ಮಾಸ್ಕ್ ಧರಿಸದಿದ್ದರೇ ಪೆಟ್ರೋಲ್ ಸಿಗಲ್ಲ..!
ಕರೋನಾ ವೈರಸ್‌ನಿಂದಾಗಿ ಇಡೀ ಜಗತ್ತು ಮುಗ್ಗರಿಸಿದೆ. ಚೀನಾದಿಂದ ಹರಡಿದೆ ಎಂದು ಹೇಳಲಾಗುವ ಕೋವಿಡ್ -19 ವೈರಸ್ ಅಮೆರಿಕಾ, ಇಟಲಿ, ಸ್ಪೇನ್, ಫ್ರಾನ್ಸ್ ಹಾಗೂ ಇಂಗ್ಲೆಂಡ್‌ನಲ್ಲಿ ಹೆಚ್ಚಿನ ಪ್ರಮಾಣದ ನಷ್ಟವನ್ನುಂಟು ಮಾಡಿದೆ.

ಕೋವಿಡ್ -19 ವೈರಸ್‌ನಿಂದ ಭಾರತವೂ ಹೊರತಾಗಿಲ್ಲ. ಕೋವಿಡ್ -19 ವೈರಸ್ ಭಾರತದಲ್ಲಿ ವೇಗವಾಗಿ ಹರಡುತ್ತಿದ್ದು, ಇದನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರಮಗಳನ್ನು ಕೈಗೊಳ್ಳುತ್ತಿವೆ. ಈ ಕಾರಣಕ್ಕೆ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. 2ನೇ ಹಂತದ ಲಾಕ್‌ಡೌನ್ ಅನ್ನು ಮೇ 3ರವರೆಗೆ ವಿಸ್ತರಿಸಲಾಗಿದೆ.

ಲಾಕ್‌ಡೌನ್ ಕಾರಣಕ್ಕೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಅಗತ್ಯ ಕಾರ್ಯಗಳಿಗಾಗಿ ಮಾತ್ರ ಹೊರಬರುವಂತೆ ಜನರಿಗೆ ಸೂಚಿಸಲಾಗಿದೆ. ವಿನಾಕಾರಣ ಹೊರಬರುವವರ ವಿರುದ್ಧ ಕೇಸ್ದಾಖಲಿಸಿ, ಅವರ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತಿದೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಈ ಕಾರಣಕ್ಕೆ ಜನರು ತಮ್ಮ ಮನೆಗಳಿಂದ ಹೊರಬರುವುದು ಕಡಿಮೆಯಾಗಿದೆ. ಇದರಿಂದಾಗಿ ರಸ್ತೆಗಳು ನಿರ್ಜನವಾಗಿವೆ. ಸದ್ಯಕ್ಕೆ ಅಗತ್ಯ ವಸ್ತುಗಳನ್ನು ಸಾಗಿಸುವ ಟ್ರಕ್‌ಗಳಂತಹ ವಾಹನಗಳ ಓಡಾಟಕ್ಕೆ ಮಾತ್ರ ಅನುಮತಿ ನೀಡಲಾಗಿದೆ.

ದ್ವಿಚಕ್ರ ವಾಹನ, ಕಾರು ಹಾಗೂ ಬಸ್ಸುಗಳ ಓಡಾಟ ಸ್ಥಗಿತಗೊಂಡಿದ್ದು, ಪೆಟ್ರೋಲ್, ಡೀಸೆಲ್ ಮಾರಾಟ ಕುಸಿಯುತ್ತಿದೆ. ಇದರ ನಡುವೆ ಅಖಿಲ ಭಾರತ ಪೆಟ್ರೋಲಿಯಂ ಮಾರಾಟಗಾರರ ಸಂಘವು ಬಹಳ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ಈ ನಿರ್ಧಾರದಂತೆ ಮಾಸ್ಕ್‌ಗಳನ್ನು ಧರಿಸದ ವಾಹನ ಚಾಲಕರಿಗೆ ಇನ್ನು ಮುಂದೆ ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟ ಮಾಡುವುದಿಲ್ಲ. ದೇಶದ ಹಲವು ಭಾಗಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪೆಟ್ರೋಲ್ ಬಂಕ್ ಸಿಬ್ಬಂದಿಗಳ ಸುರಕ್ಷತೆಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ಬಗ್ಗೆ ಮಾತನಾಡಿರುವ ಅಖಿಲ ಭಾರತ ಪೆಟ್ರೋಲಿಯಂ ಮಾರಾಟಗಾರರ ಸಂಘದ ಅಧ್ಯಕ್ಷರಾದ ಅಜಯ್ ಬನ್ಸಾಲ್‌ರವರು ನಮ್ಮ ಸಿಬ್ಬಂದಿಯ ಸುರಕ್ಷತೆಗಾಗಿ ಮಾಸ್ಕ್ ಧರಿಸದ ಜನರಿಗೆ ಇಂಧನವನ್ನು ಮಾರಾಟ ಮಾಡದಿರಲು ನಿರ್ಧರಿಸಲಾಗಿದೆ ಎಂದು ಹೇಳಿದರು.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!

ಅಗತ್ಯ ವಸ್ತುಗಳ ಪಟ್ಟಿಯಲ್ಲಿರುವ ಕಾರಣಕ್ಕೆ ಇಂಧನವನ್ನು ಲಾಕ್‌ಡೌನ್ ವೇಳೆಯಲ್ಲಿಯೂ ಮಾರಾಟ ಮಾಡಲಾಗುತ್ತಿದೆ. ಪೆಟ್ರೋಲ್ ಬಂಕ್ ಸಿಬ್ಬಂದಿಗಳು ಲಾಕ್‌ಡೌನ್ ವೇಳೆಯಲ್ಲಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.

ಪೆಟ್ರೋಲ್ ಬಂಕ್ ಸಿಬ್ಬಂದಿ ಗ್ರಾಹಕರ ಜೊತೆಗೆ ವ್ಯವಹರಿಸಬೇಕಾದ ಕಾರಣ, ಅವರು ಕರೋನಾ ವೈರಸ್ ಸೋಂಕಿಗೆ ಒಳಗಾಗುವ ಸಾಧ್ಯತೆಗಳಿರುತ್ತವೆ. ಈ ಕಾರಣಕ್ಕೆ ಮಾಸ್ಕ್ ಧರಿಸಿದವರಿಗೆ ಮಾತ್ರ ಇಂಧನವನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆ.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್

ಈ ನಿರ್ಧಾರದಿಂದ ಗ್ರಾಹಕರಿಗೂ ಪ್ರಯೋಜನವಾಗಲಿದೆ. ಪೆಟ್ರೋಲ್ ಬಂಕ್ ಸಿಬ್ಬಂದಿಗಳಿಗೆ ಸೋಂಕು ತಗುಲಿದ್ದರೆ, ಗ್ರಾಹಕರಿಗೆ ಹರಡುವುದು ತಪ್ಪುತ್ತದೆ. ಅಖಿಲ ಭಾರತ ಪೆಟ್ರೋಲಿಯಂ ವಿತರಕರ ಸಂಘದ ಈ ನಿರ್ಧಾರವನ್ನು ಎಲ್ಲರೂ ಸ್ವಾಗತಿಸಿದ್ದಾರೆ.

ಈ ನಿರ್ಧಾರದ ನಂತರ ದೆಹಲಿಯ ಬಂಕ್ ಒಂದರಲ್ಲಿ ಮಾಸ್ಕ್ ಧರಿಸದೇ ಇಂಧನ ತುಂಬಿಸಿಕೊಳ್ಳಲು ಹೋದ ಗ್ರಾಹಕರಿಗೆ ಇಂಧನ ಹಾಕಲು ನಿರಾಕರಿಸಲಾಗಿದೆ.
ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್‌ಗಾಗಿ ಬಳಸಲಾಗಿದೆ.


Click it and Unblock the Notifications