ಶತಕ ವೀರ ನಿತೀಶ್ ರೆಡ್ಡಿ ಈ ಪ್ರಖ್ಯಾತ Toyota ಕಾರಿನ ಓನರ್.. ಇದೇ ಮಿಡಲ್ ಕ್ಲಾಸ್ ಜನರ ನೆಚ್ಚಿನ ಅಂಬಾರಿ!
ಆಸ್ಟ್ರೇಲಿಯಾ ವಿರುದ್ಧದ 'ಬಾರ್ಡರ್ ಗವಾಸ್ಕರ್ ಟ್ರೋಫಿ' ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತದ ನಿತೀಶ್ ಕುಮಾರ್ ರೆಡ್ಡಿ (Nitish Kumar Reddy), ಚೊಚ್ಚಲ ಶತಕ ಬಾರಿಸುವುದರೊಂದಿಗೆ ಕ್ರಿಕೆಟ್ ಲೋಕದಲ್ಲಿ ಭಾರೀ ಸಂಚಲನ ಮೂಡಿಸಿದ್ದರು. ಈ ಮೂಲಕ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಟೀಂ ಇಂಡಿಯಾಕ್ಕೆ ನೆರವಾಗಿದ್ದರು. ದೇಶೀಯ ಕ್ರಿಕೆಟ್‌ನಲ್ಲಿ ಆಂಧ್ರಪ್ರದೇಶವನ್ನು ಪ್ರತಿನಿಧಿಸುವ ನಿತೀಶ್ ರೆಡ್ಡಿ, ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಾರೆ. ಕಳೆದ ಅಕ್ಟೋಬರ್‌ನಲ್ಲಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ಗೂ ಪಾದಾರ್ಪಣೆ ಮಾಡಿದ್ದರು.
ನಿತೀಶ್ ರೆಡ್ಡಿ ಅವರಿಗೆ ಕಾರು ಹಾಗೂ ಬೈಕ್‌ಗಳ ಮೇಲೆ ವಿಶೇಷವಾದ ಪ್ರೀತಿಯಿದೆ. 2023ರ ಸೆಪ್ಟೆಂಬರ್‌ನಲ್ಲಿ ಹೊಚ್ಚ ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಹೈರಿಡರ್ (Toyota Urban Cruiser Hyryder) ಎಸ್‌ಯುವಿಯನ್ನು ಖರೀದಿಸಿದ್ದರು. ನೂತನ ಕಾರನ್ನು ತಮ್ಮ ಕುಟುಂಬದೊಂದಿಗೆ ವಿತರಣೆ ಪಡೆದಿದ್ದ ಅವರು, ಆ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿಯೂ ಪೋಸ್ಟ್ ಮಾಡಿದ್ದರು. ಅದಕ್ಕೆ 'ಮನೆಗೆ ಸ್ವಾಗತ' ಎಂಬ ಶೀರ್ಷಿಕೆಯನ್ನು ಬರೆದಿದ್ದರು.

ಸದ್ಯ ದೇಶೀಯ ಗ್ರಾಹಕರ ಖರೀದಿಗೆ ದೊರೆಯುವ ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಹೈರಿಡರ್ ಎಸ್‌ಯುವಿ, ರೂ.11.14 ಲಕ್ಷದಿಂದ ರೂ.19.99 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ. ಇ, ಎಸ್ ಮತ್ತು ಜಿ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. ಕೆಫೆ ವೈಟ್, ಗೇಮಿಂಗ್ ಗ್ರೇ & ಸ್ಪೋರ್ಟಿನ್ ರೆಡ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.
ಈ ಕಾರು, 1.5-ಲೀಟರ್ ಪೆಟ್ರೋಲ್, ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಹಾಗೂ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 6-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 19.39 ರಿಂದ 27.97 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಓಡಾಟ ನಡೆಸಬಹುದು.

ನೂತನ ಟೊಯೊಟಾ ಹೈರಿಡರ್ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕನೆಕ್ಟೆಡ್ ಕಾರ್ ಟೆಕ್, ಆಂಬಿಯೆಂಟ್ ಲೈಟಿಂಗ್, ಪ್ಯಾಡಲ್ ಶಿಫ್ಟರ್‌ಗಳು, ಹೆಡ್ಸ್-ಅಪ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಪನೋರಮಿಕ್ ಸನ್‌ರೂಫ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಪಡೆದಿದೆ.
ಈ ಟೊಯೊಟಾ ಅರ್ಬನ್ ಕ್ರೂಸರ್ ಹೈರಿಡರ್ ಎಸ್‌ಯುವಿ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್) & ಆಲ್ ವೀಲ್ ಡಿಸ್ಕ್ ಬೈಕ್‌ಗಳನ್ನು ಹೊಂದಿದೆ.
ಇನ್ನು, ನಿತೀಶ್ ರೆಡ್ಡಿ ಅವರು ದುಬಾರಿ ಬೆಲೆಯ ಬಿಎಂಡಬ್ಲ್ಯೂ ಜಿ 310 ಜಿಎಸ್ (BMW G 310 GS) ಮೋಟಾರ್‌ಬೈಕ್‌ನ ಮಾಲೀಕರು ಆಗಿದ್ದಾರೆ. ಇದು ರೂ.3.30 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 313 ಸಿಸಿ ಲಿಕ್ವಿಡ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹಾಗೂ 6-ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದೆ. 29.26 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications