ಇದು ರಸ್ತೆ ಮೇಲಿನ ಅರಮನೆಯಂತಿದೆ.. ದುಬಾರಿ ಬೆಲೆ ಹೊಸ SUV ಖರೀದಿಸಿದ ಖ್ಯಾತ ಕ್ರಿಕೆಟಿಗ!

ಯುವ ಕ್ರಿಕೆಟಿಗ ಅರ್ಶ್‌ದೀಪ್ ಸಿಂಗ್ (Arshdeep Singh), ದೊಡ್ಡ ಸಂಖ್ಯೆಯಲ್ಲಿ ಫ್ಯಾನ್ ಫಾಲೋಯಿಂಗ್ ಹೊಂದಿದ್ದಾರೆ. ಟೀಮ್ ಇಂಡಿಯಾವನ್ನು ಪ್ರತಿನಿಧಿಸುವ ಅವರು, ಫಾಸ್ಟ್ ಬೌಲರ್ ಆಗಿದ್ದಾರೆ. 2024ರ ಟಿ20 ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು. ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡುತ್ತಾರೆ. 2025ರ ಚಾಂಪಿಯನ್ಸ್ ಟ್ರೋಫಿ ಹಾಗೂ 2018ರ ಅಂಡರ್19 ವಿಶ್ವಕಪ್ ಗೆಲ್ಲುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು.

ಆಸ್ಟ್ರೇಲಿಯಾ ಪ್ರವಾಸದ ನಂತರ, ಅರ್ಶ್‌ದೀಪ್ ಸಿಂಗ್ ಹೊಚ್ಚ ಹೊಸ ಮರ್ಸಿಡಿಸ್ ಬೆಂಜ್ ಜಿ-ವ್ಯಾಗನ್ (Mercedes-Benz G-Wagon) ಎಸ್‌ಯುವಿಯನ್ನು ಖರೀದಿಗೆ ಮಾಡಿದ್ದಾರೆ. ನೂತನ ಕಾರಿನೊಂದಿಗಿರುವ ವಿವಿಧ ಫೋಟೋಗಳನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿಯೂ ಹಂಚಿಕೊಂಡಿದ್ದಾರೆ. ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

Cricketer Arshdeep Singh Buys Mercedes-Benz G-Wagon Suv Details

ಮರ್ಸಿಡಿಸ್ ಬೆಂಜ್ ಜಿ-ವ್ಯಾಗನ್ ವಿಶೇಷತೆಗಳೇನು:

ಇದೊಂದು ಐಷಾರಾಮಿ ಎಸ್‌ಯುವಿಯಾಗಿದ್ದು, ದುಬಾರಿ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.2.55 ಕೋಟಿಯಿಂದ ರೂ.4.30 ಕೋಟಿ (ಎಕ್ಸ್-ಶೋರೂಂ - ನವದೆಹಲಿ) ದರವನ್ನು ಪಡೆದಿದೆ. ಜಿ 550, ಜಿ 580, ಎಎಂಜಿ ಜಿ 63 ಹಾಗೂ ಸ್ಪೆಷಲ್ ಎಡಿಷನ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ತುಂಬಾ ಅಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದ್ದು, ಪ್ರತಿಯೊಬ್ಬರನ್ನು ಸೆಳೆಯಬಲ್ಲದು. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು ಹಾಗೂ 19 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಅಬ್ಸಿಡಿಯನ್ ಬ್ಲ್ಯಾಕ್ ಮೆಟಾಲಿಕ್, ಪೋಲಾರ್ ವೈಟ್, ಮ್ಯಾಗ್ನೆಟೈಟ್ ಬ್ಲ್ಯಾಕ್ ಮೆಟಾಲಿಕ್, ಮೊಜಾವೆ ಸಿಲ್ವರ್ ಮೆಟಾಲಿಕ್, ಸೆಲೆನೈಟ್ ಗ್ರೇ ಮೆಟಾಲಿಕ್ ಹಾಗೂ ರುಬೆಲೈಟ್ ರೆಡ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ 'ಮರ್ಸಿಡಿಸ್ ಬೆಂಜ್ ಜಿ-ವ್ಯಾಗನ್' ಎಸ್‌ಯುವಿಯು ದೊಡ್ಡ ಗಾತ್ರದಲ್ಲಿದೆ. 4,873 ಮಿ.ಮೀ ಉದ್ದ, 2,187 ಮಿ.ಮೀ ಅಗಲ ಹಾಗೂ 1,976 ಮಿ.ಮೀ ಎತ್ತರವಿದೆ. 241 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,650 ವೀಲ್‌ಬೇಸ್‌ನ್ನು ಒಳಗೊಂಡಿದೆ. ಬರೋಬ್ಬರಿ 2,650 ಕೆಜಿ ತೂಕವಿದೆ.

ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 640 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಈ ಕಾರು ಬಲಿಷ್ಠವಾದ 2 ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 3.0-ಲೀಟರ್ ಇನ್‌ಲೈನ್ 6-ಸಿಲಿಂಡರ್, 48-ವೋಲ್ಟ್ ಮೈಲ್ಡ್-ಹೈಬ್ರಿಡ್ ಡೀಸೆಲ್ ಎಂಜಿನ್‌, 443 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 413 ಎನ್ಎಂ (ನ್ಯೂಟನ್ ಮೀಟರ್) ಉತ್ಪಾದಿಸುತ್ತದೆ. 9-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

ಮತ್ತೊಂದು 4.0 ಲೀಟರ್ ಟ್ವಿನ್-ಟರ್ಬೊ ವಿ8 ಮೈಲ್ಡ್-ಹೈಬ್ರಿಡ್ ಪೆಟ್ರೋಲ್ ಎಂಜಿನ್, 577 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 627 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುತ್ತದೆ. 9-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಹೊಸ 'ಜಿ-ವ್ಯಾಗನ್' 8.47 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 6.3 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಇದು ಇನ್ಸ್ಟ್ರುಮೆಂಟ್ ಕ್ಲಸ್ಟರ್ & ಇನ್ಫೋಟೈನ್‌ಮೆಂಟ್ ಸಿಸ್ಟಮ್‌ಗಾಗಿ ಡುಯಲ್ ಡಿಸ್‌ಪ್ಲೇಗಳು, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, 18-ಸ್ಪೀಕರ್ ಬರ್ಮೆಸ್ಟರ್ 3ಡಿ ಸೌಂಡ್ ಸಿಸ್ಟಮ್ ಮತ್ತು ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಮಲ್ಟಿಪಲ್ ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ - ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) & 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

More from DriveSpark

Article Published On: Wednesday, November 12, 2025, 19:01 [IST]
English summary
Cricketer arshdeep singh buys mercedes benz g wagon suv details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+