Expressway: ಹೊಸ ಎಕ್ಸ್‌ಪ್ರೆಸ್‌ವೇ.. ರಾಜಧಾನಿಯಲ್ಲಿ ಕಾಫಿ ಕುಡಿದು ಹತ್ತಿದ್ರೆ.. ಈ ಊರಿಗೆ ತಿಂಡಿಗೆಲ್ಲ ಹೋಗಬಹುದು!

ದೇಶದ ಆರ್ಥಿಕತೆ ಉತ್ತೇಜಿಸಲು ವಿವಿಧ ರಾಜ್ಯಗಳನ್ನು ಸಂಪರ್ಕಿಸಲು ಎಕ್ಸ್‌ಪ್ರೆಸ್‌ವೇಗಳನ್ನು ಕ್ಷಿಪ್ರಗತಿಯಲ್ಲಿ ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸುತ್ತಿದೆ. ದೆಹಲಿ - ಮುಂಬೈ, ಬೆಂಗಳೂರು - ಚೆನ್ನೈ, ದೆಹಲಿ - ಅಮೃತಸರ - ಕತ್ರಾ ಹಾಗೂ ಸೂರತ್ - ಚೆನ್ನೈ ಸೇರಿದಂತೆ ಹಲವು ಎಕ್ಸ್‌ಪ್ರೆಸ್‌ವೇಗಳ ಕಾಮಗಾರಿಯೂ ನಡೆಯುತ್ತಿದೆ. ವಿಶೇಷವಾಗಿ ರಾಷ್ಟ್ರ ರಾಜಧಾನಿ ದೆಹಲಿಯಿಂದ ಉತ್ತರಾಖಂಡ ರಾಜಧಾನಿ ಡೆಹ್ರಾಡೂನ್‌ನ್ನು ಬೆಸೆಯಲು ಕೂಡ ಎಕ್ಸ್‌ಪ್ರೆಸ್‌ವೇನ್ನು ಸಿದ್ಧಪಡಿಸಲಾಗುತ್ತಿದ್ದು, ಮುಂಬರುವ ಕೆಲವೇ ತಿಂಗಳಲ್ಲಿ ಉದ್ಘಾಟನೆಯಾಗುವ ನಿರೀಕ್ಷೆಯಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

2020ರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ನೂತನ ದೆಹಲಿ - ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇ (Delhi - Dehradun Expressway) ನಿರ್ಮಾಣಕ್ಕೆ ಒಪ್ಪಿಗೆ ನೀಡಿತ್ತು. 2021ರ ಜನವರಿಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್ಎಐ) ಈ ಹೆದ್ದಾರಿ ನಿರ್ಮಾಣದ ಕಾಮಗಾರಿ ಆರಂಭಿಸಿತ್ತು. ಸದ್ಯ ಬಹುತೇಕ ಕಡೆಗಳಲ್ಲಿ ರಸ್ತೆ ನಿರ್ಮಾಣದ ಕೆಲಸಗಳು ಮುಗಿದಿವೆ.

Delhi - Dehradun Expressway Journey Time 2 5 Hours You Should Need To Know

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸರಿ ಸುಮಾರು ರೂ.13,000 ಕೋಟಿ ವೆಚ್ಚದಲ್ಲಿ 213 ಕಿಲೋಮೀಟರ್ ಉದ್ದದ ಈ ಎಕ್ಸ್‌ಪ್ರೆಸ್‌ವೇಯನ್ನು ಅಭಿವೃದ್ಧಿಪಡಿಸುತ್ತಿದೆ. 6 ಪಥಗಳ ರಸ್ತೆ ಇದಾಗಿದ್ದು, ದೆಹಲಿ, ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ರಾಜ್ಯಗಳನ್ನು ಸಂಪರ್ಕಿಸುತ್ತದೆ. ನೂತನ ಎಕ್ಸ್‌ಪ್ರೆಸ್‌ವೇಯಲ್ಲಿ ವಾಹನಗಳು ಗಂಟೆಗೆ 100 ಕಿಲೋಮೀಟರ್ ಗರಿಷ್ಠ ವೇಗದಲ್ಲಿ ಸಂಚರಿಸಲು ಅನುಮತಿಸಬಹುದು ಎನ್ನಲಾಗಿದೆ.

ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇ ಸಂಪೂರ್ಣವಾಗಿ ಲೋಕಾರ್ಪಣೆಗೊಂಡ ಮೇಲೆ ಈಗಿರುವ ಪ್ರಯಾಣದ ಅವಧಿಯೂ 6 ಗಂಟೆಯಿಂದ 2.5 ಗಂಟೆಗೆ ಇಳಿಕೆಯಾಗಲಿದೆ. ಈ ಹೆದ್ದಾರಿ 340 ಮೀಟರ್ ಉದ್ದದ 'ದಾತ್ ಕಾಲಿ' ಸುರಂಗವನ್ನು ಒಳಗೊಂಡಿದೆ. ಜೊತೆಗೆ 576 ಪೀಲರ್‌ಗಳ 12 ಕಿಲೋಮೀಟರ್ ಉದ್ದದ ಎಲಿವೇಟೆಡ್ ರಸ್ತೆಯನ್ನು ಹೊಂದಿದೆ.

ಸದ್ಯ, ಎಲಿವೇಟೆಡ್ ರಸ್ತೆ ಮೇಲೆ ವಾಹನಗಳ ಪ್ರಾಯೋಗಿಕ ಸಂಚಾರ ಶುರುವಾಗಿದೆ ಎಂದು ತಿಳಿದುಬಂದಿದೆ. ಎಲ್ಲವು ಅಂದುಕೊಂಡಂತೆ ನಡೆದರೆ ಈ ಎಕ್ಸ್‌ಪ್ರೆಸ್‌ವೇ ಮುಂದಿನ ವರ್ಷ (2025) ಲೋಕಾರ್ಪಣೆಯಾಗುವ ನಿರೀಕ್ಷೆಯಿದೆ. ಉತ್ತರಖಂಡ ಪ್ರವಾಸಿ ಸ್ಥಳಗಳಿಗೆ ಹೆಸರುವಾಸಿಯಾಗಿರುವುರಿಂದ ಪ್ರವಾಸೋದ್ಯಮವು ದೊಡ್ಡ ಮಟ್ಟದಲ್ಲಿ ಬೆಳವಣಿಗೆಯಾಗಲಿದ್ದು, ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ನೆರವಾಗಲಿದೆ.

ದೆಹಲಿ - ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇ ಮಾತ್ರವಲ್ಲದೆ, ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈ ಹೆದ್ದಾರಿ 1350 ಕಿಲೋಮೀಟರ್ ಉದ್ದವಿದೆ. ದೆಹಲಿ, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ದಾದ್ರಾ-ನಗರ ಹವೇಲಿ ಮತ್ತು ಮಹಾರಾಷ್ಟ್ರಗಳಲ್ಲಿ ಹಾದು ಹೋಗುತ್ತದೆ. ದೆಹಲಿಯಿಂದ ಮುಂಬೈಗೆ ಕೇವಲ 12 ಗಂಟೆಗಳಲ್ಲಿ ತಲುಪಬಹುದು.

ಸೂರತ್ - ಚೆನ್ನೈ ಎಕ್ಸ್‌ಪ್ರೆಸ್‌ವೇ ಸಹ ಅಭಿವೃದ್ಧಿ ಹಂತದಲ್ಲಿದೆ. ರೂ.50,000 ಕೋಟಿ ಅನುದಾನದಲ್ಲಿ ಸಿದ್ಧಪಡಿಸಲಾಗುತ್ತಿದೆ. 6 ಪಥದ ಹೆದ್ದಾರಿ ಇದಾಗಿರಲಿದ್ದು, ಗುಜರಾತ್, ಮಹಾರಾಷ್ಟ್ರ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಹಾಗೂ ತಮಿಳುನಾಡುಗಳಿಗೂ ಸಂಪರ್ಕ ಕೊಂಡಿಯಾಗಿದೆ. ಇವೆರೆಡು ನಗರಗಳ ನಡುವಿನ 1270 ಕಿಲೋಮೀಟರ್ ಅಂತರವನ್ನು 18 ಗಂಟೆಗಳಲ್ಲಿ ಕ್ರಮಿಸಬಹುದು.

ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ವೇ (262 ಕಿಲೋಮೀಟರ್), ದೆಹಲಿ - ಅಮೃತಸರ - ಕತ್ರಾ ಎಕ್ಸ್‌ಪ್ರೆಸ್‌ವೇ (669 ಕಿಲೋಮೀಟರ್), ವಾರಣಾಸಿ - ರಾಂಚಿ - ಕೋಲ್ಕತ್ತಾ ಎಕ್ಸ್‌ಪ್ರೆಸ್‌ವೇ (612 ಕಿಲೋಮೀಟರ್‌), ಇಂದೋರ್ - ಹೈದರಾಬಾದ್ ಮತ್ತು ಬೆಂಗಳೂರು - ಹೈದರಾಬಾದ್ ಎಕ್ಸ್‌ಪ್ರೆಸ್‌ವೇಗಳು ಕೂಡ ಅಭಿವೃದ್ಧಿ ಹಂತದಲ್ಲಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, October 31, 2024, 12:48 [IST]
English summary
Delhi dehradun expressway journey time 2 5 hours you should need to know
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+