ಕಸ್ಟಮ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಟೋಲ್ ಸಿಬ್ಬಂದಿ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸ್ಥಾಪಿಸಲಾಗಿರುವ ಟೋಲ್ ಪ್ಲಾಜಾಗಳು ವಾಹನ ಸವಾರರು ಹಾಗೂ ವಾಹನ ಮಾಲೀಕರಿಗೆ ತಲೆ ನೋವಾಗಿ ಪರಿಣಮಿಸಿವೆ. ಈ ಟೋಲ್ ಪ್ಲಾಜಾಗಳಲ್ಲಿ ಯಾವುದೇ ಮೂಲಭೂತ ಸೌಕರ್ಯಗಳನ್ನು ಒದಗಿಸದೆ ಹಗಲು ದರೋಡೆ ನಡೆಸಲಾಗುತ್ತಿದೆ ಎಂಬುದು ವಾಹನ ಸವಾರರ ದೂರು.

ಕಸ್ಟಮ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಟೋಲ್ ಸಿಬ್ಬಂದಿ

ವಿನಾ ಕಾರಣ ಟೋಲ್ ಪ್ಲಾಜಾಗಳಲ್ಲಿ ದುಬಾರಿ ಶುಲ್ಕವನ್ನು ವಿಧಿಸಲಾಗುತ್ತದೆ ಎಂಬುದು ಹಲವು ದಿನಗಳಿಂದ ಕೇಳಿ ಬರುತ್ತಿರುವ ದೂರು. ಇದರ ಜೊತೆಗೆ ವಾಹನ ಸವಾರರು ಟೋಲ್ ಪ್ಲಾಜಾಗಳಲ್ಲಿ ಗಂಟೆ ಗಟ್ಟಲೇ ಕಾಯುವ ಪರಿಸ್ಥಿತಿ ಎದುರಾಗಿದೆ. ಟೋಲ್ ಪ್ಲಾಜಾಗಳಲ್ಲಿ ಗಂಟೆಗಟ್ಟಲೇ ಕಾಯುವುದು ವಾಹನ ಸವಾರರ ಅಸಮಾಧಾನಕ್ಕೆ ಕಾರಣವಾಗಿದೆ. ಫಾಸ್ಟ್ ಟ್ಯಾಗ್ ಅಳವಡಿಸಿಕೊಂಡರೆ ಟೋಲ್ ಪ್ಲಾಜಾಗಳಲ್ಲಿ ಕಾಯುವುದು ತಪ್ಪುತ್ತದೆ ಎಂದು ಹೇಳಲಾಗಿತ್ತು.

ಕಸ್ಟಮ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಟೋಲ್ ಸಿಬ್ಬಂದಿ

ಆದರೆ ಫಾಸ್ಟ್ ಟ್ಯಾಗ್ ಅಳವಡಿಸಿಕೊಳ್ಳುವ ಮುನ್ನ ಇದ್ದ ಪರಿಸ್ಥಿತಿ ಹಾಗೂ ಈಗಿನ ಪರಿಸ್ಥಿತಿ ಭಿನ್ನವಾಗಿಲ್ಲ. ಕರೋನಾ ವೈರಸ್ ಕಾರಣಕ್ಕೆ ಜಾರಿಗೊಳಿಸಲಾದ ಲಾಕ್ ಡೌನ್ ನಂತರ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ಸಂಚಾರ ಕುಸಿದಿತ್ತು.

MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ಕಸ್ಟಮ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಟೋಲ್ ಸಿಬ್ಬಂದಿ

ಲಾಕ್ ಡೌನ್ ನಿಂದಾಗಿ ತಮಗೆ ನಷ್ಟವಾಗಿದ್ದು, ನಷ್ಟವನ್ನು ಭರಿಸಬೇಕೆಂದು ಟೋಲ್ ಆಪರೇಟರ್ ಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಲಾಕ್ ಡೌನ್ ನಂತರ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ಸಂಚಾರವು ಸಹಜ ಸ್ಥಿತಿಗೆ ಮರಳಿದ್ದು, ಟೋಲ್ ಪ್ಲಾಜಾಗಳಲ್ಲಿ ಮತ್ತೆ ಗಂಟೆ ಗಟ್ಟಲೇ ಕಾಯುವ ಪರಿಸ್ಥಿತಿ ಎದುರಾಗಿದೆ.

ಕಸ್ಟಮ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಟೋಲ್ ಸಿಬ್ಬಂದಿ

ಇವುಗಳ ಜೊತೆಗೆ ಫಾಸ್ಟ್ ಟ್ಯಾಗ್ ಇದ್ದರೂ ಹಣ ಪಾವತಿಸುವಂತೆ ಟೋಲ್ ಪ್ಲಾಜಾ ಸಿಬ್ಬಂದಿ ಒತ್ತಾಯಿಸುತ್ತಿದ್ದಾರೆ. ಇವುಗಳನ್ನು ಪ್ರಶ್ನಿಸುವ ವಾಹನ ಸವಾರರ ಮೇಲೆ ಟೋಲ್ ಪ್ಲಾಜಾ ಸಿಬ್ಬಂದಿ ಹಲ್ಲೆ ನಡೆಸುವ ಘಟನೆಗಳು ವರದಿಯಾಗುತ್ತಲೇ ಇವೆ.

MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ಕಸ್ಟಮ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಟೋಲ್ ಸಿಬ್ಬಂದಿ

ಫಾಸ್ಟ್ ಟ್ಯಾಗ್ ಹೊಂದಿದ್ದರೂ ಹಣ ಪಾವತಿಸಲು ಒತ್ತಾಯಿಸಿ ಪ್ರಶ್ನಿಸಿದವರ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸುವ ಘಟನೆಗಳಿಂದ ವಾಹನ ಸವಾರರು ಕಂಗಾಲಾಗಿದ್ದಾರೆ. ಫಾಸ್ಟ್ ಟ್ಯಾಗ್ ಮೂಲಕ ಹಣ ಕಡಿತಗೊಳ್ಳುತ್ತಿರುವುದರ ಜೊತೆಗೆ ಪ್ರತ್ಯೇಕವಾಗಿ ಹಣ ಪಾವತಿಸುವಂತೆ ಒತ್ತಾಯಿಸಲಾಗುತ್ತಿದೆ.

ಕಸ್ಟಮ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಟೋಲ್ ಸಿಬ್ಬಂದಿ

ದಿಂಡಿಗುಲ್ ಬಳಿಯ ಕೋಡಾ ರಸ್ತೆಯಲ್ಲಿರುವ ಟೋಲ್ ಪ್ಲಾಜಾದ ಸಿಬ್ಬಂದಿ, ವಾಹನ ಸವಾರರ ಮೇಲೆ ಹಲ್ಲೆ ನಡೆಸುತ್ತಿರುವ ದೂರುಗಳು ಕೇಳಿ ಬರುತ್ತಿವೆ. ಕೆಲ ದಿನಗಳ ಹಿಂದೆ ಟೋಲ್ ಪಾವತಿಗೆ ಸಂಬಂಧಿಸಿದಂತೆ ಕೋಡಾ ಟೋಲ್ ಪ್ಲಾಜಾ ಸಿಬ್ಬಂದಿ ವಾಹನ ಸವಾರನ ಮೇಲೆ ಹಲ್ಲೆ ನಡೆಸಿದ್ದರು.

MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ಕಸ್ಟಮ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಟೋಲ್ ಸಿಬ್ಬಂದಿ

ಈಗ ಇದೇ ರೀತಿಯ ಮತ್ತೊಂದು ಘಟನೆ ನಡೆದಿದೆ. ಸದ್ಯಕ್ಕೆ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ವರದಿಗಳ ಪ್ರಕಾರ, ಭಾರೀ ಮಳೆಯ ಕಾರಣಕ್ಕೆ ಕೋಡಾ ರಸ್ತೆಯ ಟೋಲ್ ಪ್ಲಾಜಾದಲ್ಲಿ ನಿಂತಿದ್ದ ವ್ಯಕ್ತಿಯ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ.

ಕಸ್ಟಮ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಟೋಲ್ ಸಿಬ್ಬಂದಿ

ಈ ಬಗ್ಗೆ ನ್ಯೂಸ್ 7 ತಮಿಳು ವರದಿ ಮಾಡಿದೆ.ಮಳೆಯಿಂದ ರಕ್ಷಿಸಿಕೊಳ್ಳಲು ಟೋಲ್ ಕೆಳಗೆ ತನ್ನ ದ್ವಿಚಕ್ರ ವಾಹನದ ಜೊತೆಗೆ ನಿಂತಿದ್ದ ಕಸ್ಟಮ್ ಅಧಿಕಾರಿ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ. ಈ ಘಟನೆ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ವಾಹನ ಸವಾರರು ಪೊಲೀಸರನ್ನು ಒತ್ತಾಯಿಸಿದ್ದಾರೆ.

ಗಮನಿಸಿ: ಟೋಲ್ ಪ್ಲಾಜಾ ಚಿತ್ರಗಳನ್ನು ರೆಫರೆನ್ಸ್ ಗಾಗಿ ಬಳಸಲಾಗಿದೆ.

Most Read Articles

Kannada
English summary
Custom officer attacked by toll plaza staff. Read in Kannada.
Story first published: Friday, September 4, 2020, 9:53 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X