ಕರೋನಾ ವಿರುದ್ಧ ಹೋರಾಟಕ್ಕಾಗಿ ದೇಣಿಗೆ ಜೊತೆ ಆಸ್ಪತ್ರೆ ನಿರ್ಮಾಣ ಮಾಡಲಿದೆ ಟಾಟಾ

ಕರೋನಾ ವೈರಸ್ ಮಾಹಾಮಾರಿಯ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಈ ಹಿನ್ನಲೆಯಲ್ಲಿ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದ್ದು, ಕರೋನಾ ವಿರುದ್ಧ ಹೋರಾಟಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಣಿಗೆ ಸಂಗ್ರಹ ಅಭಿಯಾನವನ್ನು ಕೈಗೊಂಡಿವೆ.

ಕರೋನಾ ವಿರುದ್ಧ ಹೋರಾಟಕ್ಕಾಗಿ ದೇಣಿಯ ಜೊತೆಗೆ ಆಸ್ಪತ್ರೆ ನಿರ್ಮಾಣ ಮಾಡಲಿದೆ ಟಾಟಾ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ. ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಮುಂದಾಗಿವೆ.

ಕರೋನಾ ವಿರುದ್ಧ ಹೋರಾಟಕ್ಕಾಗಿ ದೇಣಿಯ ಜೊತೆಗೆ ಆಸ್ಪತ್ರೆ ನಿರ್ಮಾಣ ಮಾಡಲಿದೆ ಟಾಟಾ

ದೇಶದ ಜನಪ್ರಿಯ ಕಂಪನಿಗಳಲ್ಲಿ ಒಂದಾಗಿರುವ ಟಾಟಾ ಸಮೂಹ ಸಂಸ್ಥೆಗಳು ಕೂಡಾ ಕರೋನಾ ವಿರುದ್ಧ ಹೋರಾಟಕ್ಕಾಗಿ ಭಾರೀ ಪ್ರಮಾಣದ ದೇಣಿಗೆ ನೀಡಿದ್ದು, ದೇಶದ ಜನರ ಮೆಚ್ಚುಗೆ ಪಾತ್ರವಾಗಿದೆ.

ಕರೋನಾ ವಿರುದ್ಧ ಹೋರಾಟಕ್ಕಾಗಿ ದೇಣಿಯ ಜೊತೆಗೆ ಆಸ್ಪತ್ರೆ ನಿರ್ಮಾಣ ಮಾಡಲಿದೆ ಟಾಟಾ

ಟಾಟಾ ಸನ್ಸ್ ಮತ್ತು ಟಾಟಾ ಟ್ರಸ್ಟ್ ಸಂಸ್ಥೆಗಳು ಒಟ್ಟಾಗಿ ರೂ.1,500 ಕೋಟಿ ದೇಣಿಗೆ ನೀಡಿದ್ದು, ದೇಣಿಗೆಯಲ್ಲಿ ಅರ್ಧದಷ್ಟು ಹಣದ ರೂಪದಲ್ಲಿ ಮತ್ತು ಇನ್ನುಳಿದ ಹಣದಲ್ಲಿ ವೈದ್ಯಕೀಯ ಉಪಕರಣಗಳು, ವೆಂಟಿಲೆಟರ್, ಫೇಸ್‌ಮಾಸ್ಕ್, ಟೆಸ್ಟಿಂಗ್ ಕಿಟ್ ಮತ್ತು ವೈದ್ಯಕೀಯ ಸೇವೆಗಳಲ್ಲಿ ಬಳಸುವ ಪ್ರೋಟೆಕ್ವಿವ್ ಕ್ಲಾಥ್‌ಗಳನ್ನು ಅವಶ್ಯಕತೆಯಿರುವ ಸರ್ಕಾರಿ ಆಸ್ಪತ್ರೆಗಳಿಗೆ ದೇಣಿಗೆ ನೀಡಲಿದೆ.

ಕರೋನಾ ವಿರುದ್ಧ ಹೋರಾಟಕ್ಕಾಗಿ ದೇಣಿಯ ಜೊತೆಗೆ ಆಸ್ಪತ್ರೆ ನಿರ್ಮಾಣ ಮಾಡಲಿದೆ ಟಾಟಾ

ಇದರ ಜೊತೆಗೆ ಕೇರಳದಲ್ಲಿ ಕರೋನಾ ವೈರಸ್ ಸೋಂಕಿತರ ಚಿಕಿತ್ಸೆಗಾಗಿ ಪ್ರತ್ಯೇಕ ಆಸ್ಪತ್ಪೆಯೊಂದನ್ನು ಸಹ ನಿರ್ಮಾಣ ಮಾಡುವುದಕ್ಕೆ ಒಪ್ಪಿಗೆ ಸೂಚಿಸಿರುವ ಟಾಟಾ ಕಂಪನಿಯು ಶೀಘ್ರದಲ್ಲೇ ಆಸ್ಪತ್ರೆಯನ್ನು ಸರ್ಕಾರಕ್ಕೆ ಹಸ್ತಾಂತರಿಸಲಿದೆ. ಕರೋನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಈ ಹಿನ್ನಲೆಯಲ್ಲಿ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದ್ದು, ಕರೋನಾ ವಿರುದ್ಧ ಹೋರಾಟಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಣಿಗೆ ಸಂಗ್ರಹ ಅಭಿಯಾನವನ್ನು ಕೈಗೊಂಡಿವೆ.

ಕರೋನಾ ವಿರುದ್ಧ ಹೋರಾಟಕ್ಕಾಗಿ ದೇಣಿಯ ಜೊತೆಗೆ ಆಸ್ಪತ್ರೆ ನಿರ್ಮಾಣ ಮಾಡಲಿದೆ ಟಾಟಾ

ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಯ ಜೊತೆಗೆ ಧನಸಹಾಯವನ್ನು ಕೂಡಾ ಮಾಡುತ್ತಿವೆ.

ಕರೋನಾ ವಿರುದ್ಧ ಹೋರಾಟಕ್ಕಾಗಿ ದೇಣಿಯ ಜೊತೆಗೆ ಆಸ್ಪತ್ರೆ ನಿರ್ಮಾಣ ಮಾಡಲಿದೆ ಟಾಟಾ

ದೇಶದ ನಂ.1 ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿ ಕೂಡಾ ಅತಿ ಕಡಿಮೆ ಬೆಲೆಯಲ್ಲಿ ವೆಂಟಿಲೆಯಟರ್‌ಗಳ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿರುವುದಲ್ಲದೆ ಆಗ್ವಾ ಹೆಲ್ತ್ ಕೇರ್ ಸಂಸ್ಥೆಯೊಂದಿಗೆ ಮಹತ್ವದ ಒಡಂಬಡಿಕೆಗೆ ಸಹಿ ಹಾಕಿದೆ.

ಕರೋನಾ ವಿರುದ್ಧ ಹೋರಾಟಕ್ಕಾಗಿ ದೇಣಿಯ ಜೊತೆಗೆ ಆಸ್ಪತ್ರೆ ನಿರ್ಮಾಣ ಮಾಡಲಿದೆ ಟಾಟಾ

ದೇಶದ ವಿವಿಧ ಭಾಗದಲ್ಲಿ ಮೂರು ಕಾರು ಉತ್ಪಾದನಾ ಘಟಕಗಳಲ್ಲೂ ಆಗ್ವಾ ಹೆಲ್ತ್ ಕೇರ್ ಸಂಸ್ಥೆಯ ಸಹಯೋಗದೊಂದಿಗೆ ವೆಂಟಿಲೆಟರ್‌ಗಳನ್ನು ನಿರ್ಮಾಣ ಮಾಡಲಿರುವ ಮಾರುತಿ ಸುಜುಕಿ ಸಂಸ್ಥೆಯು ಪ್ರತಿ ತಿಂಗಳು 10 ಸಾವಿರ ಯುನಿಟ್ ಉತ್ಪಾದನೆ ಮಾಡುವುದಾಗಿ ಘೋಷಣೆ ಮಾಡಿದೆ.

ಕರೋನಾ ವಿರುದ್ಧ ಹೋರಾಟಕ್ಕಾಗಿ ದೇಣಿಯ ಜೊತೆಗೆ ಆಸ್ಪತ್ರೆ ನಿರ್ಮಾಣ ಮಾಡಲಿದೆ ಟಾಟಾ

ಜೊತೆಗೆ ಕೃಷ್ಣಾ ಮಾರುತಿ ಲಿಮೆಟೆಡ್ ಕಂಪನಿಯು ಪ್ರತ್ಯೇಕವಾಗಿ 20 ಲಕ್ಷ ಫೇಸ್‌ಮಾಸ್ಕ್‌ಗಳನ್ನು ಹರಿಯಾಣ ಸರ್ಕಾರಕ್ಕೆ ಉಚಿತವಾಗಿ ನೀಡುವುದಾಗಿ ಹೇಳಿದ್ದು, ಮತ್ತೊಂದು ಅಂಗಸಂಸ್ಥೆಯಾದ ಎಂಎಸ್ಐಎ ಮತ್ತು ಭಾರತ್ ಸೀಟ್ ಲಿಮಿಟೆಡ್ ಕಂಪನಿಗಳು ವೈದ್ಯಕೀಯ ಸೇವೆಗಳಿಗೆ ಬಳಕೆ ಮಾಡುವ ಪ್ರೋಕ್ಟೆಕ್ಟಿವ್ ಕ್ಲಾಥ್‌ಗಳನ್ನು ಸಿದ್ದಪಡಿಸಿ ಸರ್ಕಾರಕ್ಕೆ ಪೂರೈಕೆ ಮಾಡಲಿದ್ದಾರೆ.

ಕರೋನಾ ವಿರುದ್ಧ ಹೋರಾಟಕ್ಕಾಗಿ ದೇಣಿಯ ಜೊತೆಗೆ ಆಸ್ಪತ್ರೆ ನಿರ್ಮಾಣ ಮಾಡಲಿದೆ ಟಾಟಾ

ಇನ್ನು ದೇಶದ ಪ್ರಮುಖ ಕಾರು ಉತ್ಪಾದನಾ ಕಂಪನಿಗಳು ಸಹ ಕಾರು ಉತ್ಪಾದನೆ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ವೆಂಟಿಲೆಟರ್‌ಗಳ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದ್ದು, ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ಧ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ.

Most Read Articles

Kannada
English summary
Coronavirus Pandemic: Tata Group To Set Up Special Hospital In Kerala. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X