ಯುವ ಕ್ರಿಕೆಟಿಗ ರಿಷಬ್ ಪಂತ್ ಕಾರಿಗೆ ಭೀಕರ ಅಪಘಾತ...ಗಾಜು ಒಡೆದು ಹೊರಬಂದು ಆಸ್ಪತ್ರೆಗೆ ದಾಖಲು
ಭಾರತದ ಯುವ ಕ್ರಿಕೆಟಿಗ ರಿಷಬ್ ಪಂತ್ ಅವರು ದೆಹಲಿಯಿಂದ ತಮ್ಮ ಹುಟ್ಟೂರಾದ ರೂರ್ಕಿಗೆ ಪ್ರಯಾಣಿಸುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಬೆಂಝ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಮ್ಮದ್‌ಪುರ ಝಾಲ್ ಬಳಿಯ ರೂರ್ಕಿಯ ನರ್ಸನ್ ಗಡಿಯಲ್ಲಿ ಈ ಅಪಘಾತ ಸಂಭವಿಸಿದೆ.
ರಿಷಬ್ ಪಂತ್ ಅವರ ಮರ್ಸಿಡಿಸ್ ಬೆಂಝ್ ಕಾರಿನ ಅಪಘಾತದ ನಂತರ, ತಕ್ಷಣ ಪಂತ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ. ಟ್ವಿಟರ್‌ನಲ್ಲಿ ಪೋಸ್ಟ್ ಮಾಡಲಾದ ಚಿತ್ರಗಳಲ್ಲಿ, ರಿಷಬ್ ಪಂತ್ ತಲೆಗೆ ಬ್ಯಾಂಡೇಜ್ ಮತ್ತು ಬೆನ್ನಿನ ಮೇಲೆ ಗಾಯಗಳಾಗಿರುವುದನ್ನು ಕಾಣಬಹುದು. ಅವರ ಕಾರು ಸಂಪೂರ್ಣವಾಗಿ ಸುಟ್ಟುಹೋಗಿರುವುದು ನೋಡಬಹುದು. ದೆಹಲಿ ನಾರ್ಸನ್ ಗಡಿಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದಾಗ ಅವರೇ ಕಾರು ಚಲಾಯಿಸುತ್ತಿದ್ದರು ಎಂದು ತಿಳಿದುಬಂದಿದೆ.

ಡಿಕ್ಕಿಯ ನಂತರ ರಿಷಬ್ ಪಂತ್ ಅವರ ಮರ್ಸಿಡಿಸ್ ಬೆಂಕಿ ಹೊತ್ತಿಕೊಂಡಿದ್ದು, ಅವರಿಗೆ ಸುಟ್ಟ ಗಾಯಗಳಾಗಿವೆ. ಅವರ ಸ್ಥಿತಿ ತೀರಾ ಗಂಭೀರವಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. 25 ವರ್ಷದ ರಿಷಬ್ ಪಂತ್ ಕಾರು ಚಾಲನೆ ಮಾಡುವಾಗ ಕಾರಿನ ನಿಯಂತ್ರಣ ಕಳೆದುಕೊಂಡಿರುವುದು ಅಪಘಾತಕ್ಕೆ ಕಾರಣ ಎಂದು ಉತ್ತರಾಖಂಡ್ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಹೇಳಿದ್ದಾರೆ. ಅಪಘಾತದ ವೇಳೆ ರಿಷಬ್ ಪಂತ್ ಕಾರಿನಲ್ಲಿ ಒಬ್ಬರೇ ಇದ್ದು, ಪಾರಾಗಲು ಕಿಟಕಿ ಒಡೆದಿದ್ದಾರೆ ಎಂದು ತಿಳಿದುಬಂದಿದೆ.
ತಕ್ಷಣ ಅವರನ್ನು ಸಕ್ಷಮ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲವೊಂದು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದೆ.
ಕಾರು ಡಿಕ್ಕಿ:
ರಿಷಬ್ ಅವರ ಕಾರು ರೇಲಿಂಗ್‌ಗೆ ಡಿಕ್ಕಿ ಹೊಡೆದಿದೆ. ಆ ಬಳಿಕ ಅವರ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಬಹಳ ಕಷ್ಟಪಟ್ಟು ಬೆಂಕಿಯನ್ನು ಹತೋಟಿಗೆ ತರಲಾಗಿದೆ ಎಂದು ತಿಳಿದು ಬಂದಿದೆ. ಅದೇ ಸಮಯದಲ್ಲಿ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ರಿಷಭ್ ಪಂತ್ ಅವರನ್ನು ದೆಹಲಿ ರಸ್ತೆಯಲ್ಲಿರುವ ಸಕ್ಷಮ್ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಇದಕ್ಕೂ ಮುನ್ನ ರಿಷಬ್ ಅವರೇ ಕಾರಿನ ಗಾಜನ್ನು ಹೊಡೆದು ಹೊರಬಂದಿದ್ದಾರೆ ಎಂದು ಕೆಲ ಮೂಲಗಳು ತಿಳಿಸಿವೆ.
ದೆಹಲಿಯಿಂದ ರೂರ್ಕಿ ಕಡೆಗೆ ಪ್ರಯಾಣ:
ಶುಕ್ರವಾರ ಬೆಳಗ್ಗೆ ಭಾರತದ ಕ್ರಿಕೆಟಿಗ ರಿಷಭ್ ಪಂತ್ ದೆಹಲಿಯಿಂದ ರೂರ್ಕಿ ಕಡೆಗೆ ಕಾರಿನಲ್ಲಿ ಬರುತ್ತಿದ್ದರು. ಪಂತ್ ಅವರ ಮನೆ ರೂರ್ಕಿಯಲ್ಲಿದೆ. ಅವರು ನವದೆಹಲಿಯಿಂದ ನರ್ಸನ್ ಪಟ್ಟಣ ತಲುಪಿದಾಗ ಅವರು ಚಲಿಸುತ್ತಿದ್ದ ಕಾರುು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ರೇಲಿಂಗ್ ಮತ್ತು ಪಿಲ್ಲರ್‌ಗಳು ಮುರಿದಿವೆ ಎಂದು ತಿಳಿದು ಬಂದಿದೆ. ಸ್ಥಳೀಯವಾಗಿ ಸಿಸಿ ಕ್ಯಾಮರಾಗಳು ಇರುವ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಒಂದು ವೇಳೆ ಇದ್ದಲ್ಲಿ ಈ ಕುರಿತ ವಿಡಿಯೋ ಕೂಡ ಹೊರಬರಬಹುದು.
ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದೆ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಅಷ್ಟರಲ್ಲೇ ಗ್ರಾಮಸ್ಥರು ಹಾಗೂ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದರು. ಅಪಘಾತವಾದ ತಕ್ಷಣ ಅಗ್ನಿಶಾಮಕ ದಳಕ್ಕೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದ ವಾಹನ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಿಸಿದೆ. ತಕ್ಷಣವೇ ಕ್ರಿಕೆಟಿಗ ರಿಷಭ್ ಪಂತ್ ಅವರನ್ನು ದೆಹಲಿ ರಸ್ತೆಯಲ್ಲಿರುವ ಸಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಇಲ್ಲಿಂದ ಅವರನ್ನು ದೆಹಲಿಗೆ ಸ್ಥಳಾಂತರ ಮಾಡಲಾಗಿದೆ.
ಭಾರತದ ಯುವ ಆಟಗಾರ ರಿಷಬ್ ಪಂತ್ ಅತಿ ಕಡಿಮೆ ಸಮಯದಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಜನಪ್ರಿಯತೆ ಗಳಿಸಿದ್ದಾರೆ. ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಗೆದ್ದ ಭಾರತ ತಂಡದಲ್ಲಿ ಪಂತ್ ಕೂಡ ಇದ್ದರು. ಶ್ರೀಲಂಕಾ ವಿರುದ್ಧ ಮುಂಬರುವ T20I ಮತ್ತು ODI ಸರಣಿಗೆ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.


Click it and Unblock the Notifications