ಲಾಕ್‌ಡೌನ್ ವಿನಾಯಿತಿ ಹಿನ್ನೆಲೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಚುರುಕು ಮುಟ್ಟಿಸಿದ ಕೇಂದ್ರ ಸರ್ಕಾರ
ಕರೋನಾ ವೈರಸ್ ಹರಡದಂತೆ ತಡೆಯುವ ಸಲುವಾಗಿ ವಿಶ್ವದಾದ್ಯಂತ ಅನೇಕ ದೇಶಗಳಲ್ಲಿ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಭಾರತದಲ್ಲಿ ಮೊದಲ ಹಂತದ ಲಾಕ್‌ಡೌನ್ ಅನ್ನು ಮಾರ್ಚ್ 24ರಿಂದ ಏಪ್ರಿಲ್ 14ರವರೆಗೆ ಜಾರಿಗೊಳಿಸಲಾಗಿತ್ತು.

ಎರಡನೇ ಹಂತದ ಲಾಕ್‌ಡೌನ್ ಅನ್ನು ಮೇ 3ರವರೆಗೆ ವಿಸ್ತರಿಸಲಾಗಿದೆ. ಲಾಕ್‌ಡೌನ್ ವೇಳೆಯಲ್ಲಿ ಜನರ ಓಡಾಟದ ಮೇಲೆ ನಿರ್ಭಂಧ ವಿಧಿಸಲಾಗಿದೆ. ಈ ಕಾರಣದಿಂದಾಗಿ, ಅನೇಕ ಜನರಿಗೆ ಕೆಲಸವಿಲ್ಲದಂತಾಗಿದೆ. ಜೊತೆಗೆ ದೇಶದ ಆರ್ಥಿಕ ವ್ಯವಸ್ಥೆ ಕುಂಠಿತಗೊಂಡಿದೆ. ಈಗ ಲಾಕ್‌ಡೌನ್ ನಿಯಮಗಳಲ್ಲಿ ಕೊಂಚ ವಿನಾಯಿತಿ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಆರ್ಥಿಕತೆಯನ್ನು ಮರುಸ್ಥಾಪಿಸಲು ಮುಂದಾಗಿದೆ. ಕೆಲ ದಿನಗಳ ಹಿಂದಷ್ಟೇ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿರವರು ಪ್ರತಿದಿನ 60 ಕಿ.ಮೀನಷ್ಟು ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿರುವುದಾಗಿ ತಿಳಿಸಿದ್ದರು.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಕೋವಿಡ್ -19 ವೈರಸ್ ಹಾವಳಿಯ ನಂತರ ಆರ್ಥಿಕ ವ್ಯವಸ್ಥೆಯು ವೇಗವಾಗಿ ಚೇತರಿಸಿಕೊಳ್ಳಲಿದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರವು ಹೆದ್ದಾರಿ ಕಾಮಗಾರಿಗಳನ್ನು ವೇಗಗೊಳಿಸಲು ಮುಂದಾಗಿದೆ. ಯಾವುದೇ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಪ್ರಮುಖ ಪಾತ್ರವಹಿಸುತ್ತವೆ ಎಂಬುದನ್ನು ಗಮನಿಸಬೇಕು.

ಲಾಕ್‌ಡೌನ್‌ನಿಂದಾಗಿ ಸ್ಥಗಿತಗೊಂಡಿದ್ದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಈಗ ವೇಗ ನೀಡಲಾಗಿದೆ. ಭಾರತದಲ್ಲಿರುವ 75%ನಷ್ಟು ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಪುನರಾರಂಭಿಸಲಾಗಿದೆ.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್

ಕೇಂದ್ರ ಸರ್ಕಾರವು ಏಪ್ರಿಲ್ 20ರಿಂದ, ಜಾರಿಗೆ ಬರುವಂತೆ ಕೆಲವು ಷರತ್ತುಗಳೊಂದಿಗೆ ಲಾಕ್‌ಡೌನ್‌ಗೆ ಹಲವು ವಿನಾಯಿತಿಗಳನ್ನು ನೀಡಿದೆ. ಕೋವಿಡ್ -19 ವೈರಸ್ ಸೋಂಕು ಕಡಿಮೆಯಿರುವ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸಲು ಕೆಲವು ಇಲಾಖೆಗಳಿಗೆ ಅವಕಾಶ ನೀಡಲಾಗಿದೆ.

ಲಾಕ್‌ಡೌನ್ ನಿಯಮಗಳಲ್ಲಿನ ಸಡಿಲತೆಯಿಂದಾಗಿ 70%ನಷ್ಟು ಹೆದ್ದಾರಿ ಕಾಮಗಾರಿಗಳನ್ನು ಏಪ್ರಿಲ್ 20ರಿಂದ ಪುನರಾರಂಭಿಸಲಾಗಿದೆ. ಒಟ್ಟು 375 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, 260 ಯೋಜನೆಗಳನ್ನು ಪುನರಾರಂಭಿಸಲು ಅನುಮತಿ ನೀಡಲಾಗಿದೆ.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ರಾಷ್ಟ ರಾಜಧಾನಿ ದೆಹಲಿ ಪ್ರದೇಶದಲ್ಲಿ ಯಾವುದೇ ಕಾಮಗಾರಿಯನ್ನು ಪುನರಾರಂಭಿಸಲು ಅನುಮತಿ ನೀಡಿಲ್ಲ. ಈ ಭಾಗದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿರುವ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.

ಈ ಬಗ್ಗೆ ಮಾತಾಣದಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೆಲವು ಸ್ಥಳಗಳಲ್ಲಿ ಯೋಜನಾ ಕಾರ್ಯಗಳು ನಡೆಯುತ್ತಿವೆ. ಕೆಲವು ಸ್ಥಳಗಳಲ್ಲಿ ಕಾರ್ಮಿಕರಿಗೆ ಹೆಚ್ಚಿನ ಬೇಡಿಕೆಯಿದೆ. ಇದೇ ವೇಳೆ ಕೆಲವು ಭಾಗಗಳಲ್ಲಿ ದಾಸ್ತಾನು ಹಾಗೂ ಕಚ್ಚಾ ವಸ್ತುಗಳಿಗೆ ಕೊರತೆಯುಂಟಾಗುವ ನಿರೀಕ್ಷೆಗಳಿವೆ ಎಂದು ಹೇಳಿದಾರೆ.
MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ಕೋವಿಡ್ -19 ವೈರಸ್‌ನಿಂದ ಉಂಟಾಗಿರುವ ಆರ್ಥಿಕ ವ್ಯವಸ್ಥೆಯ ಕುಸಿತವನ್ನು ಸರಿಪಡಿಸಲು ಕೇಂದ್ರ ಸರ್ಕಾರವು ಹಲವು ಸವಾಲುಗಳನ್ನು ಎದುರಿಸುತ್ತಿದೆ. ಮೂಲಸೌಕರ್ಯಗಳ ಪ್ರಮುಖ ಭಾಗವಾಗಿರುವ ಕಾರಣಕ್ಕೆ ಹೆದ್ದಾರಿ ಕಾಮಗಾರಿಗಳನ್ನು ಪುನರ್ ಆರಂಭಿಸಲಾಗಿದೆ.
ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್‌ಗಾಗಿ ಬಳಸಲಾಗಿದೆ.


Click it and Unblock the Notifications