋಗ ಅನಿಶ್ಚಿತತೆ ಸೇರಿದಂತೆ ಹಲವು ಕಾರಣಗಳಿಗಾಗಿ ಜನರು ಹೊಸ ಕಾರುಗಳನ್ನು ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ.

ಜನರು ಕಡಿಮೆ ಬೆಲೆಗೆ ಲಭ್ಯವಿರುವ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸುತ್ತಿದ್ದಾರೆ. ಈ ಕಾರಣಕ್ಕೆ ಸೆಕೆಂಡ್ ಹ್ಯಾಂಡ್ ಸಾಮಾನ್ಯ ಕಾರುಗಳು ಮಾತ್ರವಲ್ಲದೇ ಸೆಕೆಂಡ್ ಹ್ಯಾಂಡ್ ಐಷಾರಾಮಿ ಕಾರುಗಳ ಮಾರಾಟವೂ ಸಹ ಹೆಚ್ಚುತ್ತಿದೆ.
MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ವಿಶೇಷವಾಗಿ ಕೇರಳದ ಕೊಚ್ಚಿಯಲ್ಲಿ ಹಲವು ಐಷಾರಾಮಿ ಕಾರು ಮಾಲೀಕರು ತಮ್ಮ ಕಾರುಗಳನ್ನು ಸೆಕೆಂಡ್ ಹ್ಯಾಂಡ್ ಕಾರು ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಬ್ಯಾಂಕುಗಳಿಗೆ ಹೆಚ್ಚಿನ ಮೊತ್ತದ ಮಾಸಿಕ ಕಂತುಗಳನ್ನು ಪಾವತಿಸಬೇಕಾಗಿರುವುದರಿಂದ ಹಾಗೂ ಉದ್ಯೋಗದಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸೆಕೆಂಡ್ ಹ್ಯಾಂಡ್ ಐಷಾರಾಮಿ ಕಾರು ಮಾರಾಟಗಾರರೊಬ್ಬರು ಆರ್ಥಿಕತೆಯ ಅನಿಶ್ಚಿತತೆಯಿಂದಾಗಿ ಜನರು ಈಗ ಹೊಸ ಐಷಾರಾಮಿ ಕಾರು ಖರೀದಿಸುವ ಮೊದಲು ಹಲವು ಬಾರಿ ಯೋಚಿಸುತ್ತಿದ್ದಾರೆ.
MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ಇದರ ಬದಲು ಸೆಕೆಂಡ್ ಹ್ಯಾಂಡ್ ಐಷಾರಾಮಿ ಕಾರುಗಳನ್ನು ಖರೀದಿಸಲು ಮುಂದಾಗುತ್ತಿದ್ದಾರೆ. ಹೊಸ ಕಾರುಗಳಿಗೆ ಹೋಲಿಸಿದರೆ ಬಳಸಿದ ಐಷಾರಾಮಿ ಕಾರುಗಳು ಅರ್ಧ ಬೆಲೆಗೆ ದೊರೆಯುತ್ತವೆ ಎಂಬುದು ಇದಕ್ಕೆ ಕಾರಣ. ಹೊಸ ಕಾರಿನ ಬೆಲೆ ರೂ.60 ಲಕ್ಷಗಳಾದರೆ, ಸೆಕೆಂಡ್ ಹ್ಯಾಂಡ್ ಕಾರುಗಳು ರೂ.30 ಲಕ್ಷಗಳಿಗೆ ದೊರೆಯುತ್ತವೆ ಎಂದು ಹೇಳಿದರು.

ಇದೇ ವೇಳೆ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಐಷಾರಾಮಿ ಕಾರುಗಳನ್ನು ಖರೀದಿಸಿದ ಅನೇಕ ಜನರು ಈಗ ತಮ್ಮ ಕಾರುಗಳನ್ನು ಮಾರಾಟ ಮಾಡುತ್ತಿದ್ದಾರೆ. ಮಾಸಿಕ ಕಂತುಗಳನ್ನು ಪಾವತಿಸಲು ಸಾಧ್ಯವಾಗದಿರುವುದೇ ಇದಕ್ಕೆ ಮುಖ್ಯ ಕಾರಣ. ಸಾಲದ ಮೊತ್ತವು ಕೆಲವು ಕಾರುಗಳ ರಿ ಸೇಲ್ ಮೌಲ್ಯಕ್ಕಿಂತ ಹೆಚ್ಚಿರುವ ಸನ್ನಿವೇಶವೂ ಉಂಟಾಗಿದೆ.
MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ಕಾರುಗಳ ಮಾಲೀಕರು ತಾವು ಬಯಸಿದ ಬೆಲೆಗೆ ಕಾರನ್ನು ಖರೀದಿಸುವ ಗ್ರಾಹಕರನ್ನು ಹುಡುಕುವುದು ಸಹ ಕಷ್ಟಕರವಾಗುತ್ತಿದೆ. ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟವು ಹಿಂದೆಂದಿಗಿಂತ ಹೆಚ್ಚಾಗಿದೆ.

ಸೆಕೆಂಡ್ ಹ್ಯಾಂಡ್ ದ್ವಿಚಕ್ರ ವಾಹನಗಳ ಮಾರಾಟವು ಸಹ ಹೆಚ್ಚಾಗಿದೆ. ಈ ಬಗ್ಗೆ ಮಾತನಾಡಿರುವ ಸೆಕೆಂಡ್ ಹ್ಯಾಂಡ್ ದ್ವಿಚಕ್ರ ವಾಹನ ಮಾರಾಟಗಾರರೊಬ್ಬರು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸಲು ಬಯಸದವರು ತಮ್ಮದೇ ಆದ ವಾಹನಗಳನ್ನು ಖರೀದಿಸುತ್ತಿದ್ದಾರೆ.
MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ಸೆಕೆಂಡ್ ಹ್ಯಾಂಡ್ ಕಾರುಗಳನ್ನು ಮಾತ್ರವಲ್ಲದೇ ಕಡಿಮೆ ದರದಲ್ಲಿ ಲಭ್ಯವಿರುವ ದ್ವಿಚಕ್ರ ವಾಹನಗಳನ್ನು ಖರೀದಿಸಲು ಸಹ ಜನರು ಮುಂದಾಗಿದ್ದಾರೆ. ಸಾಕಷ್ಟು ಜನರು ರೂ.20,000ಗಿಂತ ಕಡಿಮೆ ಬೆಲೆಯ ದ್ವಿಚಕ್ರ ವಾಹನಗಳನ್ನು ಖರೀದಿಸಲು ಬಯಸುತ್ತಾರೆ ಎಂದು ಹೇಳಿದ್ದಾರೆ.

ಸಾರ್ವಜನಿಕ ಸಾರಿಗೆ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರಯಾಣಿಕರು ಬಾರದ ಹಿನ್ನೆಲೆಯಲ್ಲಿ ಕಡಿಮೆ ಸಂಖ್ಯೆಯ ಬಸ್ಸುಗಳು ಕಾರ್ಯಾಚರಣೆ ನಡೆಸುತ್ತಿವೆ. ಉಪಯೋಗಿಸಿದ ವಾಹನಗಳ ಮಾರಾಟವು ಕೊಚ್ಚಿಯಲ್ಲಿ ಮಾತ್ರವಲ್ಲದೆ ದೇಶದ ಇತರ ನಗರಗಳಲ್ಲಿಯೂ ಹೆಚ್ಚಾಗಿದೆ.
MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್

ಈ ಬಗ್ಗೆ ಇಟಿ ಆಟೋ ವರದಿ ಮಾಡಿದೆ. ಉಪಯೋಗಿಸಿದ ಕಾರುಗಳ ಮಾರಾಟವು ಹೆಚ್ಚಾಗುವುದರ ಜೊತೆಗೆ ಹೊಸ ಕಾರುಗಳ ಮಾರಾಟವೂ ನಿಧಾನವಾಗಿ ಏರಿಕೆಯಾಗುತ್ತಿದೆ. ಮುಂದಿನ ತಿಂಗಳು ಸಾಲು ಸಾಲು ಹಬ್ಬಗಳಿರುವ ಹಿನ್ನೆಲೆಯಲ್ಲಿ ಹೊಸ ಕಾರುಗಳ ಮಾರಾಟವು ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಗಳಿವೆ.
ಗಮನಿಸಿ: ಈ ಲೇಖನದಲ್ಲಿ ಸಾಂದರ್ಭಿಕ ಚಿತ್ರಗಳನ್ನು ಬಳಸಲಾಗಿದೆ.