ಬೆಡ್‌ರೂಂನಲ್ಲಿ ಮಾಡುವುದನ್ನು ರಸ್ತೆಯಲ್ಲಿ ಮಾಡಿದ ಪ್ರೇಮಿಗಳು... 18 ವರ್ಷ ಮೇಲ್ಪಟ್ಟವರು ವಿಡಿಯೋ ನೋಡಿ!
ವಿದೇಶಗಳಲ್ಲಿ ರಸ್ತೆಯಲ್ಲಿ ರೊಮ್ಯಾನ್ಸ್ ಮಾಡುವುದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದೆ ಇದೆ. ಆದರೆ ಭಾರತದಲ್ಲೂ ಇಂತಹ ಪ್ರವೃತ್ತಿಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವಾಗ ಯುವತಿ ಹಿಂದೆ ಕುಳಿತು ಯುವಕನನ್ನು ಅಪ್ಪಿಕೊಂಡು ಮುತ್ತು ಕೊಡುವುದು ಟ್ರೆಂಡ್ ಆಗುತ್ತಿದೆ. ಮುಖ್ಯವಾಗಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ವಿಕೃತ್ತಿಯನ್ನು ಮೆರೆಯುತ್ತಿದ್ದಾರೆ.
ಇತ್ತೀಚೆಗೆ ಇಂತಹದ್ದೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಈ ಜೋಡಿಯ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಇದು ಅವರ ಮೋಜಿಗಾಗಿ ಮಾಡಿಕೊಂಡು, ಅವರಿಗೆ ಮಾತ್ರವಲ್ಲದೆ ಅದೇ ರಸ್ತೆಯಲ್ಲಿ ಪ್ರಯಾಣಿಸುವ ಇತರ ಪ್ರಯಾಣಿಕರಿಗೂ ಅಪಾಯವನ್ನುಂಟು ಮಾಡುವ ಸಾಧ್ಯತೆಗಳು ಹೆಚ್ಚು ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಡಿಯೋದಲ್ಲಿ ಏನಿದೆ?: ಯುವಕನೊಬ್ಬ ತನ್ನ ಪ್ರಿಯತಮೆಯನ್ನು ಸ್ಕೂಟರ್‌ನ ಹಿಂಬದಿಯಲ್ಲಿ ಕೂರಿಸದೆ ತನ್ನ ಮಡಿಲಲ್ಲಿ ಕೂರಿಸಿಕೊಂಡು ವಾಹನ ಚಲಾಯಿಸಿದ್ದಾನೆ. ಇಬ್ಬರು ಕಂಬಳಿಯನ್ನು ಸುತ್ತಿಕೊಂಡು ಒಬ್ಬರನ್ನೊಬ್ಬರು ತಬ್ಬಿಕೊಂಡಿರುವುದನ್ನು ನೋಡಬಹುದು. ಇದೇ ವೇಳೆ ಅವರ ಅಕ್ಕಪಕ್ಕದಲ್ಲಿ ಹಲವು ವಾಹನಗಳು ಸಂಚರಿಸುತ್ತಿವೆ. ಪಕ್ಕದಲ್ಲಿ ಬರುವ ಮತ್ತೊಬ್ಬ ವಾಹನ ಚಾಲಕ ಈ ದೃಷ್ಯಗಳನ್ನು ಸೆರೆಹಿಡಿದಿದ್ದಾನೆ.
ಅವರು ತಬ್ಬಿಕೊಂಡು ಚುಂಬಿಸಿರುವುದು ಸ್ಪಷ್ಟವಾಗಿ ಕಾಣುತ್ತಿಲ್ಲವಾದರೂ, ಅದೇ ರಸ್ತೆಯಲ್ಲಿ ಈ ದೃಷ್ಯಗಳನ್ನು ನೇರವಾಗಿ ವೀಕ್ಷಿಸಿದ ಕೆಲವರು ರೊಮ್ಯಾನ್ಸ್ ಮಾಡಿಕೊಂಡು ಬಂದಿದ್ದಾರೆ ಎಂದು ಆರೋಪಿಸಿದ್ದಾರೆ. ಇಷ್ಟು ಸಾಲದು ಎಂಬಂತೆ ಇಬ್ಬರೂ ಹೆಲ್ಮೆಟ್ ಧರಿಸಿರಲಿಲ್ಲ. ಇದರಿಂದಾಗಿ ಈ ಜೋಡಿಯು ಇದೀಗ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.

ವರದಿಗಳ ಪ್ರಕಾರ, ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿವಾದ ಸೃಷ್ಟಿಸಿರುವ ಈ ಘಟನೆ ಮುಂಬೈ ನಗರದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಈ ವೀಡಿಯೊದಲ್ಲಿ, ಸ್ಕೂಟರ್‌ನ ನೋಂದಣಿ ಸಂಖ್ಯೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಆದರೂ ಈ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಪ್ರಕರಣ ದಾಖಲಾಗಿರುವ ಬಗ್ಗೆ ಅಥವಾ ದಂಡ ಸೇರಿದಂತೆ ಯಾವುದೇ ಕ್ರಮ ಕೈಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ಇದು ಹಲವರನ್ನು ಪ್ರೋತ್ಸಾಹಿಸಿದಂತಾಗುತ್ತದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಲೆಂದೇ ಪ್ರಯತ್ನಿಸುವ ಹಲವರು ಇಂತಹ ಕೃತ್ಯಗಳನ್ನು ಮಾರಿಯಾಗಿ ತೆಗೆದುಕೊಳ್ಳುತ್ತಾರೆ. ಆದ್ದರಿಂದ ಕಠಿಣ ಕ್ರಮಗಳನ್ನು ಕೈಗೊಂಡರೆ ಮಾತ್ರ ಇಂತಹ ಅಪಾಯಕಾರಿ ಚಟುವಟಿಕೆಗಳಿಗೆ ಕಡಿವಾಣ ಹಾಕಬಹುದು ಎಂಬುದು ನಮ್ಮ ಅಭಿಪ್ರಾಯ. ನಿಮ್ಮ ಅಭಿಪ್ರಾಯಗಳನ್ನು ಕಮೆಂಟ್‌ನಲ್ಲಿ ತಿಳಿಸಿ.

ಭಾರತದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಇದೇ ಮೊದಲೇನಲ್ಲ. ಇಂತಹ ಕೃತ್ಯಗಳಿಗೆ ದೆಹಲಿ ಹೆಚ್ಚು ಜನಪ್ರಿಯವಾಗಿದೆ. ಈ ಹಿಂದೆ ದೆಹಲಿಯ ಮೆಟ್ರೋ ನಿಲ್ದಾಣ ಸೇರಿದಂತೆ ಮೆಟ್ರೋ ರೈಲಿನ ಒಳಗೂ ಯುವ ಜೋಡಿಗಳು ರೊಮ್ಯಾನ್ಸ್ ಮಾಡುವ ಹಲವು ವಿಡಿಯೋಗಳು ವೈರಲ್ ಆಗಿದ್ದವು. ಈ ಸಂಬಂಧ ಅಲ್ಲಿನ ಸ್ಥಳಿಯ ಆಡಳಿತವು ಕಠಿಣ ಕ್ರಮ ಕೈಗೊಂಡು ಮೆಟ್ರೋ ರೈಲಿನ ಒಳಗೂ ಪೊಲೀಸರನ್ನು ನೇಮಿಸಿತ್ತು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications