Kia: ಕಿಯಾದ 'ಮದಗಜ' ಖರೀದಿಸಿದ ಪ್ರಪ್ರಥಮ ಗ್ರಾಹಕ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ.. ಸಂಭ್ರಮಾಚರಣೆ!
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ (Suresh Raina), ತಮ್ಮ ಅದ್ಭುತ ಆಟದ ಮೂಲಕ ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಐಪಿಎಲ್‌ನಲ್ಲಿ ಕ್ಯಾಪ್ಟನ್ ಕೂಲ್ ಎಂ.ಎಸ್ ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಪರವಾಗಿ ಆಡುತ್ತಿದ್ದ ಅವರು, ಆಕ್ರಮಣಕಾರಿ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದರು. ಸುರೇಶ್ ರೈನಾ ಮೂರು ಮಾದರಿಗಳ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಲ್ಲಿ ಕೂಡ ಭಾಗವಹಿಸಿದ್ದರು. ಅವರು 18 ಟೆಸ್ಟ್ , 226 ಏಕದಿನ ಹಾಗೂ 78 ಟಿ20 ಪಂದ್ಯಗಳನ್ನು ಆಡಿದ್ದಾರೆ.
ಸದ್ಯ, ಕಿಯಾ ಇಂಡಿಯಾ (Kia India) ಹೊಚ್ಚ ಹೊಸ 'ಕಾರ್ನಿವಲ್' ಎಂಪಿವಿಯ ವಿತರಣೆ ಶುರು ಮಾಡಿದೆ. ಈ ಕಾರನ್ನು ತೆಗೆದುಕೊಂಡ ಮೊದಲ ಗ್ರಾಹಕ ಎಂಬ ಹೆಗ್ಗಳಿಕೆಗೆ ಸುರೇಶ್ ರೈನಾ ಪಾತ್ರರಾಗಿದ್ದಾರೆ. ಅವರಿಗೆ ದೆಹಲಿಯ ಜಯಂತಿ ಡೀಲರ್‌ಶಿಪ್ ಗ್ಲೇಸಿಯರ್ ವೈಟ್ ಪರ್ಲ್ ಬಣ್ಣದ ನೂತನ 'ಕಾರ್ನಿವಲ್ ಲಿಮೋಸಿನ್ ಪ್ಲಸ್' ರೂಪಾಂತರವನ್ನು (ವೇರಿಯೆಂಟ್) ಹಸ್ತಾಂತರಿಸಿದೆ.

ಸುರೇಶ್ ರೈನಾ ಹೊಚ್ಚ ಹೊಸ ಕಿಯಾ ಕಾರ್ನಿವಲ್ ಎಂಪಿವಿಯನ್ನು ವಿತರಣೆ ಪಡೆಯುತ್ತಿರುವ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿವೆ. ಅವರು, ಶೋರೂಂನಲ್ಲಿ ಕಾರಿನ ಮೇಲೆ ಹೊದಿಸಿದ್ದ ಬಟ್ಟೆಯನ್ನು ತೆಗೆದುವುದು.. ಆತ್ಮೀಯರು ಹಾಗೂ ಶೋರೂಂ ಸಿಬ್ಬಂದಿ ಸಮ್ಮುಖದಲ್ಲಿ ಕೇಕ್ ಕಟ್ ಮಾಡಿ ಸಂಭ್ರಮಾಚರಣೆ ಮಾಡುತ್ತಿರುವುದನ್ನು ವಿಡಿಯೋದ ದೃಶ್ಯಗಳಲ್ಲಿ ನೋಡಬಹುದು.
ಇತ್ತೀಚೆಗೆ ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿರುವ ಕಿಯಾ ಕಾರ್ನಿವಲ್ (Kia Carnival) ಎಂವಿಪಿ, ರೂ.63.90 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಲಿಮೋಸಿನ್ ಹಾಗೂ ಲಿಮೋಸಿನ್ ಪ್ಲಸ್ ಎಂಬ ರೂಪಾಂತರಗಳನ್ನು ಒಳಗೊಂಡಿದೆ. ವಿನ್ಯಾಸ ದೃಷ್ಟಿಯಿಂದ ಅತ್ಯಾಧುನಿಕವಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ ರೀತಿಯಲ್ಲಿ ಕಾಣುವ ಎಲ್‌ಇಡಿ ಡಿಆರ್‌ಎಲ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.

ಹೊಸ ಕಿಯಾ ಕಾರ್ನಿವಲ್ ಕಾರು 2.2-ಲೀ ಸಾಮರ್ಥ್ಯದ ಡೀಸೆಲ್ ಎಂಜಿನ್ ಹೊಂದಿದೆ. ಇದು 197 ಪಿಎಸ್ ಪವರ್ (ಶಕ್ತಿ) ಹಾಗೂ 440 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಇದರಲ್ಲಿ 7-ಆಸನಗಳು ಇದ್ದು, ಎರಡು ಕುಟುಂಬಗಳು ಸುಲಭವಾಗಿ ಓಡಾಟ ನಡೆಸಬಹುದು.
ನೂತನ ಕಾರು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 12.3-ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, 3-ಜೋನ್ ಕ್ಲೇಮೇಟ್ ಕಂಟ್ರೋಲ್, ಡುಯಲ್ ಸನ್‌ರೂಫ್ ಮತ್ತು 12-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಈ ಕಿಯಾ ಕಾರ್ನಿವಲ್ ಎಂಪಿವಿ ಸುರಕ್ಷತೆಗೆ ಹೆಸರುವಾಗಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 8-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಇನ್ನು, ಕಿಯಾ ಕಾರ್ನಿವಲ್ ಅತ್ಯುತ್ತಮವಾಗಿರುವ ಎಂಪಿವಿಯಾಗಿದೆ. ಈ ಮೊದಲೇ 2,796 ಹೆಚ್ಚು ಬುಕ್ಕಿಂಗ್ ಪಡೆದುಕೊಳ್ಳುವ ಮೂಲಕ ದಾಖಲೆ ನಿರ್ಮಿಸುತ್ತಿತ್ತು. ಈಗ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ನೂತನ ಕಾರನ್ನು ವಿತರಣೆ ಪಡೆದ ಪ್ರಪ್ರಥಮ ಗ್ರಾಹಕರಾಗಿ ಹೊರಹೊಮ್ಮಿದ್ದಾರೆ. ಮುಂಬರುವ ದಿನಗಳಲ್ಲಿ ಈ ಕಾರಿಗೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








