Just In
Don't Miss!
- News
ಪದ್ಮವಿಭೂಷಣ ಉಸ್ತಾದ್ ಗುಲಾಂ ಮುಸ್ತಾಫಾ ಖಾನ್ ವಿಧಿವಶ
- Movies
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
- Finance
ಸಿಲಿಂಡರ್ ಬುಕ್ ಮಾಡಿದ ಎರಡು ಗಂಟೆಯೊಳಗೆ ಮನೆ ಬಾಗಿಲಿಗೆ ಡೆಲಿವರಿ
- Sports
ಆಸಿಸ್ ಬೌಲರ್ಗಳಿಗೆ ಪಾಂಟಿಂಗ್ ಚಾಟಿ: ಶಾರ್ದೂಲ್- ಸುಂದರ್ ಆಟಕ್ಕೆ ಮೆಚ್ಚುಗೆ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಲಾಕ್ ಡೌನ್ ಎಫೆಕ್ಟ್: ಕುಸಿದ ಡೀಸೆಲ್, ಪೆಟ್ರೋಲ್ ಮಾರಾಟ
ಕೋವಿಡ್ -19 ವೈರಸ್ ಭಾರತದಲ್ಲಿ ವೇಗವಾಗಿ ಹರಡುತ್ತಿರುವ ಕಾರಣಕ್ಕೆ, ಇದನ್ನು ತಡೆಯುವ ಉದ್ದೇಶಕ್ಕೆ 21 ದಿನಗಳ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಈ ಕಾರಣಕ್ಕೆ ಸಂಚಾರ ಸೇವೆಗಳನ್ನು ರದ್ದುಪಡಿಸಲಾಗಿದೆ. ಅಗತ್ಯ ಕೆಲಸಗಳಿಗಾಗಿ ಮಾತ್ರ ಹೊರಬರುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಇದರಿಂದಾಗಿ ರಸ್ತೆಗಳು ಸಂಚಾರವಿಲ್ಲದೆ ನಿರ್ಜನವಾಗಿವೆ.

ಇದರಿಂದಾಗಿ ಗಾಳಿಯ ಗುಣಮಟ್ಟ ಸುಧಾರಿಸುತ್ತಿದೆ. ಆದರೆ ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟ ಪ್ರಮಾಣವು ತೀವ್ರವಾಗಿ ಕುಸಿದಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆಯು ಬಿಡುಗಡೆಗೊಳಿಸಿರುವ ಅಂಕಿ ಅಂಶಗಳ ಪ್ರಕಾರ, ಮಾರ್ಚ್‌ನಲ್ಲಿ ಪೆಟ್ರೋಲ್ ಮಾರಾಟವು 15.5%ನಷ್ಟು ಕುಸಿದಿದೆ. ಈ ವರ್ಷದ ಮಾರ್ಚ್‌ನಲ್ಲಿ 1.859 ದಶಲಕ್ಷ ಟನ್ ಪೆಟ್ರೋಲ್ ಮಾರಾಟವಾಗಿದೆ. 2019ರ ಮಾರ್ಚ್ ತಿಂಗಳಿನಲ್ಲಿ 2.2 ದಶಲಕ್ಷ ಟನ್ ಪೆಟ್ರೋಲ್ ಮಾರಾಟವಾಗಿತ್ತು.

ಭಾರತದಲ್ಲಿ ಹೆಚ್ಚು ಬಳಕೆಯಾಗುವ ಇಂಧನ ಡೀಸೆಲ್ ಮಾರಾಟವು 24.2%ನಷ್ಟು ಕುಸಿದಿದೆ. ಮಾರ್ಚ್ ತಿಂಗಳಿನಲ್ಲಿ ಕೇವಲ 4.8 ದಶಲಕ್ಷ ಟನ್ ಡೀಸೆಲ್ ಮಾರಾಟವಾಗಿದೆ. ಈ ಪ್ರಮಾಣವು 2019ರ ಮಾರ್ಚ್ ತಿಂಗಳಿನಲ್ಲಿ 6.34 ದಶಲಕ್ಷ ಟನ್ ಆಗಿತ್ತು.

ಇದರ ಜೊತೆಗೆ ಏವಿಯೇಷನ್ ಟರ್ಬೈನ್ ಇಂಧನ - ಎಟಿಎಫ್ ಮಾರಾಟವು 31%ನಷ್ಟು ಕುಸಿದಿದೆ. ಬಸ್ ನಂತೆ ವಿಮಾನಗಳ ಹಾರಾಟವನ್ನೂ ಸಹ ರದ್ದುಪಡಿಸಿರುವುದರಿಂದ ಟರ್ಬೈನ್ ಇಂಧನ ಮಾರಾಟ ಪ್ರಮಾಣ ಕುಸಿದಿದೆ. ಇಂಧನಗಳ ಮಾರಾಟ ಕುಸಿತವು ಏಪ್ರಿಲ್ ತಿಂಗಳಿನಲ್ಲಿಯೂ ಮುಂದುವರೆಯುವ ಸಾಧ್ಯತೆಗಳಿವೆ.

ಇದಕ್ಕೆ ಮುಖ್ಯ ಕಾರಣ ಲಾಕ್ ಡೌನ್ ಏಪ್ರಿಲ್ 14ರವರೆಗೆ ಜಾರಿಯಲ್ಲಿರುತ್ತದೆ. ಲಾಕ್ ಡೌನ್ ಅನ್ನು ಮತ್ತಷ್ಟು ದಿನಗಳವರೆಗೆ ವಿಸ್ತರಿಸುವ ಸಾಧ್ಯತೆಗಳಿವೆ. ಇದರಿಂದಾಗಿ ಏಪ್ರಿಲ್ ತಿಂಗಳಿನಲ್ಲಿಯೂ ಇಂಧನ ಮಾರಾಟವು ಕುಸಿಯಲಿದೆ.

ಲಾಕ್ ಡೌನ್ ವಿಸ್ತರಣೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿಗಳು ದೊರೆತಿಲ್ಲ. ಲಾಕ್ ಡೌನ್ ಕಾರಣಕ್ಕೆ ಜನ ಮನೆಗಳಲ್ಲಿ ಸಿಲುಕಿಕೊಂಡಿದ್ದಾರೆ. ಹೊರಬರುವ ವಾಹನಗಳ ಮೇಲೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ.

ಇದರಿಂದಾಗಿ ವಾಹನ ದಟ್ಟಣೆ ಕಡಿಮೆಯಾಗಿದೆ. ಹಾಗೂ ಪೆಟ್ರೋಲ್, ಡೀಸೆಲ್ ಮಾರಾಟದಲ್ಲಿ ಕುಸಿತವಾಗಿದೆ. ಭಾರತವು ಪೆಟ್ರೋಲ್, ಡೀಸೆಲ್ ಅನ್ನು ಹೆಚ್ಚು ಬಳಸುವ ದೇಶಗಳಲ್ಲಿ ಒಂದಾಗಿದೆ. ಆದರೆ ಲಾಕ್ ಡೌನ್ ನಿಂದಾಗಿ ಭಾರತದಲ್ಲಿ ಮಾತ್ರವಲ್ಲದೇ ಪ್ರಪಂಚದ ಎಲ್ಲಾ ದೇಶಗಳಲ್ಲೂ ಪೆಟ್ರೋಲ್, ಡೀಸೆಲ್ ಬಳಕೆ ಕುಸಿಯುತ್ತಿದೆ.

ಪೆಟ್ರೋಲ್, ಡೀಸೆಲ್ ವಾಹನಗಳಿಂದಾಗಿ ಭಾರತದಲ್ಲಿ ವಾಯುಮಾಲಿನ್ಯ ಸಮಸ್ಯೆ ಹೆಚ್ಚಾಗಿತ್ತು. ಈಗ ವಾಹನಗಳ ಸಂಚಾರ ಸ್ಥಗಿತಗೊಂಡಿರುವುದರಿಂದ ಗಾಳಿಯ ಗುಣಮಟ್ಟ ಸುಧಾರಿಸುತ್ತಿದೆ.
ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್ ಗಾಗಿ ಬಳಸಲಾಗಿದೆ.