ಲಾಕ್‌ಡೌನ್ ಎಫೆಕ್ಟ್: ಪೊಲೀಸರ ವಶದಲ್ಲಿವೆ ಒಂದು ಲಕ್ಷಕ್ಕೂ ಹೆಚ್ಚು ವಾಹನಗಳು
ಕರೋನಾ ವೈರಸ್ ಹರಡುವುದನ್ನು ತಡೆಯಲು ಭಾರತದಾದ್ಯಂತ ಲಾಕ್‌ಡೌನ್ ಜಾರಿಯಲ್ಲಿದೆ. ಮೊದಲ ಹಂತದ ಲಾಕ್‌ಡೌನ್ ಮಾರ್ಚ್ 24ರಿಂದ ಏಪ್ರಿಲ್ 14ರವರೆಗೆ ಜಾರಿಯಲ್ಲಿತ್ತು. ಮೇ 3ಕ್ಕೆ ಮುಕ್ತಾಯವಾದ ಎರಡನೇ ಹಂತದ ಲಾಕ್‌ಡೌನ್ ಅನ್ನು ಮೇ 17ರವರೆಗೆ ವಿಸ್ತರಿಸಲಾಗಿದೆ.

ಭಾರತದ ವಿವಿಧ ಭಾಗಗಳಲ್ಲಿ, ಕರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕರೋನಾ ವೈರಸ್ ಹರಡುವುದನ್ನು ತಡೆಯಲು ಜನರು ಮನೆಯಲ್ಲೇ ಇರಬೇಕೆಂದು ಸರ್ಕಾರವು ಸೂಚನೆ ನೀಡುತ್ತಲೇ ಇದೆ.

ಅನಿವಾರ್ಯ ಕಾರಣಗಳಿಲ್ಲದ ಹೊರತು ಜನರು ತಮ್ಮ ಮನೆಗಳಿಂದ ಹೊರಬರಬಾರದು ಎಂದು ಸೂಚನೆ ನೀಡಲಾಗಿದೆ. ಆದರೆ ಈ ಸೂಚನೆಗಳಿಗೆ ಕಿವಿಗೊಡದ ಜನರು ರಸ್ತೆಗಿಳಿಯುತ್ತಲೇ ಇದ್ದಾರೆ. ವಿನಾಕಾರಣ ರಸ್ತೆಗಿಳಿಯುವ ವಾಹನ ಚಾಲಕರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್

ದೇಶಾದ್ಯಂತ ಆಯಾ ರಾಜ್ಯಗಳ ಪೊಲೀಸರು ಲಾಕ್‌ಡೌನ್ ನಿಯಮ ಉಲ್ಲಂಘಿಸುವ ವಾಹನ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ. ತೆಲಂಗಾಣ ರಾಜ್ಯ ಪೊಲೀಸರು ಇದುವರೆಗೂ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ 1.2 ಲಕ್ಷಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ತೆಲಂಗಾಣ ಪೊಲೀಸರು ಮಾರ್ಚ್ 22ರಿಂದ ಇಲ್ಲಿಯವರೆಗೂ 1.2 ಲಕ್ಷ ವಾಹನಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಇವುಗಳಲ್ಲಿ 1.1 ಲಕ್ಷ ದ್ವಿಚಕ್ರ ವಾಹನಗಳು, 4,881 ತ್ರಿಚಕ್ರ ವಾಹನಗಳು, 3,390 ಕಾರುಗಳು ಹಾಗೂ 539 ಇತರ ವಾಹನಗಳು ಸೇರಿವೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!

ತೆಲಂಗಾಣ ಪೊಲೀಸರು ಪ್ರತಿಯೊಂದು ರಸ್ತೆಗಳಲ್ಲಿ ತಪಾಸಣೆ ನಡೆಸುತ್ತಿದ್ದು, ಸರಿಯಾದ ಕಾರಣವಿಲ್ಲದೆ ಹೊರ ಬರುವ ವಾಹನ ಚಾಲಕರ ಮೇಲೆ ಕ್ರಮ ಕೈಗೊಳ್ಳುತ್ತಿದ್ದಾರೆ. ತೆಲಂಗಾಣ ಪೊಲೀಸರು ಪ್ರತಿಯೊಂದು ವಾಹನಗಳನ್ನು ಪರಿಶೀಲಿಸುತ್ತಿದ್ದು, ಸ್ವಯಂಸೇವಕರ ಗುರುತಿನ ಚೀಟಿಗಳನ್ನು ಸಹ ಪರಿಶೀಲಿಸಲಾಗುತ್ತಿದೆ.

ದಿನಸಿ ವಸ್ತುಗಳನ್ನು ಖರೀದಿಸಲು ಬರುವವರ ವಾಹನಗಳನ್ನೂ ಸಹ ಪರೀಕ್ಷಿಸಲಾಗುತ್ತಿದೆ. ತೆಲಂಗಾಣ ಪೊಲೀಸರು ಹೆಚ್ಚುವರಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಿ, ವಾಹನಗಳು ರಸ್ತೆಗಿಳಿಯದಂತೆ ನೋಡಿಕೊಳ್ಳುತ್ತಿದ್ದಾರೆ.
MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ಈ ಬಗ್ಗೆ ಮಾತನಾಡಿರುವ ಹಿರಿಯ ಪೊಲೀಸ್ ಅಧಿಕಾರಿಗಳು, ಸರಿಯಾದ ಕಾರಣವಿಲ್ಲದೆ ಹೊರಬರುವ ಎಲ್ಲಾ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅಂತಹ ವಾಹನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಶಪಡಿಸಿಕೊಂಡ ವಾಹನಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗುವುದು. ಲಾಕ್‌ಡೌನ್ ಸಡಿಲಿಸಿದ ನಂತರ ವಾಹನಗಳನ್ನು ಹಿಂತಿರುಗಿಸಲಾಗುತ್ತದೆ ಎಂದು ಹೇಳಿದ್ದಾರೆ.

ಏಪ್ರಿಲ್ 21ರಂದು ಸುಮಾರು 7,000 ದ್ವಿಚಕ್ರ ವಾಹನ, 181 ತ್ರಿಚಕ್ರ ವಾಹನ ಹಾಗೂ 290 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅದೇ ರೀತಿ ಇತರ ಐದು ವಾಹನಗಳನ್ನು ಆ ದಿನ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಈ ಬಗ್ಗೆ ತೆಲಂಗಾಣ ಟುಡೇ ವರದಿ ಮಾಡಿದೆ. ನಿಯಮಗಳನ್ನು ಉಲ್ಲಂಘಿಸುವುದು, ಪೊಲೀಸರು ಆ ವಾಹನಗಳನ್ನು ವಶಕ್ಕೆ ಪಡೆಯುವುದು ಭಾರತದಲ್ಲಿ ಸಾಮಾನ್ಯ ಸಂಗತಿಯಾಗಿದೆ. ನಿಯಮಗಳನ್ನು ಉಲ್ಲಂಘಿಸುವ ವಾಹನ ಚಾಲಕರ ವಿರುದ್ಧ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

ಲಾಕ್‌ಡೌನ್ ಅನ್ನು ಮೇ 17ರವರೆಗೆ ವಿಸ್ತರಿಸಲಾಗಿದ್ದರೂ, ಈಗ ಸ್ವಲ್ಪ ವಿನಾಯಿತಿ ನೀಡಲಾಗಿದೆ. ಈ ಕಾರಣಕ್ಕೆ ರಸ್ತೆಗಳಲ್ಲಿ ಹೆಚ್ಚಿನ ವಾಹನ ದಟ್ಟಣೆಯನ್ನು ಕಾಣಬಹುದು. ಆರ್ಥಿಕ ಪರಿಸ್ಥಿತಿಯನ್ನು ಸರಿದಾರಿಗೆ ತರಲು ಸರ್ಕಾರ ಲಾಕ್‌ಡೌನ್ ನಿಯಮಗಳನ್ನು ಸಡಿಲಗೊಳಿಸಿದೆ ಎಂಬುದನ್ನು ಜನರು ಅರ್ಥಮಾಡಿಕೊಳ್ಳಬೇಕು.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಆದ್ದರಿಂದ ಸಾಧ್ಯವಾದಷ್ಟು ಹೊರಗೆ ಹೋಗುವುದನ್ನು ತಪ್ಪಿಸಿ. ಲಾಕ್‌ಡೌನ್ ಸಡಿಲಿಸಿದ್ದರೂ, ಅನಗತ್ಯವಾಗಿ ಓಡಾಡುವವರ ಮೇಲೆ ಪೊಲೀಸರು ಎಂದಿನಂತೆ ಕ್ರಮ ಕೈಗೊಳ್ಳಲಿದ್ದಾರೆ.
ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್‌ಗಾಗಿ ಬಳಸಲಾಗಿದೆ.


Click it and Unblock the Notifications