ಸಂಚಾರ ನಿಯಮ ಉಲ್ಲಂಘಿಸುವವರಿಗೆ ಲಕ್ಷಗಟ್ಟಲೇ ದಂಡ ವಿಧಿಸುವ ದೇಶಗಳಿವು

ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣ ಸಂಚಾರ ನಿಯಮಗಳ ಉಲ್ಲಂಘನೆ. ಈ ಕಾರಣಕ್ಕೆ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುತ್ತದೆ. ಆದರೂ ಸಂಚಾರ ನಿಯಮಗಳನ್ನು 100%ನಷ್ಟು ಜಾರಿಗೊಳಿಸುವುದು ಯಾವುದೇ ಸರ್ಕಾರಕ್ಕೆ ಆಗಲಿ ಕಷ್ಟಕರವಾಗಿದೆ.

ಸಂಚಾರ ನಿಯಮ ಉಲ್ಲಂಘಿಸುವವರಿಗೆ ಲಕ್ಷಗಟ್ಟಲೇ ದಂಡ ವಿಧಿಸುವ ದೇಶಗಳಿವು

ಕೇಂದ್ರ ಸರ್ಕಾರವು 2019ರಲ್ಲಿ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು, ಸಂಚಾರ ನಿಯಮಗಳನ್ನು ಉಲ್ಲಂಘಿಸುವವರಿಗೆ ಭಾರೀ ಪ್ರಮಾಣದ ದಂಡವನ್ನು ವಿಧಿಸುತ್ತಿದೆ. ಸಾರ್ವಜನಿಕರು ಈ ಭಾರೀ ಪ್ರಮಾಣದ ದಂಡವನ್ನು ವಿಧಿಸುವುದರ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಸಂಚಾರ ನಿಯಮ ಉಲ್ಲಂಘಿಸುವವರಿಗೆ ಲಕ್ಷಗಟ್ಟಲೇ ದಂಡ ವಿಧಿಸುವ ದೇಶಗಳಿವು

ಭಾರತದಲ್ಲಿ ಮಾತ್ರವಲ್ಲದೇ ವಿಶ್ವದ ಹಲವು ದೇಶಗಳಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರಿಗೆ ಭಾರೀ ಪ್ರಮಾಣದ ದಂಡ ವಿಧಿಸಲಾಗುತ್ತದೆ.ಯಾವ ಯಾವ ದೇಶಗಳಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಭಾರೀ ಪ್ರಮಾಣದ ದಂಡ ವಿಧಿಸಲಾಗುತ್ತದೆ ಎಂಬುದನ್ನು ಈ ಲೇಖನದಲ್ಲಿ ನೋಡೋಣ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಸಂಚಾರ ನಿಯಮ ಉಲ್ಲಂಘಿಸುವವರಿಗೆ ಲಕ್ಷಗಟ್ಟಲೇ ದಂಡ ವಿಧಿಸುವ ದೇಶಗಳಿವು

1. ಅಮೆರಿಕಾ

ಅಮೆರಿಕಾದಲ್ಲಿ ಸಂಚಾರ ನಿಯಮಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ. ನಿಗದಿತ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಚಾಲನೆ ಮಾಡಿದರೆ ಅಥವಾ ರಾಂಗ್ ಸೈಡ್'ನಲ್ಲಿ ಚಾಲನೆ ಮಾಡಿದರೆ ಭಾರೀ ಪ್ರಮಾಣದ ದಂಡ ವಿಧಿಸಲಾಗುತ್ತದೆ.

ಸಂಚಾರ ನಿಯಮ ಉಲ್ಲಂಘಿಸುವವರಿಗೆ ಲಕ್ಷಗಟ್ಟಲೇ ದಂಡ ವಿಧಿಸುವ ದೇಶಗಳಿವು

ಅಮೆರಿಕಾದ ವರ್ಜೀನಿಯಾದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ 2,500 ಡಾಲರ್ ಅಂದರೆ ರೂ.1.80 ಲಕ್ಷ ದಂಡ ವಿಧಿಸಲಾಗುತ್ತದೆ. ರಾಂಗ್ ಸೈಡ್'ನಲ್ಲಿ ಚಾಲನೆ ಮಾಡುವ ವ್ಯಕ್ತಿಗೆ ಆತನ ಒಂದು ತಿಂಗಳ ಸಂಬಳದಷ್ಟು ಮೊತ್ತವನ್ನು ದಂಡವಾಗಿ ವಿಧಿಸಲಾಗುತ್ತದೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಸಂಚಾರ ನಿಯಮ ಉಲ್ಲಂಘಿಸುವವರಿಗೆ ಲಕ್ಷಗಟ್ಟಲೇ ದಂಡ ವಿಧಿಸುವ ದೇಶಗಳಿವು

2. ಐಸ್ ಲ್ಯಾಂಡ್

ಐಸ್ ಲ್ಯಾಂಡ್ ಕಟ್ಟುನಿಟ್ಟಾದ ಸಂಚಾರ ನಿಯಮಗಳಿಗೆ ಹೆಸರುವಾಸಿಯಾಗಿದೆ. ಈ ಯುರೋಪಿಯನ್ ದೇಶದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ 2,800 ಡಾಲರ್ ಅಂದರೆ ರೂ.2.04 ಲಕ್ಷ ದಂಡ ವಿಧಿಸಲಾಗುತ್ತದೆ.

ಸಂಚಾರ ನಿಯಮ ಉಲ್ಲಂಘಿಸುವವರಿಗೆ ಲಕ್ಷಗಟ್ಟಲೇ ದಂಡ ವಿಧಿಸುವ ದೇಶಗಳಿವು

3. ಇಂಗ್ಲೆಂಡ್

ಇಂಗ್ಲೆಂಡಿನಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಭಾರಿ ಪ್ರಮಾಣದ ದಂಡ ವಿಧಿಸಲಾಗುತ್ತದೆ. ಜೊತೆಗೆ ಜೈಲು ಶಿಕ್ಷೆಯನ್ನೂ ವಿಧಿಸಲಾಗುತ್ತದೆ. ಇಂಗ್ಲೆಂಡಿನ ಗ್ರಾಮೀಣ ಪ್ರದೇಶದಲ್ಲಿ ಸ್ಪೋರ್ಟ್ಸ್ ಕಾರನ್ನು 200 ಕಿ.ಮೀ ವೇಗದಲ್ಲಿ ಚಾಲನೆ ಮಾಡಿದ ಚಾಲಕನಿಗೆ ಪೌಂಡ್ 8000 ಅಂದರೆ ರೂ.5.85 ಲಕ್ಷ ದಂಡ ಹಾಗೂ 10 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಸಂಚಾರ ನಿಯಮ ಉಲ್ಲಂಘಿಸುವವರಿಗೆ ಲಕ್ಷಗಟ್ಟಲೇ ದಂಡ ವಿಧಿಸುವ ದೇಶಗಳಿವು

4. ಕೆನಡಾ

ಅಮೆರಿಕಾದಂತೆ ಕೆನಡಾ ಕೂಡ ಉದ್ದವಾದ ಹಾಗೂ ನಿರ್ಜನವಾದ ಹೆದ್ದಾರಿಗಳನ್ನು ಹೊಂದಿದೆ. ಜನರು ಹೆಚ್ಚಾಗಿ ಈ ಹೆದ್ದಾರಿಗಳಲ್ಲಿ ಜಾಲಿ ರೈಡ್ ಮಾಡುತ್ತಾರೆ. ಹೀಗೆ ಜಾಲಿ ರೈಡ್ ಮಾಡುವಾಗ ಸಿಕ್ಕಿ ಬೀಳುವವರು ಭಾರೀ ಪ್ರಮಾಣದ ದಂಡ ತೆರಬೇಕಾಗುತ್ತದೆ.

ಸಂಚಾರ ನಿಯಮ ಉಲ್ಲಂಘಿಸುವವರಿಗೆ ಲಕ್ಷಗಟ್ಟಲೇ ದಂಡ ವಿಧಿಸುವ ದೇಶಗಳಿವು

ಕೆನಡಾದ ಆಲ್ಬರ್ಟಾ ನಗರದಲ್ಲಿಯಂತೂ ಸಂಚಾರ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ. ಇಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 25,000 ಡಾಲರ್ ಅಂದರೆ ರೂ.18 ಲಕ್ಷಗಳ ದಂಡ ವಿಧಿಸಲಾಗಿದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಸಂಚಾರ ನಿಯಮ ಉಲ್ಲಂಘಿಸುವವರಿಗೆ ಲಕ್ಷಗಟ್ಟಲೇ ದಂಡ ವಿಧಿಸುವ ದೇಶಗಳಿವು

5. ಫಿನ್‌ಲ್ಯಾಂಡ್‌

ಡೆನ್ಮಾರ್ಕ್‌ನ ನೆರೆಯ ದೇಶವಾದ ಫಿನ್‌ಲ್ಯಾಂಡ್‌ನಲ್ಲಿಯೂ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರಿಗೆ ಭಾರೀ ಪ್ರಮಾಣದ ದಂಡ ವಿಧಿಸಲಾಗುತ್ತದೆ. ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸುವ ವ್ಯಕ್ತಿಗಳಿಗೆ ಅವರ ಒಂದು ವರ್ಷದ ಸಂಬಳದಷ್ಟು ದಂಡವನು ವಿಧಿಸಲಾಗುತ್ತದೆ.

ಸಂಚಾರ ನಿಯಮ ಉಲ್ಲಂಘಿಸುವವರಿಗೆ ಲಕ್ಷಗಟ್ಟಲೇ ದಂಡ ವಿಧಿಸುವ ದೇಶಗಳಿವು

ಈ ದೇಶದಲ್ಲಿ ಒಂದಕ್ಕಿಂತ ಹೆಚ್ಚು ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ 2,00,000 ಡಾಲರ್ ಅಂದರೆ ರೂ.1.45 ಕೋಟಿ ದಂಡ ವಿಧಿಸಲಾಗುತ್ತದೆ. ಪ್ರಕರಣವೊಂದರಲ್ಲಿ ಪೊಲೀಸರು ಅತಿ ವೇಗದಲ್ಲಿ ಕಾರು ಚಾಲನೆ ಮಾಡಿದ ಮಹಿಳೆಗೆ ರೂ.1.45 ಕೋಟಿ ದಂಡ ವಿಧಿಸಿದ್ದರು.

ಗಮನಿಸಿ: ಈ ಲೇಖನದಲ್ಲಿ ಸಾಂದರ್ಭಿಕ ಚಿತ್ರಗಳನ್ನು ಬಳಸಲಾಗಿದೆ.

Most Read Articles

Kannada
English summary
Countries which impose heavy fines for violating traffic rules. Read in Kannada.
Story first published: Monday, March 8, 2021, 12:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X